ಪುತ್ತೂರು

ತಾಲೂಕು ಮಟ್ಟದ ಛದ್ಮವೇಷ ಸ್ಪರ್ಧೆ | ಜೀವಿತಾ ಎಲ್.ಎಲ್. ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸವಣೂರು: ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಛದ್ಮವೇಷ ಸ್ಪರ್ಧಾ ವಿಭಾಗದಲ್ಲಿ 9ನೆ ತರಗತಿಯ ಜೀವಿತಾ ಎಲ್. ಎಲ್. ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸವಣೂರು ವಿದ್ಯಾರಶ್ಮಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿಯಾಗಿರುವ ಜೀವಿತಾ ಎಲ್.ಎಲ್. ಹಾಸನ ಲಕ್ಕುಂದದ ಲೋಹಿತಾಶ್ವ ಎಲ್. ಡಿ. ಮತ್ತು ಹರ್ಷಿತಾ ಎನ್. ಪಿ. ದಂಪತಿ ಪುತ್ರಿ. ಇವರಿಗೆ ಸಂಸ್ಥೆಯ ಚಿತ್ರಕಲಾ ಶಿಕ್ಷಕ ಧನಂಜಯ ಮರ್ಕಂಜ ತರಬೇತಿ ನೀಡಿದ್ದರು. ವಿದ್ಯಾರ್ಥಿ ಮತ್ತು ಶಿಕ್ಷಕರನ್ನು ಸಂಚಾಲಕ ಸವಣೂರು ಸೀತಾರಾಮ ರೈ, ಆಡಳಿತಾಧಿಕಾರಿ […]

ತಾಲೂಕು ಮಟ್ಟದ ಛದ್ಮವೇಷ ಸ್ಪರ್ಧೆ | ಜೀವಿತಾ ಎಲ್.ಎಲ್. ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಪುತ್ತೂರು ಆಗಮಿಸಿದ ನೂತನ 6 ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಹಸಿರು ಧ್ವಜ ತೋರಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಕೆಎಸ್‌ಆರ್‌ಟಿಯ ಪುತ್ತೂರು ಘಟಕಕ್ಕೆ ನೂತನವಾಗಿ ಆಗಮಿಸಿದ ಆರು ಬಸ್‌ಗಳಿಗೆ ಸೋಮವಾರ ಚಾಲನೆ ನೀಡಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಹಸಿರು ಧ್ವಜ ಪ್ರದರ್ಶಿಸುವ ಮೂಲಕ ಚಾಲನೆ ನೀಡಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಸಾರಿಗೆ ಸಚಿವರೊಂದಿಗೆ ಚರ್ಚಿಸಿದಾಗ 25-30 ಜೊಸ ಬಸ್‌ಗಳನ್ನು ನೀಡುವುದಾಗಿ ತಿಳಿಸಿದ್ದಾರೆ. ಈ ಪೈಕಿ ಎರಡು ಪಲ್ಲಕಿ ಬಸ್ ಹಾಗೂ 8 ಕರ್ನಾಟಕ ಸಾರಿಗೆ ಬಸ್‌ಗಳು ಬಂದಿವೆ. ಸ್ಥಳೀಯವಾಗಿ ಸಂಚರಿಸಲು ತಾತ್ಕಾಲಿಕವಾಗಿ ಆರು ಬಸ್‌ಗಳನ್ನು

ಪುತ್ತೂರು ಆಗಮಿಸಿದ ನೂತನ 6 ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಹಸಿರು ಧ್ವಜ ತೋರಿಸಿದ ಶಾಸಕ ಅಶೋಕ್ ರೈ Read More »

