ಪುತ್ತೂರು

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಶಾಲಾ ಸ್ಕೌಟ್, ಗೈಡ್, ಕಬ್, ಬುಲ್ ಬುಲ್ ದಳದ ವಾರ್ಷಿಕ ಮೇಳ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವಾರ್ಷಿಕ ಮೇಳ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಶಾಲಾ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ಮಕ್ಕಳಿಂದ ಗೂಡುದೀಪ ರಚನೆ, ನಕ್ಷತ್ರ ರಚನೆ, ರಾಷ್ಟ್ರಧ್ವಜದ ಚಿತ್ರ ರಚನೆ, ಎಲೆಗಳಿಂದ ಆಕೃತಿ ತಯಾರಿ ನಡೆಯಿತು. ರಂಗಬೆಳಕು ತಂಡ ಪುತ್ತೂರು ವತಿಯಿಂದ ಕೃಷ್ಣಪ್ಪ ಬಂಬಿಲ ನೇತೃತ್ವದಲ್ಲಿ ಜಾಗೃತಿ ಗೀತೆಗಳ ಗಾಯನ ನಡೆಯಿತು. ದರ್ಬೆ ವೃತ್ತದಿಂದ 352 ವಿದ್ಯಾರ್ಥಿಗಳು, […]

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಶಾಲಾ ಸ್ಕೌಟ್, ಗೈಡ್, ಕಬ್, ಬುಲ್ ಬುಲ್ ದಳದ ವಾರ್ಷಿಕ ಮೇಳ Read More »

ಆರೋಗ್ಯ ವ್ಯತ್ಯಯ | 6 ತಿಂಗಳ ಗರ್ಭಿಣಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಬಂಟ್ವಾಳ: ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದ 6 ತಿಂಗಳ ಗರ್ಭಿಣಿ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಡೆದಿದೆ. ತೆಂಕಕಜೆಕಾರು ನಿವಾಸಿ ವಸಂತ ಅವರ ಪತ್ನಿ ಸುಜಾತ ಮೃತಪಟ್ಟವರು. ಗರ್ಭಸ್ಥ ಶಿಶುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರು ಲೇಡಿಗೋಶನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಏಕಾಏಕಿ ಆರೋಗ್ಯ ಏರುಪೇರಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಶಿಶುವಿಗೆ ಹೃದಯ ಸಂಬಂಧಿ ತೊಂದರೆ ಇದೆ ಎನ್ನುವ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದರು. ಸುಮಾರು 10 ವರ್ಷಗಳ ಹಿಂದೆ ವಿವಾಹವಾಗಿದ್ದು, ಬಹಳ ವರ್ಷಗಳ

ಆರೋಗ್ಯ ವ್ಯತ್ಯಯ | 6 ತಿಂಗಳ ಗರ್ಭಿಣಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಆರ್. ಸಿ. ನಾರಾಯಣ ರೆಂಜ ನೇಮಕ

ಪುತ್ತೂರು: ಕರ್ನಾಟಕ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಆರ್. ಸಿ. ನಾರಾಯಣ ರೆಂಜ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯಾ ಘೋಷಿಸಿದ್ದಾರೆ. 36 ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲಿ ನಂ. ವನ್ ಜಿಲ್ಲೆಯಾಗಿ ಸಂಘಟನೆಯಲ್ಲಿ ಮುಂಚೂಣಿಯಲ್ಲಿತ್ತು. ಬೂತ್ ನಿಂದ  ರಾಜ್ಯಮಟ್ಟದವರೆಗೆ ತನ್ನ ಸಂಘಟನೆ ಕಾರ್ಯಶೈಲಿಯಿಂದ ಬಿಜೆಪಿಗೆ ಬಲ ತುಂಬಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕನಾಗಿ, ಎ.ಬಿ.ವಿ.ಪಿ. ಯಲ್ಲಿ

ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಆರ್. ಸಿ. ನಾರಾಯಣ ರೆಂಜ ನೇಮಕ Read More »

