ಪುತ್ತೂರು

ಆ.29: ಭಾರೀ ಮಳೆಯ ಹಿನ್ನೆಲೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯ ಹಿನ್ನಲೆ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ರೆಡ್ ಅಲರ್ಟ್ ಘೋಷಿಸಲಾಗಿದೆ. ಜೋರು ಮಳೆಯ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 29 ( ನಾಳೆ )ಶುಕ್ರವಾರದಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ,ಸರಕಾರಿ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ‌.

ಆ.29: ಭಾರೀ ಮಳೆಯ ಹಿನ್ನೆಲೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ Read More »

ಪೆರಿಯಡ್ಕ ಸಾಂಸ್ಕೃತಿಕ ಕಲಾ ಕೇಂದ್ರ ಆಶ್ರಯದಲ್ಲಿ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ನ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯ ಎರಡನೇ ಹಂತದ ಜಿಲ್ಲಾಮಟ್ಟದ ತಂಡಗಳ ತಾಳಮದ್ದಳೆಯು ಪೆರಿಯಡ್ಕದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಜರಗಿತು. ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅಧ್ಯಕ್ಷ ಪ್ರಸನ್ನ ಕುಮಾರ್ ಪೆರಿಯಡ್ಕ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀ ಕಾಳಿಕಾಂಬ ಯಕ್ಷ ಕಲಾಟ್ರಸ್ಟ್ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಸ್ವಾಗತಿಸಿ ಪ್ರಸ್ತಾವನೆಗೈದರು. ಉಪ್ಪಿನಂಗಡಿ ಸಾರ್ವಜನಿಕ ಶ್ರೀ ಕೃಷ್ಣಾಷ್ಟಮಿ ಸಮಿತಿ ಅಧ್ಯಕ್ಷ ಸುರೇಶ ಅತ್ರಮಜಲು,

ಪೆರಿಯಡ್ಕ ಸಾಂಸ್ಕೃತಿಕ ಕಲಾ ಕೇಂದ್ರ ಆಶ್ರಯದಲ್ಲಿ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ Read More »

ಪುತ್ತೂರು ಶ್ರೀ ದೇವತಾ ಸಮಿತಿ ವತಿಯಿಂದ ಕಿಲ್ಲೇ ಮೈದಾನದಲ್ಲಿ ಏಳು ದಿನಗಳ ಕಾಲ ನಡೆಯುವ ಶ್ರೀ ಗಣೇಶೋತ್ಸವಕ್ಕೆ ಚಾಲನೆ

ಪುತ್ತೂರು: ಶ್ರೀ ದೇವತಾ ಸಮಿತಿ ವತಿಯಿಂದ 68ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಬುಧವಾರ ಕಿಲ್ಲೇ ಮೈದಾನದಲ್ಲಿ ಚಾಲನೆ ನೀಡಲಾಯಿತು. ಬೆಳಿಗ್ಗೆ 11 ಗಂಟೆಗೆ ಕೋರ್ಟಿರೋಡಿನಲ್ಲಿರುವ ವಿಶ್ವ ಸಂಕೀರ್ಣದಿಂದ ಶ್ರೀ ಗಣಪತಿಯ ವಿಗ್ರಹ ಮೆರವಣಿಗೆ ಮೂಲಕ ಹೊರಟು ಕಿಲ್ಲೇ ಮೈದಾನಕ್ಕೆ ತೆರಳಿ ಅಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಮಧ್ಯಾಹ್ನ  ಮಹಾಪೂಜೆ ನಡೆದು ಬಳಿಕ ಪ್ರಸಾದ ವಿತರಣೆಯಾಯಿತು. ಬಳಿಕ ಅನ್ನಸಂತರ್ಪಣೆ ಜರಗಿತು. ಸೆ.2 ರ ತನಕ ಏಳು ದಿನಗಳ ಕಾಲ ಶ್ರೀ ಗಣೇಶೋತ್ಸವ ನಡೆಯಲಿದೆ.

