ಪುತ್ತೂರು

ಕಿಲ್ಲೇ ಮೈದಾನದ ಗಣಪನಿಗೆ ಮೂಡಪ್ಪ ಸೇವೆ | ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತಾದಿಗಳು

ಪುತ್ತೂರು: ಶ್ರೀ ದೇವತಾ ಸಮಿತಿ ವತಿಯಿಂದ ಕಿಲ್ಲೇ ಮೈದಾನದಲ್ಲಿ ಆರು ದಿನಗಳಿಂದ ನಡೆಯುತ್ತಿರುವ ಶ್ರೀ ಗಣೇಶೋತ್ಸವದ ಕಾರ್ಯಕ್ರಮದ ಅಂಗವಾಗಿ ಭಾನುವಾರ ಮಧ್ಯಾಹ್ನ ಮೂಡಪ್ಪ ಸೇವೆ ನಡೆಯಿತು. ಬೆಳಿಗ್ಗೆ ಭಜನಾ ಕಾರ್ಯಕ್ರಮ ನಡೆದು ಮಧ್ಯಾಹ್ನ 12ಕ್ಕೆ ಮೂಡಪ್ಪ ಸೇವೆ ನಡೆಯಿತು. ಬಳಿಕ ಸುಗಮ ಸಂಗೀತ, ಯಕ್ಷಗಾನ ತಾಳಮದ್ದಳೆ ನಡೆಯಿತು. ಮಹಾಪೂಜೆ ಬಳಿಕ ಸಹಸ್ರಾರು ಮಂದಿಗೆ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ಶ್ರೀ ದೇವತಾ ಸಮಿತಿ ಕಾರ್ಯದರ್ಶಿ ರಮೇಶ್, ಕೋಶಾಧಿಕಾರಿ ಸಿ.ಶ್ರೀಧರ ನಾಯಕ್, ಸದಸ್ಯರಾದ ದಿನೇಶ್ ಕುಲಾಲ್ ಪಿ.ವಿ., ಗಣೇಶ್ […]

ಕಿಲ್ಲೇ ಮೈದಾನದ ಗಣಪನಿಗೆ ಮೂಡಪ್ಪ ಸೇವೆ | ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತಾದಿಗಳು Read More »

ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ವಿದ್ಯಾರ್ಥಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬನ್ನೂರಿನ ಕರ್ಮಲದಲ್ಲಿ ನಡೆದಿದೆ. ಬನ್ನೂರು ಕರ್ಮಲ ಸನ್ನಿಧಿ ಲೇ ಔಟ್ ನಿವಾಸಿ, ವಿವೇಕಾನಂದ ಕಾಲೇಜಿನ ಅಂತಿಮ ಬಿಸಿಎ ವಿದ್ಯಾರ್ಥಿನಿ ಕೀರ್ತಿಕಾ (19) ಈ ಕೃತ್ಯ ಎಸಗಿದವರು. ಕಿಶೋರ್ ಎಂಬವರ ಪುತ್ರಿಯಾಗಿರುವ ಈಕೆ ಮನೆಯಲ್ಲಿ ಸೀಲಿಂಗ್ ಫ್ಯಾನ್‍ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣಗಳು ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ. ಸ್ಥಳಕ್ಕೆ ನಗರ ಪೊಲೀಸರು ತೆರಳಿ ಮಾಹಿತಿ ಕಲೆ ಹಾಕಿದ್ದಾರೆ.

ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ Read More »

ನಿರ್ಜನ ಪ್ರದೇಶದಲ್ಲಿ ಮಾದಕ ವಸ್ತು ಸೇವನೆ | ಆರೋಪಿಗಳು ಪೊಲೀಸ್ ವಶಕ್ಕೆ

ಪುತ್ತೂರು: ನಿರ್ಜನ ಪ್ರದೇಶದಲ್ಲಿ ಯುವಕರ ತಂಡವೊಂದು ಗಾಂಜಾ, ಮಾದಕ ವಸ್ತುಗಳನ್ನು ಸೇವಿಸುತ್ತಿದ್ದ ಕುರಿತು ಮಾಹಿತಿ ತಿಳಿದ ಗ್ರಾಮಸ್ಥರು ಯುವಕರನ್ನು ಸೆರೆಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಇಡ್ಕಿದು ಗ್ರಾಮದ ಮುಂಡ್ರಬೈಲಿನಲ್ಲಿ ನಡೆದಿದೆ. ಮುಂಡ್ರಬೈಲಿನ ನಿರ್ಜನ ಪ್ರದೇಶದಲ್ಲಿ ನಶೆಯಲ್ಲಿದ್ದ ಕಂಬಳಬೆಟ್ಟು ನೂಜಿ ನಿವಾಸಿಗಳಾದ ಸಾಹಿಲ್, ಶಝ್, ಜಾಯಿ ಎಂಬವರು ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಯರು,  ಹೆಣ್ಣು ಮಕ್ಕಳಿಗೆ ಕಿರುಕುಳ ನೀಡುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತರಿಂದ ಬೈಕ್, ಸ್ಕೂಟರ್ ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ನಿರ್ಜನ ಪ್ರದೇಶದಲ್ಲಿ ಮಾದಕ ವಸ್ತು ಸೇವನೆ | ಆರೋಪಿಗಳು ಪೊಲೀಸ್ ವಶಕ್ಕೆ Read More »

ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾಟ: ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಬೆಳ್ತಂಗಡಿಯ ವಾಣಿ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದು ಮಂಡ್ಯದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಥ್ರೋಬಾಲ್ ಪಂದ್ಯಾಟಕ್ಕೆ  ಆಯ್ಕೆಯಾಗಿದೆ. ಬಾಲಕರ ವಿಭಾಗವನ್ನು ಶರತ್ ಶೆಟ್ಟಿ ಮೋಕ್ಷಿತ್ ಪಿ ಶೆಟ್ಟಿ, ಕೌಶಿಕ್, ಪ್ರಜ್ವಲ್, ಗಗನ್, ಪ್ರಜ್ವಲ್,  ಶಮಿತ್ ಪ್ರಸಾದ್ ಪಿ, ಸುಜಿತ್, ರೋಶಿತ್ ಆರ್, ಲಕ್ಷ್ಮೀದಾಸ್ ಎನ್, ಸುಚಿತ್,

ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾಟ: ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏಕಾದಶ ಕೋಟಿ ಮಹಾಲಿಂಗೇಶ್ವರ ಜಪ | ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುತ್ತಿರುವ ಭಕ್ತಾದಿಗಳು

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞ, ಶತರುದ್ರಾಭಿಷೇಕ ಹಾಗೂ ಧಾರ್ಮಿಕ ಕಾರ್ಯಕ್ರಮ ಭಾನುವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ. ಬೆಳಿಗ್ಗೆ 9 ರಿಂದ ಆರಂಭಗೊಂಡ ಕಾರ್ಯಕ್ರಮದ ಅಂಗವಾಗಿ ಸಹಸ್ರಾರು ಭಕ್ತಾದಿಗಳು ತಮ್ಮ ಮನೆ ಮನೆಗಳಲ್ಲಿ ಓಂ. ಶ್ರೀ ಮಹಾಲಿಂಗೇಶ್ವರಾಯ ನಮಃ ಜಪ ಕೈಗೊಂಡು 108 ನಾಣ್ಯಗಳ ಸಹಿತ ಜಪಯಜ್ಞದ ಕುರಿತು ಬರೆದಿಡಲಾದ ಪ್ರತಿಯನ್ನು ಒಪ್ಪಿಸುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಶ್ರೀ ದೇವರ ಪ್ರಸಾದ, ಶ್ರೀ ಮಹಾಲಿಂಗೇಶ್ವರ ದೇವರ ಫೋಟೊಗಳನ್ನು ನೀಡಲಾಗುತ್ತಿದೆ,

