ಪುತ್ತೂರು

ಪಡೀಲು ವಿಜಯನಗರ ಬಡಾವಣೆಯಲ್ಲಿ ಮನೆಗೆ ಬೆಂಕಿ ತಗುಲಿ ನಷ್ಟ | ಪುತ್ತಿಲ ಪರಿವಾರದಿಂದ ಧನಸಹಾಯ

ಪುತ್ತೂರು : ಪಡೀಲು ವಿಜಯನಗರ ಬಡಾವಣೆಯಲ್ಲಿ ನಾರಾಯಣ ನಾಯ್ಕ್ ಮತ್ತು ಶಿವಪ್ರಸಾದ್ ನಾಯ್ಕ್ ಎಂಬವರ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಅಪಾರ ನಷ್ಟವಾಗಿದ್ದು, ಪುತ್ತಿಲ ಪರಿವಾರದಿಂದ ಧನಸಹಾಯ ನೀಡಲಾಯಿತು. ಅವಘಡ ಸಂಭವಿಸಿದ ತಕ್ಷಣ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ತಂಡ ಭೇಟಿ ನೀಡಿ ಸಾಂತ್ವನ ಹೇಳಿ, ಕೈಲಾದ ಸಹಾಯ ಮಾಡಿದರು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರದ ನಗರ ಅಧ್ಯಕ್ಷ ಅನಿಲ್ ತೆಂಕಿಲ, ಚಂದ್ರಹಾಸ ಶೆಟ್ಟಿ ಆನೆಮಜಲು, ಸತೀಶ್ ಭಂಡಾರಿ, ಪ್ರವೀಣ್ ಭಂಡಾರಿ,  ಮನೀಶ್ ಕುಲಾಲ್, […]

ಪಡೀಲು ವಿಜಯನಗರ ಬಡಾವಣೆಯಲ್ಲಿ ಮನೆಗೆ ಬೆಂಕಿ ತಗುಲಿ ನಷ್ಟ | ಪುತ್ತಿಲ ಪರಿವಾರದಿಂದ ಧನಸಹಾಯ Read More »

ನಾಳೆ (ಫೆ.10) : ‘ಪುತ್ತೂರು ಐಟಿ ಡೀಲರ್ಸ್ ಅಸೋಸಿಯೇಶನ್’ ಶುಭಾರಂಭ

ಪುತ್ತೂರು : ನೂತನವಾಗಿ ಅಸ್ತಿತ್ವಕ್ಕೆ ಬಂದ ‘ಪುತ್ತೂರು ಐಟಿ ಡೀಲರ್ಸ್ ಅಸೋಸಿಯೇಶನ್’ ಉದ್ಘಾಟನಾ ಸಮಾರಂಭ ಫೆ.10 ಶನಿವಾರ ದರ್ಬೆ ಸಂತ ಫಿಲೋಮಿನಾ ಕಾಲೇಜಿನ ಎದುರಿನ ಸಚ್ಚಿದಾನಂದ ಸಭಾಭವನದಲ್ಲಿ ನಡೆಯಲಿದೆ ಎಂದು ಅಸೋಸಿಯೇಶನ್ ಅಧ್ಯಕ್ಷ ಅನೂಪ್ ಕೆ.ಜೆ. ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ಅಸೋಸಿಯೇಶನ್‍ಗೆ ಪದಾಧಿಕಾರಿಗಳ ನೇಮಕ ಮಾಡಲಾಗಿದ್ದು, ಪುತ್ತೂರು, ಬಂಟ್ವಾಳ, ಸುಳ್ಯ, ಕಡಬ ಹಾಗೂ ವಿಟ್ಲ ತಾಲೂಕುಗಳಲ್ಲಿರುವ ಐಟಿ ಕ್ಷೇತ್ರದವರು ಕೈ ಜೋಡಿಸುತ್ತಿದ್ದಾರೆ. ಈಗಾಗಲೇ ಅಸೋಸಿಯೇಶನ್‍ ನಲ್ಲಿ 75 ಮಂದಿ ಸದಸ್ಯರಿದ್ದು, ಪುತ್ತೂರಿನಲ್ಲಿ 33

ನಾಳೆ (ಫೆ.10) : ‘ಪುತ್ತೂರು ಐಟಿ ಡೀಲರ್ಸ್ ಅಸೋಸಿಯೇಶನ್’ ಶುಭಾರಂಭ Read More »

