ಪುತ್ತೂರು

ಪ್ರಗತಿ ಬಂಧು ಸ್ವಸಹಾಯ ಸಂಘದ ಸದಸ್ಯರಿಂದ ಕೃಷಿ ಅಧ್ಯಯನ ಪ್ರವಾಸ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪ್ರಗತಿಬಂಧು ಸ್ವಸಹಾಯ ಸಂಘದ ಸದಸ್ಯರಿಗೆ ಕೃಷಿ ಅಧ್ಯಯನ ಪ್ರವಾಸ ಹಮ್ಮಿಕೊಳ್ಳಲಾಗಿತ್ತು. ಪ್ರವಾಸದಲ್ಲಿ ಸ್ವಸಹಾಯ ಸಂಘದ ಸದಸ್ಯರು ನಡೆಸುತ್ತಿರುವ ಸ್ವ-ಉದ್ಯೋಗ ಘಟಕಗಳಿಗೆ ಭೇಟಿ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಲಾಯಿತು. ಮಲ್ಲಿಗೆ ಕೃಷಿ, ಹಾಳೆ ತಟ್ಟೆ ಘಟಕ, ಹೈನುಗಾರಿಕೆ ಮುಂತಾದ ಸ್ಥಳಗಳಿಗೆ ಭೇಟಿ ನೀಡಿ ಸದಸ್ಯರಿಗೆ ಈ ಕುರಿತು ಮಾಹಿತಿ ನೀಡಲಾಯಿತು. ಪ್ರವಾಸದಲ್ಲಿ ಕೃಷಿ ಯೋಜನಾಧಿಕಾರಿಗಳು, ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.

ಪ್ರಗತಿ ಬಂಧು ಸ್ವಸಹಾಯ ಸಂಘದ ಸದಸ್ಯರಿಂದ ಕೃಷಿ ಅಧ್ಯಯನ ಪ್ರವಾಸ Read More »

ಅಂಬಿಕಾ ವಿದ್ಯಾಲಯದ ನಿಯತಿ ಭಟ್ ಗೆ ಬಹುಮಾನ

ಪುತ್ತೂರು: ಬಪ್ಪಳಿಗೆಯಲ್ಲಿರುವ ಅಂಬಿಕಾ ಸಿಬಿಎಸ್ಇ ವಿದ್ಯಾಲಯದ ವಿದ್ಯಾರ್ಥಿನಿ ನಿಯತಿ ಭಟ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪುತ್ತೂರು ಘಟಕದ ವತಿಯಿಂದ ಆಯೋಜಿಸಲಾದ ತಾಲೂಕು ದಸರಾ ಕ್ರೀಡಾಕೂಟದಲ್ಲಿ ಆರ್ಟಿಫಿಶಿಯಲ್ ಹಾಗೂ ಟ್ರೆಡಿಷನಲ್ ಯೋಗ ಸ್ಪರ್ಧೆಗಳಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಮುಕ್ರಂಪಾಡಿಯ ಗೋಕುಲ ಲೇಔಟಿನ ಪ್ರವೀಣ ಡಿ ಹಾಗೂ ಚಿತ್ಕಲಗೌರಿ ಕೆ ಅವರ ಪುತ್ರಿಯಾಗಿರುವ ನಿಯತಿ, 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಸೆ.23ರಂದು ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ ಸ್ಪರ್ಧೆ ಆಯೋಜನೆಗೊಂಡಿತ್ತು.

