ಪುತ್ತೂರು

ವೈವಾಹಿಕ ಜೀವನಕ್ಕೆ ಕಾಲಿರಿಸಿದ ‘ನ್ಯೂಸ್ ಪುತ್ತೂರು”ನ ಮುಖ್ಯ ವರದಿಗಾರ ಗಣೇಶ್ ಎನ್. ಕಲ್ಲರ್ಪೆ

ಪುತ್ತೂರು: ‘ನ್ಯೂಸ್ ಪುತ್ತೂರು’ ನ ಮುಖ್ಯ ವರದಿಗಾರ ಗಣೇಶ್ ಎನ್. ಕಲ್ಲರ್ಪೆಅವರು ಬುಧವಾರ ವೈವಾಹಿಕ ಜೀವನಕ್ಕೆ ಕಾಲಿರಿಸಿದರು. ಸಕಲೇಶಪುರದ ಲೇಖಖಿ (ಸುಶ್ಮಿತಾ) ಅವರೊಂದಿಗೆ ಸಕಲೇಶಪುರದ ಶ್ರೀ ಉಮಾಶಂಕರ ಸಮುದಾಯ ಭವನದಲ್ಲಿ ಬುಧವಾರ ನೆರವೇರಿತು. ವಿವಾಹ ಸಮಾರಂಭಕ್ಕೆ ಹಲವಾರು ಗಣ್ಯರು ಆಗಮಿಸಿ ಶುಭ ಹಾರೈಸಿದರು.

ವೈವಾಹಿಕ ಜೀವನಕ್ಕೆ ಕಾಲಿರಿಸಿದ ‘ನ್ಯೂಸ್ ಪುತ್ತೂರು”ನ ಮುಖ್ಯ ವರದಿಗಾರ ಗಣೇಶ್ ಎನ್. ಕಲ್ಲರ್ಪೆ Read More »

ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ಕನ್ನಡ ರಾಜ್ಯೋತ್ಸವ

ಪುತ್ತೂರು: ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಬುಧವಾರ ಆಚರಿಸಲಾಯಿತು. ಶಾಲಾ ಸಂಚಾಲಕ ಅವಿನಾಶ್ ಕೊಡಂಕಿರಿ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಶಾಲಾ ಆಡಳಿತಾಧಿಕಾರಿ ಶುಭಾ ಅವಿನಾಶ್ ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಷಾರ್ಚನೆಗೈದರು. ಬಳಿಕ ವಿದ್ಯಾರ್ಥಿಗಳಿಂದ ಗೀತ ಗಾಯನ ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯ ಶಿಕ್ಷಕರು,  ಶಿಕ್ಷಕರು, ಶಿಕ್ಷಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ಕನ್ನಡ ರಾಜ್ಯೋತ್ಸವ Read More »

ಕೋಡಿಂಬಾಡಿಯಲ್ಲಿ ‘ದೀಪಾ ಎಂಟರ್ ಪ್ರೈಸಸ್’ ಶುಭಾರಂಭ

ಪುತ್ತೂರು: ಇನ್ ವರ್ಟರ್, ಬ್ಯಾಟರಿ, ಸೋಲಾರ್ ಉತ್ಪನ್ನಗಳ ಸಹಿತ ಮೋದಿಕೇರ್ ಸ್ವದೇಶಿ ವಸ್ತುಗಳ ಮಾರಾಟ ಮಳಿಗೆ “ದೀಪಾ ಎಂಟರ್ ಪ್ರೈಸಸ್‍” ಬುಧವಾರ ಕೋಡಿಂಬಾಡಿ ಶಿವ ಕಾಂಪ್ಲೆಕ್ಸ್ ನ ವಾಣಿಜ್ಯ ಸಂಕೀರ್ಣದಲ್ಲಿ ಶುಭಾರಂಭಗೊಂಡಿತು. ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಪ್ರಧಾನ ಅರ್ಚಕ ರಾಮಕೃಷ್ಣ ಭಟ್ ಸಂಸ್ಥೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಉದ್ಘಾಟನಾ ಸಮಾರಂಭಕ್ಕೆ ಹಲವಾರು ಗಣ್ಯರು ಆಗಮಿಸಿ ಶುಭ ಹಾರೈಸಿದರು. ಸಂಸ್ಥೆಯ ಮಾಲಕ ಸುರೇಶ ಎಂ.ಕೆ. ಎಲ್ಲರನ್ನು ಸ್ವಾಗತಿಸಿ, ಸಂಸ್ಥೆಯಲ್ಲಿ ಇನ್ ವರ್ಟರ್, ಬ್ಯಾಟರಿ,