ಪುತ್ತೂರು ಶ್ರೀ ದೇವತಾ ಸಮಿತಿ ವತಿಯಿಂದ ಕಿಲ್ಲೇ ಮೈದಾನದಲ್ಲಿ ಏಳು ದಿನಗಳ ಕಾಲ ನಡೆಯುವ ಶ್ರೀ ಗಣೇಶೋತ್ಸವಕ್ಕೆ ಚಾಲನೆ Read More »

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಗಣೇಶೋತ್ಸವ ಆಚರಣೆ | ಕಾರ್ಯಕ್ರಮಕ್ಕೆ ಮೆರುಗು ನೀಡಿದ ವಿದ್ಯಾರ್ಥಿ ರೂಪಿತ ಗಣೇಶ ವಿಗ್ರಹಗಳು

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಬುಧವಾರ ಗಣೇಶೋತ್ಸವ ಕಾರ್ಯಕ್ರಮ ನಡೆಯಿತು. ಬೆಳಗ್ಗೆ ಸ್ಥಳಶುದ್ಧಿ, ವಿಗ್ರಹ ಪ್ರತಿಷ್ಠಾಪನಾ ಕಾರ್ಯ ನಡೆದು, ಗಣಪತಿ ಹವನವೇ ಮೊದಲಾದ ಧಾರ್ಮಿಕ ವಿಧಿವಿಧಾನಗಳು ಸಂಪನ್ನಗೊಂಡವು. ವಿದ್ಯಾರ್ಥಿಗಳಿಂದ ಭಜನೆ, ನಾಟ್ಯವೇ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿ ಮಧ್ಯಾಹ್ನ ನಂತರ ಶ್ರೀ ಮಹಾಗಣಪತಿ ವಿಗ್ರಹದ ವಿಸರ್ಜನಾ ಕಾರ್ಯಕ್ರಮ ನಡೆಯಿತು. ವೇದಮೂರ್ತಿ ಶ್ರೀಕೃಷ್ಣ ಉಪಾಧ್ಯಾಯ ಅವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮಗಳೂ ನೆರವೇರಿದವು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಗಣೇಶೋತ್ಸವ ಆಚರಣೆ | ಕಾರ್ಯಕ್ರಮಕ್ಕೆ ಮೆರುಗು ನೀಡಿದ ವಿದ್ಯಾರ್ಥಿ ರೂಪಿತ ಗಣೇಶ ವಿಗ್ರಹಗಳು Read More »

ಅಕ್ಷಯ ಕಾಲೇಜಿ ನಲ್ಲಿ ಅದ್ವಯ ಸಾಹಿತ್ಯ ಸಂಘದಿಂದ  “ಸಾಹಿತ್ಯ ಮತ್ತು  ಸಾಮಾಜಿಕ ಬದ್ಧತೆ” ವಿಚಾರ ಧಾರೆ 

ಪುತ್ತೂರು:  ಅಕ್ಷಯ ಎಜುಕೇಶನಲ್j ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ  ಪದವಿ ಕಾಲೇಜಿನ  ಅದ್ವಯ  ಸಾಹಿತ್ಯ ಸಂಘ ಕಾಲೇಜಿನ  ಆಂತರಿಕ ಗುಣಮಟ್ಟ ಭರವಸೆಯ ಕೋಶದ ಸಹಭಾಗಿತ್ವದಲ್ಲಿ “ಸಾಹಿತ್ಯ ಮತ್ತು  ಸಾಮಾಜಿಕ ಬದ್ಧತೆ” ವಿಚಾರ   ಗೋಷ್ಠಿಯನ್ನು ಕಾಲೇಜಿನ ಸಭಾಂಗಣದಲ್ಲಿ ಸಂಘಟಿಸಿತು. ಭಾರತ್ ಬೋಧ್ ಮಾಲ ಉಪನ್ಯಾಸ ಸರಣಿ-14 ರ ಶೀರ್ಷಿಕೆ ಸಾಹಿತ್ಯ ಮತ್ತು  ಸಾಮಾಜಿಕ ಬದ್ಧತೆ ಎಂಬ ವಿಷಯದಲ್ಲಿ ಚುಟುಕು ಸಾಹಿತ್ಯ ಪರಿಷತ್ ಸುಳ್ಯ ಇದರ  ಅಧ್ಯಕ್ಷೆ ಅಶ್ವಿನಿ ಕೊಡಿಬೈಲ್ ವಿಚಾರಧಾರೆ ಮಂಡಿಸಿದರು. ಸಾಹಿತ್ಯದ

ಅಕ್ಷಯ ಕಾಲೇಜಿ ನಲ್ಲಿ ಅದ್ವಯ ಸಾಹಿತ್ಯ ಸಂಘದಿಂದ  “ಸಾಹಿತ್ಯ ಮತ್ತು  ಸಾಮಾಜಿಕ ಬದ್ಧತೆ” ವಿಚಾರ ಧಾರೆ  Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 59ನೇ ವರ್ಷದ ಶ್ರೀ ಗಣೇಶೋತ್ಸವ | ಶ್ರೀ ದೇವರ ಪ್ರತಿಷ್ಠೆ

