ಪುತ್ತೂರು

ನೆಕ್ಕರೆ ದೈವಸ್ಥಾನದ ವಾರ್ಷಿಕ ನೇಮೋತ್ಸವ |ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಮಾ. 23 ಹಾಗೂ 24ರಂದು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ನೆಕ್ಕರೆಯಲ್ಲಿರುವ ಶ್ರೀ ಬ್ರಹ್ಮ ಆದಿಮೊಗೇರ್ಕಳ ಹಾಗೂ ಚಾಮುಂಡೇಶ್ವರಿ ಅಮ್ಮನವರ ದೈವಸ್ಥಾನದಲ್ಲಿ ನಡೆಯಲಿರುವ ಚತುರ್ಥ ವರ್ಷದ ವಾರ್ಷಿಕ ಪೂಜೆ ಹಾಗೂ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಕ್ಷೇತ್ರದ ಆನುವಂಶಿಕ ಮೊಕ್ತೇಸರ ಬಾಬು ಎನ್. ನೆಕ್ಕರೆ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ಬ್ರಹ್ಮ ಆದಿಮೊಗೇರ್ಕಳ ಹಾಗೂ ಚಾಮುಂಡೇಶ್ವರಿ ಅಮ್ಮನವರ ಸೇವಾ ಸಮಿತಿ ಗೌರವಾಧ್ಯಕ್ಷ ಶ್ರೀಧರ ಪೂಜಾರಿ ನೆಕ್ಕರೆ, ಅಧ್ಯಕ್ಷ ರವಿ ಮುಕ್ವೆ, ಉಪಾಧ್ಯಕ್ಷ ಶಿವರಾಮ […]

ನೆಕ್ಕರೆ ದೈವಸ್ಥಾನದ ವಾರ್ಷಿಕ ನೇಮೋತ್ಸವ |ಆಮಂತ್ರಣ ಪತ್ರಿಕೆ ಬಿಡುಗಡೆ Read More »

ತ್ರೋಬಾಲ್ ಪಂದ್ಯಾಟ : ಪುತ್ತೂರಿನ ಬೆಥನಿ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ

ಪುತ್ತೂರು: ಡಿಸೆಂಬರ್ ನಲ್ಲಿ ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗದಲ್ಲಿ ನಡೆಸಿದ ರಾಜ್ಯ ಮಟ್ಟದ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ಆಯಿಷತ್ ಹಿಬಾ ಮತ್ತು ನಿರೀಕ್ಷಾ ಎಚ್‍. ಪ್ರಥಮ ಸ್ಥಾನ ಪಡೆದಿದ್ದು, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ನಿರಂಜನ್, ಅಕ್ಷಯ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಸೆಲಿನ್ ಪೇತ್ರಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

ತ್ರೋಬಾಲ್ ಪಂದ್ಯಾಟ : ಪುತ್ತೂರಿನ ಬೆಥನಿ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ Read More »

ವಿಟ್ಲ ಜಾತ್ರೋತ್ಸವಲ್ಲಿ ‘ಶಾಂಭವಿ’ ನಾಟಕ | ದೇವರ ಸನ್ನಿಧಿಯಲ್ಲಿ ಆಮಂತ್ರಣ ಬಿಡುಗಡೆಗೊಳಿಸಿದ ಸಮರ್ಪಣ್ ವಿಟ್ಲ

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೋತ್ಸವದ ಅಂಗವಾಗಿ ಜ. 15ರಂದು ಸಮರ್ಪಣ್ ವಿಟ್ಲ ಅರ್ಪಿಸುವ ಕಲಾ ಕಾಣಿಕೆ ‘ಶಾಂಭವಿ’ ನಾಟಕ ಪ್ರದರ್ಶನಗೊಳ್ಳಲಿದೆ. ಈ ಪ್ರದರ್ಶನಕ್ಕೆ ಪೂರ್ವಭಾವಿಯಾಗಿ ಸೋಮವಾರ ಸಂಜೆ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಸಮರ್ಪಣ್ ವಿಟ್ಲದ ಗೌರವಾಧ್ಯಕ್ಷ ವಿಟ್ಲ ಅರಮನೆಯ ಕೃಷ್ಣಯ್ಯ ಕೆ. ಆಮಂತ್ರಣ ಬಿಡುಗಡೆ ಮಾಡಿದರು. ಅಧ್ಯಕ್ಷ ಯಶವಂತ್ ನಿಡ್ಯ, ಉಪಾಧ್ಯಕ್ಷರಾದ ಯಾದವ ಮಡಿವಾಳಕೋಡಿ, ಸೂರಜ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ರೋಹಿತ್ ಕಟ್ಟೆ, ಗೌರವ ಸಲಹೆಗಾರ

