ಪುತ್ತೂರು

ಕಡಿಯುವಾಗ ವ್ಯಕ್ತಿಯ ಮೇಲೆ ಬಿದ್ದ ಮರ: ಸಾವು

ಬೆಳ್ತಂಗಡಿ : ಮನೆಯ ಪಕ್ಕದಲ್ಲಿದ್ದ ಮರ ಕಡಿಯುವ ಸಂದರ್ಭ ಆಕಸ್ಮಿಕವಾಗಿ ಮರ ವ್ಯಕ್ತಿಯ ಮೇಲೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆರಿಯದಲ್ಲಿ ಸೆ. 23ರಂದು ನಡೆದಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಮಂಜಲ್ಪಳಿಕೆ ನಿವಾಸಿ ರಾಮಣ್ಣ ಗೌಡ (58) ಸಾವನ್ನಪ್ಪಿದ ವ್ಯಕ್ತಿ. ತಕ್ಷಣ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದರೂ ಪ್ರಯೋಜವಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಬೆಳ್ತಂಗಡಿ ಶವಾಗಾರಕ್ಕೆ ಸಾಗಿಸಲಾಗಿದೆ. […]

ಕಡಿಯುವಾಗ ವ್ಯಕ್ತಿಯ ಮೇಲೆ ಬಿದ್ದ ಮರ: ಸಾವು Read More »

ನಾಳೆ (ಸೆ.24): ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಜಪ, ಶತರುದ್ರಾಭಿಷೇಕ | ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞ ಹಿನ್ನೆಲೆಯಲ್ಲಿ ಕಾರ್ಯಕ್ರಮ

ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಜಪ, ಶತರುದ್ರಾಭಿಷೇಕ ಹಾಗೂ ಧಾರ್ಮಿಕ ಕಾರ್ಯಕ್ರಮ ಸೆ.24 ಭಾನುವಾರ ನಡೆಯಲಿದೆ. ಪುತ್ತೂರಿನಾದ್ಯಂತ ಮನೆ ಮನೆಯಲ್ಲಿ ಸೆ.9 ರಿಂದ ಆರಂಭಗೊಂಡ ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞ ನಡೆಯುತ್ತಿರುವ ಕುರಿತು ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ಸೆ.24): ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಜಪ, ಶತರುದ್ರಾಭಿಷೇಕ | ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞ ಹಿನ್ನೆಲೆಯಲ್ಲಿ ಕಾರ್ಯಕ್ರಮ Read More »

ಅ. 22ರಂದು ಪುತ್ತೂರಿನಲ್ಲಿ ನಡೆಯಲಿದೆ ಪುತ್ತೂರುದ ಪಿಲಿಗೊಬ್ಬು | ರಚನೆಯಾದ ಸಮಿತಿಯಲ್ಲಿ ಯಾರೆಲ್ಲಾ ಇದ್ದಾರೆ?

ಪುತ್ತೂರು : ಪುತ್ತೂರು ವಿಜಯ ಸಾಮ್ರಾಟ್ ಆಶ್ರಯದಲ್ಲಿ ಸಹಜ್ ರೈ ಬಳಜ್ಜ ನೇತೃತ್ವದಲ್ಲಿ ‘ಪುತ್ತೂರುದ ಪಿಲಿಗೊಬ್ಬು’ ಕಾರ್ಯಕ್ರಮ ಅ. 22ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ. ದ.ಕ ಜಿಲ್ಲೆಯ ಆಹ್ವಾನಿತ ಹತ್ತು ತಂಡಗಳ ಪಿಲಿಗೊಬ್ಬು ಸ್ಪರ್ಧೆ ಇದಾಗಿದ್ದು, ಈ ಕುರಿತು ಪೂರ್ವಭಾವಿಯಾಗಿ ದರ್ಬೆ ಶ್ರೀರಾಮ ಸೌಧದಲ್ಲಿ ಸಮಿತಿಯನ್ನು ರಚಿಸಲಾಯಿತು. ಸಮಿತಿ ಅಧ್ಯಕ್ಷರಾಗಿ ಶ್ರೀರಾಮ ಸೌಧದ ಮಾಲಕ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಕಾರ್ಯಾಧ್ಯಕ್ಷರಾಗಿ ಸುಜಿತ್ ರೈ