ಅಂಬಿಕಾ ವಿದ್ಯಾಲಯದ ನಿಯತಿ ಭಟ್ ಗೆ ಬಹುಮಾನ Read More »

ಮಹಿಳಾ ಕ್ರಿಕೆಟ್ ಏಕದಿನ ಪಂದ್ಯಾಟ: ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ ಪುತ್ತೂರು ಮೂಲದ ಶ್ರೀನಿತಿ ಪಿ.ರೈ

ಪುತ್ತೂರು: ಅಸ್ಸಾಂ ರಾಜ್ಯದ ಗುವಾಹಟಿಯಲ್ಲಿ ನಡೆಯಲಿರುವ ಬಿಸಿಸಿಐ 19 ವರ್ಷದೊಳಗಿನ ಮಹಿಳಾ ಏಕದಿನ ಟ್ರೋಫಿ 2023-24 ಕ್ರಿಕೆಟ್ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಪುತ್ತೂರು ಮೂಲದ ಶ್ರೀನಿತಿ ಪಿ. ರೈ ಆಯ್ಕೆಯಾಗಿದ್ದಾರೆ. ಅ.8 ರಿಂದ 16 ರ ತನಕ ಪಂದ್ಯಾಟ ನಡೆಯಲಿದೆ. ಶ್ರೀನಿತಿ ಪಿ. ರೈ ಬೆಂಗಳೂರಿನ ಅಕ್ಷಯ ನಗರದಲ್ಲಿರುವ ಸೈಂಟ್ ಆನ್ಸ್ ಐಸಿಎಸ್ ಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಪುತ್ತೂರಿನ ಸಾಲ್ಮರ ಕೆರೆಮೂಲೆ ನಿವಾಸಿ, ಪ್ರಸ್ತುತ ಕೊಡಗು ಜಿಲ್ಲೆಯ ಮಡಿಕೇರಿ

ಮಹಿಳಾ ಕ್ರಿಕೆಟ್ ಏಕದಿನ ಪಂದ್ಯಾಟ: ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ ಪುತ್ತೂರು ಮೂಲದ ಶ್ರೀನಿತಿ ಪಿ.ರೈ Read More »

ನಾಳೆ (ಸೆ.28): ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆ ಶುಭಾರಂಭ

ಪುತ್ತೂರು: ಭಾರತ ಸರಕಾರದ ಮಾನ್ಯತೆ ಪಡೆದಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಖಾಸಗಿ ಉದ್ಯೋಗಗಳ ವೃತ್ತಿಪರ ಕೌಶಲ್ಯ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆ ಸೆ. 28ರಂದು ಸುಳ್ಯ ರಥಬೀದಿಯಲ್ಲಿನ ಟಿ.ಎ.ಪಿ.ಸಿ.ಎಂ.ಎಸ್. ಸಂಕೀರ್ಣದಲ್ಲಿ ಶುಭಾರಂಭಗೊಳ್ಳಲಿದೆ. ವಿದ್ಯಾಮಾತಾ ಇದರ ಮಾತೃ ಸಂಸ್ಥೆ ವಿದ್ಯಾಮಾತಾ ಫೌಂಡೇಶನ್ ಈಗಾಗಲೇ 3 ರಾಜ್ಯಮಟ್ಟದ ಉದ್ಯೋಗ ಮೇಳ, ಸುಮಾರು 500ಕ್ಕೂ ಹೆಚ್ಚು ನೇರ ಉದ್ಯೋಗ ಸಂದರ್ಶನಗಳ ಮೂಲಕ 5000ಕ್ಕೂ ಮಿಕ್ಕಿದ ವಿದ್ಯಾರ್ಥಿಗಳಿಗೆ ವಿವಿಧ ಕಂಪನಿಗಳಲ್ಲಿ ಉದ್ಯೋಗ ಕೊಡಿಸುವಲ್ಲಿ ಸಫಲತೆ ಕಂಡಿದೆ. ಕರಾವಳಿಯಲ್ಲಿ ಸ್ಪರ್ಧಾತ್ಮಕ

ನಾಳೆ (ಸೆ.28): ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆ ಶುಭಾರಂಭ Read More »

ತಾಲೂಕಿನಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ | ತಾ.ಪಂ. ಸಾಮಾನ್ಯ ಸಭೆಯಲ್ಲಿ ಮಾಹಿತಿ ನೀಡಿದ ಆರೋಗ್ಯಾಧಿಕಾರಿ | ಫಾಗಿಂಗ್ ಯಂತ್ರ ಖರೀದಿಸಲು ಗ್ರಾ.ಪಂ.ಗಳಿಗೆ ಸೂಚನೆ

