ಪುತ್ತೂರು

ಯೂತ್ ನ್ಯಾಷನಲ್ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್  ಗೆ ಸಿಂಚನ ಬೈಲಾಡಿ ಆಯ್ಕೆ

ಪುತ್ತೂರು: ಕರ್ನಾಟಕ ರಾಜ್ಯ ವೈಟ್ ಲಿಫ್ಟಿಂಗ್ ಅಸೋಸಿಯೇಷನ್ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಯೂತ್ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಸಿಂಚನ ಬೈಲಾಡಿ ಅವರು 76 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದು ಜನವರಿಯಲ್ಲಿ ಅರುಣಾಚಲ ಪ್ರದೇಶದಲ್ಲಿ ನಡೆಯುವ ಯೂಥ್ ನ್ಯಾಷನಲ್ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾರೆ ಇವರು ಪುತ್ತೂರು ನರೇಂದ್ರ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಪುತ್ತೂರಿನ ಯಂಗ್ ಸ್ಟರ್ ಬಾರ್ ಬೆಲ್ ಕ್ಲಬ್ ಸದಸ್ಯರಾಗಿದ್ದಾರೆ. ಇವರಿಗೆ ಪುಷ್ಪರಾಜ್ ಗೌಡ […]

ಯೂತ್ ನ್ಯಾಷನಲ್ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್  ಗೆ ಸಿಂಚನ ಬೈಲಾಡಿ ಆಯ್ಕೆ Read More »

ಡಿ. 3: ವಿದ್ಯಾಮಾತಾ ಅಕಾಡೆಮಿಯಿಂದ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಸಾಮಾನ್ಯ ಜ್ಞಾನ ಪರೀಕ್ಷಾ ಸ್ಪರ್ಧೆ | ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗಿಲ್ಲಿದೆ ಭರ್ಜರಿ ಬಹುಮಾನದ ಮೊತ್ತ!

ಪುತ್ತೂರು: ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯ ಸಂಯೋಜನೆಯಲ್ಲಿ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉತ್ತೇಜಿಸುವ ದೃಷ್ಟಿಯಿಂದ ಮಾದರಿ ಸಾಮಾನ್ಯ ಜ್ಞಾನ ಪರೀಕ್ಷಾ ಸ್ಪರ್ಧೆ ಡಿ. 3ರಂದು ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನಲ್ಲಿ (ಸ್ವಾಯತ್ತ) ನಡೆಯಲಿದೆ. ಪುತ್ತೂರು ನಗರ ಆರಕ್ಷಕ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಸ್ಪರ್ಧೆ ನಡೆಯಲಿದೆ. ಕೆ.ಎ.ಎಸ್, ಎಫ್.ಡಿ.ಎ, ಎಸ್.ಡಿ.ಎ,  ಪಿ.ಎಸ್.ಐ, ಪಿ.ಸಿ, ಪಿ.ಡಿ.ಒ, ಬ್ಯಾಂಕಿಂಗ್ ಇತ್ಯಾದಿ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿಯಲ್ಲಿರುವವರಿಗೆ ಪ್ರೇರಣೆ ನೀಡಲು ರಾಜ್ಯದಲ್ಲೇ ಪ್ರಥಮ ಬಾರಿಗೆ ಸ್ಪರ್ಧೆಯನ್ನು

ಡಿ. 3: ವಿದ್ಯಾಮಾತಾ ಅಕಾಡೆಮಿಯಿಂದ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಸಾಮಾನ್ಯ ಜ್ಞಾನ ಪರೀಕ್ಷಾ ಸ್ಪರ್ಧೆ | ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗಿಲ್ಲಿದೆ ಭರ್ಜರಿ ಬಹುಮಾನದ ಮೊತ್ತ! Read More »

ಬೈಕ್ ಅಪಘಾತ: 20 ಫೀಟ್ ದೂರ ಎಸೆಯಲ್ಪಟ್ಟ ಸವಾರ!!

