ಪುತ್ತೂರು

ಚೆಸ್, ಕ್ಯಾರಂ ಆಟಕ್ಕೂ ಸೈ ನರಿಮೊಗರು ಗ್ರಾಪಂ ಡಿಜಿಟಲ್ ಗ್ರಂಥಾಲಯ | ಗ್ರಂಥಾಲಯ ಮೂಲಕ ಕೌಶಲ್ಯ ಹೆಚ್ಚಿಸಿಕೊಳ್ಳುತ್ತಿರುವ ಗ್ರಾಪಂ ವ್ಯಾಪ್ತಿಯ ಶಾಲಾ ಮಕ್ಕಳು

ಪುತ್ತೂರು: ಈ ಡಿಜಿಟಲ್ ಗ್ರಂಥಾಲಯ ಕೇವಲ ಪುಸ್ತಕಗಳನ್ನು ಓದುವುದಕ್ಕೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ ಇಲ್ಲಿ ಚೆಸ್, ಕ್ಯಾರಂ ಮುಂತಾದ ಆಟಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹ ನೀಡಿ ಈ ಮೂಲಕ ಮಕ್ಕಳ ಕೌಶಲ್ಯ ಹೆಚ್ಚಿಸುವ ಕಾರ್ಯವನ್ನೂ ಮಾಡುತ್ತಿದೆ. ಇದು ನರಿಮೊಗರು ಗ್ರಾಮ ಪಂಚಾಯಿತಿಯ ಡಿಜಿಟಲ್ ಗ್ರಂಥಾಲಯದ ವಿಶೇಷತೆ. ಈ ಗ್ರಾಪಂ ಪುತ್ತೂರು ತಾಲೂಕಿನ 21 ಗ್ರಾಪಂಗಳ ಪೈಕಿ ಅತೀ ದೊಡ್ಡ ಗ್ರಾಪಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪುತ್ತೂರು ತಾಲೂಕಿನಲ್ಲಿ ಪ್ರಪ್ರಥಮವಾಗಿ ಡಿಜಿಟಲ್ ಗ್ರಂಥಾಲಯ ಆರಂಭವಾದದ್ದು ಇದೇ ಗ್ರಾಪಂನಿಂದ. ಈ […]

ಚೆಸ್, ಕ್ಯಾರಂ ಆಟಕ್ಕೂ ಸೈ ನರಿಮೊಗರು ಗ್ರಾಪಂ ಡಿಜಿಟಲ್ ಗ್ರಂಥಾಲಯ | ಗ್ರಂಥಾಲಯ ಮೂಲಕ ಕೌಶಲ್ಯ ಹೆಚ್ಚಿಸಿಕೊಳ್ಳುತ್ತಿರುವ ಗ್ರಾಪಂ ವ್ಯಾಪ್ತಿಯ ಶಾಲಾ ಮಕ್ಕಳು Read More »

ಹೊತ್ತಿ ಉರಿದ ಅಕ್ಕಿ ಸಾಗಾಟದ ಲಾರಿ: ಲಕ್ಷಾಂತರ ರೂ. ನಷ್ಟ

ಉಪ್ಪಿನಂಗಡಿ : ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‍ನಲ್ಲಿ ನಡೆದಿದೆ. ಹಾಸನ ಕಡೆಯಿಂದ ಮಂಗಳೂರಿಗೆ ಅಕ್ಕಿಸಾಗಾಟ ಮಾಡುತ್ತಿದ್ದ ಲಾರಿಯಲ್ಲಿ ಶಿರಾಡಿ ಘಾಟ್ ನ ಡಬಲ್ ಟರ್ನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಲಾರಿಗೆ ಬೆಂಕಿ ತಗುಲಿದ ತಕ್ಷಣ ಲಾರಿ ಚಾಲಕ ಹಾಗೂ ಕ್ಲೀನರ್ ಲಾರಿಯನ್ನು ನಿಲ್ಲಿಸಿ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಹಾಗೂ ಅದರಲ್ಲಿದ್ದ ಅಕ್ಕಿ ಮೂಟೆಗಳು ಸಂಪೂರ್ಣ

