ಪುತ್ತೂರು

ಆಸ್ಪತ್ರೆಗೆ ಭೇಟಿ ನೀಡಿ ಸಂಜೀವ ಮಠಂದೂರು ಆರೋಗ್ಯ ವಿಚಾರಿಸಿದ ಸಂಸದ ನಳಿನ್ ಕುಮಾರ್ ಕಟೀಲ್

ಪುತ್ತೂರು: ಹಾವು ಕಡಿತಕ್ಕೊಳಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಶಾಸಕ ಸಂಜೀವ ಮಠಂದೂರು ಅವರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಗುರುವಾರ ಸಂಜೆ ಮನೆಯಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ವಿಷಪೂರಿತ ಹಾವು ಕಡಿದಿತ್ತು. ಈ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಮುರಳಿಕೃಷ್ಣ ಹಸಂತಡ್ಕ, ಚನಿಲ ತಿಮ್ಮಪ್ಪ ಶೆಟ್ಟಿ, ಆರ್.ಸಿ ನಾರಾಯಣ್, ಅರುಣ್ ವಿಟ್ಲ, ಸೀತಾರಾಮ ರೈ ಕೆದಂಬಾಡಿಗುತ್ತು ಸಹಿತ ಹಲವರು ಉಪಸ್ಥಿತರಿದ್ದರು.

ಆಸ್ಪತ್ರೆಗೆ ಭೇಟಿ ನೀಡಿ ಸಂಜೀವ ಮಠಂದೂರು ಆರೋಗ್ಯ ವಿಚಾರಿಸಿದ ಸಂಸದ ನಳಿನ್ ಕುಮಾರ್ ಕಟೀಲ್ Read More »

ಮಕ್ಕಳ ಸಾಹಿತ್ಯ ಸಮ್ಮೇಳನ: ಗೋಷ್ಠಿಗಳಿಗೆ ಅರ್ಜಿ ಆಹ್ವಾನ

ಪುತ್ತೂರು: ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ ಡಿಸೆಂಬರ್ 20ರಂದು ಬಪ್ಪಳಿಗೆ ಅಂಬಿಕಾ ಕೇಂದ್ರೀಯ ವಿದ್ಯಾಲಯದ ಸಹಯೋಗದಲ್ಲಿ ನಡೆಯಲಿದ್ದು, ಸಮ್ಮೇಳನದಲ್ಲಿ ಪುತ್ತೂರು ತಾಲೂಕಿನಲ್ಲಿ ಅಧ್ಯಯನ ಮಾಡುತ್ತಿರುವ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವಿದೆ. ಸಾಹಿತ್ಯ ಸಮ್ಮೇಳನದಲ್ಲಿ ಕವಿಗೋಷ್ಠಿ ಮಾತ್ರವಲ್ಲದೆ ಪ್ರಸ್ತುತ ಶಿಕ್ಷಣ ವ್ಯವಸ್ಥೆ, ಆಧುನಿಕ ತಂತ್ರಜ್ಞಾನದ ಬಳಕೆ, ನಾನು ಮೆಚ್ಚುವ ಶಿಕ್ಷಕ, ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಇತ್ಯಾದಿ ವಿಷಯಗಳಲ್ಲಿ ವಿಚಾರಗೋಷ್ಠಿ ಹಾಗೂ ಚರ್ಚಾ ಕೂಟಗಳು ನಡೆಯಲಿವೆ. ಸಾಹಿತ್ಯ ಲೋಕಕ್ಕೆ ಉತ್ತಮ ಸಾಹಿತಿಗಳನ್ನು ಹಾಗೂ

ಮಕ್ಕಳ ಸಾಹಿತ್ಯ ಸಮ್ಮೇಳನ: ಗೋಷ್ಠಿಗಳಿಗೆ ಅರ್ಜಿ ಆಹ್ವಾನ Read More »