ಪುತ್ತೂರು: ತಾ.ಪಂ. ಸಾಮಾನ್ಯ ಸಭೆ ಬುಧವಾರ ತಾ.ಪಂ. ಸಾಮರ್ಥ್ಯ ಸೌಧದಲ್ಲಿ ನಡೆಯಿತು. ಆಡಳಿತಾಧಿಕಾರಿ ಸಂಧ್ಯಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆರೋಗ್ಯಾಧಿಕಾರಿ ಡಾ.ದೀಪಕ್ ರೈ, ತಾಲೂಕಿನಲ್ಲಿ ಡೆಂಗ್ಯೂ ಜ್ವರ ಸಂಖ್ಯೆ ಹೆಚ್ಚಾಗಿರುವ ಕುರಿತು ಮಾಹಿತಿ ನೀಡಿ, ಪ್ರತಿ ಗ್ರಾ.ಪಂ.ಗಳಲ್ಲಿ ಫಾಗಿಂಗ್ ಯಂತ್ರ ಇರಬೇಕು ಅನ್ನುವ ಬಗ್ಗೆ ಹಿಂದೆ ತಿಳಿಸಲಾಗಿತ್ತಾದರೂ ಕೆಲ ಪಂಚಾಯಿತಿಗಳಲ್ಲಿ ಇಲ್ಲ. ಇದರಿಂದ ಕಾರ್ಯಾಚರಣೆಗೆ ಸಮಸ್ಯೆ ಉಂಟಾಗಿದೆ ಎಂದರು. ಇಓ ನವೀನ್ ಭಂಡಾರಿ ಮಾತನಾಡಿ, ಫಾಗಿಂಗ್ ಯಂತ್ರ ಖರೀದಿಸುವಂತೆ ಗ್ರಾ.ಪಂ.ಗಳಿಗೆ ಸೂಚನೆ ನೀಡಲಾಗಿತ್ತು. ಕೆಲ ಪಂಚಾಯಿತಿಯವರು

ತಾಲೂಕಿನಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ | ತಾ.ಪಂ. ಸಾಮಾನ್ಯ ಸಭೆಯಲ್ಲಿ ಮಾಹಿತಿ ನೀಡಿದ ಆರೋಗ್ಯಾಧಿಕಾರಿ | ಫಾಗಿಂಗ್ ಯಂತ್ರ ಖರೀದಿಸಲು ಗ್ರಾ.ಪಂ.ಗಳಿಗೆ ಸೂಚನೆ Read More »

ದಸರಾ ಕ್ರೀಡಾಕೂಟ: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಮಹಿಳೆಯರ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಹಾಗೂ ಬಾಲಕರ ತಂಡ ದ್ವಿತೀಯ ಸ್ಥಾನ  ಪಡೆದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ. ಬಾಲಕಿಯರ 4*100 ಮೀಟರ್ ರಿಲೇಯಲ್ಲಿ ಗುಣಶ್ರೀ, ಪ್ರತೀಕ್ಷಾ, ತ್ರಿಶಾ, ಕೀರ್ತಿ ಅವರ ತಂಡ ದ್ವಿತೀಯ ಸ್ಥಾನ ಗಳಿಸಿದೆ. ಕೀರ್ತಿ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಶಾಲಾ ಆಡಳಿತ ಮಂಡಳಿ, ಮುಖ್ಯಶಿಕ್ಷಕರು, ಸಿಬ್ಬಂದಿ ವರ್ಗ ಅಭಿನಂದಿಸಿದೆ.