ವಿಟ್ಲ ಜಾತ್ರೋತ್ಸವಲ್ಲಿ ‘ಶಾಂಭವಿ’ ನಾಟಕ | ದೇವರ ಸನ್ನಿಧಿಯಲ್ಲಿ ಆಮಂತ್ರಣ ಬಿಡುಗಡೆಗೊಳಿಸಿದ ಸಮರ್ಪಣ್ ವಿಟ್ಲ Read More »

ನೂತನ ಸಹಾಯಕ ಆಯುಕ್ತರಿಗೆ ಸರಕಾರಿ ನೌಕರರಿಂದ ಸ್ವಾಗತ

ಪುತ್ತೂರು: ನೂತನ ಸಹಾಯಕ ಆಯುಕ್ತರಾಗಿ ಹಾಗೂ ದಂಡಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ಜುಬಿನ್ ಮೊಹಪಾತ್ರ ಅವರನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ಸ್ವಾಗತಿಸಲಾಯಿತು. ಸಹಾಯಕ ಆಯುಕ್ತರನ್ನು ಭೇಟಿಯಾದ ರಾಜ್ಯ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಸ್ವಾಗತಿಸಿ, ಸಂಘದ ಕ್ಯಾಲೆಂಡರ್ ಅನ್ನು ನೀಡಿದರು. ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯ, ಕಾರ್ಯದರ್ಶಿ ಅಬ್ರಹಾಂ ಎಸ್.ಎ., ರಾಜ್ಯ ಪರಿಷತ್ ಸದಸ್ಯ ಪುರುಷೋತ್ತಮ ಬಿ., ಗೌರವಾಧ್ಯಕ್ಷ ರಾಮಚಂದ್ರ, ನಿಕಟಪೂರ್ವ ಅಧ್ಯಕ್ಷ ಮೌರಿಸ್ ಮಸ್ಕರೇನಸ್, ಕವಿತಾ, ಚಂದ್ರಶೇಖರ್, ಸುಲೋಚನ ಇನ್ನಿತರರು ಉಪಸ್ಥಿತರಿದ್ದರು.

ನೂತನ ಸಹಾಯಕ ಆಯುಕ್ತರಿಗೆ ಸರಕಾರಿ ನೌಕರರಿಂದ ಸ್ವಾಗತ Read More »

ಜ. 4: ಉಡುಪಿ ಪುತ್ತಿಗೆ ಮಠಾಧೀಶರಿಗೆ ಪುತ್ತೂರಿನಲ್ಲಿ ಪೌರ ಸನ್ಮಾನ

ಪುತ್ತೂರು: ವಿಶ್ವ ಧರ್ಮ ಸಮ್ಮೇಳನದಲ್ಲಿ ಹಿಂದೂ ಧರ್ಮದ ವಿಚಾರದಲ್ಲಿ ಭಾರತವನ್ನು ಪ್ರತಿನಿಧಿಸಿದ ಅಪರೂಪದ ಯತಿಗಳಾದ ಉಡುಪಿ ಪುತ್ತಿಗೆ ಮಠಾಧೀಶ ಶ್ರೀ ಡಾ. ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ ಸುಶೀಂದ್ರ ತೀರ್ಥ ಶ್ರೀಪಾದರಿಗೆ ಪುತ್ತೂರಿನಲ್ಲಿ ಪೌರ ಸನ್ಮಾನ ನಡೆಯಲಿದೆ ಎಂದು ಪೌರ ಸನ್ಮಾನ ಸಮಿತಿ ಅಧ್ಯಕ್ಷ ಬಲರಾಮ ಆಚಾರ್ಯ ತಿಳಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜ. 4ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಪೌರ ಸನ್ಮಾನದ ಜೊತೆಗೆ ಶ್ರೀಗಳಿಂದ ಕೋಟಿ ಗೀತಾ ಲೇಖನ

ಜ. 4: ಉಡುಪಿ ಪುತ್ತಿಗೆ ಮಠಾಧೀಶರಿಗೆ ಪುತ್ತೂರಿನಲ್ಲಿ ಪೌರ ಸನ್ಮಾನ Read More »