ಹೊತ್ತಿ ಉರಿದ ಅಕ್ಕಿ ಸಾಗಾಟದ ಲಾರಿ: ಲಕ್ಷಾಂತರ ರೂ. ನಷ್ಟ Read More »

ಕಾಣಿಯೂರು ಮಠದ ಗದ್ದೆಯಲ್ಲಿ ‘ಕೆಸರ್’ಡ್ ಒಂಜಿ ದಿನ’ ಕ್ರೀಡಾಕೂಟ

ಬೆಳಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ಎನ್ಎಸ್ಎಸ್ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ‘ಕೆಸರ್’ಡ್ ಒಂಜಿ ದಿನ’ ವಿಶಿಷ್ಟ ಕ್ರೀಡಾಕೂಟವನ್ನು ಕಾಣಿಯೂರು ಮಠದ ಗದ್ದೆಯಲ್ಲಿ ಏರ್ಪಡಿಸಲಾಯಿತು. ಜಿಲ್ಲಾ ಯುವಜನ‌ ಒಕ್ಕೂಟದ ನಿರ್ದೇಶಕ ರಾಕೇಶ್ ರೈ ಕೆಡಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆಧುನಿಕ ಕಾಲಘಟ್ಟದಲ್ಲಿ ಕೃಷಿ, ಕೃಷಿಕರ ಮಹತ್ವ ಅರಿಯುವ ಅಗತ್ಯವಿದೆ. ಇರುವ ಒಂದು ಭೂಮಿ ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದರು. ಕಾಲೇಜಿನ ಪ್ರಾಂಶುಪಾಲ ಡಾ.ಶಂಕರ ಭಟ್

ಕಾಣಿಯೂರು ಮಠದ ಗದ್ದೆಯಲ್ಲಿ ‘ಕೆಸರ್’ಡ್ ಒಂಜಿ ದಿನ’ ಕ್ರೀಡಾಕೂಟ Read More »

ಯೋಗಾಸನದಲ್ಲಿ ಶ್ರೀಮಾ ಕೆ.ಎಚ್. ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ

ಪುತ್ತೂರು: ಚಿತ್ರದುರ್ಗದ ಹಿರೆಕೇರಿ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ನಡೆದ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ಶ್ರೀಮಾ ಕೆ.ಎಚ್. ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ 7ನೇ ವಿದ್ಯಾರ್ಥಿನಿಯಾಗಿರುವ ಶ್ರೀಮಾ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಹುದೇರಿಮನೆ ಕುಶಾಲಪ್ಪ ಗೌಡ ಹಾಗೂ ಸುಜಿತಾ ದಂಪತಿ ಪುತ್ರಿ. ಅವರಿಗೆ ಶಿಕ್ಷಕರಾದ ಶಶಿಕಲಾ ಹಾಗೂ ಸಂತೋಷ್ ಮುಂಡಕಜೆ ತರಬೇತಿ ನೀಡಿದ್ದು, ಮಧ್ಯಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಯೋಗಾಸನದಲ್ಲಿ ಶ್ರೀಮಾ ಕೆ.ಎಚ್. ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ Read More »

ಕಣ್ಣೂರಿನಲ್ಲಿ ರೈಲಿನಿಂದ ಬಿದ್ದು ಕಡಬದ ಯುವಕ ಸುರೇಶ್ ಮೃತ್ಯು

ಕಡಬ: ಕಡಬ ಮೂಲಕ ಯುವಕನೋರ್ವ ಕಣ್ಣೂರಿನಲ್ಲಿ ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ಇಂದು ಸಂಭವಿಸಿದೆ. ಕಡಬ ತಾಲೂಕಿನ ಮರ್ದಾಳ ಬಂಟ್ರ ಗ್ರಾಮದ ನೀರಾಜೆ ನಿವಾಸಿ ಸುರೇಶ್ (34) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಸುರೇಶ್ ಕೇರಳದಲ್ಲಿ ಟಿಂಬರ್ ಕೆಲಸ ಮಾಡುತ್ತಿದ್ದು, ಗುರುವಾರ ರಾತ್ರಿ ರೈಲಿನಲ್ಲಿ ಊರಿಗೆ ಬರುತ್ತಿದ್ದರು. ಬರುವ ಮೊದಲು ತನ್ನ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದರು. ಇಂದು ಮುಂಜಾನೆ ಮನೆಯವರು ಸುರೇಶ್ ಅವರ ಮೊಬೈಲ್‍ ಗೆ ಕರೆ ಮಾಡಿದಾಗ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ವಿಚಾರ ತಿಳಿಸಿದ್ದಾರೆ.

