ರಾಮನ ಕೆಲಸಕ್ಕೆ ಅಡ್ಡಿ ಮಾಡಿದರೆ, ಲಂಕೆಯ ಉತ್ತರ | ಬೃಹತ್ ಪ್ರತಿಭಟನಾ ಸಭೆಯಲ್ಲಿ ಮುಖ್ಯಮಂತ್ರಿಗೆ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಕೆ
ಪುತ್ತೂರು: ರಾಮನ ಕೆಲಸ ಮಾಡುವವರನ್ನು ಹತ್ತಿಕ್ಕುವ ಪ್ರಯತ್ನ ಸಿದ್ಧರಾಮಯ್ಯ ಸರಕಾರ ಮಾಡಿದರೆ ಲಂಕೆಯ ಉದಾಹರಣೆಯ ಮೂಲಕ ಸರಕಾರಕ್ಕೆ ಪ್ರತಿ ಉತ್ತರ ನೀಡಬೇಕಾಗಬಹುದು ಎಂದು ಬಜರಂಗದಳ ಪ್ರಾಂತ ಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದರು. ಹುಬ್ಬಳ್ಳಿಯಲ್ಲಿ ರಾಮಭಕ್ತರನ್ನು ಬಂಧಿಸಿರುವ ಪೊಲೀಸ್ ಇಲಾಖೆಯ ವಿರುದ್ಧ ಹಾಗೂ ಕಾಂಗ್ರೆಸ್ ಸರಕಾರ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ಬುಧವಾರ ಇಲ್ಲಿನ ದರ್ಬೆ ವೃತ್ತದಲ್ಲಿ ಹಿಂದೂ ಜಾಗರಣಾ ವೇದಿಕೆ ಪುತ್ತೂರು ಜಿಲ್ಲೆ ವತಿಯಿಂದ ನಡೆಸಿದ ಬೃಹತ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ಏಜೆಂಟರ ಮೂಲಕ ಅಧಿಕಾರಿಗಳನ್ನು […]