ಯೆಳ್ತಿಮಾರ್ ವೈ.ಸರಸ್ವತಿ ಶೆಣೈ ನಿಧನ

ಪುತ್ತೂರು: ದಿ.ಯೆಳ್ತಿಮಾರ್ ಸುಬ್ರಾಯ ಶೆಣೈ ಅವರ ಪತ್ನಿ ವೈ.ಸರಸ್ವತಿ ಶೆಣೈ (70.) ಸ್ವಗೃಹ ಜಿಡೆಕಲ್ಲಿನ ಪದ್ಮಾವತಿ ನಿಲಯದಲ್ಲಿ ನಿಧನರಾದರು. ಮೃತರು ಪುತ್ರ ದಾಮೋದರ ವಿನಾಯಕ ಶೆಣೈ, ಮಗಳು ವೈ.ಧನಲಕ್ಷ್ಮೀ, ಅಳಿಯ ಆದಿತ್ಯ ಬಾಳಿಗ ಹಾಗೂ ಮೂವರು ಸಹೋದರರು, ಮೂವರು ಸಹೋದರಿಯರನ್ನು ಅಗಲಿದ್ದಾರೆ. ಹಲವು ಗಣ್ಯರು ಭೇಟಿ ನೀಡಿ ಸಂತಾಪ ಸೂಚಿಸಿದರು.

ಯೆಳ್ತಿಮಾರ್ ವೈ.ಸರಸ್ವತಿ ಶೆಣೈ ನಿಧನ Read More »

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ನೈತಿಕ ಶಿಕ್ಷಣ ತರಗತಿ

ಪುತ್ತೂರು: ಮಳೆ ಹೇಗೆ ಮೋಡದ ರೂಪಾಂತರವೋ, ಸೃಷ್ಟಿಯೂ ಹಾಗೆ ಶಕ್ತಿಯ ರೂಪಾಂತರವೇ ಆಗಿದೆ. ಮಾನವ ಜನ್ಮದಲ್ಲಿ ಮೋಕ್ಷ ಸಾಧನೆಗಾಗಿ ಜ್ಞಾನ ಮಾರ್ಗ ಅತ್ಯಂತ ಅಗತ್ಯ. ಯಾವುದೇ ಫಲಾಪೇಕ್ಷೆ ಇಲ್ಲದೆ ಕರ್ಮ ಮಾಡಬೇಕು. ಸತ್ಕಾರ್ಯಗಳನ್ನು ಮಾಡಿದಾಗ ಯಾರು ನಮ್ಮನ್ನು ಗುರುತಿಸದಿದ್ದರೂ ಚಿಂತೆ ಮಾಡದೆ, ದೇವರ ಕಣ್ಣಿಗೆ ಕಂಡರೆ ಸಾಕು ಎಂಬ ಭಾವದಿಂದ ಕಾರ್ಯತತ್ಪರರಾಗಬೇಕು. ಭಗವಂತನಿಲ್ಲದ ಜಾಗ ಇಲ್ಲ ಎಂಬುದನ್ನು ಮರೆಯಬಾರದು ಎಂದು ವೈದಿಕ ವಿದ್ವಾಂಸ ಶ್ರೀಕೃಷ್ಣ ಉಪಾಧ್ಯಾಯ ಹೇಳಿದರು. ಅವರು ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಿಗೆ

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ನೈತಿಕ ಶಿಕ್ಷಣ ತರಗತಿ Read More »

ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ಹಾವು ಕಡಿತ: ಅಪಾಯದಿಂದ ಪಾರು

ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ಹಾವು ಕಚ್ಚಿರುವ ಬಗ್ಗೆ ವರದಿಯಾಗಿದೆ. ಸಂಜೀವ ಮಠಂದೂರು ಅವರು ಗುರುವಾರ ಸಂಜೆ ವೇಳೆ ಮನೆ ಸಮೀಪ ವಾಕಿಂಗ್ ನಡೆಸುತ್ತಿದ್ದಾಗ ಹಾವು ಕಚ್ಚಿದೆ ಎನ್ನಲಾಗಿದೆ. ತಕ್ಷಣ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಆರೋಗ್ಯವಾಗಿದ್ದು, ಯಾವುದೇ ತೊಂದರೆ ಇಲ್ಲ ಎಂದು ತಿಳಿದು ಬಂದಿದೆ.

ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ಹಾವು ಕಡಿತ: ಅಪಾಯದಿಂದ ಪಾರು Read More »