ಕೋಡಿಂಬಾಡಿಯಲ್ಲಿ ‘ದೀಪಾ ಎಂಟರ್ ಪ್ರೈಸಸ್’ ಶುಭಾರಂಭ Read More »

ಸರ್ವೆ ಕಲ್ಪನೆ ಶಾಲಾ ವಿದ್ಯಾರ್ಥಿ ಸುಪ್ರೀತ್ ನಿಧನ

ಸರ್ವೆ: ಕಲ್ಪನೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ 7ನೇ ತರಗತಿ ವಿದ್ಯಾರ್ಥಿ ಸುಪ್ರೀತ್ ಬುಧವಾರ ನಿಧನರಾಗಿದ್ದಾರೆ. ಎರಡು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾದ ಸುಪ್ರೀತ್‍ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆಗೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುಪ್ರೀತ್ ಮುಂಡೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಕುಸುಮಾ ಪೆರಂಟೋಳು ಹಾಗೂ ಕುಂಞ ಮೇಸ್ತ್ರಿ ದಂಪತಿ ಪುತ್ರ.

ಸರ್ವೆ ಕಲ್ಪನೆ ಶಾಲಾ ವಿದ್ಯಾರ್ಥಿ ಸುಪ್ರೀತ್ ನಿಧನ Read More »

ಕನ್ನಡ ಭುವನೇಶ್ವರಿಯ ವೈಭವದ ಮೆರವಣಿಗೆ | ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ

ಪುತ್ತೂರು: ಕರ್ನಾಟಕ ಮರು ನಾಮಕರಣಗೊಂಡು 50ನೇ ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಪುತ್ತೂರಿನಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನ್ನಡ ಭುವನೇಶ್ವರಿ ಮೆರವಣಿಗೆಯೊಂದಿಗೆ ಕನ್ನಡ ರಾಜ್ಯೋತ್ಸವವನ್ನು ವೈಭವದಿಂದ ಬುಧವಾರ ಆಚರಿಸಲಾಯಿತು. ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಧ್ಯೇಯ ವಾಕ್ಯದೊಂದಿಗೆ ನಡೆದ ಕನ್ನಡ ಭುವನೇಶ್ವರಿ ಮೆರವಣಿಗೆಗೆ ಶಾಸಕ ಅಶೋಕ್ ಕುಮಾರ್ ರೈ ದರ್ಬೆ ವೃತ್ತದ ಬಳಿ ಕನ್ನಡ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಉಪಸ್ಥಿತರಿದ್ದರು.

ಕನ್ನಡ ಭುವನೇಶ್ವರಿಯ ವೈಭವದ ಮೆರವಣಿಗೆ | ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ Read More »

ನೆಲ್ಲಿಕಟ್ಟೆ ರುಕ್ಮಿಣಿ ನಿಧನ

ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ರುಕ್ಮಿಣಿ (92) ಸ್ವಗೃಹದಲ್ಲಿ ಇಂದು ಮುಂಜಾನೆ ನಿಧನರಾದರು. ನೆಲ್ಲಿಕಟ್ಟೆ ದಿ.ಭಟ್ಯಪ್ಪ ಗೌಡರ ಪತ್ನಿಯಾಗಿರುವ ಅವರು ವಯೋ ಸಹಜ ನಿಧನರಾದರು. ಮೃತರು ಪುತ್ರರಾದ ನಿವೃತ್ತ ಬ್ಯಾಂಕ್ ಉದ್ಯೋಗಿ ರಾಧಾಕೃಷ್ಣ ಗೌಡ, ನಿವೃತ್ತ ಎಸ್ಪಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಮದಾಸ ಗೌಡ, ಶ್ರೀ ಮಹಾಲಿಂಗೇಶ್ವರ ಐಟಿಐ ಆಡಳಿತ ಸಮಿತಿ ನಿರ್ದೇಶಕ ಕಿಶೋರ್ ಕುಮಾರ್, ಪುತ್ರಿಯರಾದ ಜಯಲಕ್ಷ್ಮೀ ತಾರಾಮತಿ, ಭಾರತಿ, ಅಂಬಿಕಾ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ನೆಲ್ಲಿಕಟ್ಟೆ ರುಕ್ಮಿಣಿ ನಿಧನ Read More »