ನಾಳೆ (ಫೆ.17) : ಸಹ್ಯಾದ್ರಿ ಕಾಲೇಜಿನ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್‌ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಮಾವೇಶ| ಪುತ್ತೂರಿನಿಂದ 10 ಸಾವಿರ ಮಂದಿ ಕಾರ್ಯಕರ್ತರು

ಪುತ್ತೂರು: ಮುಂಬರುವ ಲೋಕಸಭಾ ಚುನಾವಣೆಯ ಸಿದ್ಧತೆಗಾಗಿ ದೇಶದ ವಿವಿಧ ರಾಜ್ಯಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಇದಕ್ಕೆ ಸಜ್ಜುಗೊಳಿಸಲು ಈಗಾಗಲೇ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶ ಕರ್ನಾಟಕದಲ್ಲಿ ಪ್ರಥಮವಾಗಿ ಮಂಗಳೂರನ್ನು ಆಯ್ಕೆ ಮಾಡಿಕೊಂಡು ಫೆ.17ರಂದು ಮಂಗಳೂರಿನ ಅಡ್ಯಾರಿನಲ್ಲಿರುವ ಸಹ್ಯಾದ್ರಿ ಕಾಲೇಜಿನ ಮುಂಭಾಗದ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್‌ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಾವೇಶದ ಪ್ರಚಾರ ಮಾಧ್ಯಮ ಮುಖ್ಯಸ್ಥ ಕೆಪಿಸಿಯ ಸಂಯೋಜಕ ಕಾವು ಹೇಮನಾಥ ಶೆಟ್ಟಿಯವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದಕ್ಷಿಣ ಕನ್ನಡ ಹಾಗೂ ಉಡುಪಿ

ನಾಳೆ (ಫೆ.17) : ಸಹ್ಯಾದ್ರಿ ಕಾಲೇಜಿನ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್‌ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಮಾವೇಶ| ಪುತ್ತೂರಿನಿಂದ 10 ಸಾವಿರ ಮಂದಿ ಕಾರ್ಯಕರ್ತರು Read More »

ರಿಕ್ಷಾ ಪಲ್ಟಿ ! ಮೂವರಿಗೆ ಗಾಯ

ಪುತ್ತೂರು: ರಿಕ್ಷಾವೊಂದು ಪಲ್ಟಿಯಾಗಿ ಮೂವರು ಗಾಯಗೊಂಡ ಘಟನೆ ತಿಂಗಳಾಡಿ ಬಳಿಯ ನಿಡ್ಯಾನ ಎಂಬಲ್ಲಿ ಇಂದು ನಡೆದಿದೆ. ನಾಸಿರ್ ಎಂಬವರು ಮಾಡಾವಿನಿಂದ ತಿಂಗಳಾಡಿ ಕಡೆಗೆ ಚಲಾಯಿಸಿಕೊಂಡು ಬರುತ್ತಿದ್ದ ರಿಕ್ಷಾ ನಿಡ್ಯಾನ ಬಸ್ ತಂಗುದಾಣದ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಾಯಗೊಂಡರು ಎನ್ನಲಾಗಿದೆ. ಬಳಿಕ ಸ್ಥಳೀಯ ಸಹಕಾರದಿಂದ ಗಾಯಾಳುಗಳನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ನಾಸಿರ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ರಿಕ್ಷಾ ಪಲ್ಟಿ ! ಮೂವರಿಗೆ ಗಾಯ Read More »

ಫೆ.18-19 : ಒಡಿಯೂರು ಕ್ಷೇತ್ರದಲ್ಲಿ ತುಳುನಾಡ ಜಾತ್ರೆ ‘ಒಡಿಯೂರು ರಥೋತ್ಸವ, ಸಿರಿರಾಮೆ ತುಳು ಸಾಹಿತ್ಯ ಸಮ್ಮೇಳನ | ಪುತ್ತೂರಿನಿಂದ ಹೊರಟಿತು ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಮೆರವಣಿಗೆ

ಪುತ್ತೂರು: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‍ ನಲ್ಲಿ ಫೆ.18 ಹಾಗೂ 19 ರಂದು ನಡೆಯಲಿರುವ ತುಳುನಾಡ ಜಾತ್ರೆ ‘ಒಡಿಯೂರು ರಥೋತ್ಸವ’, ಸಿರಿರಾಮೆ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಪುತ್ತೂರಿನಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಮೆರವಣಿಗೆ ಶುಕ್ರವಾರ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ರಥಬೀದಿಯಲ್ಲಿ ಹೊರೆಕಾಣಿಕೆ ಸಮಿತಿ ಗೌರವಾಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ಗೌರವ ಸಲಹೆಗಾರರು ಸವಣೂರು ಸೀತಾರಾಮ ರೈ ತೆಂಗಿನ ಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹೊರೆಕಾಣಿಕೆ ಸಮಿತಿ ಕಾರ್ಯಾಧ್ಯಕ್ಷ

ಫೆ.18-19 : ಒಡಿಯೂರು ಕ್ಷೇತ್ರದಲ್ಲಿ ತುಳುನಾಡ ಜಾತ್ರೆ ‘ಒಡಿಯೂರು ರಥೋತ್ಸವ, ಸಿರಿರಾಮೆ ತುಳು ಸಾಹಿತ್ಯ ಸಮ್ಮೇಳನ | ಪುತ್ತೂರಿನಿಂದ ಹೊರಟಿತು ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಮೆರವಣಿಗೆ Read More »

ಪಾಂಗ್ಲಾಯಿ ನಿವಾಸಿ ಹೇಮಚಂದ್ರ ಆಚಾರ್ಯ ನಿಧನ

ಪುತ್ತೂರು: ಇಲ್ಲಿಯ ಪಾಂಗ್ಲಾಯಿ ನಿವಾಸಿ ಹೇಮಚಂದ್ರ ಆಚಾರ್ಯ ಶುಕ್ರವಾರ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಪಾಂಗ್ಲಾಯಿ ನಿವಾಸಿ ದಿ. ಮಾಣಿ ಆಚಾರ್ಯ ಅವರ ಪುತ್ರರಾದ ಹೇಮಚಂದ್ರ ಆಚಾರ್ಯ ಆಟೋ ರಿಕ್ಷಾ ಚಾಲಕರಾಗಿದ್ದು, ಕೆ. ಎಸ್‍. ಆರ್‍. ಟಿ. ಸಿ. ಯಲ್ಲೂ ಕೆಲಸ ನಿರ್ವಹಿಸಿದ್ದರು. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಪಾಂಗ್ಲಾಯಿ ನಿವಾಸಿ ಹೇಮಚಂದ್ರ ಆಚಾರ್ಯ ನಿಧನ Read More »

ಫೆ.18: ಪುರುಷರಕಟ್ಟೆ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ನಲ್ಲಿ ಉಚಿತ ಗುದಾಗತ ರೋಗಗಳ ತಪಾಸಣೆ ಶಿಬಿರ

ಪುತ್ತೂರು: ಪುರುಷರಕಟ್ಟೆಯಲ್ಲಿ ಕಾರ್ಯಾಚರಿಸುತ್ತಿರುವ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ವತಿಯಿಂದ ಉಚಿತ ಗುದಾಗತ ರೋಗಗಳ ತಪಾಸಣಾ ಶಿಬಿರ (ಪೈಲ್ಸ್, ಫಿಷರ್, ಫಿಸ್ತುಲ) ಫೆ.18 ಭಾನುವಾರ ನಡೆಯಲಿದೆ. ಮಧ್ಯಾಹ್ನ 2 ರಿಂದ ಸಂಜೆ 5 ರ ತನಕ ನಡೆಯುವ ಶಿಬಿರದಲ್ಲಿ ಪೈಲ್ಸ್, ಫಿಷರ್, ಫಿಸ್ತುಲ ಮುಂತಾದ ಗುದ ಸಂಬಂಧಿ ರೋಗಗಳು, ಮಲಬದ್ಧತೆ, ಗುದದ್ವಾರದಲ್ಲಿ ಊತ, ನೋವು, ಕೀವು, ತುರಿಕೆ, ರಕ್ತಸ್ರಾವ ಮುಂತಾದ ಲಕ್ಷಣಗಳು ಕಾಣಿಸಿದರೆ ನಿರ್ಲಕ್ಷಿಸದೇ ಕೂಡಲೇ ತಪಾಸಣೆ ಮಾಡಿಕೊಂಡು ಮುಂದೆ ಆಗುವ ಅನೇಕ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಬಹುದು.