ತಲವಾರು ಝಳಪಿಸಿದ ಆರೋಪಿಗಳಿಗೆ ಶರತ್ತುಬದ್ಧ ಜಾಮೀನು

ಪುತ್ತೂರು: ಮುಕ್ರಂಪಾಡಿಯಲ್ಲಿರುವ ಪುತ್ತಿಲ ಪರಿವಾರದ ಕಚೇರಿ ಮುಂಭಾಗದಲ್ಲಿ ತಲುವಾರು ಝುಳಪಿಸಿದ ಪ್ರಕರಣದ 7 ಮಂದಿ ಆರೋಪಿಗಳಿಗೆ ಪುತ್ತೂರು ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ನ.10ರಂದು ಪುತ್ತೂರು ಮುಕ್ರಂಪಾಡಿಯಲ್ಲಿರುವ ಪುತ್ತಿಲ ಪರಿವಾರದ ಕಚೇರಿ ಮುಂಭಾಗ ತಂಡವೊಂದು ತಲುವಾರು ತಂದು ಅವಾಚ್ಯ ಶಬ್ದಗಳಿಂದ ನಿಂಧಿಸಿದ ಪ್ರಕರಣದಲ್ಲಿ ಶಾಂತಿಗೋಡು ಗ್ರಾಮದ ದಿನೇಶ್ ಪಂಜಿಗ, ನರಿಮೊಗರು ಗ್ರಾಮದ ಭವಿತ್, ಬೊಳುವಾರು ನಿವಾಸಿ ಮನ್ವಿತ್, ಚಿಕ್ಕಮುಡ್ನೂರು ನಿವಾಸಿ ಜಯಪ್ರಕಾಶ್, ಚರಣ್, ಬನ್ನೂರು ಗ್ರಾಮದ ಮನೀಶ್, ಕಬಕದ ವಿನೀತ್ ಮತ್ತು ಇಬ್ಬರು ಅಪ್ರಾಪ್ತರ ವಿರುದ್ಧ ಪ್ರಕರಣ

ತಲವಾರು ಝಳಪಿಸಿದ ಆರೋಪಿಗಳಿಗೆ ಶರತ್ತುಬದ್ಧ ಜಾಮೀನು Read More »

ಪ್ರಕರಣಗಳೇ ಇಲ್ಲದ ಕಾರ್ಯಕರ್ತರ ಗಡಿಪಾರು! | ವಿಶ್ವಹಿಂದು ಪರಿಷತ್, ಬಜರಂಗದಳ ಖಂಡನೆ

ಪುತ್ತೂರು: ಅಪ್ರಾಪ್ತ ಬಾಲಕಿಯನ್ನು ಅನ್ಯಮತೀಯನಿಂದ ರಕ್ಷಣೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರು ಯುವಕರನ್ನು ಪೊಲೀಸ್ ಇಲಾಖೆ ಗಡಿಪಾರಿಗೆ ಶಿಪಾರಸ್ಸು ಮಾಡಿ ಆದೇಶಿಸಿರುವುದನ್ನು ವಿಶ್ವಹಿಂದು ಪರಿಷತ್, ಬಜರಂಗದಳ ಕಟುವಾಗಿ ಖಂಡಿಸುತ್ತದೆ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹಸಂಚಾಲಕ ಮುರಳೀಕೃಷ್ಣ ಹಸಂತಡ್ಕ ತಿಳಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾಲ್ವರ ವಿರುದ್ದ ನಗರ ಠಾಣೆಯಲ್ಲಿ ಯಾವುದೇ ಪ್ರಕರಣಗಳಿಲ್ಲ. ಬಾಲಕಿಯನ್ನು ರಕ್ಷಿಸಿ ಪೊಷಕರ ಗಮನಕ್ಕೆ ತಂದಿರುವ ಒಂದೇ ಕಾರಣಕ್ಕೆ ಗಡಿಪಾರಿಗೆ ನೊಟೀಸ್ ನೀಡಲಾಗಿದೆ. ಅವರು ರೌಡಿಸಂ, ಕೋಮುವಾದ ಹಾಗೂ ಅಶಾಂತಿ ಮಾಡಿರುವುದೇ

ಪ್ರಕರಣಗಳೇ ಇಲ್ಲದ ಕಾರ್ಯಕರ್ತರ ಗಡಿಪಾರು! | ವಿಶ್ವಹಿಂದು ಪರಿಷತ್, ಬಜರಂಗದಳ ಖಂಡನೆ Read More »