ಉಪ್ಪಿನಂಗಡಿ ದೇವಳಕ್ಕೆ ಹೊಸ ಲುಕ್ : ಕ್ಷೇತ್ರದ ಅಭಿವೃದ್ದಿಗೆ 174 ಕೋಟಿ ರೂ. ಪ್ರಸ್ತಾವನೆ | ದೇವಸ್ಥಾನದ ಅಭಿವೃದ್ಧಿ ಕುರಿತ ಸಭೆಯಲ್ಲಿ ಶಾಸಕ ಅಶೋಕ್ ರೈ

ಉಪ್ಪಿನಂಗಡಿ: ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಾಗ 25 ವರ್ಷಗಳಷ್ಟಾದರೂ ಭವಿಷ್ಯದ ಚಿಂತನೆಯಿರಬೇಕು. ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ-ಮಹಾಕಾಳಿ ದೇವಾಲಯದ ಅಭಿವೃದ್ಧಿಯೂ ಇದೇ ರೀತಿ ನಡೆಯಬೇಕಿದ್ದು, ಬರುವ ಭಕ್ತರಿಗೆ ಉತ್ತಮ ಇಲ್ಲಿ ವ್ಯವಸ್ಥೆ ಮಾಡಿಕೊಡುವ ಕಾರ್ಯವಾಗಬೇಕು. ಪುಣ್ಯಕ್ಷೇತ್ರವಾಗಿರುವ ಈ ಸಂಗಮ ಕ್ಷೇತ್ರವನ್ನು ಪ್ರವಾಸೋದ್ಯಮ ಕೇಂದ್ರವಾಗಿಯೂ ಅಭಿವೃದ್ಧಿ ಪಡಿಸಬೇಕಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಅಭಿವೃದ್ಧಿಯ ವಿಚಾರವಾಗಿ ದೇವಾಲಯದ ಸಭಾಂಗಣದಲ್ಲಿ ನಡೆದ ಹಾಲಿ ಹಾಗೂ ಮಾಜಿ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಮತ್ತು ಭಕ್ತರ

ಉಪ್ಪಿನಂಗಡಿ ದೇವಳಕ್ಕೆ ಹೊಸ ಲುಕ್ : ಕ್ಷೇತ್ರದ ಅಭಿವೃದ್ದಿಗೆ 174 ಕೋಟಿ ರೂ. ಪ್ರಸ್ತಾವನೆ | ದೇವಸ್ಥಾನದ ಅಭಿವೃದ್ಧಿ ಕುರಿತ ಸಭೆಯಲ್ಲಿ ಶಾಸಕ ಅಶೋಕ್ ರೈ Read More »

ಅಡಿಕೆ ಕಳ್ಳತನ : ನಾಲ್ವರು ಆರೋಪಿಗಳ ಬಂಧನ | ಸೊತ್ತುಗಳು ವಶಕ್ಕೆ

ಪುತ್ತೂರು: ಅಡಿಕೆ ಕಳ್ಳತನ ಮಾಡಿದ ನಾಲ್ವರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿ ಅಡಿಕೆ ಹಾಗೂ ಕಳ್ಳತನಕ್ಕೆ ಬಳಸಿದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಬಡಗನ್ನೂರಿನ ಕೊಯ್ದ ಮನೆ ಶ್ರವಣ್ ಕೆ (20), ಬಾಣಪದವು ಜಯಚಂದ್ರ (21), ನಿಡ್ನಳ್ಳಿ ಡೊಬ್ಬಟ್ಟಗಿರಿಯ ಅಶೋಕ (24), ನಿಡ್ನಳ್ಳಿ ಕಲ್ಲಮೂಲೆಯ ಪುನೀತ್ (20) ಎಂದು ಬಂಧಿತ ಆರೋಪಿಗಳು. ಬಂಧಿತರಿಂದ 1,55,925/- ರೂ. ಮೌಲ್ಯದ ಅಡಿಕೆ, ಕಳವು ಮಾಡಲು ಉಪಯೋಗಿಸಿದ ಸ್ವಿಪ್ಟ್ ಕಾರು, ಮತ್ತು ಆಟೋ ರಿಕ್ಷಾ ಸೇರಿದಂತೆ ಒಟ್ಟು 4,15,925/- ರೂ.