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏಕಾದಶ ಕೋಟಿ ಮಹಾಲಿಂಗೇಶ್ವರ ಜಪ | ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುತ್ತಿರುವ ಭಕ್ತಾದಿಗಳು Read More »

ಹೃದಯ ಸಂಬಂಧಿ ಖಾಯಿಲೆಯಿಂದ ಬಾಲಕಿ ಜಮೀಲಾ ಸನಿಕ ಮೃತ್ಯು

ವಿಟ್ಲ : ಪುಟ್ಟ ಬಾಲಕಿಯೊಬ್ಬಳು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲಿ ಭಾನುವಾರ ಮುಂಜಾನೆ ಮೃತಪಟ್ಟಿದ್ದಾಳೆ. ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ಅವರ ಪುತ್ರಿ ಜಮೀಲಾ ಸನಿಕ (4) ಮೃತಪಟ್ಟ ಬಾಲಕಿ. ಮುರದಲ್ಲಿ ಅಲ್ ಬಿರ್ ಸ್ಕೂಲ್ ನಲ್ಲಿ ಎಲ್‍ಕೆಜಿ ಕಲಿಯುತ್ತಿದ್ದ ಈಕೆ ಅನಾರೋಗ್ಯದಿಂದ ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮುಂಜಾನೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

ಹೃದಯ ಸಂಬಂಧಿ ಖಾಯಿಲೆಯಿಂದ ಬಾಲಕಿ ಜಮೀಲಾ ಸನಿಕ ಮೃತ್ಯು Read More »

ಸುತ್ತಮುತ್ತಲಿನವರ ಹಿತದ ಕುರಿತು ಗಮನ ಹರಿಸುವುದು ಅಗತ್ಯ | ಮನೆ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಎಸಿಸಿಇ ಅಧ್ಯಕ್ಷ ಪ್ರಮೋದ್ ಕುಮಾರ್ ಕೆ.

ಪುತ್ತೂರು: ನಾವೆಲ್ಲರೂ ಸಮಾಜದ ಒಂದು ಭಾಗ. ಈ ಸಮಾಜವನ್ನುಳಿದು  ನಮಗೆ ಬೇರೆ ಅಸ್ತಿತ್ವವಿಲ್ಲ. ಆದ್ದರಿಂದ ನಮ್ಮ ಶ್ರೇಯಸ್ಸಿನ  ಸುತ್ತಮುತ್ತಲಿನವರ  ಹಿತದ ಕುರಿತು  ನಾವು ಗಮನ ಹರಿಸುವುದು ಅಗತ್ಯ ಎಂದು ಲೋಕೋಪಯೋಗಿ ಇಲಾಖೆ ಸುಬ್ರಮಣ್ಯ ವಿಭಾಗದ ಎಂಜಿನಿಯರ್ ಹಾಗೂ ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಪುತ್ತೂರು ಘಟಕದ ಅಧ್ಯಕ್ಷ ಪ್ರೊಮೋದ್ ಕುಮಾರ್.ಕೆ ಹೇಳಿದರು. ಅವರು  ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಗ್ರಾಮ ವಿಕಾಸ ಯೋಜನೆ, ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಂಘ ಹಾಗೂ ಕಾಲೇಜಿನ ಎನ್‌ಎಸ್‌ಎಸ್

ಸುತ್ತಮುತ್ತಲಿನವರ ಹಿತದ ಕುರಿತು ಗಮನ ಹರಿಸುವುದು ಅಗತ್ಯ | ಮನೆ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಎಸಿಸಿಇ ಅಧ್ಯಕ್ಷ ಪ್ರಮೋದ್ ಕುಮಾರ್ ಕೆ. Read More »

