ಪುತ್ತೂರು

ಕಾರಿನ ಗಾಜು ಪುಡಿ ಮಾಡಿ ಕಳ್ಳತನ: ಬಂಧನ

ಸುಬ್ರಹ್ಮಣ್ಯ: ಕಾರಿನ ಗಾಜು ಒಡೆದು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ.ಪ್ರಭಾಕರ ಹೊನ್ನವಳ್ಳಿ ಬಂಧಿತ ಆರೋಪಿ. ಕಳ್ಳತನ ಬೆಳಕಿಗೆ ಬರುತ್ತಿದ್ದಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಕಾರ್ತಿಕ್ ಹಾಗೂ ಮುರಳೀಧರ ನಾಯಕ್, ಕರುಣಾಕರ, ಮಹೇಶ್, ಕುಮಾರ್, ಆನಂದ್, ವಿಠ್ಠಲ್ ಬಸವರಾಜ್, ರೋಹಿತ್, ಕೃಷ್ಣ ಸೇರಿದಂತೆ ಎರಡು ತಂಡವನ್ನು ರಚಿಸಿ ಪತ್ತೆಕಾರ್ಯದಲ್ಲಿ ತೊಡಗಿದ್ದರು. ಸುಬ್ರಹ್ಮಣ್ಯ ರೈಲ್ವೇ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದ ಭಕ್ತಾಧಿಯೋರ್ವರ ಕಾರಿನ ಗಾಜು […]

ಕಾರಿನ ಗಾಜು ಪುಡಿ ಮಾಡಿ ಕಳ್ಳತನ: ಬಂಧನ Read More »

ಭರವಸೆ ಈಡೇರಿಸದಿದ್ದರೆ ರೈತ ಹೋರಾಟ ಅನಿವಾರ್ಯ: ಸಂಜೀವ ಮಠಂದೂರು

ಪುತ್ತೂರು: ಒಂದೆಡೆ ಬರ, ಇನ್ನೊಂದೆಡೆ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ರೈತರಿಗೆ ರಾಜ್ಯ ಸರಕಾರ ನೀಡಿರುವ ಭರವಸೆಗಳು ಹುಸಿಯಾಗಿರುವುದರ ಜತೆಗೆ ರೈತರಿಗೆ ಪಂಗನಾಮ ಹಾಕುವ ಕೆಲಸ ಮಾಡುತ್ತಿದೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಬುಧವಾರ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ನೀಡುತ್ತಿರುವ ಬಡ್ಡಿರಹಿತ ಸಾಲವನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಏರಿಕೆ ಹಾಗೂ ಶೇ. 3ರ ಬಡ್ಡಿದರದಲ್ಲಿ ನೀಡುವ ಸಾಲ 10 ಲಕ್ಷ ರೂ.ನಿಂದ 15 ಲಕ್ಷ ರೂ.ಗೆ ಏರಿಕೆ

ಭರವಸೆ ಈಡೇರಿಸದಿದ್ದರೆ ರೈತ ಹೋರಾಟ ಅನಿವಾರ್ಯ: ಸಂಜೀವ ಮಠಂದೂರು Read More »

ಅ. 15ರಿಂದ 26: ‘ಪುತ್ತೂರು ದಸರಾ ಮಹೋತ್ಸವ’

ಪುತ್ತೂರು: ಪುತ್ತೂರು ದಸರಾ ನವದುರ್ಗಾರಾಧನಾ ಸಮಿತಿ ವತಿಯಿಂದ 21ನೇ ವರ್ಷದ ‘ಪುತ್ತೂರು ದಸರಾ ಮಹೋತ್ಸವ’ ಅ. 15ರಿಂದ 26ರ ತನಕ ಸಂಪ್ಯ ಉದಯಗಿರಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ವಿವಿಧ ವೈದಿಕ, ಧಾರ್ಮಿಕ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಸಮಿತಿ ಸಂಚಾಲಕ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 15ರಂದು ಬೆಳಿಗ್ಗೆ 10ಕ್ಕೆ ಗಣಪತಿ ಹಾಗೂ ನವದುರ್ಗೆಯರ ಪ್ರತಿಷ್ಠೆ ನಡೆದು, ಬಳಿಕ ಕಾರ್ಯಕ್ರಮಗಳಿಗೆ ಆರ್ಯಾಪು ಗ್ರಾಪಂ ಅಧ್ಯಕ್ಷೆ ಗೀತಾ ದೀಪ

ಅ. 15ರಿಂದ 26: ‘ಪುತ್ತೂರು ದಸರಾ ಮಹೋತ್ಸವ’ Read More »