ದಸರಾ ಕ್ರೀಡಾಕೂಟ: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ನರಿಮೊಗರು ಶಾಲೆಯಲ್ಲಿ ಸ್ವಚ್ಛತಾ ಹಿ ಸೇವಾ-ಸ್ವಚ್ಛತೆಯೇ ಸೇವೆ ಅಭಿಯಾನದಲ್ಲಿ ಪ್ರತಿಜ್ಞಾ ವಿಧಿ

ಮುಕ್ವೆ: ನರಿಮೊಗರು ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡ ಸ್ವಚ್ಛತಾ ಹಿ ಸೇವಾ, ಸ್ವಚ್ಛತೆಯೇ ಸೇವೆ ಅಭಿಯಾನ -2023ರಲ್ಲಿ ಪ್ರತಿಜ್ಞಾ ವಿಧಿ ಕಾರ್ಯಕ್ರಮ ನೆರವೇರಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹರಿಣಿ ಪಂಜಳ, ಉಪಾಧ್ಯಕ್ಷ ಉಮೇಶ್ ಇಂದಿರಾನಗರ, ಎಸ್ ಡಿ ಎಂ ಸಿ ಅಧ್ಯಕ್ಷ ಕೃಷ್ಣರಾಜ ಜೈನ್, ಸಲೀಂ ಮಾಯಂಗಳ, ಸೌಮ್ಯ ರಮೇಶ್, ಗ್ರಾಮ ಪಂಚಾಯಿತಿ ನಿಕಟ ಪೂರ್ವ ಉಪಾಧ್ಯಕ್ಷ ಸುಧಾಕರ ಕುಲಾಲ್, ಸದಸ್ಯರಾದ ಪುಷ್ಪಾವತಿ, ಗಣೇಶ್, ಜಯಲಕ್ಷ್ಮಿ, ಆಶಾ ಕಾರ್ಯಕರ್ತೆ ವಾಣಿ, ಸ್ವಚ್ಛತಾ ಸಿಬ್ಬಂದಿಗಳಾದ ಸುಜಾತಾ, ನಮಿತಾ, ಶಾಲಾ ಶಿಕ್ಷಕರಾದ

ನರಿಮೊಗರು ಶಾಲೆಯಲ್ಲಿ ಸ್ವಚ್ಛತಾ ಹಿ ಸೇವಾ-ಸ್ವಚ್ಛತೆಯೇ ಸೇವೆ ಅಭಿಯಾನದಲ್ಲಿ ಪ್ರತಿಜ್ಞಾ ವಿಧಿ Read More »

ಅಚ್ಚೇದಿನ್ ಬರುವುದಾಗಿ ಹೇಳಿದ್ದ ಬಿಜೆಪಿ, ಜನರ ಖಾತೆಗೆ ನಯಾ ಪೈಸೆ ಹಣ ಹಾಕಿಲ್ಲವೆಂದ ಅಶೋಕ್ ರೈ | ಕೊಳ್ತಿಗೆ ವಲಯ ಕಾಂಗ್ರೆಸ್‌ಕಾರ್ಯಕರ್ತರ ಸಭೆಯಲ್ಲಿ ಶಾಸಕರಿಗೆ ಸನ್ಮಾನ | ಕಾವು ಹೇಮನಾಥ ಶೆಟ್ಟಿ ಅವರಿಗೆ ಅರಣ್ಯ ನಿಗಮ ನೀಡಲು ಆಗ್ರಹ