ಅ. 22ರಂದು ಪುತ್ತೂರಿನಲ್ಲಿ ನಡೆಯಲಿದೆ ಪುತ್ತೂರುದ ಪಿಲಿಗೊಬ್ಬು | ರಚನೆಯಾದ ಸಮಿತಿಯಲ್ಲಿ ಯಾರೆಲ್ಲಾ ಇದ್ದಾರೆ? Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಶ್ರೀ ಗಣೇಶೋತ್ಸವ ಜಲಸ್ತಂಭನದೊಂದಿಗೆ ಸಂಪನ್ನ| ಜನಮನ ಸೂರೆಗೊಂಡ ಆಕರ್ಷಕ ಸ್ತಬ್ಧಚಿತ್ರ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ನಾಲ್ಕು ದಿನಗಳ ಕಾಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ ಶುಕ್ರವಾರ ರಾತ್ರಿ ವೈಭವದ ಶೋಭಾಯಾತ್ರೆಯೊಂದಿಗೆ ಸಂಪನ್ನಗೊಂಡಿತು. ಶುಕ್ರವಾರ ಸಂಜೆ ಶ್ರೀ ಮಹಾಗಣಪತಿಗೆ ಮಹಾಪೂಜೆ ಬಳಿಕ ದೇವಸ್ಥಾನದ ವಠಾರದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಗುರು ತಂತ್ರಿ ಶ್ರೀ ಗಣೇಶನಿಗೆ ಮಂಗಳಾರತಿ ಬೆಳಗಿ, ತೆಂಗಿನ ಕಾಯಿ ಒಡೆದು ಶೋಭಾಯಾತ್ರೆಗೆ ಚಾಲನೆ ನೀಡಿದರು. ಬಳಿಕ ವೇದಿಕೆ ಬಳಿ ಶ್ರೀ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಶ್ರೀ ಗಣೇಶೋತ್ಸವ ಜಲಸ್ತಂಭನದೊಂದಿಗೆ ಸಂಪನ್ನ| ಜನಮನ ಸೂರೆಗೊಂಡ ಆಕರ್ಷಕ ಸ್ತಬ್ಧಚಿತ್ರ Read More »

ಪುತ್ತೂರು ತಾಲೂಕು ದಸರಾ ಕ್ರೀಡಾ ಕೂಟಕ್ಕೆ ಚಾಲನೆ | ದೇಶದಲ್ಲಿ ಕ್ರೀಡೆಗೆ ಸರಿಯಾದ ಮಾನ್ಯತೆ ಸಿಗುತ್ತಿಲ್ಲ: ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಶನಿವಾರ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ದೀಪ ಬೆಳಗಿಸಿ ಚಾಲನೆ ನೀಡಿ, ಇತರ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವವರ ಸಂಖ್ಯೆ ಕಡಿಮೆ. ಇದಕ್ಕೆ ಸರಕಾರದಿಂದ ಸರಿಯಾದ ಮಾನ್ಯತೆ ಸಿಗದೇ ಇರುವುದೇ ಕಾರಣ. ಈ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕು ಎಂದ ಅವರು, ಹಿಂದೆ ಕ್ರೀಡೆಯಲ್ಲಿ ಶಾಲಾ ಮಟ್ಟದಲ್ಲಿ ಮಾತ್ರ ಭಾಗವಹಿಸುವ ಅವಕಾಶವಿದ್ದು, ಪ್ರಸ್ತುತ ಸರಕಾರದಿಂದ ನಡೆಯುವ ಬೇರೆ ಬೇರೆ

ಪುತ್ತೂರು ತಾಲೂಕು ದಸರಾ ಕ್ರೀಡಾ ಕೂಟಕ್ಕೆ ಚಾಲನೆ | ದೇಶದಲ್ಲಿ ಕ್ರೀಡೆಗೆ ಸರಿಯಾದ ಮಾನ್ಯತೆ ಸಿಗುತ್ತಿಲ್ಲ: ಶಾಸಕ ಅಶೋಕ್ ಕುಮಾರ್ ರೈ Read More »

ಧನಾತ್ಮಕವಾಗಿ ಚಿಂತಿಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ | ಪಿನ್ಯಾಕಲ್‌ ಐಟಿ ಕ್ಲಬ್‌ನ ಕಾರ್ಯಕ್ರಮಗಳನ್ನು ಉದ್ಘಾಟಿಸಿ ವಂ.ಡಾ.ಆಂಟೋನಿ ಪ್ರಕಾಶ್

