ಪುತ್ತೂರು

ಫೆ.21-22 : ಕುಂಟ್ಯಾನ ಕುಟುಂಬದ ದುಗಲಾಯ, ಧರ್ಮದೈವ ರುದ್ರಾಂಡಿ, ಪರಿವಾರ ದೈವಗಳ ನೇಮ ನಡಾವಳಿ

ಪುತ್ತೂರು: ಬನ್ನೂರು ಗ್ರಾಮದ ಕುಂಟ್ಯಾನ ಕುಟುಂಬದ ದುಗಲಾಯ, ಧರ್ಮದೈವ ರುದ್ರಾಂಡಿ ಮತ್ತು ಪರಿವಾರ ದೈವಗಳ ನಡಾವಳಿ ಫೆ.21 ಹಾಗೂ 22 ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಧರ್ಮ ನಡಾವಳಿ ಅಂಗವಾಗಿ ಫೆ.21 ರಂದು ಬೆಳಿಗ್ಗೆ 8 ಕ್ಕೆ ಗಣಹೋಮ, ಸಂಜೆ 4 ಕ್ಕೆ ದುಗಲಾಯ, ಧರ್ಮದೈವ ಹಾಗೂ ಪರಿವಾರ ದೈವಗಳ ಭಂಡಾರ ತೆಗೆಯುವುದು. ಸಂಜೆ 6 ಕ್ಕೆ ದುಗಲಾಯ ದೈವದ ನೇಮ, ರಾತ್ರಿ 9 ಕ್ಕೆ ಅನ್ನಸಂತರ್ಪಣೆ, ವರ್ಣಾರ ಪಂಜುರ್ಲಿ, ಜಾವತೆ, ಕಲ್ಲುರ್ಟಿ, ಕುಪ್ಪೆ ಪಂಜುರ್ಲಿ, […]

ಫೆ.21-22 : ಕುಂಟ್ಯಾನ ಕುಟುಂಬದ ದುಗಲಾಯ, ಧರ್ಮದೈವ ರುದ್ರಾಂಡಿ, ಪರಿವಾರ ದೈವಗಳ ನೇಮ ನಡಾವಳಿ Read More »

ಮುಂದಿನ ಲೋಕಸಭಾ ಚುನಾವಣೆಗೆ ದೇಶದ 60 ಕಡೆಗಳಲ್ಲಿ ಸ್ಪರ್ಧೆ | ಪತ್ರಿಕಾಗೋಷ್ಠಿಯಲ್ಲಿ ಎಸ್‍. ಡಿ. ಪಿ. ಐ. ಪಕ್ಷದ ಇಬ್ರಾಹಿಂ ಸಾಗರ್

ಪುತ್ತೂರು: ಎಸ್‍.ಡಿ.ಪಿ.ಐ. ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಕಾರ್ಯಕರ್ತರ ಸಮಾವೇಶ ಫೆ.20 ರಂದು ಸಂಜೆ 7 ಗಂಟೆಗೆ ಪುತ್ತೂರು ಲಯನ್ಸ್ ಕ್ಲಬ್‍ ಸಭಾಂಗಣದಲ್ಲಿ ನಡೆಯಲಿದೆ ಎಂದು ಎಸ್‌. ಡಿ. ಪಿ. ಐ. ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಇಬ್ರಾಹಿಂ ಸಾಗ‌ರ್ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಸಕ್ತ ದೇಶದಲ್ಲಿ ಸಂವಿಧಾನ ವಿರೋಧಿ ಆಡಳಿತದಿಂದಾಗಿ ಪ್ರಜಾಪ್ರಭುತ್ವವು ಅಪಾಯದತ್ತ ಸಾಗುತ್ತಿರುವುದಲ್ಲದೆ ಪ್ರಸಕ್ತ ರಾಜ್ಯ ಸರಕಾರವು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ ಸಮಾಜದಲ್ಲಿ ತಾರತಮ್ಯ ನೀತಿಯನ್ನು ಅನುಸರಿಸುತ್ತಾ ಬರುತ್ತಿದ್ದು ಪಕ್ಷದ ಕಾರ್ಯಕರ್ತರನ್ನು

ಮುಂದಿನ ಲೋಕಸಭಾ ಚುನಾವಣೆಗೆ ದೇಶದ 60 ಕಡೆಗಳಲ್ಲಿ ಸ್ಪರ್ಧೆ | ಪತ್ರಿಕಾಗೋಷ್ಠಿಯಲ್ಲಿ ಎಸ್‍. ಡಿ. ಪಿ. ಐ. ಪಕ್ಷದ ಇಬ್ರಾಹಿಂ ಸಾಗರ್ Read More »

