ಪುತ್ತೂರು

ಬಲ್ನಾಡು ಕೃಷಿಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಭೂಮಿಪೂಜೆ | ನಿರ್ಮಾಣವಾಗಲಿದೆ 1.28 ಕೋಟಿ ರೂ. ವೆಚ್ಚದ ನೂತನ ಕಟ್ಟಡ

ಪುತ್ತೂರು: ಬಲ್ನಾಡು ಕೃಷಿಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಭೂಮಿಪೂಜೆ ಗುರುವಾರ ನಡೆಯಿತು. ಬಲ್ನಾಡು ಗ್ರಾಮದ ಬಿಳಿಯೂರುಕಟ್ಟೆಯಲ್ಲಿ ಸುಮಾರು 1.28 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಸಂಘದ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು. ರವಿಚಂದ್ರ ನೆಲ್ಲಿತ್ತಾಯ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಗೌಡ ಶಿಲಾನ್ಯಾಸ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಸೀತಾರಾಮ, ಉಪಾಧ್ಯಕ್ಷ ಅಬ್ದುಲ್ ಹಕೀಂ, ನಿರ್ದೇಶಕರಾದ ಕೆ.ಚಂದಪ್ಪ ಪೂಜಾರಿ, ಎ.ಯಂ.ಪ್ರಕಾಶ್ಚಂದ್ರ ಆಳ್ವ, ಎ.ಎಂ.ಪ್ರವೀಣ್ ಚಂದ್ರ ಆಳ್ವ, ಅಂಬ್ರೋಸ್ ಡಿ’ಸೋಜಾ, ನವೀನ […]

ಬಲ್ನಾಡು ಕೃಷಿಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಭೂಮಿಪೂಜೆ | ನಿರ್ಮಾಣವಾಗಲಿದೆ 1.28 ಕೋಟಿ ರೂ. ವೆಚ್ಚದ ನೂತನ ಕಟ್ಟಡ Read More »

ಅಭಿವೃದ್ಧಿ ಹಿನ್ನಲೆಯಲ್ಲಿ ರಸ್ತೆ ಅಗೆತ | ಮೂರು ತಿಂಗಳು ಕಳೆದರೂ ನಡೆಯದ ಡಾಮರೀಕರಣ | ಧೂಳುಮಯವಾದ ಪರಿಸರದಲ್ಲಿ ರೋಗಭೀತಿಯ ಭಯ

ಪುತ್ತೂರು: ಅಭಿವೃದ್ಧಿ ಹಿನ್ನಲೆಯಲ್ಲಿ ಮುಖ್ಯ ರಸ್ತೆಗಳನ್ನು ಅಗೆದು ತಿಂಗಳು ಮೂರು ಕಳೆದರೂ ಸಂಬಂಧ ಪಟ್ಟ ಇಲಾಖೆ ಇನ್ನೂ ಡಾಮರೀಕರಣ ಮಾಡಿಲ್ಲ. ಪರಿಣಾಮ ವಾಹನ ಸವಾರರು ಸಹಿತ ಸ್ಥಳೀಯ ಅಂಗಡಿ ಮುಂಗಟ್ಟುಗಳನ್ನು ಕೆಲಸ ಮಾಡುವವರು ಸಮಸ್ಯೆ ಎದುರಿಸುವಂತಾಗಿದೆ. ಪುತ್ತೂರು-ಸುಬ್ರಹ್ಮಣ್ಯ ಸಂಪರ್ಕ ರಸ್ತೆಯ ಪುರುಷರಕಟ್ಟೆಯಲ್ಲಿ ಸುಮಾರು 50 ಮೀ. ಹಾಗೂ ನರಿಮೊಗರಿನಲ್ಲಿ 100-200 ಮೀಟರ್ ರಸ್ತೆಯನ್ನು ಡಾಮರೀಕರಣ ಮಾಡುವ ನಿಟ್ಟಿನಲ್ಲಿ ಕಳೆದ ಮೂರು ತಿಂಗಳ ಹಿಂದೆ ಅಗೆಯಲಾಗಿತ್ತು. ಅಲ್ಲಿಂದ ಇಲ್ಲಿ ತನಕ ರಸ್ತೆಯನ್ನು ಡಾಮರೀಕರಣ ಮಾಡದ ಪರಿಣಾಮ ಇಡೀ ಪರಿಸರ