ಫೆ.11 : ಯುವ ಒಕ್ಕಲಿಗ ಗೌಡ ಸೇವಾ ಸಂಘ ಬನ್ನೂರು ವಲಯದ ಆತಿಥ್ಯದಲ್ಲಿ ಪುತ್ತೂರು ತಾಲೂಕು ಮಟ್ಟದ ‘‘ಯುವ ಕ್ರೀಡಾ ಸಂಭ್ರಮ-2024’’

ಪುತ್ತೂರು: ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪ್ರಾಯೋಜಕತ್ವದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘ ಬನ್ನೂರು ವಲಯದ ಆತಿಥ್ಯದಲ್ಲಿ ಪುತ್ತೂರು ತಾಲೂಕು ಮಟ್ಟದ ‘ಯುವ ಕ್ರೀಡಾ ಸಂಭ್ರಮ-2024’ ಫೆ.11 ಭಾನುವಾರ ತೆಂಕಿಲ ವಿವೇಕಾನಂದ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕ್ರೀಡಾ ಸಂಚಾಲಕ ಮಾಧವ ಗೌಡ ಪೆರಿಯತ್ತೋಡಿ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕ್ರೀಡಾ ಸಂಭ್ರಮದ ಅಂಗವಾಗಿ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಆಟೋಟ ಸ್ಪರ್ಧೆಗಳು ನಡೆಯಲಿವೆ ಎಂದು ತಿಳಿಸಿದರು. ಭಾನುವಾರ ಬೆಳಿಗ್ಗೆ

ಫೆ.11 : ಯುವ ಒಕ್ಕಲಿಗ ಗೌಡ ಸೇವಾ ಸಂಘ ಬನ್ನೂರು ವಲಯದ ಆತಿಥ್ಯದಲ್ಲಿ ಪುತ್ತೂರು ತಾಲೂಕು ಮಟ್ಟದ ‘‘ಯುವ ಕ್ರೀಡಾ ಸಂಭ್ರಮ-2024’’ Read More »

ಫೆ.11 : ಕ್ಯಾನ್ಸರ್ ರೋಗಿಗಳಿಗೆ ಉಚಿತ ಆಯುರ್ವೇದ ಉಪಶಮನಕಾರಿ ಚಿಕಿತ್ಸಾ ಸಲಹೆ ಹಾಗೂ ಸಂದರ್ಶನ

ಪುತ್ತೂರು: ಪುರುಷರಕಟ್ಟೆ ಆತ್ರೇಯ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್ ವತಿಯಿಂದ ಕ್ಯಾನ್ಸರ್ ರೋಗಿಗಳಿಗೆ ಉಚಿತ ಆಯುರ್ವೇದ ಉಪಶಮನಕಾರಿ ಚಿಕಿತ್ಸೆಯ ಸಲಹೆ ಮತ್ತು ಸಂದರ್ಶನ ಫೆ.11 ಭಾನುವಾರ ಕ್ಲಿನಿಕ್‍ ನಲ್ಲಿ ನಡೆಯಲಿದೆ. ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಆಯುರ್ವೇದ ಔಷಧಿ ಪದ್ಧತಿ ಮೂಲಕ ಕ್ಯಾನ್ಸರ್ ರೋಗದ ನೋವು ನಿವಾರಣೆಗೆ ಹಾಗೂ ಇತರ ಸಮಸ್ಯೆಗಳಿಗೆ ಉಚಿತ ಸಂದರ್ಶನ ಹಾಗೂ ಉಪಶಮನಕಾರಿ ಚಿಕಿತ್ಸೆಯ ಕುರಿತು ತಜ್ಞ ವೈದ್ಯರಾದ ಡಾ ಮಹೇಶ್.ಟಿ  ಸಲಹೆ ನೀಡಲಿದ್ದಾರೆ. ಸಾರ್ವಜನಿಕರು ಮುಂಚಿತವಾಗಿ ತಮ್ಮ ಹೆಸರು ನೋಂದಾಯಿಸಿ

ಫೆ.11 : ಕ್ಯಾನ್ಸರ್ ರೋಗಿಗಳಿಗೆ ಉಚಿತ ಆಯುರ್ವೇದ ಉಪಶಮನಕಾರಿ ಚಿಕಿತ್ಸಾ ಸಲಹೆ ಹಾಗೂ ಸಂದರ್ಶನ Read More »

ರೋಟರಿಪುರ ನಿವಾಸಿ ಚಂದ್ರಾವತಿ ನಿಧನ

ಪುತ್ತೂರು: ರೋಟರಿಪುರ ನಿವಾಸಿ, ವನಿತಾ ಮೋಟಾರ್ ಡ್ರೈವಿಂಗ್ ಸ್ಕೂಲ್ ಮಾಲಕಿ ವನಿತಾ ಅವರ ತಾಯಿ ಚಂದ್ರಾವತಿ (70) ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದಿದ್ದ ಅವರು ಗುರುವಾರ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ರೋಟರಿಪುರ ನಿವಾಸಿ ಚಂದ್ರಾವತಿ ನಿಧನ Read More »