ಪುತ್ತೂರು: ನಾವು ಅಧಿಕಾರಕ್ಕೆ ಬಂದರೆ ದೇಶದಲ್ಲಿ ಅಚ್ಚೇದಿನ್ ಕೊಡುತ್ತೇವೆ, ಜನರಿಗೆ ನೆಮ್ಮದಿಯ ಜೀವನ ಕೊಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಬಿಜೆಪಿ ಜನರ ಖಾತೆಗೆ ನಯಾ ಪೈಸೆ ನೀಡಿಲ್ಲ. ನೆಮ್ಮದಿಯ ಜೀವನವನ್ನೂ ನೀಡಿಲ್ಲ ಎಂದು ಶಾಸಕ ಅಶೋಕ್ ರೈ ಆರೋಪಿಸಿದರು. ಕೊಳ್ತಿಗೆ ವಲಯ ಕಾಂಗ್ರೆಸ್ ವತಿಯಿಂದ ಕೊಳ್ತಿಗೆ ಅಂಬೇಡ್ಕರ್ ಭವನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನತೆಗೆ ಕೊಟ್ಟಿದ್ದ ಗ್ಯಾರಂಟಿಯನ್ನು ಕಾಂಗ್ರೆಸ್ ಈಡೇರಿಸಿದೆ. ಜನರ ಖಾತೆಗೆ ಹಣವನ್ನು ನೀಡಿದ್ದೇವೆ, ಅಕ್ಕಿಯನ್ನು ನೀಡಿದ್ದೇವೆ,

ಅಚ್ಚೇದಿನ್ ಬರುವುದಾಗಿ ಹೇಳಿದ್ದ ಬಿಜೆಪಿ, ಜನರ ಖಾತೆಗೆ ನಯಾ ಪೈಸೆ ಹಣ ಹಾಕಿಲ್ಲವೆಂದ ಅಶೋಕ್ ರೈ | ಕೊಳ್ತಿಗೆ ವಲಯ ಕಾಂಗ್ರೆಸ್‌ಕಾರ್ಯಕರ್ತರ ಸಭೆಯಲ್ಲಿ ಶಾಸಕರಿಗೆ ಸನ್ಮಾನ | ಕಾವು ಹೇಮನಾಥ ಶೆಟ್ಟಿ ಅವರಿಗೆ ಅರಣ್ಯ ನಿಗಮ ನೀಡಲು ಆಗ್ರಹ Read More »

ಪಡುವನ್ನೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೊಸ ಸಂಘ ಉದ್ಘಾಟನೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅರಿಯಡ್ಕ ವಲಯದ ಪಡುವನ್ನೂರು ಕಾರ್ಯಕ್ಷೇತ್ರದಲ್ಲಿ ಹೊಸ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಯೋಜನೆಯ ದ.ಕ. ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, 1982ರಲ್ಲಿ ಯೋಜನೆಯು ಆರಂಭಗೊಂಡಿದ್ದು, ಆ ದಿನಗಳಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 5-6 ಸಂಘ ಮಾತ್ರ ಕಾರ್ಯಾಚರಿಸುತ್ತಿತ್ತು. ಪ್ರಸ್ತುತ ರಾಜ್ಯಾದ್ಯಂತ ಐದೂವರೆ ಲಕ್ಷ ಸಂಘ ಹುಟ್ಟಿಕೊಂಡು ಸುಮಾರು 50 ಲಕ್ಷ ಜನ ಸಂಘದಲ್ಲಿ ಸಕ್ರಿಯರಾಗಿದ್ದಾರೆ. ಈ ಮೂಲಕ ಪೂಜ್ಯರು ಜನರ ಬದುಕನ್ನು ಹಸನಾಗುವಂತೆ ಮಾಡಿದ್ದಾರೆ ಎಂದ

ಪಡುವನ್ನೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೊಸ ಸಂಘ ಉದ್ಘಾಟನೆ Read More »

ಶತಾಯುಷಿ ಪೊಡಿ ನಿಧನ

ಕುಂಬ್ರ: ಒಳಮೊಗ್ರು ಗ್ರಾಮದ ಕುಂಬ್ರ ನಿವಾಸಿ ಶತಾಯುಷಿ ಪೊಡಿ (105) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರು ಮೂವರು ಪುತ್ರರು, ಮೂವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಮೃತರ ಮನೆಗೆ ಅನೇಕ ಗಣ್ಯರು ಆಗಮಿಸಿ ಸಂತಾಪ ಸೂಚಿಸಿದ್ದಾರೆ.

ಶತಾಯುಷಿ ಪೊಡಿ ನಿಧನ Read More »

error: Content is protected !!
Scroll to Top