ನಿವೃತ್ತ ಎಸ್‍.ಐ. ಗೋಪಾಲ್ ಎಂ. ನಿಧನ

ಪುತ್ತೂರು: ನಿವೃತ್ತ ಎಸ್‍.ಐ. ಕೊಡಿಪ್ಪಾಡಿ ನಿವಾಸಿ ಗೋಪಾಲ್ ಎಂ. (64) ಬುಧವಾರ ಮುಂಜಾನೆ ನಿಧನರಾಗಿದ್ದಾರೆ. ಚಿಕ್ಕಮಗಳೂರು ಪೊಲೀಸ್ ಇಲಾಖೆ ಸೇರಿದಂತೆ ಹಲವಾರು ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಅವರು 35 ವರ್ಷಗಳ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಸೇವೆಯಿಂದ ನಿವೃತ್ತಿಯಾಗಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ನಿವೃತ್ತ ಎಸ್‍.ಐ. ಗೋಪಾಲ್ ಎಂ. ನಿಧನ Read More »

ಇಂದು ಕರೆ ಮುಹೂರ್ತ: ಡಿಕೆಶಿಗೆ ಆಹ್ವಾನ

ಪುತ್ತೂರು: ಇಂದು ಬೆಂಗಳೂರು ಅರಮನೆ ಮೈದಾನದಲ್ಲಿ  ನಡೆಯಲಿರುವ ಬೆಂಗಳೂರು ‌ಕಂಬಳದ ಕರೆ‌ಮುಹೂರ್ತ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರಿಗೆ ಆಹ್ವಾನ‌ ನೀಡಲಾಯಿತು. ನ.25 ಹಾಗೂ 26 ರಂದು ಬೆಂಗಳೂರು‌ಕಂಬಳ ನಡೆಯಲಿದ್ದು ಕರೆ ಮುಹೂರ್ತ ಕಾರ್ಯಕ್ರಮ ಇಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ. ಈ ಸಂದರ್ಭದಲ್ಲಿ ಬೆಂಗಳೂರು‌ ಕಂಬಳ ಸಮಿತಿ‌ ಅಧ್ಯಕ್ಷ ಶಾಸಕ ಅಶೋಕ್ ರೈ, ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ, ಕಾರ್ಯಾಧ್ಯಕ್ಷ ಗುರುಕಿರಣ್, ಉಪಾಧ್ಯಕ್ಷರಾದ ಗುಣರಂಜನ್ ಶೆಟ್ಟಿ , ಮುರಳೀಧರ್ ರೈ ಮಠಂತಬೆಟ್ಟು ಸಹಿತಿ ಕಂಬಳ

ಇಂದು ಕರೆ ಮುಹೂರ್ತ: ಡಿಕೆಶಿಗೆ ಆಹ್ವಾನ Read More »

ಪುತ್ತೂರು: ಮಳೆ ಜೊತೆ ಟ್ರಾಫಿಕ್ ಜಾಮ್ ಕಿರಿಕಿರಿ!!

ಪುತ್ತೂರು: ಜಿಟಿಜಿಟಿ ಮಳೆ ಸುರಿಯಲು ಆರಂಭವಾಗುತ್ತಿದ್ದಂತೆ ಪುತ್ತೂರು ಪೇಟೆಯ ಮುಖ್ಯರಸ್ತೆಯಲ್ಲಿ ಲಘು ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆಯಿತು. ಕಲ್ಲಾರೆಯಿಂದ ಅರುಣಾ ಥಿಯೇಟರ್ ನಡುವಿನ ಮುಖ್ಯರಸ್ತೆಯಲ್ಲಿ ಟ್ರಾಫಿಕ್ ದಟ್ಟಣೆ ಉಂಟಾಯಿತು. ವಾಹನಗಳು ಹಾರನ್ ಮೊಳಗಿಸುತ್ತಾ, ತೆವಳುತ್ತಾ ಸಾಗುವಂತಾಯಿತು. ಪುತ್ತೂರಿನಲ್ಲಿ ಮಂಗಳವಾರ ಸಂಜೆ ಮಳೆ ಸುರಿಯಿತು. ಅಷ್ಟರಲ್ಲಿ ಟ್ರಾಫಿಕ್ ದಟ್ಟಣೆ ಉಂಟಾಯಿತು. ಅದರಲ್ಲೂ ಪುತ್ತೂರಿನಿಂದ ದರ್ಬೆ ಕಡೆಗೆ ಸಾಗುವ ಒಂದು ರಸ್ತೆಯಲ್ಲಿ ವಾಹನಗಳ ಸರತಿ ಸಾಲು ಕಂಡುಬಂದಿತು.