ಗಡಿಪಾರು ಆಗಲಿರುವ ಯುವಕರ ಮೇಲೆ ಕೇಸು ಹಾಕಿದ್ದೇ ಬಿಜೆಪಿ ಸರಕಾರ: ಅಶೋಕ್ ರೈ

ಪುತ್ತೂರು: ಮತೀಯ ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪುತ್ತೂರಿನ ಕೆಲವು ಯುವಕರ ಮೇಲೆ ಗಡಿಪಾರು ನೋಟೀಸ್ ಜಾರಿಯಾಗಿದೆ. ಬಿಜೆಪಿ ಸರಕಾರವೇ ಈ ಯುವಕರ ಮೇಲೆ ಕೇಸು ಮಾಡಿಸಿದ್ದು, ಈಗ ಬಿಜೆಪಿಯವರು ಯುವಕರ ಪರ ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ. ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಮಾಧ್ಯಮದ ಜೊತೆ ಮಾತನಾಡಿದ ಅವರು ಈ ವಿಚಾರದಲ್ಲಿ ಬಿಜೆಪಿ ನಾಯಕರು ಆತ್ಮ ವಿಮರ್ಶೆ ಮಾಡಿಕೊಳ್ಳುವುದು ಉತ್ತಮ. ಯುವಕರನ್ನು ಬಳಕೆ ಮಾಡಿ ಅವರ ಮೇಲೆ ಕೇಸು ಹಾಕಿಸಿ ಅವರನ್ನು

ಗಡಿಪಾರು ಆಗಲಿರುವ ಯುವಕರ ಮೇಲೆ ಕೇಸು ಹಾಕಿದ್ದೇ ಬಿಜೆಪಿ ಸರಕಾರ: ಅಶೋಕ್ ರೈ Read More »

ಎನ್.ಇ.ಪಿ. ರದ್ದು ನಿರ್ಧಾರ ವಿರೋಧಿಸಿ ಎಬಿವಿಪಿಯಿಂದ ಸಹಿ ಸಂಗ್ರಹ

ಪುತ್ತೂರು: ಎನ್.ಇ.ಪಿ.ಯನ್ನು ರದ್ದುಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಎಬಿವಿಪಿ ಪುತ್ತೂರು ಘಟಕದ ವತಿಯಿಂದ ಸಹಿಸಂಗ್ರಹ ಅಭಿಯಾನ ನಡೆಯಿತು. ಸಹಿ ಸಂಗ್ರಹ ಅಭಿಯಾನಕ್ಕೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಕ್ಯಾಂಪಸ್ ಅಧಿಕಾರಿ ಲಕ್ಷ್ಮಿ ಪ್ರಸಾದ್ ಚಾಲನೆ ನೀಡಿದರು. ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶ್ರೀರಾಮ, ನಗರ ಸಹ ಕಾರ್ಯದರ್ಶಿ ಭುವನ್, ವಿವೇಕಾನಂದ ಪದವಿ ಕಾಲೇಜು ಕಾರ್ಯದರ್ಶಿ ಸುಪ್ರೀತ್ ಅಮೈ, ಮನೀಶ್, ಸುಬ್ರಮಣಿ, ಶ್ರೇಯಸ್, ಭರತ್, ಅಚಲ್, ಆದರ್ಶ ಮೊದಲಾದವರು ಉಪಸ್ಥಿತರಿದ್ದರು.

ಎನ್.ಇ.ಪಿ. ರದ್ದು ನಿರ್ಧಾರ ವಿರೋಧಿಸಿ ಎಬಿವಿಪಿಯಿಂದ ಸಹಿ ಸಂಗ್ರಹ Read More »

ವಿದೇಶದಲ್ಲಿ ಬಂಧಿಯಾಗಿದ್ದ ಕಡಬದ ಯುವಕ ಬಿಡುಗಡೆ; ಇಂದು ಮಂಗಳೂರಿಗೆ!

ಕಡಬ: ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಕೊನೆಗೂ ಬಂಧನ ಮುಕ್ತರಾಗಿ ಇಂದು ಊರಿಗೆ ಆಗಮಿಸಲಿದ್ದಾರೆ. ಸೌದಿಯ ರಿಯಾದ್‌ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್‌ ಅವರನ್ನು ಇಂದು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅಲ್ಲಿಂದ ಅವರು ಬಹುತೇಕ ಸಂಜೆ ಸುಮಾರು ಏಳು ಗಂಟೆ ವೇಳೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ

ವಿದೇಶದಲ್ಲಿ ಬಂಧಿಯಾಗಿದ್ದ ಕಡಬದ ಯುವಕ ಬಿಡುಗಡೆ; ಇಂದು ಮಂಗಳೂರಿಗೆ! Read More »

