ಪುತ್ತೂರು

ಅಡಿಕೆ ಆಮದು ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು | ಅಡಿಕೆ ಬೆಳೆಗಾರರ ಸಂಘ ಒತ್ತಾಯ

ಪುತ್ತೂರು: ಅಡಿಕೆ ಆಮದು ಕುರಿತು ಸುದ್ದಿಗಳು ವಿವಿಧ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದು, ಪರಿಣಾಮ ಅಡಿಕೆ ಮಾರುಕಟ್ಟೆಯಲ್ಲಿ ವ್ಯತ್ಯಾಸ ಕಂಡುಬರುತ್ತಿದೆ. ಈ ನಿಟ್ಟಿನಲ್ಲಿ ಅಡಿಕೆ ಆಮದು ತಡೆಗೆ ಸರಕಾರ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಪ್ರಧಾನಿ, ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಜಿಲ್ಲೆಯ ಸಂಸದರಿಗೆ ಪತ್ರದ ಮೂಲಕ ಒತ್ತಾಯಿಸಿದೆ. ಅಡಿಕೆ ಬೆಳೆಗಾರರು ಈಗಾಗಲೇ ಹಲವು ಸಮಸ್ಯೆಗಳಿಂದ ಬಳಲುತ್ತಿದೆ. ಆದರೆ ಕೆಲವು ಸಮಯಗಳಿಂದ ಉತ್ತಮ ಧಾರಣೆಯ ಕಾರಣದಿಂದ ಕೃಷಿ ಕೆಲಸಗಳು ಸರಾಗ ಸಾಗುತ್ತಿತ್ತು. ಕೃಷಿ […]

ಅಡಿಕೆ ಆಮದು ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು | ಅಡಿಕೆ ಬೆಳೆಗಾರರ ಸಂಘ ಒತ್ತಾಯ Read More »

1777ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ | ಎಂಟು ದಿನಗಳ ಕಾಲ ನಡೆಯಲಿದೆ ಶಿಬಿರ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ಪುತ್ತೂರು ತಾಲೂಕು ಯೋಜನೆ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ 1777ನೇ ಮದ್ಯವರ್ಜನ ಶಿಬಿರಕ್ಕೆ ಗುರುವಾರ ಕಲ್ಲೇಗ ಭಾರತ್ ಮಾತಾ ಸಮುದಾಯ ಭವನದಲ್ಲಿ ಚಾಲನೆ ನೀಡಲಾಯಿತು. ಎಂಟು ದಿನಗಳ ಕಾಲ ನಡೆಯುವ ಮದ್ಯವರ್ಜನ ಶಿಬಿರಕ್ಕೆ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಚಾಲನೆ ನೀಡಿ ಮಾತನಾಡಿ, ಮಹಾತ್ಮಾಗಾಂಧೀ ಅವರ ವ್ಯಸನಮುಕ್ತ ಸಮಾಜ ಕಲ್ಪನೆಯನ್ನು ತನ್ನ ದೂರದೃಷ್ಟಿತ್ವದ ಮೂಲಕ, ಧಾರ್ಮಿಕ ಕ್ಷೇತ್ರದ ಮೂಲಕ ಸಾಕಾರಗೊಳಿಸುವಲ್ಲಿ

1777ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ | ಎಂಟು ದಿನಗಳ ಕಾಲ ನಡೆಯಲಿದೆ ಶಿಬಿರ Read More »

ಪೆರ್ನಾಜೆಯಲ್ಲಿ ಒಂಟಿ ಸಲಗದ ರಂಪಾಟ | ಕೃಷಿ ತೋಟಗಳಿಗೆ ಹಾನಿ

ಪೆರ್ನಾಜೆ: ಪುತ್ತೂರು ಸುಳ್ಯ ಕೇರಳ ಗಡಿಭಾಗ ಆನೆಗುಂಡಿ ರಕ್ಷಿತಾರಣ್ಯದಿಂದ ಒಂಟಿ ಸಲಗವು ಡಿ 20ರಂದು ಮುಂಜಾನೆ ತೋಟಗಳಿಗೆ ದಾಳಿ ಮಾಡಿದೆ. ಪೆರ್ನಾಜೆ ನಿವಾಸಿ ಕುಮಾರ್ ಪೆರ್ನಾಜೆ ಅವರ ತೆಂಗಿನ ಮರ, ಎರಡು ಅಡಿಕೆ ಮರ, ಮೂರು ಬಾಳೆಗಿಡ, ಹಲಸು ಮರವನ್ನು ಚೂರು ಚೂರು ಮಾಡಿದೆ. ಸಮೀಪದ ರಾಘವೇಂದ್ರ ಭಟ್ ಅವರ ತೋಟಕ್ಕೂ ನುಗ್ಗಿ ಮೂರು ಬಾಳೆ ಗಿಡಗಳನ್ನು ನಾಶ ಮಾಡಿದೆ ಈಗಾಗಲೇ ಮಂಡೆಕೋಲು ಮೂರೂರು ಬೆಳ್ಳಿಪ್ಪಾಡಿ ಹಾಗೂ ಪಂಜಿಕಲ್ಲು ಪರಿಸರದಲ್ಲಿ ಕೃಷಿಕರ ತೋಟಗಳಿಗೆ ದಾಳಿ ನಡೆಸಿ ಒಂಟಿ