ಭ್ರಷ್ಟಾಚಾರ ರಹಿತ, ಪ್ರಾಮಾಣಿಕವಾಗಿ ಫಲಾನುಭವಿಯ ಮನೆ ಬಾಗಿಲಿಗೆ ಹಕ್ಕುಪತ್ರ | ಅಕ್ರಮ-ಸಕ್ರಮ, 94ಸಿ, 94ಸಿಸಿ ಹಕ್ಕು ಪತ್ರ ವಿತರಿಸಿ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ಹಾಗೂ ಉಪ್ಪಿನಂಗಡಿ ಹೋಬಳಿಯಲ್ಲಿ ಬಾಕಿಯಿರುವ ಅಕ್ರಮ-ಸಕ್ರಮ, 94ಸಿ, 94ಸಿಸಿ ಹಕ್ಕುಪತ್ರ ವಿತರಣೆಯನ್ನು ಪ್ರಾಮಾಣಿಕವಾಗಿ, ಭ್ರಷ್ಟಾಚಾರ ರಹಿತವಾಗಿ ಕಾನೂನಿನ ಚೌಕಟ್ಟಿನಲ್ಲಿ, ಸಂಬಂಧ ಪಟ್ಟ ಅಧಿಕಾರಿಗಳ ಸಹಕಾರದೊಂದಿಗೆ ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ಫಲಾನುಭವಿಯ ಮನೆಗೆ ತಲುಪಿಸುವ ಕೆಲಸ ಮಾಡಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಶಾಸಕರ ಕಚೇರಿ ಎದುರು ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಪುತ್ತೂರು ಹಾಗೂ ಉಪ್ಪಿನಂಗಡಿ ಹೋಬಳಿಯ ಅಕ್ರಮ-ಸಕ್ರಮ, 94ಸಿ ಹಾಗೂ 94ಸಿಸಿ ಹಕ್ಕುಪತ್ರ ವಿತರಿಸಿ ಮಾತನಾಡಿದರು. ಇಂದು ಸುಮಾರು 460

ಭ್ರಷ್ಟಾಚಾರ ರಹಿತ, ಪ್ರಾಮಾಣಿಕವಾಗಿ ಫಲಾನುಭವಿಯ ಮನೆ ಬಾಗಿಲಿಗೆ ಹಕ್ಕುಪತ್ರ | ಅಕ್ರಮ-ಸಕ್ರಮ, 94ಸಿ, 94ಸಿಸಿ ಹಕ್ಕು ಪತ್ರ ವಿತರಿಸಿ ಶಾಸಕ ಅಶೋಕ್ ರೈ Read More »

ಮೇಸ್ತ್ರಿ ಗುತ್ತಿಗೆದಾರ ನೇಣು ಬಿಗಿದು ಆತ್ಮಹತ್ಯೆ!!

ಪುತ್ತೂರು: ಆರ್ಲಪದವು ನಿವಾಸಿ ಶಿವಪ್ಪ ನಾಯ್ಕ ಅವರ ಪುತ್ರ, ಮೇಸ್ತ್ರಿ ಗುತ್ತಿಗೆದಾರ ವಿಜಯ್ ಕುಮಾರ್ (38 ವ.) ನೇಣಿಗೆ ಶರಣಾಗಿದ್ದಾರೆ. ಜನವರಿ 1ರ ಸಂಜೆ ಮನೆಯೊಳಗಡೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ತಿಳಿದು ಬಂದಿಲ್ಲ. ವಿಜಯ್ ಕುಮಾರ್ ಅವರಿಗೆ ವಿವಾಹ ನಡೆಸಲು ಮನೆಯವರು ಸಿದ್ಧತೆ ನಡೆಸಿಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ತಂದೆ, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

ಮೇಸ್ತ್ರಿ ಗುತ್ತಿಗೆದಾರ ನೇಣು ಬಿಗಿದು ಆತ್ಮಹತ್ಯೆ!! Read More »

ಮನೆ ಮನೆಗೆ ಅಯೋಧ್ಯೆ ಶ್ರೀರಾಮ ಮಂದಿರದ ಮಂತ್ರಾಕ್ಷತೆ | ಉಳತ್ತೋಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಾರ್ಥನೆ

ಉಪ್ಪಿನಂಗಡಿ: ಅಯ್ಯೋಧ್ಯೆ ಶ್ರೀರಾಮ ಮಂದಿರದ ಪವಿತ್ರ ಮಂತ್ರಾಕ್ಷತೆ ಮನೆ-ಮನೆ ವಿತರಣಾ ಕಾರ್ಯಕ್ರಮ ಹಿರೇಬಂಡಾಡಿ ಉಳತ್ತೋಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಿತು. ಶ್ರೀ ಸುಬ್ರಹ್ಮಣ್ಯ ದೇವರ ಮುಂದೆ ಪ್ರಾರ್ಥನೆ ನಡೆದು, ಬಳಿಕ ಮಂತ್ರಾಕ್ಷತೆ ವಿತರಣಾ ಕಾರ್ಯಕ್ರಮ ನಡೆಯಿತು. ಪ್ರತಿಯೊಬ್ಬ ಹಿಂದೂವಿನ ಮನೆಗೂ ಈ ಮಂತ್ರಾಕ್ಷತೆ ತಲುಪಿ, ಶ್ರೀ ರಾಮನ ಪುಣ್ಯ ಕಾರ್ಯವನ್ನು ಹಬ್ಬದ ರೀತಿಯಲ್ಲಿ ಆಚರಿಸಬೇಕು ಎಂದು ಇದೇ ಸಂದರ್ಭ ತಿಳಿಸಲಾಯಿತು. ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಪ್ರಮುಖರು ಮನೆ ಮನೆ ಭೇಟಿ ನೀಡಿ ಮಂತ್ರಾಕ್ಷತೆ ವಿತರಿಸಿದರು.