ವಿಟ್ಲ: ಬೈಕ್ ಅಪಘಾತವಾಗಿ ಸವಾರ ಸುಮಾರು 20 ಫೀಟ್ ದೂರ ಎಸೆಯಲ್ಪಟ್ಟು, ಗಂಭೀರ ಗಾಯಗೊಂಡ ಘಟನೆ ವಿಟ್ಲದ ವೀರಕಂಭ ಗ್ರಾಮದ ಕೆಲಿಂಜದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ಕುಂಡಡ್ಕ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಕಲ್ಲಡ್ಕದಿಂದ ವಿಟ್ಲ ಕಡೆಗೆ ಬರುತ್ತಿದ್ದ ಬೈಕ್, ಕೆಲಿಂಜ ಬಸ್ ಸ್ಟ್ಯಾಂಡಿಗೆ ಢಿಕ್ಕಿ ಹೊಡೆದಿದ್ದಾನೆ. ಪರಿಣಾಮ ಸವಾರ ಎಸೆಯಲ್ಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡ ಸವಾರನನ್ನು ಸ್ಥಳೀಯರು ಪುತ್ತೂರು ಆಸ್ಪತ್ರೆಗೆ ರವಾನಿಸಿದ್ದಾರೆ

ಬೈಕ್ ಅಪಘಾತ: 20 ಫೀಟ್ ದೂರ ಎಸೆಯಲ್ಪಟ್ಟ ಸವಾರ!! Read More »

ಶ್ರೀ ಸಿದ್ಧಿವಿನಾಯಕ ವೃತ ಪೂಜೆಯ ಆಮಂತ್ರಣ ಬಿಡುಗಡೆ

ಪುತ್ತೂರು: ಪುತ್ತಿಲ ಪರಿವಾರ ಕುರಿಯ-ಕೆಮ್ಮಿಂಜೆ ಗ್ರಾಮಾಂತರ ಸಮಿತಿ ವತಿಯಿಂದ ನೈತಾಡಿ ಕಲ್ಲುಗುಡ್ಡೆ ಮೈದಾನದಲ್ಲಿ ನಡೆಯಲಿರುವ ಶ್ರೀ ಸಿದ್ಧಿವಿನಾಯಕ ವೃತ ಪೂಜೆಯ ಆಮಂತ್ರಣ ಬಿಡುಗಡೆ ಬುಧವಾರ ನಡೆಯಿತು. ಡಿ. 12ರಂದು ಪೂಜೆ ನಡೆಯಲಿದ್ದು, ಉದಯಗಿರಿ ಶ್ರೀ ವಿಷ್ಣುಮೂರ್ತಿ ಸನ್ನಿಧಿಯಲ್ಲಿ ಆಮಂತ್ರಣ ಬಿಡುಗಡೆ ಮಾಡಲಾಯಿತು. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಆಮಂತ್ರಣ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ರಾಜೀವ ಸುವರ್ಣ, ಅರುಣ್ ರೈ ಡಿಂಬ್ರಿ, ರಾಜಾರಾಮ್ ನೆಲ್ಲಿತಾಯ, ಪೂಜಾ ಸಮಿತಿ ಅಧ್ಯಕ್ಷ ಶಂಕರ ನಾರಾಯಣ ರಾವ್,

ಶ್ರೀ ಸಿದ್ಧಿವಿನಾಯಕ ವೃತ ಪೂಜೆಯ ಆಮಂತ್ರಣ ಬಿಡುಗಡೆ Read More »

ನ. 22-24: ಪುತ್ತೂರಿನಲ್ಲಿ “ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವ”

ಪುತ್ತೂರು: ಸಂಸಾರ ಜೋಡುಮಾರ್ಗ ಆಶ್ರಯದಲ್ಲಿ ರೋಟರಿ ಪುತ್ತೂರು ಎಲೈಟ್ ಸಹಭಾಗಿತ್ವದಲ್ಲಿ ನಿರತ ನಿರಂತ – ಬಹುವಚನಂ ಆಯೋಜನೆಯ ಮೂರು ದಿನಗಳ “ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವ” ನ. 22ರಿಂದ 24ರವರೆಗೆ ಪುತ್ತೂರು ಮಂಜಲ್ಪಡ್ಪು ಸುದಾನ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ಎಡ್ವರ್ಡ್ ಹಾಲ್ ನಲ್ಲಿ ನಡೆಯಲಿದೆ. ಮೂರು ದಿನಗಳ ಕಾಲ ಐದು ಮಕ್ಕಳ ನಾಟಕಗಳನ್ನು ಆಯೋಜಿಸಲಾಗಿದ್ದು, ಪ್ರತಿದಿನ ಸಂಜೆ 6.30ಕ್ಕೆ ನಾಟಕ ಆರಂಭಗೊಳ್ಳಲಿದೆ. ನ. 22ರ ಬುಧವಾರ ಸಂಜೆ 6.30ರಿಂದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ ಪೆರಾಜೆ ಇಲ್ಲಿಯ ವಿದ್ಯಾರ್ಥಿಗಳು