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ 59ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಬುಧವಾರ ಚಾಲನೆ ನೀಡಲಾಯಿತು. ಬೆಳಿಗ್ಗೆ ವೇ.ಮೂ.ಕುಂಟಾರು ರವೀಶ ತಂತ್ರಿಗಳಿಂದ ಶ್ರೀ ದೇವರ ಪ್ರತಿಷ್ಠೆ ನಡೆಯಿತು. ಬಳಿಕ ಹಿರಿಯ ಸ್ವಯಂಸೇವಕ ಸೋಮನಾಥ ರಾವ್‍ ಅವರಿಂದ ಧ್ವಜಾರೋಹಣ ನೆರವೇರಿತು. ಮಧ್ಯಾಹ್ನ 11.30 ಕ್ಕೆ ಗಣಪತಿ ಹವನ, ಮಹಾಪೂಜೆ ನಡೆದು ಬಳಿಕ ಪ್ರಸಾದ ವಿತರಣೆಯಾಯಿತು. ಬಳಿಕ ಅನ್ನಸಂತರ್ಪಣೆ ಜರಗಿತು. ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 59ನೇ ವರ್ಷದ ಶ್ರೀ ಗಣೇಶೋತ್ಸವ | ಶ್ರೀ ದೇವರ ಪ್ರತಿಷ್ಠೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ವಿನಿಯೋಗ

ಪುತ್ತೂರು: ತುಳುನಾಡಿನಲ್ಲಿ ಅತ್ಯಂತ ಮಹತ್ವವನ್ನು ಪಡೆದಿರುವ ಕದಿರು ವಿನಿಯೋಗ ಕಾರ್ಯಕ್ರಮ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ನಡೆಯಿತು. ಇದಕ್ಕೆ ಪೂರಕವಾಗಿ ಸೋಮವಾರ ದೇವರಮಾರು ಗದ್ದೆಯಲ್ಲಿ ಕದಿರು ಕೊಯ್ಯುವ ಮುಹೂರ್ತ ನಡೆಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್‍ಗದ್ದೆಗೆ ಹಾಲೆರೆಯುವ ಮೂಲಕ ಕದಿರು ಕೊಯ್ಯುವ ಮುಹೂರ್ತಕ್ಕೆ ಚಾಲನೆ ನೀಡಿದರು. ಮಂಗಳವಾರ ಗೌರಿ ಪೂಜೆಯಂದು ಶ್ರೀದೇವರು ಗರ್ಭಗುಡಿಯಿಂದ ಹೊರಬಂದು ಚಂಡೆ, ವಾದ್ಯಗಳೊಂದಿಗೆ ತೆರಳಿದರು. ಬಳಿಕ ಅಶ್ವತ್ಥಕಟ್ಟೆಯಲ್ಲಿ ಇಡಲಾಗಿದ್ದ ಕದಿರುತೆನೆಗೆ ತೀರ್ಥ ಸಂಪ್ರೋಕ್ಷಣೆ ಮಾಡಿ ಪೂಜೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ವಿನಿಯೋಗ Read More »

ಲಿಟ್ಲ್  ಫ್ಲವರ್ ಶಾಲೆಯಲ್ಲಿ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಶಾಲೆಯ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ನೆರವೇರಿತು. ರಕ್ಷಕ ಶಿಕ್ಷಕ ಸಂಘದ ಸದಸ್ಯ ಗ್ರಾಫಿಕ್ ಡಿಸೈನರ್ ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜೀವನ ಅನ್ನೋದು ಸದಾ ಗೆಲುವು ಅಲ್ಲ. ಸತತ ಹೋರಾಟ. ಏನೇ ಕೆಲಸ ಮಾಡಿ ಅದರಲ್ಲಿ ಶ್ರದ್ದೆ ಇರಲಿ. ಸಾಮಾಜಿಕ ಜಾಲತಾಣ ವನ್ನು ಒಳಿತಿಗೆ ಬಳಸಿದ್ರೆ ಅದ್ಬುತ ಯಶಸ್ಸು ನಿಮ್ಮದಾಗತ್ತೆ ಎಂದರು. ವೇದಿಕೆಯಲ್ಲಿ ನಿಯೋಜಿತ ಮುಖ್ಯ ಶಿಕ್ಷಕಿ ಭಗಿನಿ