ಪೆರ್ನಾಜೆಯಲ್ಲಿ ಒಂಟಿ ಸಲಗದ ರಂಪಾಟ | ಕೃಷಿ ತೋಟಗಳಿಗೆ ಹಾನಿ Read More »

ಮುಂದಿನ ಒಂದು ತಿಂಗಳೊಳಗೆ 100 ಕೋಟಿ ರೂ. ಕಾಮಗಾರಿಗೆ ಶಿಲಾನ್ಯಾಸ | ಪುಣ್ಯಕುಮಾರ್ ದೈವಸ್ಥಾನ ರಸ್ತೆ ಉದ್ಘಾಟಿಸಿ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಮುಂದಿನ ಒಂದು ತಿಂಗಳೊಳಗೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 100 ೧೦೦ ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಕಾರ್ಯ ನಡೆಯಲಿದ್ದು, ಮುಂದಿನ ಐದು ವರ್ಷದೊಳಗೆ ಪುತ್ತೂರಿನ ಸಮಗ್ರ ಅಭಿವೃದ್ದಿಯಾಗುವುದರಲ್ಲಿ ಯಾವುದೇ ಸಂಶಯ ಬೇಡ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಕಬಕ ಗ್ರಾಮದ ಮುರ ಪುಣ್ಯಕುಮಾರ್ ದೈವಸ್ಥಾನದ ನೂತನ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದರು. ಕಳೆದ 27 ದಿನಗಳ ಹಿಂದೆ ಈ ರಸ್ತೆಗೆ ಶಿಲಾನ್ಯಾಸ ನಡೆಸಲಾಗಿದ್ದು, ರಸ್ತೆ

ಮುಂದಿನ ಒಂದು ತಿಂಗಳೊಳಗೆ 100 ಕೋಟಿ ರೂ. ಕಾಮಗಾರಿಗೆ ಶಿಲಾನ್ಯಾಸ | ಪುಣ್ಯಕುಮಾರ್ ದೈವಸ್ಥಾನ ರಸ್ತೆ ಉದ್ಘಾಟಿಸಿ ಶಾಸಕ ಅಶೋಕ್ ಕುಮಾರ್ ರೈ Read More »

ಎರಡು ಕಾರುಗಳು ಮುಖಾಮುಖಿ ಡಿಕ್ಕಿ !

ಪುತ್ತೂರು: ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಘಟನೆ ನೆಹರುನಗರದಲ್ಲಿ ನಡೆದಿದೆ. ಬುಧವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ  ಕರೆದೊಯ್ಯಲಾಗಿದೆ. ಅಪಘಾತದಿಂದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾಲೇಜು ಬಸ್ಸಿಗೂ ಕಾರು ಡಿಕ್ಕಿಯಾಗಿ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಎರಡು ಕಾರುಗಳು ಮುಖಾಮುಖಿ ಡಿಕ್ಕಿ ! Read More »

ಜ್ಯೋತಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

ಪುತ್ತೂರು: ತಾಲೂಕಿನ ಬಲ್ನಾಡು ವಲಯದ ಕುಂಜೂರು ಪಂಜ ಕಾರ್ಯ ಕ್ಷೇತ್ರದಲ್ಲಿ ಭಾಗ್ಯ ಜ್ಯೋತಿ ಜ್ಞಾನವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.    ವಿಜಯ ಕರ್ನಾಟಕ ಪತ್ರಿಕೆಯ ಜಿಲ್ಲಾ ವರದಿಗಾರ ಸುಧಾಕರ್  ಸುವರ್ಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಮಹಿಳೆಯರು ಜ್ಞಾನವಿಕಾಸ ಕಾರ್ಯಕ್ರಮದಿಂದ ವಿವಿಧ ಮಾಹಿತಿಗಳನ್ನು ಪಡೆದುಕೊಂಡು ಆರ್ಥಿಕವಾಗಿ ಬಲಶಾಲಿಯಾಗುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬಂದಿದ್ದಾರೆ. ಈ ಮೂಲಕ ಮನಸ್ಸಿದ್ದರೆ ಯಾವುದೇ ಕೆಲಸ ಮಾಡಬಹುದು ಎಂದು ತೋರಿಸಿಕೊಟ್ಟಿದ್ದಾರೆ ಎಂದರು. ತಾಲೂಕು ಯೋಜಾಧಿಕಾರಿ ಶಶಿಧರ್  ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ಹಲವಾರು

ಜ್ಯೋತಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ Read More »

ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ನಮ್ಮ ಸಹಭಾಗಿತ್ವ ಇಲ್ಲ | ಸ್ಪಷ್ಟನೆ ನೀಡಿದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ಕಾರ್ಯನಿರ್ವಹಣಾಧಿಕಾರಿ