ಅಭಿವೃದ್ಧಿ ಹಿನ್ನಲೆಯಲ್ಲಿ ರಸ್ತೆ ಅಗೆತ | ಮೂರು ತಿಂಗಳು ಕಳೆದರೂ ನಡೆಯದ ಡಾಮರೀಕರಣ | ಧೂಳುಮಯವಾದ ಪರಿಸರದಲ್ಲಿ ರೋಗಭೀತಿಯ ಭಯ Read More »

ಕುದ್ಮಾರು ಗ್ರಾಮದ ದೈವ ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾಣಿಯೂರು: ಕುದ್ಮಾರು ಗ್ರಾಮದ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವದ ನೇಮೊತ್ಸವದ ಆಮಂತ್ರಣ ಪತ್ರಿಕೆಯನ್ನು ಗುರುವಾರ ಬಿಡುಗಡೆ ಮಾಡಲಾಯಿತು. ಶ್ರೀ ದೈವಸ್ಥಾನದಲ್ಲಿ ಮಾ.9 ರಂದು ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿಯವರು, ಅರ್ಚಕರು, ಭಕ್ತಾದಿಗಳು ಉಪಸ್ಥಿತರಿದ್ದರು.

ಕುದ್ಮಾರು ಗ್ರಾಮದ ದೈವ ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಉತ್ಸವಕ್ಕೆ ಚಾಲನೆ | ಕುಮಾರಧಾರಾ ನದಿಯಲ್ಲಿ ಗಂಗಾಪೂಜೆ, ಕಲಶ ಜಲ ಮೆರವಣಿಗೆ

ವೀರಮಂಗಲ: ಪುತ್ತೂರು ತಾಲೂಕಿನ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವಕ್ಕೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಗುರುವಾರ ಚಾಲನೆ ನೀಡಲಾಯಿತು. ಉತ್ಸವದ ಅಂಗವಾಗಿ ಬೆಳಿಗ್ಗೆ 11 ಗಂಟೆಗೆ ಕುಮಾರಧಾರಾ ನದಿಯಲ್ಲಿ  ಶ್ರೀ ದೇವಸ್ಥಾನದ ಅರ್ಚಕ ರಾಧಾಕೃಷ್ಣ ಶಗ್ರಿತ್ತಾಯರು ಗಂಗಾಪೂಜೆ ಗಂಗಾಪೂಜೆ ನೆರವೇರಿಸಿದರು. ಬಳಿಕ ಕಲಶ ಜಲ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಉತ್ಸವ ಸಮಿತಿ ಅಧ್ಯಕ್ಷ ಶಿವರಾಮ ಭಟ್ ಬಾವ, ಸದಸ್ಯರು, ವಿಶ್ವಸ್ಥ ಮಂಡಳಿ ಅಧ್ಯಕ್ಷ ಉಮೇಶ ಕೋಡಿಬೈಲು, ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಉತ್ಸವಕ್ಕೆ ಚಾಲನೆ | ಕುಮಾರಧಾರಾ ನದಿಯಲ್ಲಿ ಗಂಗಾಪೂಜೆ, ಕಲಶ ಜಲ ಮೆರವಣಿಗೆ Read More »

ವಿದ್ಯಾರ್ಥಿ ಅತ್ತಾವುಲ್ಲಾ ನೇಣು ಬಿಗಿದು ಆತ್ಮಹತ್ಯೆ !

ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿ ಗ್ರಾಮದ ಪೆರಿಯಡ್ಕ ನಿವಾಸಿ ಅತ್ತಾವುಲ್ಲಾ (22) ಆತ್ಮಹತ್ಯೆ ಮಾಡಿಕೊಂಡ ಅತ್ತಾವುಲ್ಲಾ ತಾಯಿಯೊಂದಿಗೆ ವಾಸವಾಗಿದ್ದು, ಮಡಂತ್ಯಾರಿನ ಕಾಲೇಜೊಂದರಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು. ಇತ್ತೀಚೆಗೆ ಒಂದೂವರೆ ತಿಂಗಳಿನಿಂದ ಕಾಲೇಜಿಗೆ ಹೋಗದೇ ಮನೆಯಲ್ಲಿದ್ದು ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ಫೆ.14 ರಂದು ನೆರೆಮನೆಯ ಮೆಹಂದಿ ಕಾರ್ಯಕ್ರಮಕ್ಕೆ ಹೋಗಿ ವಾಪಾಸ್ಸು ಮನೆಗೆ ಬಂದಿದ್ದ ಅತ್ತಾವುಲ್ಲಾ ಕೋಣೆಯೊಳಗೆ ತೆರಳಿ ನೇಣು ಬಿಗಿದುಕೊಂಡಿದ್ದಾನೆ. ಜೀವನದಲ್ಲಿ ಜಿಗುಪ್ಸೆ ಹೊಂದಿ