ಕಾರು ಡಿಕ್ಕಿ : ಮದ್ರಸ ವಿದ್ಯಾರ್ಥಿ ಮುಹಮ್ಮದ್ ಅದಿಲ್ ಮೃತ್ಯು

ಪುತ್ತೂರು: ಕಾರು ಅಪಘಾತದಲ್ಲಿ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕೆಯ್ಯೂರಿನಲ್ಲಿ ಶನಿವಾರ ನಡೆದಿದೆ.ಮುಹಮ್ಮದ್ ಅದಿಲ್ (5) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಎಂಬವರ ಪುತ್ರ, ನುಸ್ರತುಲ್ ಇಸ್ಲಾಂ ಮದ್ರಸದ ವಿದ್ಯಾರ್ಥಿಯಾಗಿರುವ ಮುಹಮ್ಮದ್ ಅದಿಲ್ ಗೆ ಪುತ್ತೂರು ಕಡೆಗೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಬಾಲಕನನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕಾರು ಡಿಕ್ಕಿ : ಮದ್ರಸ ವಿದ್ಯಾರ್ಥಿ ಮುಹಮ್ಮದ್ ಅದಿಲ್ ಮೃತ್ಯು Read More »

ತೆಂಗಿನ ಮರದಿಂದ ಕಾಲು ಜಾರಿ ಬಿದ್ದು ರಾಮಣ್ಣ ಪೂಜಾರಿ ಮೃತ್ಯು

ಪುತ್ತೂರು: ಇರ್ದೆ ಗ್ರಾಮದ ಪದರಂಜ ಎಂಬಲ್ಲಿ ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಪದರಂಜ ನಿವಾಸಿ ರಾಮಣ್ಣ ಪೂಜಾರಿ ಮೃತಪಟ್ಟವರು. ಶನಿವಾರ ಮನೆ ಬಳಿಯ ತೆಂಗಿನ ಮರ ಹತ್ತಿದ್ದಾರೆ. ಆಕಸ್ಮಾತ್ ಮರದಿಂದ ಜಾರಿ ಕೆಳಗೆ ಬಿದ್ದು ಮೃತಪಟ್ಟರೆನ್ನಲಾಗಿದೆ. ಈ ಸಂದರ್ಭ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ತಿಳಿದು ಬಂದಿದೆ

ತೆಂಗಿನ ಮರದಿಂದ ಕಾಲು ಜಾರಿ ಬಿದ್ದು ರಾಮಣ್ಣ ಪೂಜಾರಿ ಮೃತ್ಯು Read More »

ಪುತ್ತೂರು: ಮೂವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿ ವಿತರಣೆ

ಪುತ್ತೂರು: ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಬಿಡುಗಡೆಗೊಂಡ ಮೊತ್ತವನ್ನು ಫಲಾನುಭವಿಗಳಿಗೆ ಶಾಸಕರ ಕಚೇರಿಯಲ್ಲಿ ವಿತರಿಸಲಾಯಿತು. ಪುತ್ತೂರು ಶಾಸಕ ಅಶೋಕ್ ರೈ ಅವರ ಶಿಫಾರಸ್ಸಿನ ಮೇರೆಗೆ ಸಿಎಂ ಹಣ ಬಿಡುಗಡೆ ಮಾಡಿದ್ದಾರೆ. ಪುರುಷೋತ್ತಮ ಬನ್ನೂರು, ಕ್ರಿಶ್ಚಿಯನ್ ಡಿಸೋಜಾ ಕೆಮ್ಮಾಯಿ ಮತ್ತು ಹಸೈನಾರ್ ಪೆರುವಾಯಿ ಅವರು ಮುಖ್ಯಮಂತ್ರಿ ಪರಿಹಾರ ನಿಧಿಯ ಮೊತ್ತವನ್ನು ಪಡೆದುಕೊಂಡರು.

ಪುತ್ತೂರು: ಮೂವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿ ವಿತರಣೆ Read More »

error: Content is protected !!
Scroll to Top