ಅಡಿಕೆ ಕಳ್ಳತನ : ನಾಲ್ವರು ಆರೋಪಿಗಳ ಬಂಧನ | ಸೊತ್ತುಗಳು ವಶಕ್ಕೆ Read More »

ಬೆಳಂದೂರು ಸರಕಾರಿ ಪ್ರಥಮದರ್ಜೆ ಕಾಲೇಜಿನ ಎನ್‍ಎಸ್‍ಎಸ್‍ ಯೋಜನೆ ಉದ್ಘಾಟನೆ

ಬೆಳಂದೂರು: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2023-24 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಜೆಸಿಐ ತರಬೇತುದಾರ, ಸುಳ್ಯ ಕಾಲೇಜಿನ ಪ್ರಾಂಶುಪಾಲ ಡಾ ಶಂಕರ್ ಭಟ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸಂಪನ್ಮೂಲ ವ್ಯಕ್ತಿ ಮನಮೋಹನ್, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳಾದ ಶಾಂತಿ ಕೆ., ರಂಜಿತ್ ಪಿ ಜೆ., , ಐಕ್ಯೂಎಸಿ ಸಂಚಾಲಕ ಸ್ವಾಮಿ ಎಸ್., ರಾಷ್ಟ್ರೀಯ ಸೇವಾ ಯೋಜನೆಯ ಘಟಕ ನಾಯಕರುಗಳಾದ ಕ್ಷಿತಿಜ್, ಚಂದ್ರಿಕಾ ಉಪಸ್ಥಿತರಿದ್ದರು.

ಬೆಳಂದೂರು ಸರಕಾರಿ ಪ್ರಥಮದರ್ಜೆ ಕಾಲೇಜಿನ ಎನ್‍ಎಸ್‍ಎಸ್‍ ಯೋಜನೆ ಉದ್ಘಾಟನೆ Read More »

ದ.ಕ.ಜಿಲ್ಲಾ ಮಟ್ಟದ ಕ್ರೀಡಾಕೂಟ | ಕಡಬದ ಚರಿಷ್ಮಾರಿಂದ ಕೂಟ ದಾಖಲೆ

ಮೂಡಬಿದ್ರೆ: ಮೂಡುಬಿದಿರೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರೌಢಶಾಲಾ ಬಾಲಕಿಯರ ವಿಭಾಗದ 1500 ಮತ್ತು 3000 ಕಿ.ಮೀ ಓಟದಲ್ಲಿ ಕಡಬ ಸ.ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಚರಿಷ್ಮಾ ಕೂಟ ದಾಖಲೆ ನಿರ್ಮಿಸಿದ್ದಾರೆ. ಎಡಪದವು ಪ.ಪೂ.ಕಾಲೇಜಿನ ಸೌಮ್ಯ ಕೆ.ಪಿ ಅವರು 2004ರಲ್ಲಿ 5:01.70 ಸೆಕುಂಡು ನಲ್ಲಿ ಕ್ರಮಿಸಿ ಮಾಡಿರುವ ದಾಖಲೆಯನ್ನು ಚರಿಷ್ಮಾ ಅವರು 4:53.9 ಸೆಕುಂಡಿನಲ್ಲಿ ಕ್ರಮಿಸುವ ಮೂಲಕ ಹಾಗೂ 3000 ಓಟದಲ್ಲಿ 10:44.7 ಸೆಕುಂಡಿನಲ್ಲಿ ಗುರಿ ಮುಟ್ಟುವ ಮೂಲಕ ಉಜಿರೆ ಎಸ್ ಡಿ.ಎಂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ

ದ.ಕ.ಜಿಲ್ಲಾ ಮಟ್ಟದ ಕ್ರೀಡಾಕೂಟ | ಕಡಬದ ಚರಿಷ್ಮಾರಿಂದ ಕೂಟ ದಾಖಲೆ Read More »

error: Content is protected !!
Scroll to Top