ಲಿಟ್ಲ್  ಫ್ಲವರ್ ಶಾಲೆಯಲ್ಲಿ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ Read More »

ಜನಜಾಗೃತಿ ಕಾರ್ಯಕ್ರಮದಡಿ ಸ್ವಾಸ್ಥ್ಯ ಸಂಕಲ್ಪ  ಕಾರ್ಯಕ್ರಮ 

ವಿಟ್ಲ: ಶ್ರೀ, ಕ್ಷೇತ್ರ,ಧರ್ಮಸ್ಥಳ,ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವಿಟ್ಲ ಅಳಿಕೆ ವಲಯದ. ಜನಜಾಗೃತಿ ಕಾರ್ಯಕ್ರಮದಡಿ ಸ್ಥಾಸ್ಯ ಸಂಕಲ್ಪ ಕಾರ್ಯಕ್ರಮ ಅಳಿಕೆ ಶ್ರೀಸತ್ಯ ಸಾಯಿ ಲೋಕಸೇವಾ ಪ್ರೌಢ ಶಾಲೆಯಲ್ಲಿ ನಡೆಯಿತು. ಶಾಲಾ ಅಧ್ಯಾಪಕ ನಾರಾಯಣ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಒಕ್ಕೂಟ ನಿಕಟಪೂರ್ವ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಸಣ್ಣಗುತು, ಒಕ್ಕೂಟ ಪದಾಧಿಕಾರಿ ವಿಜಯಲಕ್ಷಿ .ಉಪಸ್ಥಿತರಿದ್ದರು  ಸಂಪನ್ಮೂಲ ವ್ಯಕ್ತಿ ಹಾಗೂ.  ಜನಜಾಗೃತಿ ವಲಯಾಧ್ಯಕ್ಷ ಬಾಲಕೃಷ್ಣ ಕಾರಂತ್ ಏರುಂಬು ಮಕ್ಕಳಿಗೆ ಮುಂದಿನ ಜೀವನದಲ್ಲಿ ಶಿಸ್ತನ್ನು ಆಳವಡಿಸಿಕೊಳ್ಳಬೇಕು ಹಾಗೂ ದುಶ್ಚಟಗಳ ಅರಿವು ಮೂಡಿಸುವ

ಜನಜಾಗೃತಿ ಕಾರ್ಯಕ್ರಮದಡಿ ಸ್ವಾಸ್ಥ್ಯ ಸಂಕಲ್ಪ  ಕಾರ್ಯಕ್ರಮ  Read More »

ಕನ್ಯಾಡಿಯಲ್ಲಿ ಶ್ರೀ ಮಹಾಭಾರತ ಸರಣಿ ತಾಳಮದ್ದಳೆಯ ಉದ್ಘಾಟನೆ ಮತ್ತು ನುಡಿ ನಮನ ಕಾರ್ಯಕಮ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ನ ಸುವರ್ಣ ಮಹೋತ್ಸವದ ನಿಮಿತ್ತ ನಡೆಸುತ್ತಿರುವ ಜಿಲ್ಲಾ ಮಟ್ಟದ ಯಕ್ಷಗಾನ ತಂಡಗಳ ಶ್ರೀ ಮಹಾಭಾರತ ಸರಣಿಯ ಸ್ವರ್ಣ ಶತಕ ತಾಳಮದ್ದಳೆ ಕಾರ್ಯಕ್ರಮದ ಉದ್ಘಾಟನೆ ಕನ್ಯಾಡಿಯ ಶ್ರೀ ಹರಿಹರಾನುಗ್ರಹ ಸಭಾಭವನದಲ್ಲಿ ಜರಗಿತು. ಧರ್ಮಸ್ಥಳ ಕ್ಷೇತ್ರದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು. ಸಮಾರಂಭದ ಅಧ್ಯಕ್ಷತೆಯನ್ನು ಕನ್ಯಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪಾಡಿ ವಹಿಸಿದ್ದರು. ಧರ್ಮಸ್ಥಳ ಜಮಾ ಉಗ್ರಾಣದ ನಿವೃತ್ತ

ಕನ್ಯಾಡಿಯಲ್ಲಿ ಶ್ರೀ ಮಹಾಭಾರತ ಸರಣಿ ತಾಳಮದ್ದಳೆಯ ಉದ್ಘಾಟನೆ ಮತ್ತು ನುಡಿ ನಮನ ಕಾರ್ಯಕಮ Read More »

error: Content is protected !!
Scroll to Top