ವಿದ್ಯಾರ್ಥಿ ಅತ್ತಾವುಲ್ಲಾ ನೇಣು ಬಿಗಿದು ಆತ್ಮಹತ್ಯೆ ! Read More »

ಬಾಲವನದ ತೆರೆದ ರಂಗಮಂದಿರವನ್ನು ಆದ್ಯತೆ ನೆಲೆಯಲ್ಲಿ ಅಭಿವೃದ್ಧಿ ಪಡಿಸಲಾಗುವುದು : ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ |ಪ್ರಬಂಧ, ಚಿತ್ರಕಲೆ, ಭಾಷಣ ಸ್ಪರ್ಧೆಗಳ ಬಹುಮಾನ ವಿತರಣೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ನ ವೆಬ್ ಸೈಟ್ ಮೊಬೈಲ್ ಆವೃತ್ತಿ ಅನಾವರಣ

ಪುತ್ತೂರು: ಪರ್ಲಡ್ಕದಲ್ಲಿರುವ ಡಾ.ಶಿವರಾಮ ಕಾರಂತ ಬಾಲವನದಲ್ಲಿರುವ ತೆರೆದ ರಂಗ ಮಂದಿರವನ್ನು ಆದ್ಯತೆಯ ನೆಲೆಯಲ್ಲಿ ಅಭಿವೃದ್ಧಿಪಡಿಸುವ ಜತೆಗೆ ವಾರಾಂತ್ಯ ವಿವಿಧ ಸ್ಪರ್ಧೆಗಳನ್ನು ನಡೆಸಲು ಕ್ರಮಕೈಗೊಳ್ಳಲಾಗುವುದು ಎಂದು ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ತಿಳಿಸಿದ್ದಾರೆ. ಅವರು ಬುಧವಾರ ಡಾ.ಶಿವರಾಮ ಕಾರಂತ ಬಾಲವನದಲ್ಲಿ ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ,ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ, ಬಾಲವನ ಅಭಿವೃದ್ಧಿ ಸಮಿತಿ ಪುತ್ತೂರು ಸಹಯೋಗದಲ್ಲಿ 73ನೇ ಗಣರಾಜ್ಯೋತ್ಸವದ ಕುರಿತು ಪ್ರಬಂಧ, ಚಿತ್ರಕಲೆ, ಭಾಷಣ ಸ್ಪರ್ಧೆಗಳ

ಬಾಲವನದ ತೆರೆದ ರಂಗಮಂದಿರವನ್ನು ಆದ್ಯತೆ ನೆಲೆಯಲ್ಲಿ ಅಭಿವೃದ್ಧಿ ಪಡಿಸಲಾಗುವುದು : ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ |ಪ್ರಬಂಧ, ಚಿತ್ರಕಲೆ, ಭಾಷಣ ಸ್ಪರ್ಧೆಗಳ ಬಹುಮಾನ ವಿತರಣೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ನ ವೆಬ್ ಸೈಟ್ ಮೊಬೈಲ್ ಆವೃತ್ತಿ ಅನಾವರಣ Read More »

ವಿದ್ಯಾರ್ಥಿನಿಗೆ ಕಿರುಕುಳ | ಇಬ್ಬರು ಆರೋಪಿಗಳ ಬಂಧನ

ಪುತ್ತೂರು: ವಿದ್ಯಾರ್ಥಿನಿಯೋರ್ವರಿಗೆ ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಸುಬ್ರಹ್ಮಣ್ಯ ನಿವಾಸಿ ಕಿಶನ್ ಹಾಗೂ ಸಿಂಹವನ ನಿವಾಸಿ ರಿತೇಶ್ ಬಂಧಿತ ಆರೋಪಿಗಳು ಕುರಿಯ ಸೊಸೈಟಿಯೊಂದರ ಬಳಿ ವಿದ್ಯಾರ್ಥಿನಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆರೋಪಿಗಳು ಕಿರುಕುಳ ನೀಡಿ, ಕೈ ಹಿಡಿದು ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಗ್ರಾಮಾಂತರ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿದ್ಯಾರ್ಥಿನಿಗೆ ಕಿರುಕುಳ | ಇಬ್ಬರು ಆರೋಪಿಗಳ ಬಂಧನ Read More »

