ನರೇಂದ್ರ ಮೋದಿ ಆಯುಷ್ಯ, ಅರೋಗ್ಯ ವೃದ್ಧಿಗಾಗಿ ಪ್ರಾರ್ಥನೆ | ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಮಾಡ್ನೂರು ಶಕ್ತಿಕೇಂದ್ರದ ಬಿಜೆಪಿ ಪ್ರಮುಖರು
ಕಾವು: ಬಿಜೆಪಿ ಮಾಡ್ನೂರು ಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ 73 ನೇ ಜನ್ಮ ದಿನದ ಪ್ರಯುಕ್ತ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅವರ ಆರೋಗ್ಯ , ಆಯುಷ್ಯ ಹಾಗೂ ಮುಂದಿನ ಚುನಾವಣೆಯಲ್ಲೂ ದೇಶದ ಚುಕ್ಕಾಣಿ ಹಿಡಿಯುವ ಶಕ್ತಿ ಅವರಿಗೆ ಪಂಚಲಿಂಗೇಶ್ವರ ದೇವರು ಅನುಗ್ರಹಿಸಲಿ ಎಂದು ಪ್ರಾರ್ಥನೆ ಮಾಡಲಾಯಿತು. ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಶೇಖರ ರಾವ್ ನಿಧಿಮುಂಡ ಪ್ರಾರ್ಥನೆ ಸಲ್ಲಿಸಿದರು. ಅರ್ಚಕ ಪ್ರಕಾಶ್ ಬಳ್ಳಕ್ಕುರಾಯ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ […]










