ಪುತ್ತೂರು

ಸಿಡಿಲು ಬಡಿದು ವಿದ್ಯುತ್ ಉಪಕರಣಗಳಿಗೆ ಹಾನಿ

ಪುಣಚ: ಮಿಂಚು, ಸಿಡಿಲಿಗೆ ಕೃಷಿ ಪಂಪ್‍ ಶೆಡ್ ಹಾಗೂ ಮನೆಯ ವಿದ್ಯುತ್ ಉಪಕರಣಗಳಿಗೆ ಹಾನಿಯಾ ಘಟನೆ ಶನಿವಾರ ರಾತ್ರಿ ಪುಣಚ ಕೆಲ್ಲಾಳಿ ಎಂಬಲ್ಲಿ ನಡೆದಿದೆ. ಪುಣಚ ಕೆಲ್ಲಾಳಿಯ ದೇವಪ್ಪ ನಾಯ್ಕ ಎಂಬವರ ಮನೆ ಪಂಪ್ ಶೆಡ್ ಹಾಗೂ ವಿದ್ಯುತ್ ಉಪಕರಣಗಳು ಸಿಡಿಲಿಗೆ ಸುಟ್ಟು ಕರಕಲಾಗಿದೆ. ಈ ಕುರಿತು ಅಪಾಯ ನಷ್ಟ ಉಂಟಾಗಿದೆ ಎಂದು ಮನೆ ಮಾಲಕ ತಿಳಿಸಿದ್ದಾರೆ.

ಸಿಡಿಲು ಬಡಿದು ವಿದ್ಯುತ್ ಉಪಕರಣಗಳಿಗೆ ಹಾನಿ Read More »

ಕೊಳ್ತಿಗೆ ಹಾಲುತ್ಪಾದಕರ ಸಹಕಾರ ಸಂಘದ ಚುನಾವಣೆ | ಸಹಕಾರ ಭಾರತಿ ಬೆಂಬಲಿತರಿಗೆ ಜಯ

ಪುತ್ತೂರು: ಕೊಳ್ತಿಗೆ ಹಾಲುತ್ಪಾದಕರ ಸಹಕಾರ ಸಂಘದ ಮುಂದಿನ 5 ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತಿ ಬೆಂಬಲಿತ ಎಲ್ಲಾ 11 ಮಂದಿ ಜಯಗಳಿಸಿದ್ದಾರೆ. ಶನಿವಾರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಸಾಮಾನ್ಯ ಕ್ಷೇತ್ರದಿಂದ ಸಹಕಾರಿ ಭಾರತಿ ಬೆಂಬಲಿತರಾದ ಕರುಣಾಕರ, ಕೆ.ಬೆಳ್ಯಪ್ಪ ಗೌಡ, ಎನ್‍.ಮುರಳೀಕೃಷ್ಣ, ವಾಡ್ಯಪ್ಪ ಗೌಡ, ವಿಶ್ವನಾಥ ಶೆಟ್ಟಿ, ಶಿವರಾಮ ಕೆ., ಸಿ.ಆರ್‍.ಸುಬ್ರಹ್ಮಣ್ಯ ಗೌಡ, ಮಹಿಳಾ ಮೀಸಲು ಸ್ಥಾನದಿಂದ ಚಂದ್ರಾವತಿ, ಜಲಜಾಕ್ಷಿ, ಹಿಂದುಳಿದ ವರ್ಗ ಬಿ ಸ್ಥಾನದಿಂದ ಕೆ.ತಿರುಮಲೇಶ್ವರ, ಹಿಂದುಳಿದ ವರ್ಗ ಎ ಸ್ಥಾನದಿಂದ ಧನಂಜಯ

ಕೊಳ್ತಿಗೆ ಹಾಲುತ್ಪಾದಕರ ಸಹಕಾರ ಸಂಘದ ಚುನಾವಣೆ | ಸಹಕಾರ ಭಾರತಿ ಬೆಂಬಲಿತರಿಗೆ ಜಯ Read More »