ನ. 22-24: ಪುತ್ತೂರಿನಲ್ಲಿ “ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವ” Read More »

ಪಿಸ್ತೂಲ್ ತೋರಿಸಿ ಬೆದರಿಸಿದವರಿಂದ ಬುದ್ಧಿವಾದ ಬೇಕಿಲ್ಲ!! | ಶಾಸಕ ಅಶೋಕ್ ರೈ ಹೇಳಿಕೆಗೆ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ತಿರುಗೇಟು

ಪುತ್ತೂರು: ಬಿಜೆಪಿ ಸರಕಾರವಿದ್ದಾಗ ಹಿಂದೂ ಕಾರ್ಯಕರ್ತರ ಮೇಲೆ ಹಾಕಿದ್ದ ಪ್ರಕರಣಗಳ ಆಧಾರದಲ್ಲಿ ಗಡಿಪಾರು ಆದೇಶ ಮಾಡಲಾಗಿದೆ ಎಂಬ ಶಾಸಕ ಅಶೋಕ್ ಕುಮಾರ್ ರೈ ಅವರ ಹೇಳಿಕೆಗೆ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ತಿರುಗೇಟು ನೀಡಿದ್ದಾರೆ. ಉದ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುವಾಗ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿರುವ ವ್ಯಕ್ತಿಗಳು ಇಂದು ಬಿಜೆಪಿಗೆ ಬುದ್ಧಿವಾದ ಹೇಳುತ್ತಿದ್ದಾರೆ. ಅಂತಹವರಿಂದ ಬಿಜೆಪಿಗೆ ಬುದ್ಧಿವಾದ ಬೇಕಿಲ್ಲ. ಮೊದಲು ಅಂತಹ ವ್ಯಕ್ತಿಗಳನ್ನೇ ಗಡಿಪಾರು ಮಾಡಬೇಕು ಎಂದು ಸಾಜ ರಾಧಾಕೃಷ್ಣ ಆಳ್ವ ಆಗ್ರಹಿಸಿದರು.

ಪಿಸ್ತೂಲ್ ತೋರಿಸಿ ಬೆದರಿಸಿದವರಿಂದ ಬುದ್ಧಿವಾದ ಬೇಕಿಲ್ಲ!! | ಶಾಸಕ ಅಶೋಕ್ ರೈ ಹೇಳಿಕೆಗೆ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ತಿರುಗೇಟು Read More »

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವೈಟ್ ಲಿಫ್ಟರಿಗೆ ಪುತ್ತೂರಿನಲ್ಲಿ ಸ್ವಾಗತ

ಪುತ್ತೂರು: ರಾಜ್ಯ ಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ಪಿನಲ್ಲಿ ಚಿನ್ನದ ಪದಕ ಪಡೆದು ಪುತ್ತೂರಿಗೆ ಆಗಮಿಸಿದ ಇರ್ದೆ ಬೆಟ್ಟಂಪಾಡಿ ನಿವಾಸಿ ರಜತ್ ರೈ ಅವರಿಗೆ ಪುತ್ತೂರು ಬಸ್ ನಿಲ್ದಾಣದಲ್ಲಿ ಸ್ವಾಗತ ನೀಡಲಾಯಿತು. ಜನವರಿಯಲ್ಲಿ ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಡೆಯಲಿದೆ. ಇದರಲ್ಲಿ ರಜತ್ ರೈ ಭಾಗವಹಿಸಲಿದ್ದಾರೆ. ಪ್ರಮುಖರಾದ ಸಾಜಾ ರಾಧಾಕೃಷ್ಣ ಆಳ್ವ, ರಾಜೇಶ್ ಬನ್ನೂರು, ಅಜಿತ್ ರೈ ಹೊಸಮನೆ, ಸುದರ್ಶನ್ ಹೊಸಮೂಲೆ, ಅನಂತ್ ಮೊದಲಾದವರು ಉಪಸ್ಥಿತರಿದ್ದರು.