ಕಣ್ಣೂರಿನಲ್ಲಿ ರೈಲಿನಿಂದ ಬಿದ್ದು ಕಡಬದ ಯುವಕ ಸುರೇಶ್ ಮೃತ್ಯು Read More »

ಪುತ್ತೂರಿನಲ್ಲಿ ವೈಭವದ ಶಾರದೋತ್ಸವ: ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠಾಪನೆ

ಪುತ್ತೂರು: ಆರು ದಿನಗಳಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾದಲ್ಲಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನಡೆಯುತ್ತಿರುವ ಪುತ್ತೂರು ಶಾರದೋತ್ಸವದ ಅಂಗವಾಗಿ ಶ್ರೀ ಶಾರದಾ ಮಾತೆಯ ವಿಗ್ರಹದ ಮೆರವಣಿಗೆಯೊಂದಿಗೆ ಪ್ರತಿಷ್ಠಾಪನೆ ಶುಕ್ರವಾರ ನಡೆಯಿತು. ವಿವಿಧ ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶಾರದೋತ್ಸವ ವಿಜೃಂಭಣೆಯಿಂದ ಜರಗುತ್ತಿದ್ದು, ಶುಕ್ರವಾರ ಶ್ರೀ ಶಾರದಾ ಮಾತೆಯ ವಿಗ್ರಹವನ್ನು ಮೆರವಣಿಗೆ ಮೂಲಕ ಕರೆತಂದು ಪ್ರತಿಷ್ಠಾಪಿಸಲಾಯಿತು. ಮಾಜಿ ಶಾಸಕ ಸಂಜೀವ ಮಠಂದೂರು ಪ್ರತಿಷ್ಠಾಪನೆ ಬಳಿಕ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉತ್ಸವ ಸಮಿತಿ ಅಧ್ಯಕ್ಷ ರಾಜೇಶ್‍ ಬನ್ನೂರು,

ಪುತ್ತೂರಿನಲ್ಲಿ ವೈಭವದ ಶಾರದೋತ್ಸವ: ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠಾಪನೆ Read More »

ಕತ್ತರಿಸಿದ ದನದ ಕಿವಿ ಪತ್ತೆ

ವಿಟ್ಲ: ದನವೊಂದರ ಕಿವಿ ಕತ್ತರಿಸಿ ಎಸೆದು ಹೋದ ಘಟನೆ ಕೆಲಿಂಜ ಕೊಟ್ಟಾರಿಕಟ್ಟೆ ಬಸ್ ನಿಲ್ದಾಣದ ಸಮೀಪ ಬೆಳಕಿಗೆ ಬಂದಿದೆ. ವೀರಕಂಭ ಗ್ರಾಮದ ಕೊಟ್ಟಾರಿಕಟ್ಟೆ ಬಸ್ ನಿಲ್ದಾಣದಲ್ಲಿ ಇಂದು ಮುಂಜಾನೆ ಕತ್ತರಿಸಿದ ದನದ ಕಿವಿ ಪತ್ತೆಯಾಗಿದೆ. ಸ್ಥಳೀಯರು ವಿಟ್ಲ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿ ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಕತ್ತರಿಸಿದ ದನದ ಕಿವಿ ಪತ್ತೆ Read More »

ನೇಣು ಬಿಗಿದು ಪುಣಚದ ಶ್ರೀಕೃಷ್ಣ ಆತ್ಮಹತ್ಯೆ

ವಿಟ್ಲ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಪುಣಚದಲ್ಲಿ ನಡೆದಿದೆ. ಪುಣಚ ಚೆಕ್ಕುತ್ತಿ ನಿವಾಸಿ ಶ್ರೀಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡವರು ಸೆಂಟ್ರಿಂಗ್ ಕೆಲಸ ಮಾಡುತ್ತಿರುವ ಶ್ರೀಕೃಷ್ಣ ಅವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ತಾಯಿ, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನೇಣು ಬಿಗಿದು ಪುಣಚದ ಶ್ರೀಕೃಷ್ಣ ಆತ್ಮಹತ್ಯೆ Read More »