ಫೆ.17- 24: ನಳಿಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ವಾರ್ಷಿಕ ಜಾತ್ರಾ ಮಹೋತ್ಸವ

ಪುತ್ತೂರು: ಹುತ್ತಕ್ಕೆ ಪೂಜೆ ಸಲ್ಲಿಸುವ ಕ್ಷೇತ್ರ ಎಂದೇ ಪ್ರಸಿದ್ಧಿಯಾದ ಕೊಳ್ತಿಗೆ ಗ್ರಾಮದ ಪಾಲ್ತಾಡು ನಳಿಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ ಫೆ.17 ರಿಂದ ಫೆ.24 ರ ತನಕ ವಿವಿಧ ವೈದಿಕ, ಧಾರ್ಮಿಕ, ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ ಎಂದು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳಿಲು ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು ಒಂದು ಸಾವಿರ ವರ್ಷಗಳ ಇತಿಹಾಸ ಇರುವ ದೇವಸ್ಥಾನದ ಆರಂಭದಲ್ಲಿ ಮುಳಿಹುಲ್ಲಿನಿಂದ

ಫೆ.17- 24: ನಳಿಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ವಾರ್ಷಿಕ ಜಾತ್ರಾ ಮಹೋತ್ಸವ Read More »

ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ವೈದ್ಯರುಗಳ ನಿಯೋಜನೆ | ಆರೋಗ್ಯ ಸಚಿವರಿಂದ ಆದೇಶ

ಪುತ್ತೂರು: ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ವೈದ್ಯರುಗಳ ನಿಯೋಜನೆಗಾಗಿ ಆರೋಗ್ಯ ಸಚಿವರು ಆದೇಶ ನೀಡಿದ್ದಾರೆ.ಬಂಟ್ವಾಳ ತಾಲೂಕು ವ್ಯಾಪ್ತಿಯ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆಯಿದ್ದು ಕೇವಲ ಒಬ್ಬರೇ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಈ ಕುರಿತು ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಹೆಚ್ಚುವರಿ ವೈದ್ಯರನ್ನು ನೇಮಿಸುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಿದ್ದರು.ಆರೋಗ್ಯ ಕೇಂದ್ರದ ವೈದ್ಯರ ಕೊರತೆ ಬಗ್ಗೆ ಶಾಸಕರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗಮನಕ್ಕೆ ತಂದಿದ್ದರು. ಶಾಸಕರ

ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ವೈದ್ಯರುಗಳ ನಿಯೋಜನೆ | ಆರೋಗ್ಯ ಸಚಿವರಿಂದ ಆದೇಶ Read More »

ಕರುಣಾಕರ ರೈ ಬಾಲ್ಯೊಟ್ಟುಗುತ್ತು ನಿಧನ

ಪುತ್ತೂರು: ಅಡಿಕೆ ವ್ಯಾಪಾರಿ ಕರುಣಾಕರ ರೈ ಬಾಲ್ಯೊಟ್ಟುಗುತ್ತು ಬುಧವಾರ ನಿಧನರಾಗಿದ್ದಾರೆ. ಬಾರಿಸು ಕನ್ನಡ ಡಿಂಡಿಮ ಸದಸ್ಯರಾಗಿದ್ದ ಕರುಣಾಕರ ಅವರು ರಾತ್ರಿ ಮನೆಯಲ್ಲಿ ಸ್ನಾನ ಮುಗಿಸಿ ಕುಳಿತಿದ್ದ ವೇಳೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದೆ. ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಕರುಣಾಕರ ರೈ ಬಾಲ್ಯೊಟ್ಟುಗುತ್ತು ನಿಧನ Read More »

error: Content is protected !!
Scroll to Top