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವೈಟ್ ಲಿಫ್ಟರಿಗೆ ಪುತ್ತೂರಿನಲ್ಲಿ ಸ್ವಾಗತ Read More »

ಪುತ್ತಿಲ ಪರಿವಾರದಿಂದ ಪುತ್ತೂರಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ, ಬೃಹತ್ ಸಂತ ಸಮ್ಮೇಳನ: ಪೂರ್ವಭಾವಿ ಸಭೆ

ಪುತ್ತೂರು: ಪುತ್ತಿಲ ಪರಿವಾರದ ವತಿಯಿಂದ ಡಿ. 24 ಮತ್ತು 25ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಲೋಕಕಲ್ಯಾಣರ್ಥವಾಗಿ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಬೃಹತ್ ಸಂತ ಸಮ್ಮೇಳನ ನಡೆಯುವ ಬಗ್ಗೆ ಪೂರ್ವಭಾವಿ ಸಭೆ ಮುಕ್ರಂಪಾಡಿಯ ಸುಭದ್ರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಡಿ. 24ರ ಸಂಜೆ ತಿರುಪತಿಯಿಂದ ಆಗಮನವಾಗುವ ದೇವರನ್ನು ಬೊಳುವಾರಿನಿಂದ ಮೆರವಣಿಗೆಯಲ್ಲಿ ತರಲಾಗುವುದು. ರಾತ್ರಿ ಪೂಜೆ ನಂತರ ಸಾಂಸ್ಕೃತಿಕ ಕಾರ್ಯಕ್ರಮ ಮರುದಿನ ಬೆಳಿಗ್ಗೆ ವಿಶೇಷ ಉದಯಾಸ್ತಮಾನ ಪೂಜೆ,

ಪುತ್ತಿಲ ಪರಿವಾರದಿಂದ ಪುತ್ತೂರಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ, ಬೃಹತ್ ಸಂತ ಸಮ್ಮೇಳನ: ಪೂರ್ವಭಾವಿ ಸಭೆ Read More »

ಹೆತ್ತವರ ಮೇಲೆ ಪುತ್ರನಿಂದ ಹಲ್ಲೆ!!

ಬೆಳ್ಳಾರೆ : ತಂದೆ-ತಾಯಿಯ ಮೇಲೆ ಮಗನೇ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಬೆಳ್ಳಾರೆ ಸಮೀಪದ ಕಲ್ಲಗುಡ್ಡೆ ಕೊಡಿಯಾಲದಲ್ಲಿ ನಡೆದಿದೆ. ಬೆಳ್ಳಾರೆ ಸಮೀಪದ ಕಲ್ಲಗುಡ್ಡೆ ಕೊಡಿಯಾಳ ನಿವಾಸಿಗಳಾದ ಮಂಜುನಾಥ್, ಧರ್ಮವತಿ ಗಾಯಗೊಂಡ ದಂಪತಿ ಎಂದು ಗುರುತಿಸಲಾಗಿದೆ. ಪುತ್ರ ದೇವಿಪ್ರಸಾದ್‌ ಕತ್ತಿಯಿಂದ ಹಲ್ಲೆ ಮಾಡಿದ ವ್ಯಕ್ತಿ. ಜಾಗದ ವಿಚಾರವಾಗಿ ಮನೆಯಲ್ಲಿ ಜಗಳ ನಡೆದಿದ್ದು, ಈ ವೇಳೆ ಮಗ ತಂದೆ-ತಾಯಿ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಆರೋಪಿಯ ಬಂಧನಕ್ಕಾಗಿ

ಹೆತ್ತವರ ಮೇಲೆ ಪುತ್ರನಿಂದ ಹಲ್ಲೆ!! Read More »

ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಕಲಾ ಸಂಗಮ-2023’

ಪುತ್ತೂರು: ದ.ಕ.ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಕಲಾ ಸಂಗಮ-2023’ ಕೆಪಿಎಸ್ ಕೆಯ್ಯೂರಿನಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ದೀಪ ಬೆಳಗಿಸಿ ಉದ್ಘಾಟಿಸಿ, ಸರಕಾರಿ ಶಾಲೆಗಳನ್ನು ಉಳಿಸಬೇಕಾದರೆ ಪೋಷಕರು ಮಕ್ಕಳನ್ನು ಸರಕಾರಿ ಶಾಲೆಗೆ ಕಳುಹಿಸಬೇಕು. ಆದರೆ ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಮತ್ತು ಶಿಕ್ಷಕರ ಕೊರತೆಯ ಕಾರಣಕ್ಕೆ ಹಲವು ಮಂದಿ ಪೋಷಕರು ತಮ್ಮ

ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಕಲಾ ಸಂಗಮ-2023’ Read More »

error: Content is protected !!
Scroll to Top