ಫೆ.18: ಪುರುಷರಕಟ್ಟೆ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ನಲ್ಲಿ ಉಚಿತ ಗುದಾಗತ ರೋಗಗಳ ತಪಾಸಣೆ ಶಿಬಿರ Read More »

ಪುತ್ತೂರು ತಾಲೂಕು ಯುವ ಬಂಟರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಡಾ. ಹರ್ಷಕುಮಾರ್ ರೈ ಮಾಡಾವು, ಪ್ರಧಾನ ಕಾರ್ಯದರ್ಶಿಗಳಾಗಿ ರಂಜಿನಿ ಶೆಟ್ಟಿ, ಪ್ರಜ್ವಲ್ ರೈ ಸೊರಕೆ

ಪುತ್ತೂರು: ತಾಲೂಕು ಯುವ ಬಂಟರ ಸಂಘದ ಮುಂದಿನ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಡಾ. ಹರ್ಷಕುಮಾರ್ ರೈ ಮಾಡಾವು, ಪ್ರಧಾನ ಕಾರ್ಯದರ್ಶಿಗಳಾಗಿ ರಂಜಿನಿ ಶೆಟ್ಟಿ ಹಾಗೂ ಪ್ರಜ್ವಲ್ ರೈ ಸೊರಕೆ ಆಯ್ಕೆಗೊಂಡಿದ್ದಾರೆ. ಪುತ್ತೂರು ಕೊಂಬೆಟ್ಟು ಎಂ.ಸುಂದರರಾಮ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಆಯ್ಕೆ ಮಾಡಲಾಗಿದ್ದು, ಸಂಘದ ಸಲಹೆಗಾರ ಚುನಾವಣಾಧಿಕಾರಿ ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ ಅವರ ನೇತೃತ್ವದಲ್ಲಿ ಮಾಡಲಾಯಿತು. ಖಜಾಂಚಿಯಾಗಿ ಶಿವ ಶ್ರೀರಂಜನ್ ರೈ ದೇರ್ಲ, ಜೊತೆ ಕಾರ್ಯದರ್ಶಿಯಾಗಿ ಶುಭಾ ರೈ, ಸಂಘಟನಾ

ಪುತ್ತೂರು ತಾಲೂಕು ಯುವ ಬಂಟರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಡಾ. ಹರ್ಷಕುಮಾರ್ ರೈ ಮಾಡಾವು, ಪ್ರಧಾನ ಕಾರ್ಯದರ್ಶಿಗಳಾಗಿ ರಂಜಿನಿ ಶೆಟ್ಟಿ, ಪ್ರಜ್ವಲ್ ರೈ ಸೊರಕೆ Read More »

ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾಗಿ ಡಾ.ನಿಶ್ಚಯ್ ಕುಮಾರ್ ಹೆಗ್ಡೆ ಪದ ಸ್ವೀಕಾರ

ಪುತ್ತೂರು: ಇಲ್ಲಿಯ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾಗಿ ಡಾ.ನಿಶ್ಚಯ್ ಕುಮಾರ್ ಹೆಗ್ಡೆ ಗುರುವಾರ ಪದ ಸ್ವೀಕಾರ ಮಾಡಿದರು. ಹದಿನೆಂಟು ವರ್ಷಗಳ ಅಧ್ಯಾಪನ ಅನುಭವ ಹೊಂದಿರುವ ಅವರು ಕಂಪ್ಯೂಟರ್ ವಿಭಾಗದ ನೂತನ ತಂತ್ರಜ್ಞಾನಗಳ ಬಗ್ಗೆ ಅಪಾರ ತಿಳುವಳಿಕೆ ಹೊಂದಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಂಶುಪಾಲರು, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಪದ ಸ್ವೀಕಾರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು

ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾಗಿ ಡಾ.ನಿಶ್ಚಯ್ ಕುಮಾರ್ ಹೆಗ್ಡೆ ಪದ ಸ್ವೀಕಾರ Read More »

error: Content is protected !!
Scroll to Top