ವಿಟ್ಲ ಜೆಸಿಐ ಅಧ್ಯಕ್ಷರಾಗಿ ಸಂತೋಷ್ ಪೆಲತ್ತಡ್ಕ

ವಿಟ್ಲ: ಶೆಲ್ಟರ್ ಅಸೋಸಿಯೇಟ್ಸ್ ಮಾಲಕರಾದ ಸಂತೋಷ್ ಶೆಟ್ಟಿ ಪೆಲತ್ತಡ್ಕ ಅವರು 2024ನೇ ಸಾಲಿನ ವಿಟ್ಲ ಜೆಸಿಐ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ವಿಟ್ಲದ ಕೆಲಿಂಜ ಪೆಲತ್ತಡ್ಕ ನಿವಾಸಿಯಾಗಿರುವ ಇವರು, ಕಳೆದ 8 ವರ್ಷಗಳಿಂದ ಜೆಸಿಐನಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ. ಲಯನ್ಸ್ ವಿಟ್ಲ ಅಧ್ಯಕ್ಷರಾಗಿ, ಪ್ರಾಂತೀಯ ಅಧ್ಯಕ್ಷರಾಗಿ ಸೇರಿದಂತೆ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ವೃತ್ತಿಯಲ್ಲಿ ಸಿವಿಲ್ ಇಂಜಿನಿಯರ್ ಆಗಿರುವ ಇವರು, ಶೆಲ್ಟರ್ ಅಸೋಸಿಯೇಟ್ಸ್ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ.

ವಿಟ್ಲ ಜೆಸಿಐ ಅಧ್ಯಕ್ಷರಾಗಿ ಸಂತೋಷ್ ಪೆಲತ್ತಡ್ಕ Read More »

ರಾಷ್ಟ್ರಮಟ್ಟದ ಅಥ್ಲೆಟಿಕ್ :  ಅನಘ ಕೆ.ಎ. ಕೂಟ ದಾಖಲೆಯೊಂದಿಗೆ ಚಿನ್ನದ ಪದಕ 

ಪುತ್ತೂರು: ವಿದ್ಯಾಭಾರತಿ ವತಿಯಿಂದ ಬಿಹಾರಾದ ಬೇಟಿಯಾದಲ್ಲಿ ನ.4ರಿಂದ 8ರವರೆಗೆ ನಡೆದ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ತರುಣ ವರ್ಗ ವಿಭಾಗದ 400 ಮೀಟರ್ ಹರ್ಡಲ್ಸ್ ಸ್ಪರ್ಧೆಯಲ್ಲಿ ಅನಘ ಕೆ.ಎ. ಅವರು ಹೊಸ ಕೂಟ ದಾಖಲೆಯೊಂದಿಗೆ ಪ್ರಥಮ ಸ್ಥಾನಿಯಾಗಿ ಚಿನ್ನದ ಪದಕ ಪಡೆದಿದ್ದಾರೆ. 100 ಮೀಟರ್ ಹರ್ಡಲ್ಸ್ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ, ಲಾಂಗ್ ಜಂಪ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ‌ ಪಡೆದು ಬೆಳ್ಳಿಪದಕ ಗಳಿಸಿದ್ದಾರೆ. ಮಂಗಳೂರು ಶಾರದಾ ವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿರುವ ಅನಘ ಕೆ.ಎ. ಅವರು ಕ್ರೀಡಾ

ರಾಷ್ಟ್ರಮಟ್ಟದ ಅಥ್ಲೆಟಿಕ್ :  ಅನಘ ಕೆ.ಎ. ಕೂಟ ದಾಖಲೆಯೊಂದಿಗೆ ಚಿನ್ನದ ಪದಕ  Read More »

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ:  ಬೈಕ್ ಸವಾರನಿಗೆ ಗಾಯ

ನೆಲ್ಯಾಡಿ: ಬೈಕ್ ಚಲಾಯಿಸಿಕೊಂಡು ಬಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ ಸವಾರ ಗಾಯಗೊಂಡಿರುವ ಘಟನೆ ಗುರುವಾರ ಸಂಭವಿಸಿದೆ. ಬಂಟ್ವಾಳ ತಾಲೂಕಿನ ಕರೋಪಾಡಿ ನಿವಾಸ ದೀಕ್ಷಿತ್ (23) ಗಾಯಗೊಂಡವರು. ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕೋಲ್ಪೆಯಲ್ಲಿ ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿದೆ. ಲಾರಿ ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದು ಚಾಲಕ ಕೋಲ್ಪೆ ಯಲ್ಲಿ ಲಾರಿ ನಿಲ್ಲಿಸಿ ಊಟಕ್ಕೆ ತೆರಳಿದ್ದರು. ಗಾಯಾಳು ಬೈಕ್ ಸವಾರ ದೀಕ್ಷಿತ್ ಅವರನ್ನು ಮಂಗಳೂರು ಆಸ್ಪತ್ರೆಗೆ

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ:  ಬೈಕ್ ಸವಾರನಿಗೆ ಗಾಯ Read More »

error: Content is protected !!
Scroll to Top