ಕೆದಿಲ ಉಳ್ಳಾಕುಲು ದೈವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2 ಲಕ್ಷ ಮಂಜೂರು

ಕೆದಿಲ: ಜೀರ್ಣೋದ್ಧಾರಗೊಳ್ಳುತ್ತಿರುವ ಕೆದಿಲ ಉಳ್ಳಾಕುಲು, ಧೂಮವತಿ, ಮಲರಾಯ, ಪರಿವಾರ ದೈವಗಳ ಬ್ರಹ್ಮಕಲಶೋತ್ಸವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಎರಡು ಲಕ್ಷ ರೂ.ವನ್ನು ಮಂಜೂರು ಮಾಡಿದ್ದಾರೆ. ಮಂಜೂರು ಮಾಡಿದ ಎರಡು ಲಕ್ಷ ರೂಪಾಯಿಯ ಮಂಜೂರಾತಿ ಪತ್ರವನ್ನು ಗುರುವಾರ ವಿಟ್ಲ ತಾಲೂಕು ಯೋಜನಾಧಿಕಾರಿ ಚೆನ್ನಪ್ಪ ರವರು ದೈವಸ್ಥಾನದ ಅಧ್ಯಕ್ಷ ಜೈ ಕೃಷ್ಣ ಭಟ್ ಮೀರಾವನ  ಮತ್ತು ಕಮಿಟಿಯ ಸದಸ್ಯರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪೆರ್ನೆ ವಲಯ ಮೇಲ್ವಿಚಾರಕಿ ಶಾರದಾ, ಸೇವಾ ಪ್ರತಿನಿಧಿ ಜಯಂತಿ, ಜನಜಾಗೃತಿ ವೇದಿಕೆ ಅಧ್ಯಕ್ಷ ಪುಷ್ಪರಾಜ್ ಹೆಗ್ಡೆ ಸತ್ತಿಕ್ಕಲ್ಲು,

ಕೆದಿಲ ಉಳ್ಳಾಕುಲು ದೈವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2 ಲಕ್ಷ ಮಂಜೂರು Read More »

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ | ಪುತ್ತಿಲರಿಗೆ ಯಾವ ಹುದ್ದೆ ? ಸಾರ್ವಜನಿಕ ವಲಯದಲ್ಲಿ ಮೂಡಿದೆ ಕುತೂಹಲ

ಪುತ್ತೂರು: ಅರುಣ್ ಕುಮಾರ್ ಪುತ್ತಿಲ-ಬಿಜೆಪಿ ನಡುವಿನ ಮನಸ್ತಾಪ ಸುಖಾಂತ್ಯಗೊಂಡಿದೆ ಎನ್ನುವ ವಿಚಾರ ಬಲ್ಲಮೂಲಗಳಿಂದ ತಿಳಿದು ಬಂದಿದೆ. ಮಂಗಳೂರಿನಲ್ಲಿ ಅಜ್ಞಾತ ಸ್ಥಳವೊಂದರಲ್ಲಿ ನಡೆದ ಸಭೆಯಲ್ಲಿ ಪಕ್ಷ ಸೇರ್ಪಡೆ ಕುರಿತು ಮುಖಂಡರ ಸಭೆ ನಡೆದಿದ್ದು, ಅರುಣ್ ಕುಮಾರ್ ಪುತ್ತಿಲ ಶೀಘ್ರ ಬಿಜೆಪಿ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂಬುದು ಚರ್ಚೆಯ ಪ್ರಮುಖ ಅಂಶವಾಗಿತ್ತು. ಆದರೆ ಪಕ್ಷ ಸೇರ್ಪಡೆಗೆ ಯಾವ ಹುದ್ದೆ ನೀಡುತ್ತಾರೆ ಎಂಬುದು ಸಾರ್ವಜನಿಕ ವಲಯದಲ್ಲಿ ಕುತೂಹಲ ಮೂಡಿಸಿದೆ. ಇಲ್ಲಿತ ನಕ ನಡೆದಿರುವುದು ಇತಿಹಾಸ. ಮುಂದೆ ನಡೆಯುವುದೆಲ್ಲಾ ಹೊಸ ಅಧ್ಯಾಯ ಎಂದು ಸಭೆಯಲ್ಲಿ

