ಪುತ್ತೂರು

ಪುತ್ತೂರು ತಾಲೂಕು ಅಕ್ರಮ ಸಕ್ರಮ ಸಮಿತಿ ರಚನೆ | ಶಾಸಕ ಅಶೋಕ್ ರೈ ಅಧ್ಯಕ್ಷತೆಯ ಸಮಿತಿಯಲ್ಲಿ ಯಾರ್ಯಾರಿದ್ದಾರೆ?

ಪುತ್ತೂರು : ಸರ್ಕಾರದ ಮುಂದಿನ ಆದೇಶ ಬರುವವರೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಸದಸ್ಯರನ್ನು ನೇಮಕ ಮಾಡಲಾಗಿದೆ.ಸಮಿತಿಯ ಅಧ್ಯಕ್ಷರಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ, ಸದಸ್ಯರಾಗಿ ಎಂ. ಮಹಮ್ಮದ್ ಬಡಗನ್ನೂರು, ರೇಖಾ ಆಳ್ವ, ಹಾಗೂ ರಾಮಣ್ಣ ಪಿಲಿಂಜ ನೇಮಕಗೊಂಡಿದ್ದಾರೆ.ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರರನ್ನು ನೇಮಕ ಮಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಹಾಗಾಗಿ ತಹಸೀಲ್ದಾರ್ ಅವರೇ ಸದಸ್ಯ ಕಾರ್ಯದರ್ಶಿ ಆಗಿರುವರು.

ಪುತ್ತೂರು ತಾಲೂಕು ಅಕ್ರಮ ಸಕ್ರಮ ಸಮಿತಿ ರಚನೆ | ಶಾಸಕ ಅಶೋಕ್ ರೈ ಅಧ್ಯಕ್ಷತೆಯ ಸಮಿತಿಯಲ್ಲಿ ಯಾರ್ಯಾರಿದ್ದಾರೆ? Read More »

ದೇವಸ್ಥಾನಗಳ ಫಾಸಲೆಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಶೀಘ್ರ ಬ್ರೇಕ್! | ಭಕ್ತರ ಭಾವನೆಗಳಿಗೆ ಗೌರವ ನೀಡಲು ರಾಜ್ಯ ಸರಕಾರ ನೀಡಿರುವ ಆದೇಶದ ವಿವರ ಇಲ್ಲಿದೆ…

ಬೆಂಗಳೂರು: ದೈವ ಭಕ್ತರ ಭಾವನೆಗಳನ್ನು ಗೌರವಿಸುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆಗೊಳಪಟ್ಟ ದೇವಸ್ಥಾನಗಳ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ಮುಜರಾಯಿ ಇಲಾಖೆಯ ಮಹತ್ವದ ನಿರ್ಣಯ ಇದಾಗಿದ್ದು, ಮನುಷ್ಯನಿಗೆ ಆಧ್ಯಾತ್ಮಿಕ ಅನುಭೂತಿ ನೀಡುವ ದೇವಾಲಯಗಳು ಸ್ವಚ್ಛತೆಯಿಂದ ಕೂಡಿರಬೇಕು ಎಂಬ ನಿರ್ಧಾರ ತಳೆದು ಈ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಶೀಘ್ರ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಬ್ರೇಕ್‍ ಬೀಳಲಿದೆ. ಮುಜರಾಯಿ ಇಲಾಖೆಯ ದೇವಾಲಯಗಳ ಸುತ್ತಮುತ್ತ 100

ದೇವಸ್ಥಾನಗಳ ಫಾಸಲೆಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಶೀಘ್ರ ಬ್ರೇಕ್! | ಭಕ್ತರ ಭಾವನೆಗಳಿಗೆ ಗೌರವ ನೀಡಲು ರಾಜ್ಯ ಸರಕಾರ ನೀಡಿರುವ ಆದೇಶದ ವಿವರ ಇಲ್ಲಿದೆ… Read More »

ಸೆ. 17ರಂದು ಪುತ್ತೂರಿನಲ್ಲಿ ವಿಶ್ವಕರ್ಮ ಪೂಜಾ ಮಹೋತ್ಸವ, ಮೆರವಣಿಗೆ | ಎಲ್ಲಿಂದ – ಎಲ್ಲಿಯವರೆಗೆ ವಿಶ್ವಕರ್ಮ ದೇವರ ಅಲಂಕೃತ ವಾಹನ ಮೆರವಣಿಗೆ ಸಾಗಲಿದೆ ಗೊತ್ತೇ?

