ಪುತ್ತೂರು ಶಾಸಕ ಕಚೇರಿಗೆ ನಗರಸಭೆ ನಿಧಿಯ ದುರುಪಯೋಗ!! | ನಗರಸಭೆ ಬಿಜೆಪಿ ಸದಸ್ಯರಿಂದ ಆಕ್ಷೇಪಿಸಿ ಡಿ.ಸಿ.ಗೆ ಮನವಿ
ಪುತ್ತೂರು: ಶಾಸಕರ ನೂತನ ಕಚೇರಿಗೆ ಪುತ್ತೂರು ನಗರಸಭಾ ನಿಧಿಯ ದುರುಪಯೋಗವಾಗಿದೆ ಮತ್ತು ನಗರಸಭೆಯ ನಗರೋತ್ಥಾನದ ವಿವಿಧ ಕಾಮಗಾರಿ ವಿಳಂಬ ಸಹಿತ ನಗರಸಭೆ 2ನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಇನ್ನೂ ಆಗಿಲ್ಲ ಎಂದು ನಗರಸಭೆ ಬಿಜೆಪಿ ಸದಸ್ಯರು ನಗರಸಭೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲೈಮುಗಿಲನ್ ಅವರಿಗೆ ಪುತ್ತೂರಿನಲ್ಲಿ ದೂರು ನೀಡಿದರು. ಪುತ್ತೂರು ತಾಲೂಕು ಆಡಳಿತಕ್ಕೆ ಜಿಲ್ಲಾಧಿಕಾರಿಯವರು ಸೆ.15 ರಂದು ಆಗಮಿಸಿದ ವೇಳೆ ಸದಸ್ಯರು ಮನವಿ ಮಾಡಿದ್ದಾರೆ.ಪುತ್ತೂರು ಶಾಸಕರು ನಮ್ಮ ನಗರ ಸಭೆಯ ಕಟ್ಟಡದಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ […]