ಮಾಜಿ ಗ್ರಾಪಂ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ನಿಧನ

ಪುತ್ತೂರು: ಬಡಗನ್ನೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ (45) ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. ಶುಕ್ರವಾರ ಮೈಂದನಡ್ಕದಲ್ಲಿ ನಡೆದ ವಾಲಿಬಾಲ್‍ ಪಂದ್ಯಾಟವೊಂದಕ್ಕೆ ತೆರಳಿದ್ದ ಅವರು, ಮನೆಗೆ ಬಂದು ರಕ್ತ ವಾಂತಿ ಮಾಡಿದ್ದರು. ಶನಿವಾರ ಬೆಳಿಗ್ಗೆ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ವೇಳೆ ಮೃತಪಟ್ಟಿದ್ದಾರೆ. ಬಡಗನ್ನೂರು ಗ್ರಾಮ ಪಂಚಾಯಿತಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಒಂದು ಅವಧಿಯಲ್ಲಿ ಕಾರ್ಯನಿರ್ವಹಿಸಿದ್ದರು. ಮೃತರು

ಮಾಜಿ ಗ್ರಾಪಂ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ನಿಧನ Read More »

ಕಾರು-ರಿಕ್ಷಾ ಡಿಕ್ಕಿ : ಇಬ್ಬರಿಗೆ ಗಾಯ

ಪುತ್ತೂರು: ನಿರ್ಲಕ್ಷ್ಯದಿಂದ ಕಾರು ಚಲಾಯಿಸಿದ ಪರಿಣಾಮ ಆಟೋರಿಕ್ಷಾಗೆ ಡಿಕ್ಕಿ ಹೊಡೆದು ರಿಕ್ಷಾ ಚಾಲಕ ಸಹಿತ ಪ್ರಯಾಣಿಕರೊಬ್ಬರು ಗಾಯಗೊಂಡ ಘಟನೆ ಬೊಳುವಾರಿನಲ್ಲಿ ನಡೆದಿದೆ. ಚಿಕ್ಕಮುಡೂರು ಗ್ರಾಮ ನಿವಾಸಿ ಹರೀಶ್ ಕೆ(42) ಹಾಗೂ ಕೆ.ಸಚ್ಚಿದಾನಂದ ರಾವ್ ಗಾಯಗೊಂಡವರು. ಕಾರು ಚಾಲಕ ನಿರ್ಲಕ್ಷ್ಯತನದಿಂದ ರಸ್ತೆಯಲ್ಲಿ ಒಮ್ಮೇಲೆ ಯು ಟರ್ನ್ ಮಾಡಿದ ಪರಿಣಾಮ ಆಟೋರಿಕ್ಷಾಗೆ ಡಿಕ್ಕಿ ಹೊಡೆದು ರಿಕ್ಷಾ ಮಗುಚಿ ಬಿದ್ದಿದ್ದು, ಇಬ್ಬರು ಗಾಯಗೊಂಡರು. ಸಚ್ಚಿದಾನಂದ ರವರು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಅಪಘಾತದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿರುವುದಾಗಿ

ಕಾರು-ರಿಕ್ಷಾ ಡಿಕ್ಕಿ : ಇಬ್ಬರಿಗೆ ಗಾಯ Read More »

ಹೊಟೇಲ್ ಉದ್ಯಮಿ ರಾಮಣ್ಣ ರೈ ನಿಧನ

ಪುತ್ತೂರು: ಹೊಟೇಲ್ ರಾಮಣ್ಣ ಎಂದೇ ಚಿರಪರಿಚಿತರಾಗಿದ್ದ ಕುಂಬ್ರದ ಹಿರಿಯ ಹೊಟೇಲ್ ಉದ್ಯಮಿ ರಾಮಣ್ಣ ರೈ ಕುಂಬ್ರ (78) ರವರು ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ಕುಂಬ್ರದ ಸ್ವಗೃಹದಲ್ಲಿ ನಿಧನರಾದರು. ಕುಂಬ್ರದಲ್ಲಿ ಅನೇಕ ವರ್ಷಗಳಿಂದ ಹೊಟೇಲ್ ಉದ್ಯಮ ನಡೆಸಿಕೊಂಡು ಬರುತ್ತಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಹೊಟೇಲ್ ಉದ್ಯಮಿ ರಾಮಣ್ಣ ರೈ ನಿಧನ Read More »