ಮೈತ್ರಿ ಮುಟ್ಟಿನ ಕಪ್ ವಿತರಣೆ

ಪುತ್ತೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ., ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಕೊಂಬೆಟ್ಟು ಪ.ಪೂ. ಕಾಲೇಜು ಸಹಯೋಗದೊಂದಿಗೆ ಮೈತ್ರಿ ಮುಟ್ಟಿನ ಕಪ್ ವಿತರಣಾ ಕಾರ್ಯಕ್ರಮ ಸೋಮವಾರ ಕೊಂಬೆಟ್ಟು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಶಾಲಾ ವಿದ್ಯಾರ್ಥಿಗಳಿಗೆ ಮುಟ್ಟಿನ ಕಪ್ ವಿತರಣೆ ಮಾಡಿ, ಸುರಕ್ಷತೆ ಮತ್ತು ಸ್ವಚ್ಛತಾ ದೃಷ್ಟಿಯಿಂದ ಆರೋಗ್ಯದ ಕಡೆ ಸರಕಾರ ಹೆಚ್ಚಿನ ಗಮನ ನೀಡುತ್ತಿದ್ದು, ಈ ನಿಟ್ಟಿನಲ್ಲಿ ಕಪ್ ವಿತರಣೆ ಆಗುತ್ತಿದೆ. ಈ ಹಿಂದೆ ಸ್ಯಾನಿಟರಿ ಕಿಟ್ ನೀಡಲಾಗುತ್ತಿತ್ತು. ಅದರಲ್ಲಿ

ಮೈತ್ರಿ ಮುಟ್ಟಿನ ಕಪ್ ವಿತರಣೆ Read More »

ಪುತ್ತೂರಿಗೆ ಟೂರಿಸಂ ಮಾನ್ಯತೆಗೆ ಪ್ರಯತ್ನ | ನವೀಕೃತ ಶ್ರೀ ಮಹಾಲಿಂಗೇಶ್ವರ ಸಭಾಭವನ ಸಮರ್ಪಣೆ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ | ಗೋಲೋಕ ಉತ್ಸವ ಕುರಿತು ಯೋಜನೆ: ಕೇಶವ ಪ್ರಸಾದ್ ಮುಳಿಯ

ಪುತ್ತೂರು: ಕರಾವಳಿ ಭಾಗ ಧಾರ್ಮಿಕತೆಗೆ ಹೆಚ್ಚಿನ ಆದ್ಯತೆ ನೀಡಿದೆ. ಈ ನಿಟ್ಟಿನಲ್ಲಿ ಪುತ್ತೂರನ್ನು ಟೂರಿಸಂ ಪ್ರದೇಶ ಆಗುವ ನಿಟ್ಟಿನಲ್ಲಿ ಮಾನ್ಯತೆ ನೀಡಿ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳನ್ನು ಮಾಸ್ಟರ್ ಪ್ಲಾನ್ ಸಹಿತ ಮಾಡಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ನವೀಕೃತಗೊಂಡಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ಸಭಾಭವನದ ಸಮರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಈಗಾಗಲೇ ಅಭಿವೃದ್ಧಿ ಕಾರ್ಯಕ್ರಮಗಳಲ್ಲೊಂದಾದ ಸಭಾಭವನ ಸಮರ್ಪಣೆ ಕಾರ್ಯ ನಡೆದಿದೆ. ಮುಂದಿನ ದಿನಗಳಲ್ಲಿ ಕೆರೆಯಲ್ಲಿ ಕಾರಂಜಿ, ಕೆರೆಯ

ಪುತ್ತೂರಿಗೆ ಟೂರಿಸಂ ಮಾನ್ಯತೆಗೆ ಪ್ರಯತ್ನ | ನವೀಕೃತ ಶ್ರೀ ಮಹಾಲಿಂಗೇಶ್ವರ ಸಭಾಭವನ ಸಮರ್ಪಣೆ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ | ಗೋಲೋಕ ಉತ್ಸವ ಕುರಿತು ಯೋಜನೆ: ಕೇಶವ ಪ್ರಸಾದ್ ಮುಳಿಯ Read More »

ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ಆದೇಶದ ವಿರುದ್ಧ ಬೃಹತ್‍ ಪ್ರತಿಭಟನೆ