ಫೆ.21-22 : ಬನ್ನೂರು ಆನೆಮಜಲು  ದೈಯ್ಯೆರೆ ಮಾಡ ನಡಿಮಾರ್ ಬಾವದಕೆರೆ ಶ್ರೀ ನಾಗಸನ್ನಿಧಿ, ಶ್ರೀ ಇಷ್ಟದೇವತೆ, ರಕ್ತೇಶ್ವರಿ, ಅಣ್ಣಪ್ಪ ಪಂಜುರ್ಲಿ ಸಾನಿಧ್ಯದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಪುತ್ತೂರು: ಬನ್ನೂರು ಆನೆಮಜಲು  ದೈಯ್ಯೆರೆ ಮಾಡ ನಡಿಮಾರ್ ಬಾವದಕೆರೆ ಶ್ರೀ ನಾಗಸನ್ನಿಧಿ, ಶ್ರೀ ಇಷ್ಟದೇವತೆ, ರಕ್ತೇಶ್ವರಿ, ಅಣ್ಣಪ್ಪ ಪಂಜುರ್ಲಿ ಸಾನಿಧ್ಯದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಫೆ.21 ಹಾಗೂ 22 ರಂದು ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ಗೌಡ ಅಯೋಧ್ಯಾನಗರ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬ್ರಹ್ಮಕಲಶೋತ್ಸವದ ಅಂಗವಾಗಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಫೆ.21 ಬುಧವಾರ ಬೆಳಿಗ್ಗೆ 11 ಕ್ಕೆ ಹಸಿರುವಾಣಿ ಸಮರ್ಪಣೆ, ಸಂಜೆ 7 ರಿಂದ

ಫೆ.21-22 : ಬನ್ನೂರು ಆನೆಮಜಲು  ದೈಯ್ಯೆರೆ ಮಾಡ ನಡಿಮಾರ್ ಬಾವದಕೆರೆ ಶ್ರೀ ನಾಗಸನ್ನಿಧಿ, ಶ್ರೀ ಇಷ್ಟದೇವತೆ, ರಕ್ತೇಶ್ವರಿ, ಅಣ್ಣಪ್ಪ ಪಂಜುರ್ಲಿ ಸಾನಿಧ್ಯದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »

ಕಾರು ಪಲ್ಟಿ : ಪ್ರಯಾಣಿಕರು ಅಪಾಯದಿಂದ ಪಾರು

ಪುತ್ತೂರು: ಕಾರೊಂದು ಪಲ್ಟಿಯಾದ ಘಟನೆ ಕೌಡಿಚ್ಚಾರು ಬಳಿ ಇಂದು ಮುಂಜಾನೆ ನಡೆದಿದೆ. ಅಲ್ವಿನ್ ಡಿ’ಸೋಜಾ ಹಾಗೂ ಕಾರ್ತಿಕ್ ಶೆಟ್ಟಿ ಕಾರ್ಕಳ ಎಂಬವರು ಮಡಿಕೇರಿ ಕಡೆಯಿಂದ ಕಾರು ಚಲಾಯಿಸಿಕೊಂಡು ಬರುತ್ತಿದ್ದಾಗ ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ತಕ್ಷಣ ಸಾರ್ವಜನಿಕರು ರಕ್ಷಿಸಿದ್ದಾರೆ ಎನ್ನಲಾಗಿದೆ. ಪುತ್ತೂರು ಅಗ್ನಿಶಾಮಕ ದಳದವರು ಸ್ಥಳಕ್ಕೆ ಭೇಟಿ ನೀಡಿ ಸಹಕರಿಸಿದರು.

ಕಾರು ಪಲ್ಟಿ : ಪ್ರಯಾಣಿಕರು ಅಪಾಯದಿಂದ ಪಾರು Read More »

ಕನ್ನಡ ಸಾಹಿತ್ಯ ಪರಿಷತ್ ಉಪ್ಪಿನಂಗಡಿ ಹೋಬಳಿ ಘಟಕದ ಪದಾಧಿಕಾರಿಗಳ ಪದ ಸ್ವೀಕಾರ

ಉಪ್ಪಿನಂಗಡಿ: ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಉಪ್ಪಿನಂಗಡಿ ಹೋಬಳಿ ಘಟಕದ   ಅಧ್ಯಕ್ಷ ಕರುಣಾಕರ ಸುವರ್ಣ ಹಾಗೂ  ಇತರ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ ಹಿರಿಯ ಸಾಹಿತಿ ಡಾ. ತಾಳ್ತಜೆ ವಸಂತ್ ಕುಮಾರ್ ಅವರ ಮನೆಯ ಮಣಿ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ‘ಮಹಾಭಾರತ ಅನುಸಂಧಾನ’ ಕುರಿತು ದತ್ತಿ ನಿಧಿ ಉಪನ್ಯಾಸವನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶ್ರೀ ಲಕ್ಷ್ಮೀಶ  ತೋಳ್ಪಾಡಿ ಅವರು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ  ಶ್ರೀ