ಪುತ್ತೂರು: ಡಿ.24 ಹಾಗೂ 25 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಕೇವಲ ಸ್ಥಳಾವಕಾಶ ನೀಡಿದ್ದೇವೆ ಹೊರತು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸಹಭಾಗಿತ್ವ ಇಲ್ಲ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು. ಸದಸ್ಯರು ಹಾಗೂ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆ ತಿಳಿಸಿದೆ. ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಗೌರವ ಸಲಹೆಗಾರರಾಗಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಕೇಶವ ಪ್ರಸಾದ್ ಮುಳಿಯ, ಅಧ್ಯಕ್ಷರು, ಸರ್ವ ಸದಸ್ಯರುಗಳು ವ್ಯವಸ್ಥಾಪನಾ ಸಮಿತಿ, ಅರ್ಚಕ ವೃಂದ, ನೌಕರ ವೃಂದ ಎಂದು ಸಮಿತಿ

ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ನಮ್ಮ ಸಹಭಾಗಿತ್ವ ಇಲ್ಲ | ಸ್ಪಷ್ಟನೆ ನೀಡಿದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ಕಾರ್ಯನಿರ್ವಹಣಾಧಿಕಾರಿ Read More »

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಆಯ್ಕೆ

ಪುತ್ತೂರು: ಹಿರಿಯ ವಾಗ್ಮಿ, ಚಿಂತಕ ಲಕ್ಷ್ಮೀಶ ತೋಳ್ಪಾಡಿ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ತೋಳ್ಪಾಡಿ ಅವರ ಮಹಾಭಾರತ ಅನುಸಂಧಾನದ ಭಾರತ ಯಾತ್ರೆ ಕೃತಿಗೆ ಈ ಪುರಸ್ಕಾರ ಲಭಿಸಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ತಿಳಿಸಿದೆ. ಕೃಷಿಕರಾಗಿರುವ ತೋಳ್ಪಾಡಿಯವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದವರಾಗಿದ್ದು, ಕೆಲ ಕಾಲ ಬೆಂಗಳೂರಿನಲ್ಲಿ ವೈ.ಎನ್‍.ಕೆ., ಗೋಪಾಲಕೃಷ್ಣ ಅಡಿಗ, ಲಂಕೇಶ್ ಪತ್ರಿಕೆ, ಮುಂತಾದವರ ಒಡನಾಟವಿತ್ತು. ಕುಮಾರಧಾರೆಗೆ ಅಣೆಕಟ್ಟು ಕಟ್ಟುವುದು, ಸ್ಥಳೀಯ ರೈತರಿಗೆ ತೊಂದರೆಯಾದಾಗ ಕಿಸಾನ್ ಸಂಘದ ಮೂಲಕ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಆಯ್ಕೆ Read More »

ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ | ಅಧ್ಯಕ್ಷರಾಗಿ ನವೀನ್ ಡಿ., ಉಪಾಧ್ಯಕ್ಷರಾಗಿ ಪವಿತ್ರ ಕೆ.ಪಿ. ಆಯ್ಕೆ

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ನವೀನ್‍ ಡಿ., ಉಪಾಧ್ಯಕ್ಷರಾಗಿ ಪವಿತ್ರ ಕೆ.ಪಿ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಂದಿನ ಐದು ವರ್ಷಗಳ ಅವಧಿಗೆ 12 ಸ್ಥಾನಗಳಿಗೆ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ಡಿ.10ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದರು. ಡಿ.20 ಬುಧವಾರ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ಚನಿಲ ತಿಮ್ಮಪ್ಪ ಶೆಟ್ಟಿ, ಸಾಜ ರಾಧಾಕೃಷ್ಣ

ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ | ಅಧ್ಯಕ್ಷರಾಗಿ ನವೀನ್ ಡಿ., ಉಪಾಧ್ಯಕ್ಷರಾಗಿ ಪವಿತ್ರ ಕೆ.ಪಿ. ಆಯ್ಕೆ Read More »

ಡಿ.23: ಶ್ರೀ ಆಂಜನೇಯ-55, ಶ್ರೀ ಯಕ್ಷಾಂಜನೇಯ ಪ್ರಶಸ್ತಿ ಪ್ರದಾನ

ಪುತ್ತೂರು: ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಹಾಗೂ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಕಲಾ ಸಂಘದ ಆಶ್ರಯದಲ್ಲಿ ‘ಶ್ರೀ ಆಂಜನೇಯ-55”, ಶ್ರೀ ಯಕ್ಷಾಂಜನೇಯ ಪ್ರಶಸ್ತಿ ಪ್ರದಾನ ಹಾಗೂ ಶ್ರೀ ಆಂಜನೇಯ 55 ರ ಗೌರವ ಕಾರ್ಯಕ್ರಮ ಡಿ.23 ಶನಿವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ ಎಂದು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶ್ರೀ ಆಂಜನೇಯ 55 ರ ಹಿನ್ನಲೆಯಲ್ಲಿ ಐದು

ಡಿ.23: ಶ್ರೀ ಆಂಜನೇಯ-55, ಶ್ರೀ ಯಕ್ಷಾಂಜನೇಯ ಪ್ರಶಸ್ತಿ ಪ್ರದಾನ Read More »

error: Content is protected !!
Scroll to Top