ಪುತ್ತೂರು: ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ನೋಟೀಸ್ ಜಾರಿ ಮಾಡಿ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಹತ್ತಿಕ್ಕುವ ಹಿಂದೂ ವಿರೋಧಿ ಆಡಳಿತ ವ್ಯವಸ್ಥೆಯ ವಿರುದ್ಧ ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಬೃಹತ್ ಪ್ರತಿಭಟನೆ ಸೋಮವಾರ ಆಡಳಿತ ಸೌಧದ ಎದುರಿರುವ ಜೈ ಜವಾನ್ ಸ್ಮಾರಕದ ಬಳಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಬಜರಂಗದಳ ದಕ್ಷಿಣ ಪ್ರಾಂತ ಸಂಯೋಜಕ ಸುನೀಲ್ ಕೆ.ಆರ್. ಮಾತನಾಡಿ, ದೇಶದ ಪರವಾಗಿ ಕೆಲಸ ಮಾಡುತ್ತಿರುವ, ದೇಶದ ಸಾಂಸ್ಕೃತಿಕತೆಯ ಪ್ರತೀಕವಾದ ಗೋವಿನ ರಕ್ಷಣೆ, ಹಿಂದೂ ಹೆಣ್ಣು ಮಕ್ಕಳ ರಕ್ಷೆಯಲ್ಲಿ ತೊಡಗಿಕೊಂಡಿರುವ

ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ಆದೇಶದ ವಿರುದ್ಧ ಬೃಹತ್‍ ಪ್ರತಿಭಟನೆ Read More »

ನ. 25: ಗ್ರಾಮ ಸಾಹಿತ್ಯ ದಶ ಸಂಭ್ರಮ

ಪುತ್ತೂರು: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಎಂಬ ಘೋಷ ವಾಕ್ಯದೊಂದಿಗೆ ಗ್ರಾಮ ಸಾಹಿತ್ಯ ದಶ ಸಂಭ್ರಮ ಕಾರ್ಯಕ್ರಮ ನ. 25ರಂದು ಬಜತ್ತೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ. ಪುತ್ತೂರು ಶಿಕ್ಷಣ ಇಲಾಖೆ, ಬಜತ್ತೂರು ಗ್ರಾಮ ಪಂಚಾಯಿತಿ ಸಹಕಾರದೊಂದಿಗೆ ಚಿಗುರೆಲೆ ಸಾಹಿತ್ಯ ಬಳಗದ ಸಂಯೋಜನೆಯೊಂದಿಗೆ ಮಿತ್ರಂಪಾಡಿ ಜಯರಾಮ ರೈ ಅವರ ಪೋಷಕತ್ವದಲ್ಲಿ ನಡೆಯುವ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಗಂಗಾಧರ ಪಿ.ಎನ್. ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ವಿಮಲಾ

ನ. 25: ಗ್ರಾಮ ಸಾಹಿತ್ಯ ದಶ ಸಂಭ್ರಮ Read More »

ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಸುಳ್ಯದ ಹಿರಿಯರ ಕ್ರೀಡಾ ಸಂಘದ ನೇತೃತ್ವದಲ್ಲಿ ಪಂಜ ಶ್ರೀ ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ನಡೆದ ಸುಳ್ಯ, ಕಡಬ ಹಾಗೂ ಪುತ್ತೂರು ತಾಲೂಕು 10ನೇ ಹಿರಿಯರ ಕ್ರೀಡಾಕೂಟದಲ್ಲಿ ದರ್ಬೆತ್ತಡ್ಕದ ವೆಂಕಟೇಶ್ ಪ್ರಸಾದ್ ಪಾಲ್ಗೊಂಡು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಉದ್ದ ಜಿಗಿತ, ಜಾವೆಲಿನ್ ಮತ್ತು ಡಿಸ್ಕಸ್ ತ್ರೋಗಳಲ್ಲಿ ದ್ವಿತೀಯ  ಸ್ಥಾನ ಪಡೆದು ಜನವರಿ 13 ಮತ್ತು 14ರಂದು ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಅವರು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ

ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ Read More »

error: Content is protected !!
Scroll to Top