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ | ಪುತ್ತಿಲರಿಗೆ ಯಾವ ಹುದ್ದೆ ? ಸಾರ್ವಜನಿಕ ವಲಯದಲ್ಲಿ ಮೂಡಿದೆ ಕುತೂಹಲ Read More »

ಅಡ್ಯನಡ್ಕ ಬ್ಯಾಂಕ್‍ ದರೋಡೆ | ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ಭೇಟಿ | ಘಟನೆ ಕುರಿತು ಮಾಹಿತಿ ನೀಡಿದ ಎಸ್.ಪಿ. ರಿಷ್ಯಂತ್

ಅಡ್ಯನಡ್ಕ : ಕರ್ನಾಟಕ ಬ್ಯಾಂಕ್‍ ಗೆ ಕಳ್ಳರು ನುಗ್ಗಿ ಕೋಟ್ಯಾಂತರ ಮೌಲ್ಯದ ನಗ-ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕು ಪಡೆದುಕೊಂಡಿದ್ದು, ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಬ್ಯಾಂಕ್‌ಗೆ ನಿನ್ನೆ ರಾತ್ರಿ ದರೋಡೆಕೋರರು ಒಳನುಗ್ಗಿದ್ದು, ಇಂದು ಮುಂಜಾನೆ ಎಂದಿನಂತೆ ಬ್ಯಾಂಕ್ ಸಿಬ್ಬಂದಿ ಬ್ಯಾಂಕ್ ತೆರೆದು ಒಳಗೆ ಹೋದಾಗ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಬಂದು

ಅಡ್ಯನಡ್ಕ ಬ್ಯಾಂಕ್‍ ದರೋಡೆ | ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ಭೇಟಿ | ಘಟನೆ ಕುರಿತು ಮಾಹಿತಿ ನೀಡಿದ ಎಸ್.ಪಿ. ರಿಷ್ಯಂತ್ Read More »

ಅಂತರ್ ಕಾಲೇಜು ಹಾಕಿ ಪಂದ್ಯಾಟ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ತಂಡ ರಾಜ್ಯಮಟ್ಟಕ್ಕೆ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ ಪುರುಷರ ಹಾಕಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮಂಗಳೂರು ವಿಭಾಗದ ಅಂತರ್ ಕಾಲೇಜು ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ನಿಟ್ಟೆಯ ಎನ್‌ಎಂಎಎಂಐಟಿ ಯಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು, ತಂಡ ಫೆ.23 ಮತ್ತು 24 ರಂದು ಪೊನ್ನಂಪೇಟೆಯಲ್ಲಿ ನಡೆಯುವ ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆಯಲ್ಲಿ ಅರ್ಹತೆಯನ್ನು ಗಳಿಸಿಕೊಂಡಿದೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ತಂಡಕ್ಕೆ ತರಬೇತಿ ಹಾಗೂ

ಅಂತರ್ ಕಾಲೇಜು ಹಾಕಿ ಪಂದ್ಯಾಟ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ತಂಡ ರಾಜ್ಯಮಟ್ಟಕ್ಕೆ Read More »

ಸ್ನಾತಕೋತ್ತರ ಎಂಬಿಎ ಮತ್ತು ಎಂಸಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

ಪುತ್ತೂರು: ನಮ್ಮ ಬದುಕು ಅರ್ಥಪೂರ್ಣವಾಗಿರುವಂತೆ ಮತ್ತು ಚೈತನ್ಯಭರಿತವಾಗಿರುವಂತೆ ಮಾಡಿಕೊಳ್ಳಬೇಕಾದರೆ ಉತ್ತಮ ಅಭ್ಯಾಸಗಳನ್ನು ವಿದ್ಯಾರ್ಥಿ ದೆಸೆಯಿಂದಲೇ ಬೆಳೆಸಿಕೊಳ್ಳಬೇಕು. ಅವುಗಳ ಜೊತೆಗೆ ಆರೋಗ್ಯಕರ ಹವ್ಯಾಸಗಳನ್ನೂ ಬೆಳೆಸಿಕೊಂಡರೆ ಜೀವನ ಸಮೃದ್ಧವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್.ಪಿ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಸ್ನಾತಕೋತ್ತರ ಎಂಬಿಎ ಮತ್ತು ಎಂಸಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ನಡೆದ

ಸ್ನಾತಕೋತ್ತರ ಎಂಬಿಎ ಮತ್ತು ಎಂಸಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ Read More »

error: Content is protected !!
Scroll to Top