ನ.1: ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆ | ವಿವಿಧ ಸಂಘ ಸಂಸ್ಥೆಗಳ ಸಮಾಲೋಚನಾ ಸಭೆಯಲ್ಲಿ ನಿರ್ಧಾರ
ಪುತ್ತೂರು: ನ.1 ರಂದು ನಡೆಯಲಿರುವ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಕನ್ನಡ ಭುವನೇಶ್ವರಿಯ ಮೆರವಣಿಗೆ ನಡೆಸುವ ಬಗ್ಗೆ ಕುರಿತು ವಿವಿಧ ಸಂಘ ಸಂಸ್ಥೆಗಳ ಸಮಾಲೋಚನಾ ಸಭೆ ಶುಕ್ರವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು. ತಹಶೀಲ್ದಾರ್ ಜೆ.ಶಿವಶಂಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಮಾತನಾಡಿ, ಕರ್ನಾಟಕ ರಾಜ್ಯ ಎಂದು ಮರು ನಾಮಕರಣಗೊಂಡು ಐವತ್ತು ವರ್ಷ ಪೂರ್ಣಗೊಂಡಿದ್ದು ಈ ಹಿನ್ನೆಲೆಯಲ್ಲಿ ನ.1 ರಂದು […]