ನಿವೃತ್ತ ಕೆಎಸ್‍ ಆರ್ ಟಿ ಸಿ ಉದ್ಯೋಗಿ ಕೆ.ಸಿ.ಜನಾರ್ದನ್ ನಂಬಿಯಾರ್ ನಿಧನ

ಪುತ್ತೂರು :- ಬ್ಲಾಕ್ ಕಾಂಗ್ರೆಸ್ ಹಿರಿಯ ಸದಸ್ಯ, ಮುರ  ನಿವಾಸಿ ಕೆ.ಸಿ.ಜನಾರ್ದನ್ ನಂಬಿಯಾರ್ (75) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಶುಕ್ರವಾರ ನಿಧನರಾದರು. ನಿವೃತ್ತ ಕೆಎಸ್‍ಆರ್‍ಟಿಸಿ ಉದ್ಯೋಗಿಯಾಗಿರುವ ಅವರು ಬ್ಲಾಕ್ ಕಾಂಗ್ರೆಸ್ ಸಕ್ರೀಯ ಸದಸ್ಯರಾಗಿದ್ದರು. ಅಲ್ಲದೆ ಹಿರಿಯ ನಾಗರಿಕ ಕಾರ್ಡ್ ವಿತರಣೆ, ಮುಂತಾದ ಸೌಲಭ್ಯಗಳನ್ನು ಒದಗಿಸುವ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೃತರು ಪುತ್ರ ರೂಪೇಶ್, ಪುತ್ರಿ ರೇಶ್ಮಾ ಅವರನ್ನು ಅಗಲಿದ್ದಾರೆ.

ನಿವೃತ್ತ ಕೆಎಸ್‍ ಆರ್ ಟಿ ಸಿ ಉದ್ಯೋಗಿ ಕೆ.ಸಿ.ಜನಾರ್ದನ್ ನಂಬಿಯಾರ್ ನಿಧನ Read More »

ಸೀರೆ ವಿತರಣೆ: ಕೊಂಬೆಟ್ಟು ಕ್ರೀಡಾಂಗಣ ವೀಕ್ಷಿಸಿದ ಶಾಸಕರು

ಪುತ್ತೂರು: ಶಾಸಕ ಅಶೋಕ್ ರೈ ನೇತೃತ್ವದಲ್ಲಿ ದೀಪಾವಳಿ ಪ್ರಯುಕ್ತ ನ. 13ರಂದು ನಡೆಯಲಿರುವ ಬೃಹತ್ ಸೀರೆ ವಿತರಣಾ ಕಾರ್ಯಕ್ರಮವು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಬಾರಿ ಸಮಾವೇಶ ನಡೆಯಲಿರುವ ಕೊಂಬೆಟ್ಟು ಕ್ರೀಡಾಂಗಣಕ್ಕೆ ಭೇಟಿ ನೀಡಿದ ಶಾಸಕರು ಸ್ಥಳ ವೀಕ್ಷಣೆ ಮಾಡಿದರು. ಸುಮಾರು 50 ಸಾವಿರಕ್ಕೂ‌ಮಿಕ್ಕಿ ಜನ ಸೇರುವ ನಿರೀಕ್ಷೆ ಇದೆ. ಸಿದ್ದತೆಗಳ ಪರಿಶೀಲನೆ ಸಂದರ್ಭ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ,ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರ್, ರೈ ಟ್ರಸ್ಟ್ ನ ಮುಖ್ಯಸ್ಥ ನಿಹಾಲ್ ಶೆಟ್ಟಿ,

ಸೀರೆ ವಿತರಣೆ: ಕೊಂಬೆಟ್ಟು ಕ್ರೀಡಾಂಗಣ ವೀಕ್ಷಿಸಿದ ಶಾಸಕರು Read More »

error: Content is protected !!
Scroll to Top