ಆರೇಲ್ತಡಿ ದೈವಸ್ಥಾನಕ್ಕೆ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಭೇಟಿ | ಜೀವನದಲ್ಲಿ ಎಲ್ಲಾ ಏಳು ಬೀಳುಗಳು ಕೂಡ ದೇವರ ಇಚ್ಛೆಯಂತೆ ನಡೆಯುತ್ತದೆ : ಜನಾರ್ದನ ರೆಡ್ಡಿ
ಸವಣೂರು : ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು, ದ.ಕ. ಜಿಲ್ಲೆಯ ಕಡಬ ತಾಲೂಕಿನ ಸವಣೂರಿನ ಆರೇಲ್ತಡಿ ದೈವಸ್ಥಾನಕ್ಕೆ ಬುಧವಾರ ಭೇಟಿ ನೀಡಿದರು. ಆರೇಲ್ತಡಿ ಇರ್ವೆರ್ ಉಳ್ಳಾಕ್ಲು, ಕೆಡೆಂಜೋಡಿತ್ತಾಯಿ ಹಾಗೂ ಪರಿವಾರ ದೈವಸ್ಥಾನಕ್ಕೆ ಕಳೆದ ಮೇ 13ರಂದು ದೈವಸ್ಥಾನದ ಬ್ರಹಕಲಶೋತ್ಸವಕ್ಕೆ ಆಗಮಿಸಬೇಕಿದ್ದ ರೆಡ್ಡಿ ಅಂದು ಆಂಧ್ರಪ್ರದೇಶದ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಲುಕಿ ಆಗಮಿಸಲು ಸಾಧ್ಯವಾಗಿರಲಿಲ್ಲ. ಮೇ 13 ರಂದು ದೈವಸ್ಥಾನದ ಬ್ರಹ್ಮಕಲಶೋತ್ಸವ ಸಮಾರಂಭದಲ್ಲಿ ದೈವದ ಬಳಿ ಜನಾರ್ದನ ರೆಡ್ಡಿ ಆಪ್ತರು ಜೈಲಿನಿಂದ ಬಿಡುಗಡೆಗೆ ಮೊರೆ […]