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಗಣಕವಿಜ್ಞಾನ ವಿಭಾಗವು ನಡೆಸುತ್ತಿರುವ ಪಿನ್ಯಾಕಲ್‌ ಐಟಿ ಕ್ಲಬ್‌ನ ವತಿಯಿಂದ 2023-24ನೇ ಶೈಕ್ಷಣಿಕ ವರ್ಷದಲ್ಲಿ ಆಯೋಜಿಸಲ್ಪಡುವ ಕಾರ್ಯಕ್ರಮಗಳಿಗೆ ಕಾಲೇಜಿನ ಬೆಳ್ಳಿಹಬ್ಬ ಸಭಾಭವನದಲ್ಲಿ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಚಾರ್ಯ ವಂ. ಡಾ. ಆಂಟೊನಿ ಪ್ರಕಾಶ್‌ ಮೊಂತೆರೋ ದೀಪ ಬೆಳಗಿಸಿ ಉದ್ಘಾಟಿಸಿ, ಇಂದಿನ ಡಿಜಿಟಲ್‌ ಯುಗದಲ್ಲಿ ಯುವಜನರು ಬೇಗನೆ ಭಾವೋದ್ವೇಗಕ್ಕೆ ಒಳಗಾಗುತ್ತಾರೆ. ಇದರಿಂದಾಗುವ ಅನಾಹುತಗಳನ್ನು ತಡೆಗಟ್ಟುವ ಸಲುವಾಗಿ ಮಾನಸಿಕ ಪ್ರಥಮ ಚಿಕಿತ್ಸೆ ನೀಡಲಾಗುತ್ತದೆ. ಮನಸ್ಸಿನಲ್ಲಿ ಋಣಾತ್ಮಕ ಭಾವನೆಗಳನ್ನು ಬೆಳೆಸದೆ ಧನಾತ್ಮಕವಾಗಿ ಚಿಂತಿಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಪಿನ್ಯಾಕಲ್‌

ಧನಾತ್ಮಕವಾಗಿ ಚಿಂತಿಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ | ಪಿನ್ಯಾಕಲ್‌ ಐಟಿ ಕ್ಲಬ್‌ನ ಕಾರ್ಯಕ್ರಮಗಳನ್ನು ಉದ್ಘಾಟಿಸಿ ವಂ.ಡಾ.ಆಂಟೋನಿ ಪ್ರಕಾಶ್ Read More »

ರಾಜ್ಯ ಹಿರಿಯರ ಅಥ್ಲೆಟಿಕ್ಸ್ ಟ್ರಿಪಲ್ ಜಂಪ್ ನಲ್ಲಿ ಪವಿತ್ರ ಜಿ. ಗೆ ಚಿನ್ನದ ಪದಕ | ರಾಷ್ಟ್ರೀಯ ಹಿರಿಯರ ಅಥ್ಲೆಟಿಕ್ಸ್’ಗೆ ಆಯ್ಕೆ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿನಿ ಪವಿತ್ರ ಜಿ. ರಾಜ್ಯ ಮಟ್ಟದ ಹಿರಿಯರ ಅಥ್ಲೆಟಿಕ್ ಸ್ಪರ್ಧೆ-2023ರ ಟ್ರಿಪಲ್ಜಂಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಶನ್ ಆಶ್ರಯದಲ್ಲಿ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಪ್ರವಿತ್ರ ಜಿ. ಅವರು 12.85 ಮೀಟರ್ ದೂರ ಜಿಗಿದು ಪ್ರಥಮ ಸ್ಥಾನ ಗಳಿಸಿಕೊಂಡಿದ್ದಾರೆ. ಈ ಸಾಧನೆಯೊಂದಿಗೆ ರಾಷ್ಟ್ರೀಯ ಹಿರಿಯರ ಅಥ್ಲೆಟಿಕ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸುವ ಅರ್ಹತೆಯನ್ನು

ರಾಜ್ಯ ಹಿರಿಯರ ಅಥ್ಲೆಟಿಕ್ಸ್ ಟ್ರಿಪಲ್ ಜಂಪ್ ನಲ್ಲಿ ಪವಿತ್ರ ಜಿ. ಗೆ ಚಿನ್ನದ ಪದಕ | ರಾಷ್ಟ್ರೀಯ ಹಿರಿಯರ ಅಥ್ಲೆಟಿಕ್ಸ್’ಗೆ ಆಯ್ಕೆ Read More »

ಕಾವು ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಶ್ರೀ ಗಣೇಶೋತ್ಸವ | ಶೋಭಾಯಾತ್ರೆಗೆ ಮೆರುಗು ನೀಡಿದ ನೃತ್ಯ ಭಜನೆ, ಹುಲಿ ವೇಷ, ಗೊಂಬೆ ಕುಣಿತ

ಕಾವು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಗಣೇಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಅರ್ಚಕ ವೇ. ಮೂ. ಶಿವಪ್ರಸಾದ್ ಕಡಮಣ್ಣಾ ಅವರ ಪೌರೋಹಿತ್ಯದಲ್ಲಿ ಶ್ರೀ ಗಣೇಶ ವಿಗ್ರಹ ಪ್ರತಿಷ್ಠಾಪನೆ, ಧಾರ್ಮಿಕ ಕಾರ್ಯಕ್ರಮ, ವಿಗ್ರಹ ಜಲಸ್ತಂಭನ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಯೋಗ ಶಿಕ್ಷಣ ಸಂಯೋಜಕ ಚಂದ್ರಶೇಖರ ದೇಲಂಪಾಡಿ, ಗಣೇಶೋತ್ಸವವು ಧಾರ್ಮಿಕ ಪ್ರಜ್ಞೆ ಮೂಡಿಸುವ