ಪುತ್ತೂರು: ಮಳೆ ಜೊತೆ ಟ್ರಾಫಿಕ್ ಜಾಮ್ ಕಿರಿಕಿರಿ!! Read More »

ಸವಣೂರು, ಉಪ್ಪಿನಂಗಡಿ ಗ್ರಾ.ಪಂ.ಗೆ ಪ್ರಶಸ್ತಿ ಪ್ರದಾನ ಮಾಡಿದ ರಾಜ್ಯಪಾಲ

ಪುತ್ತೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸವಣೂರು ಹಾಗೂ ಉಪ್ಪಿನಂಗಡಿ ಗ್ರಾ.ಪಂ.ಗೆ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಮಾಡಿದರು. ಕೋಟತಟ್ಟುವಿನ ಡಾ. ಶಿವರಾಮ ಕಾರಂತ ಥೀಂ ಪಾರ್ಕಿನಲ್ಲಿ ನಡೆದ ಸಮಾರಂಭದಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗಾಂಧಿ ಗ್ರಾಮ ಪ್ರಶಸ್ತಿ ಸ್ವೀಕರಿಸಿದ 9 ಗ್ರಾಮ ಪಂಚಾಯತುಗಳಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯತ್‌, ಕಾರಂತ ಟ್ರಸ್ಟ್‌, ಕಾರಂತ ಹುಟ್ಟೂರು ಪ್ರಶಸ್ತಿ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಕಾರಂತೋತ್ಸವದಲ್ಲಿ ಕಾರಂತ

ಸವಣೂರು, ಉಪ್ಪಿನಂಗಡಿ ಗ್ರಾ.ಪಂ.ಗೆ ಪ್ರಶಸ್ತಿ ಪ್ರದಾನ ಮಾಡಿದ ರಾಜ್ಯಪಾಲ Read More »

ಸಮಾಜಕ್ಕೆ ನೀಡಿದ ಕೊಡುಗೆಗಳಿಂದ ಕಾರಂತರು ವಿಶ್ವಮಾನ್ಯ | ಡಾ. ಶಿವರಾಮ ಕಾರಂತರ 122ನೇ ಜನ್ಮದಿನಾಚರಣೆ, ಬಾಲವನ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಶಾಸಕ ಅಶೋಕ್ ರೈ

ಪುತ್ತೂರು: ಯಾವುದೇ ವಿಚಾರದಲ್ಲಿ ಆಸಕ್ತಿ ಬಂದಾಗ ಮಾತ್ರ ಅದರ ಮೌಲ್ಯ ತಿಳಿದುಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಡಾ. ಶಿವರಾಮ ಕಾರಂತರ ವಿಚಾರಧಾರೆಗಳು ಮೌಲ್ಯಯುತವಾಗಿದ್ದು, ಸಮಾಜಕ್ಕೆ ಹಲವಾರು ಕೊಡುಗೆಗಳನ್ನು ನೀಡುವ ಮೂಲಕ ವಿಶ್ವಮಾನ್ಯರಾಗಿದ್ದಾರೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪರ್ಲಡ್ಕ ಡಾ.ಶಿವರಾಮ ಕಾರಂತರ ಬಾಲವನ ಹಾಗೂ ಪುತ್ತೂರು ಸಹಾಯಕ ಆಯುಕ್ತರ ಕಚೇರಿ ಸಂಯುಕ್ತ ಆಶ್ರಯದಲ್ಲಿ ಪರ್ಲಡ್ಕ ಡಾ.ಶಿವರಾಮ ಕಾರಂತ ಬಾಲವನದಲ್ಲಿ ಮಂಗಳವಾರ ನಡೆದ ಡಾ.ಶಿವರಾಮ ಕಾರಂತರ 122ನೇ ಜನ್ಮದಿನೋತ್ಸವ, ಬಾಲವನ

ಸಮಾಜಕ್ಕೆ ನೀಡಿದ ಕೊಡುಗೆಗಳಿಂದ ಕಾರಂತರು ವಿಶ್ವಮಾನ್ಯ | ಡಾ. ಶಿವರಾಮ ಕಾರಂತರ 122ನೇ ಜನ್ಮದಿನಾಚರಣೆ, ಬಾಲವನ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಶಾಸಕ ಅಶೋಕ್ ರೈ Read More »

400 ಕೆ.ವಿ. ಕಾಮಗಾರಿ ವಿರೋಧಿಸಿ ಪ್ರತಿಭಟನೆ: ಸ್ಥಳಕ್ಕೆ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದ ಅರುಣ್ ಕುಮಾರ್ ಪುತ್ತಿಲ