ಕನ್ನಡ ಸಾಹಿತ್ಯ ಪರಿಷತ್ ಉಪ್ಪಿನಂಗಡಿ ಹೋಬಳಿ ಘಟಕದ ಪದಾಧಿಕಾರಿಗಳ ಪದ ಸ್ವೀಕಾರ Read More »

ನ್ಯೂಸ್ ಪುತ್ತೂರು ತಂಡದಿಂದ ನಳಿಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವಾ ಕಾರ್ಯ | ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ನಳಿಲು ದೇವಸ್ಥಾನ

ಪುತ್ತೂರು: ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಾರ್ಯಾಚರಿಸುತ್ತಿರುವ ನ್ಯೂಸ್ ಪುತ್ತೂರು ಸಂಸ್ಥೆಯ ಮೂಲಕ ಟ್ರಸ್ಟ್ ಅಧ್ಯಕ್ಷರು ಹಾಗೂ ನಿರ್ದೇಶಕರಿಂದ ಕೊಳ್ತಿಗೆ ಗ್ರಾಮದ ನಳಿಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಸೇವಾ ಕಾರ್ಯ ನಡೆಯಿತು. ಭಾನುವಾರ ಸಂಜೆ ಬ್ರಹ್ಮಕಲಶೋತ್ಸವದ ಅನ್ನಸಂತರ್ಪಣೆಗಾಗಿ ತರಕಾರಿ ಹಚ್ಚುವ ಕೆಲಸದೊಂದಿಗೆ ಸೇವಾ ಕಾರ್ಯ ಮಾಡಿದರು. ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷರಾದ ರಾಜೇಂದ್ರ ಪ್ರಸಾದ್ ಶೆಟ್ಟಿ ಹಾಗೂ ಎಲ್ಲಾ ನಿರ್ದೇಶಕರು ಮತ್ತು ನ್ಯೂಸ್ ಪುತ್ತೂರಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸೇವಾ ಕಾರ್ಯಕ್ಕೆ ಬ್ರಹ್ಮಕಲಶೋತ್ಸವ

ನ್ಯೂಸ್ ಪುತ್ತೂರು ತಂಡದಿಂದ ನಳಿಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವಾ ಕಾರ್ಯ | ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ನಳಿಲು ದೇವಸ್ಥಾನ Read More »

ನಳಿಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ವೈದಿಕ, ಧಾರ್ಮಿಕ ಸಭಾ ಕಾರ್ಯಕ್ರಮ

ಪುತ್ತೂರು : ಶ್ರದ್ದಾ ಕೇಂದ್ರಗಳ ಅಭಿವೃದ್ದಿಯಾದರೆ ಆ ಊರು ಸುಭಿಕ್ಷೆಯಾಗುತ್ತದೆ. ದೇವಾಲಯಗಳ ಬ್ರಹ್ಮಕಲಶೋತ್ಸವದಲ್ಲಿ ಪ್ರತಿಯೊಬ್ಬರು  ಭಾಗವಹಿಸಿ ತನ್ನದೆ ಆದ ಸೇವೆ ನೀಡಿದಾಗ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಬ್ರಹ್ಮಕಲಶೋತ್ಸವ ಗೌರವಾಧ್ಯಕ್ಷ, ಶಾಸಕ ಆಶೋಕ್ ಕುಮಾರ್ ರೈ ಹೇಳಿದರು.  ಅವರು  ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಶನಿವಾರ ರಾತ್ರಿ  ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು. ಧಾರ್ಮಿಕ ಕೇಂದ್ರಗಳಲ್ಲಿನ ನಿರಂತರ ಧಾರ್ಮಿಕ ಚಟುವಟಿಕೆ  ಧರ್ಮದ ಉಳಿವಿಗೆ ಕಾರಣವಾಗುತ್ತದೆ. ಸನ್ಮಾರ್ಗದಲ್ಲಿ ನಡೆಯುತ್ತಾ   ದೇವರ ಕಾರ್ಯದಲ್ಲಿ ತನ್ನನ್ನು

ನಳಿಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ವೈದಿಕ, ಧಾರ್ಮಿಕ ಸಭಾ ಕಾರ್ಯಕ್ರಮ Read More »

ಚಿಕಿತ್ಸೆಗೆ ಸಹಾಯಧನ ಹಸ್ತಾಂತರ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಸೇವಾ ಚಟುವಟಿಕೆಯ ಅಂಗವಾಗಿ ಟ್ರಸ್ಟ್  ಮತ್ತು ಶ್ರೀರಾಮ ಗೆಳೆಯರ ಬಳಗ ಪುತ್ತಿಲ ಜೊತೆಯಾಗಿ ಹೃದಯದ ಸಮಸ್ಯೆಯಿಂದ ಬಳಲುತಿರುವ ಕೊರಗಪ್ಪ ನಾಯ್ಕ ಬರೆಕೋಲಾಡಿ ಅವರ ಮನೆಗೆ ಭೇಟಿ ನೀಡಿ ಅರೋಗ್ಯ ವಿಚಾರಿಸಿ ಸುಮಾರು 25,750 ರೂ. ಸಹಾಯಧನ ನೀಡಲಾಯಿತು. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಚೆಕ್ ಮೂಲಕ ಧನಸಹಾಯ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಮುಂಡೂರು ಗ್ರಾಮ ಪಂಚಾಯತ್ ಸದಸ್ಯ  ಅಶೋಕ್ ಕುಮಾರ್ ಪುತ್ತಿಲ, ಮುಂಡೂರು ಹಾಲು ಉತ್ಪದಕ ಸಹಕಾರ

ಚಿಕಿತ್ಸೆಗೆ ಸಹಾಯಧನ ಹಸ್ತಾಂತರ Read More »

ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ

ಪುತ್ತೂರು: ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಶನಿವಾರ ಅನಾವರಣ ಮಾಡಲಾಯಿತು. ಪುತ್ತೂರು ತಹಶೀಲ್ದಾರ್ ಪುರಂದರ ಹೆಗ್ಡೆ ಭಾವಚಿತ್ರ ಅನಾವರಣ ಮಾಡಿದರು. ಈ ಸಂದರ್ಭದಲ್ಲಿ ಉಪತಹಶೀಲ್ದಾರ್ ಸುಲೋಚನಾ, ರಾಮಣ್ಣ ನಾಯ್ಕ್, ಎಫ್. ಡಿ. ಎ. ಆಗಿರುವ ದಯಾನಂದ ಮತ್ತು ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ Read More »

ಫೆ.22: ಮಾಡತ್ತಾರು ಸಪರಿವಾರ ಶ್ರೀ ವ್ಯಾಘ್ರಚಾಮುಂಡಿ ದೈವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವ

ಪೆರ್ನೆ: ಪೆರ್ನೆ ಗ್ರಾಮದ ಮಾಡತ್ತಾರು ಕೊರತಿಕಟ್ಟೆ ಸಪರಿವಾರ ಶ್ರೀ ವ್ಯಾಘ್ರಚಾಮುಂಡಿ ದೈವಸ್ಥಾನದಲ್ಲಿ ಫೆ.22 ಗುರುವಾರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವವು ಹಲವು ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಸಪರಿವಾರ ಶ್ರೀ ವ್ಯಾಘ್ರಚಾಮುಂಡಿ, ಉಳ್ಳಾಕ್ಲು, ಕೊರತಿದೈವ ಮತ್ತು ಗುಳಿಗ ದೈವ ಹಾಗೂ ನಾಗ ಸನ್ನಿಧಿಯಲ್ಲಿ  ಫೆ.22 ರಂದು ಬೆಳಿಗ್ಗೆ 8.30 ಕ್ಕೆ ದೇವತಾಪ್ರಾರ್ಥನೆ, ಆಚಾರ್ಯವರಣೆ, ಸ್ವಸ್ತಿ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಸಾನಿಧ್ಯ ಕಲಶ ಪೂಜೆ, ಕಲಶಾಭಿಷೇಕ, ತಂಬಿಲ ಸೇವೆ , ನಾಗಬನದಲ್ಲಿ

ಫೆ.22: ಮಾಡತ್ತಾರು ಸಪರಿವಾರ ಶ್ರೀ ವ್ಯಾಘ್ರಚಾಮುಂಡಿ ದೈವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವ Read More »

error: Content is protected !!
Scroll to Top