ಡಿ.10: ಉಚಿತ ವೈದ್ಯಕೀಯ ತಪಾಸಣೆ, ಚಿಕಿತ್ಸಾ ಶಿಬಿರ

ಪುತ್ತೂರು: ಪುರುಷರಕಟ್ಟೆ ಆತ್ರೇಯ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್ ಸಂಯೋಜನೆಯಲ್ಲಿ ಬೆದ್ರಾಳ ಶ್ರೀ ನಂದಿಕೇಶ್ವರ ಭಜನಾ ಮಂದಿರ ಸಹಕಾರದೊಂದಿಗೆ ಉಚಿತ ಆರೋಗ್ಯ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಡಿ.10 ಭಾನುವಾರ ಶ್ರೀ ನಂದಿಕೇಶ್ವರ ಭಜನಾ ಮಂದಿರದ ಆವರಣದಲ್ಲಿ ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ಕೇಶವ ತಂತ್ರಿ ಹಾಗೂ ಕೆಮ್ಮಿಂಜೆ ಸುಬ್ರಹ್ಮಣ್ಯ ತಂತ್ರಿಗಳ ಸ್ಮರಣಾರ್ಥವಾಗಿ ಬೆಳಿಗ್ಗೆ 9.30 ರಿಂದ 12.30 ರ ತನಕ ಶಿಬಿರ ನಡೆಯಲಿದೆ. ಶ್ರೀ ನಂದಿಕೇಶ್ವರ ಭಜನಾ ಮಂದಿರದ ಗೌರವಾಧ್ಯಕ್ಷ, ತಂತ್ರಿ ಬ್ರಹ್ಮಶ್ರೀ ಲಕ್ಷ್ಮೀಶ ತಂತ್ರಿ ಕೆಮ್ಮಿಂಜೆ ಶಿಬಿರ

ಡಿ.10: ಉಚಿತ ವೈದ್ಯಕೀಯ ತಪಾಸಣೆ, ಚಿಕಿತ್ಸಾ ಶಿಬಿರ Read More »

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾದವರಿಗೆ ಅಭಿನಂದನೆ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಶಾಲೆಯ ಬಾಲಕಿಯರ ಕಬಡ್ಡಿ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದು, ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು. ಬೆಥನಿ ಸಂಸ್ಥೆಯ ಮಂಗಳೂರು ಪ್ರಾಂತ್ಯದ ಮುಖ್ಯಸ್ಥರ ಸಲಹೆಗಾರ್ತಿ, ವಂ. ರೋಶಲ್ ಬಿ.ಎಸ್. ಅಧ್ಯಕ್ಷೆತೆ ವಹಿಸಿ ತಂಡವನ್ನು ಅಭಿನಂದಿಸಿದರು. ಮುಖ್ಯ ಅತಿಥಿಗಳಾಗಿ ಬೆಥನಿ ಸಂಸ್ಥೆಯ ಮಂಗಳೂರು ಪ್ರಾಂತ್ಯದ ಲೆಕ್ಕ ಪರಿಶೋಧಕಿ ವಂ. ಸಿಬಿಲ್ ಬಿ.ಎಸ್., ಶಾಲಾ ಸಂಚಾಲಕಿ ವಂ. ಪ್ರಶಾಂತಿ ಬಿ.ಎಸ್., ಕಾರ್ಯಕ್ರಮ ಪ್ರಾಯೋಜಕರಾದ ಸುನೀತಾ ದಲ್ಮೆದಾ, ಡಾ. ಶ್ರೀಪ್ರಕಾಶ್, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಾಮಚಂದ್ರ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾದವರಿಗೆ ಅಭಿನಂದನೆ Read More »

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಕನ್ನಡ ಭಾಷಾ ರಸಪ್ರಶ್ನೆ

ಪುತ್ತೂರು: ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜಂಟಿ ಆಶ್ರಯದಲ್ಲಿ ಭಾರತೀಯ ಭಾಷಾ ಉತ್ಸವದ ಅಂಗವಾಗಿ ಕನ್ನಡ ಭಾಷಾ ರಸಪ್ರಶ್ನೆ ಕಾರ್ಯಕ್ರಮ ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ರಂಗ ಕಲಾವಿದ  ರಂಗಯ್ಯ ಬಳ್ಳಾಲ್ ಕೆದಂಬಾಡಿ ಬೀಡು ಅವರು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಏರ್ಪಡಿಸಿದ್ದರು. ಒಂದನೇ ತರಗತಿಯಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ರಸಪ್ರಶ್ನೆ ಏರ್ಪಡಿಸಿ, ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಕನ್ನಡ ಭಾಷಾ ರಸಪ್ರಶ್ನೆ Read More »

ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷರಾಗಿ ಹರೀಶ್ ಉಬರಡ್ಕ

ಪುತ್ತೂರು: ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಉಬರಡ್ಕ ನೇಮಕಗೊಂಡಿದ್ದಾರೆ. ಮಹಾ ಒಕ್ಕೂಟದ ರಾಜ್ಯಾಧ್ಯಕ್ಷರಾದ ಕಾಡಶೆಟ್ಟಿಹಳ್ಳಿ ಸತೀಶ್ ಅವರು ಈ ನೇಮಕ ಮಾಡಿದ್ದಾರೆ. ಹರೀಶ್ ಉಬರಡ್ಕ ಅವರು ನಾಲ್ಕು ಬಾರಿ ಉಬರಡ್ಕ ಗ್ರಾಪಂನ ಅಧ್ಯಕ್ಷರಾಗಿ, ಸದಸ್ಯರಾಗಿ, ಸಹಕಾರಿ ಸಂಘದ ನಿರ್ದೇಶಕರಾಗಿ, ಸುಳ್ಯ ತಾಲೂಕು ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ, ವಿವಿಧ ಸಂಘ – ಸಂಸ್ಥೆಗಳಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದಾರೆ. ಬೆಂಗಳೂರಿನ

ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷರಾಗಿ ಹರೀಶ್ ಉಬರಡ್ಕ Read More »

ವಿಜ್ಞಾನದಿಂದ ಬದುಕು ಸುಲಲಿತ | ವಿಜ್ಞಾನ ರಶ್ಮಿ ಉದ್ಘಾಟಿಸಿ ಸವಣೂರು ಸೀತಾರಾಮ ರೈ

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ 2023ನೇ ಸಾಲಿನ ಗ್ರಾಮೀಣ ವಿಜ್ಞಾನ ಮೇಳವಾದ ವಿಜ್ಞಾನ ರಶ್ಮಿ ಜರುಗಿತು. ಸಂಸ್ಥೆಯ ಸಂಚಾಲಕ ಸವಣೂರು ಸೀತಾರಾಮ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜೀವನವೇ ಒಂದು ವಿಜ್ಞಾನ. ವಿಜ್ಞಾನವನ್ನು ಸಮರ್ಪಕವಾಗಿ ತಿಳಿದುಕೊಂಡಾಗ ಬದುಕು ಸುಲಲಿತವಾಗುತ್ತದೆ. ಆದ್ದರಿಂದ ವಿಜ್ಞಾನವನ್ನು ಹೆಚ್ಚು ಅಧ್ಯಯನ ಮಾಡಬೇಕು ಎಂದು ಹೇಳಿದರು. ಮುಖ್ಯ ಅತಿಥಿಯಾಗಿದ್ದ ಭಕ್ತಕೋಡಿಯ ಎಸ್.ಜಿ.ಎಂ. ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮೋಹನ್ ಕುಮಾರ್ ಮಾತನಾಡಿ, ವಿದ್ಯಾರಶ್ಮಿಯ ಸಾರ್ವಜನಿಕ ಕಾಳಜಿ ಅಭಿನಂದನೀಯ. ಸಂಸ್ಥೆಯ ಬಹುಮುಖಿ ಕಾರ್ಯಚಟುಟಿಕೆಗಳು ಗ್ರಾಮೀಣ ಭಾಗದ ಮಕ್ಕಳಿಗೆ ಒಂದು

ವಿಜ್ಞಾನದಿಂದ ಬದುಕು ಸುಲಲಿತ | ವಿಜ್ಞಾನ ರಶ್ಮಿ ಉದ್ಘಾಟಿಸಿ ಸವಣೂರು ಸೀತಾರಾಮ ರೈ Read More »

error: Content is protected !!
Scroll to Top