ವಿಟ್ಲ: 400 ಕೆ.ವಿ. ಹೈಟೆನ್ಷನ್ ಮಾರ್ಗದ ಕಾಮಗಾರಿಗೆ ಮುಂದಾಗುತ್ತಿದ್ದ ಘಟನೆಯನ್ನು ಪುಣಚ ಗ್ರಾಮಸ್ಥರು ವಿರೋಧಿಸಿದ್ದು, ಸ್ಥಳಕ್ಕೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದರು. ಅಧಿಕಾರಿಗಳ ಜೊತೆ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ ಅವರು, ಯಾವುದೇ ಕಾರಣಕ್ಕೂ 400 ಕೆ.ವಿ. ಯೋಜನೆ ಅನುಷ್ಠಾನಕ್ಕೆ ಬಿಡುವುದಿಲ್ಲ. ಆದರೆ ಶಾಂತಿ – ಸುವ್ಯವಸ್ಥೆಗೆ ಧಕ್ಕೆ ಆಗದಂತೆ ನೋಡಿಕೊಳ್ಳಬೇಕು ಎಂದರು. ರೈತರ ಜೊತೆ ಮಾತಕತೆ ನಡೆಸಿದ ಪುತ್ತಿಲ ಅವರು, ಯಾವಾಗಲೂ ರೈತರ ಜೊತೆ ನಾನಿದ್ದೇನೆ ಎಂದು ಭರವಸೆ ತುಂಬಿದರು. 400

400 ಕೆ.ವಿ. ಕಾಮಗಾರಿ ವಿರೋಧಿಸಿ ಪ್ರತಿಭಟನೆ: ಸ್ಥಳಕ್ಕೆ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದ ಅರುಣ್ ಕುಮಾರ್ ಪುತ್ತಿಲ Read More »

400 ಕೆ.ವಿ. ಹೈಟೆನ್ಷನ್ ಕಾಮಗಾರಿ ಆರಂಭ ಯತ್ನ: ಪ್ರತಿಭಟನೆ | ಸ್ಥಳಕ್ಕಾಗಮಿಸಿದ ಮಾಜಿ ಶಾಸಕ ಸಂಜೀವ ಮಠಂದೂರು | ಮುಂದೇನಾಯ್ತು… ಇಲ್ಲಿದೆ ವರದಿ

ವಿಟ್ಲ: ನಂದಿಕೂರಿನಿಂದ ಕಾಸರಗೋಡಿಗೆ ಹೋಗುವ 400 ಕೆ.ವಿ. ಹೈ ಟೆನ್ಶನ್ ಮಾರ್ಗವನ್ನು ಪುಣಚ ಗ್ರಾಮದ ಬೈರಿಕಟ್ಟೆಯಿಂದ ಕಾಮಗಾರಿ ಆರಂಭ ಮಾಡಲು ಯತ್ನಿಸಿದಾಗ ಪರಿಸರದ ರೈತರು ಪ್ರತಿಭಟಿಸಿದ ಘಟನೆ ಮಂಗಳವಾರ ನಡೆಯಿತು. ತಕ್ಷಣ ಸ್ಥಳಕ್ಕಾಗಮಿಸಿದ ಮಾಜಿ ಶಾಸಕ ಸಂಜೀವ ಮಠಂದೂರು ಅವರು, ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ತಕ್ಷಣ ಕಾಮಗಾರಿ ನಿಲ್ಲಿಸುವಂತೆ ಸೂಚಿಸಿದರು. ಮಾತ್ರವಲ್ಲ, ರೈತರ ಸಭೆ ಕರೆದು ಮಾತುಕತೆ ನಡೆಸುವಂತೆ ತಿಳಿಸಿದರು. ಸ್ಪಂದಿಸಿದ ಜಿಲ್ಲಾಧಿಕಾರಿ, ಕಾಮಗಾರಿಯನ್ನು ತಕ್ಷಣ ನಿಲ್ಲಿಸುವಂತೆ ತಹಸೀಲ್ದಾರ್ ಸೂಚಿಸಿದರು. ಪುತ್ತೂರು ಮಂಡಲ ಬಿಜೆಪಿ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್,ವಿಟ್ಲ

400 ಕೆ.ವಿ. ಹೈಟೆನ್ಷನ್ ಕಾಮಗಾರಿ ಆರಂಭ ಯತ್ನ: ಪ್ರತಿಭಟನೆ | ಸ್ಥಳಕ್ಕಾಗಮಿಸಿದ ಮಾಜಿ ಶಾಸಕ ಸಂಜೀವ ಮಠಂದೂರು | ಮುಂದೇನಾಯ್ತು… ಇಲ್ಲಿದೆ ವರದಿ Read More »

error: Content is protected !!
Scroll to Top