ಮನೆ ಮನೆಗೆ ಅಯೋಧ್ಯೆ ಶ್ರೀರಾಮ ಮಂದಿರದ ಮಂತ್ರಾಕ್ಷತೆ | ಉಳತ್ತೋಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಾರ್ಥನೆ Read More »

ಸುಭದ್ರ ಸರಕಾರದ ಜತೆ ಸಮರ್ಥ ನಾಯಕ ದೇಶಕ್ಕೆ ಸಿಕ್ಕಿದ್ದಾರೆ | ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಸಂಜೀವ ಮಠಂದೂರು | ಕೇಂದ್ರ ಸರಕಾರದ ವಿವಿಧ ಯೋಜನೆಯ ಮಾಹಿತಿ

ಪುತ್ತೂರು: ಬ್ಯಾಂಕ್ ಹಾಗೂ ಸರಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಯಶಸ್ವಿಯಾಗಿ ಮಾಡಿದ್ದಾರೆ. ಇದರೊಂದಿಗೆ ಎಲ್ಲರನ್ನು ಒಟ್ಟುಗೂಡಿಸಿ, ಸರ್ವರ ವಿಕಾಸದ ಗುರಿಯನ್ನು ಇಟ್ಟುಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು. ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಅಂಗವಾಗಿ ಸೋಮವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಬ್ಯಾಂಕ್ ಆಫ್ ಬರೋಡಾ ಸಹಯೋಗದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ

ಸುಭದ್ರ ಸರಕಾರದ ಜತೆ ಸಮರ್ಥ ನಾಯಕ ದೇಶಕ್ಕೆ ಸಿಕ್ಕಿದ್ದಾರೆ | ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಸಂಜೀವ ಮಠಂದೂರು | ಕೇಂದ್ರ ಸರಕಾರದ ವಿವಿಧ ಯೋಜನೆಯ ಮಾಹಿತಿ Read More »

ಕುಂಬ್ಲಾಡಿ ಬಾಲಸುಬ್ರಹ್ಮಣ್ಯ ದೇವಸ್ಥಾನ ತಲುಪಿದ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ

ಚಾರ್ವಾಕ : ಅಯೋಧ್ಯೆಯಿಂದ ತರಲಾದ ಪವಿತ್ರ ಮಂತ್ರಾಕ್ಷತೆಯನ್ನು ಚಾರ್ವಾಕ ಕಪಿಲೇಶ್ವರ ದೇವಸ್ಥಾನದಿಂದ ಕುಂಬ್ಲಾಡಿ ಬಾಲಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸೋಮವಾರ ಬೆಳಿಗ್ಗೆ ತರಲಾಯಿತು. ಜ.22 ರಂದು ಅಯೋಧ್ಯೇಯಲ್ಲಿ ನಡೆಯಲಿರುವ ಶ್ರೀರಾಮನ ಪ್ರಾಣ ಪ್ರತಿಷ್ಠೆ ಅಂಗವಾಗಿ ಕಪಿಲೇಶ್ವರ ದೇವಸ್ಥಾನದಿಂದ ಅಯೋದ್ಯೆಯ ಮಂತ್ರಾಕ್ಸತೆ ಇಂದು ಬೆಳಿಗ್ಗೆ ಕುಂಬ್ಲಾಡಿ ಬಾಲಸುಬ್ರಮಣ್ಯ ದೇವಸ್ಥಾನಕ್ಕೆ ತಂದು ಬಳಿಕ ಅರ್ಚಕರು ಪವಿತ್ರ ಮಂತ್ರಾಕ್ಷತೆಗೆ ಪೂಜೆ ಮಾಡಿದರು. ಈ ಸಂದರ್ಭದಲ್ಲಿ ಕಪಿಲೇಶ್ವರ ದೇವಸ್ಥಾನದ ಅರ್ಚಕರಾದ ವೆಂಕಟಕೃಷ್ಣ ಭಟ್, ಕುಂಬ್ಲಾಡಿ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅಚರ್ಕರಾದ ನೂತನ್ ಭಟ್, ಗಣಪತಿ ಭಟ್, ಸತೀಶ್

ಕುಂಬ್ಲಾಡಿ ಬಾಲಸುಬ್ರಹ್ಮಣ್ಯ ದೇವಸ್ಥಾನ ತಲುಪಿದ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ Read More »

error: Content is protected !!
Scroll to Top