ಸಾಲ ಮನ್ನಾ ಮೊತ್ತ ಒಂದು ತಿಂಗಳೊಳಗೆ ನೀಡಬೇಕು | ಸಾಲಮನ್ನಾ ವಂಚಿತ ರೈತರ ಪ್ರತಿಭಟನೆಯಲ್ಲಿ ಕಿಶೋರ್ ಶಿರಾಡಿ ಎಚ್ಚರಿಕೆ
ಪುತ್ತೂರು: ರೈತರ ಸಾಲ ಮನ್ನಾ ಮೊತ್ತ ಪಾವತಿಯಾಗದಿದ್ದರೆ ಡಿಸಿಸಿ ಬ್ಯಾಂಕ್ ಚಲೋ ನಡೆಸಲಾಗುವುದು ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಎಚ್ಚರಿಕೆ ನೀಡಿದ್ದಾರೆ. ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ಇಲ್ಲಿಯ ಅಮರ್ ಜವಾನ್ ಸ್ಮಾರಕದ ಬಳಿ ಮಂಗಳವಾರ ನಡೆದ ಸಾಲ ಮನ್ನಾ ವಂಚಿತ ರೈತರ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಸಾಲ ಮನ್ನಾ ಮೊತ್ತ ರೈತರಿಗೆ ಪಾವತಿಯಾಗದಿರಲು ಸಹಕಾರ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳೇ ಹೊಣೆ. ಇದರ ಕುರಿತು ಸಾಲಗಾರರ ಸಾಲದ ನಂಬರ್ […]