ಕಾವು ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಶ್ರೀ ಗಣೇಶೋತ್ಸವ | ಶೋಭಾಯಾತ್ರೆಗೆ ಮೆರುಗು ನೀಡಿದ ನೃತ್ಯ ಭಜನೆ, ಹುಲಿ ವೇಷ, ಗೊಂಬೆ ಕುಣಿತ Read More »

ಕೊಳ್ತಿಗೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ 53.28 ಲಕ್ಷ ರೂ. ನಿವ್ವಳ ಲಾಭ | ವಾರ್ಷಿಕ ಮಹಾಸಭೆಯಲ್ಲಿ ಘೋಷಿಸಿದ ಅಧ್ಯಕ್ಷ ಕೆ.ಎಸ್.ವೆಂಕಟ್ರಮಣ

ಪುತ್ತೂರು: ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆ ಸೆ. 22ರ ಶುಕ್ರವಾರ ಪೆರ್ಲಂಪಾಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಕೆ.ಎಸ್. ವೆಂಕಟ್ರಮಣ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು ವರದಿ ವರ್ಷದಲ್ಲಿ 53.28 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು, ಲಾಭಾಂಶವನ್ನು ಬೈಲಾ ರೀತಿಯಲ್ಲಿ ವಿಲೇವಾರಿ ಮಾಡಲು ಮಹಾಸಭೆಗೆ ಶಿಫಾರಸ್ಸು ಮಾಡಲಾಗಿದೆ. ಸಂಘದಲ್ಲಿ 3282 ಎ ತರಗತಿ ಸದಸ್ಯರಿದ್ದಾರೆ ಎಂದರು. ವರದಿ ವರ್ಷದ ಅಂತ್ಯಕ್ಕೆ 2.1 ಕೋಟಿ ರೂ. ಪಾಲು

ಕೊಳ್ತಿಗೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ 53.28 ಲಕ್ಷ ರೂ. ನಿವ್ವಳ ಲಾಭ | ವಾರ್ಷಿಕ ಮಹಾಸಭೆಯಲ್ಲಿ ಘೋಷಿಸಿದ ಅಧ್ಯಕ್ಷ ಕೆ.ಎಸ್.ವೆಂಕಟ್ರಮಣ Read More »

ಪುತ್ತೂರು ಅಗ್ನಿಶಾಮಕ ದಳದ ರುಕ್ಮಯ್ಯ ಗೌಡರಿಗೆ ಮುಖ್ಯಮಂತ್ರಿ ಚಿನ್ನದ ಪದಕ

ಪುತ್ತೂರು: ಪುತ್ತೂರು ಅಗ್ನಿಶಾಮಕ ದಳದ ಪ್ರಮುಖ ಅಗ್ನಿಶಾಮಕ ರುಕ್ಮಯ್ಯ ಗೌಡರಿಗೆ 2023ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಪ್ರದಾನ ಮಾಡಲಾಗಿದೆ. ಬೆಂಗಳೂರಿನ ಆರ್‍.ಎ.ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿಯಲ್ಲಿ ಶುಕ್ರವಾರ ನಡೆದ ಮುಖ್ಯಮಂತ್ರಿ ಪದಕ ಪ್ರದಾನ ಹಾಗೂ ಅಗ್ನಿಶಾಮಕ ಠಾಣಾಧಿಕಾರಿಗಳ ನಿರ್ಗಮನ ಪಥ ಸಂಚಲನ ಸಮಾರಂಭದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಪದಕ ಪ್ರದಾನ ಮಾಡಿದರು. 2018 ರಿಂದ ರುಕ್ಮಯ್ಯ ಗೌಡರು ಪುತ್ತೂರು ಅಗ್ನಿಶಾಮಕ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಕಡಬ ತಾಲೂಕಿನ ಕೊಂಬಾರು ಗ್ರಾಮದ ದಿ.ಕೊರಗಪ್ಪ ಗೌಡ

ಪುತ್ತೂರು ಅಗ್ನಿಶಾಮಕ ದಳದ ರುಕ್ಮಯ್ಯ ಗೌಡರಿಗೆ ಮುಖ್ಯಮಂತ್ರಿ ಚಿನ್ನದ ಪದಕ Read More »

error: Content is protected !!
Scroll to Top