ಪುತ್ತೂರು: ಬೊಳುವಾರು ವಿಶ್ವಕರ್ಮ ಯುವ ಸಮಾಜ ಹಾಗೂ ವಿಶ್ವ ಬ್ರಾಹ್ಮಣ ಸಂಘದ ಆಶ್ರಯದಲ್ಲಿ ನಡೆಯುವ ವಿಶ್ವಕರ್ಮ ಪೂಜಾ ಮಹೋತ್ಸವದಂದು ವಿಶ್ವಕರ್ಮ ದೇವರ ಅಲಂಕೃತ ವಾಹನ ಮೆರವಣಿಗೆ ಸೆ. 17ರಂದು ನಡೆಯಲಿದೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಬೊಳುವಾರು ವಿಶ್ವಕರ್ಮ ಸಭಾಭವನದವರೆಗೆ ಮೆರವಣಿಗೆ ನಡೆಯಲಿದ್ದು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಮೆರವಣಿಗೆಗೆ ಬೆಳಿಗ್ಗೆ 9 ಗಂಟೆಗೆ ಚಾಲನೆ ನೀಡಲಿದ್ದಾರೆ. ಮೆರವಣಿಗೆಯಲ್ಲಿ ಭಾಗವಹಿಸುವ ವಿಶ್ವಕರ್ಮ ಸಮಾಜ ಬಾಂಧವರು ಬೆಳಿಗ್ಗೆ 8 ಗಂಟೆಗೆ ಶ್ರೀ

ಸೆ. 17ರಂದು ಪುತ್ತೂರಿನಲ್ಲಿ ವಿಶ್ವಕರ್ಮ ಪೂಜಾ ಮಹೋತ್ಸವ, ಮೆರವಣಿಗೆ | ಎಲ್ಲಿಂದ – ಎಲ್ಲಿಯವರೆಗೆ ವಿಶ್ವಕರ್ಮ ದೇವರ ಅಲಂಕೃತ ವಾಹನ ಮೆರವಣಿಗೆ ಸಾಗಲಿದೆ ಗೊತ್ತೇ? Read More »

ಕರಾವಳಿ ಸೇರಿದಂತೆ ಇಡೀ ರಾಜ್ಯಕ್ಕೆ ಬರ ಘೋಷಿಸಲು ನಳಿನ್ ಒತ್ತಾಯ | ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ ರಾಜ್ಯಾಧ್ಯಕ್ಷ

ಪುತ್ತೂರು: ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರಕಾರ ಭ್ರಷ್ಟರ ಕೂಟದ ಸರಕಾರವಾಗಿದ್ದು, ಸರಕಾರದ ಭ್ರಷ್ಟಾಚಾರದ ಬಗ್ಗೆ ದೂರು ನೀಡಿದವರ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಗುರುವಾರ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಸರಕಾರದ ವಿರುದ್ಧ ಬರೆದ ಮಾಧ್ಯಮಗಳು, ಸಾಮಾಜಿಕ ಜಾಲತಾಣದ ಮೇಲೂ ದಬ್ಬಾಳಿಕೆ ನಡೆಸುತ್ತಿದೆ. ಭ್ರಷ್ಟಾಚಾರದ ಒಂದು ಭಾಗವಾಗಿ ಪರಿಶಿಷ್ಟ ಜಾತಿ, ಪಂಗಡದವರ ಜಾಗ ಕಬಳಿಸಿದ ಸಚಿವ ಸುಧಾಕರ್ ಅವರನ್ನು ರಕ್ಷಿಸುವ

ಕರಾವಳಿ ಸೇರಿದಂತೆ ಇಡೀ ರಾಜ್ಯಕ್ಕೆ ಬರ ಘೋಷಿಸಲು ನಳಿನ್ ಒತ್ತಾಯ | ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ ರಾಜ್ಯಾಧ್ಯಕ್ಷ Read More »

ಸೆ. 17: ಮಾಣಿಲ ಮುರವ ಶಾಲೆಯಲ್ಲಿ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ

ವಿಟ್ಲ: ಮಾಣಿಲ ಶ್ರೀ ವಿಷ್ಣುಮೂರ್ತಿ ಗೆಳೆಯರ ಬಳಗದ ಆಶ್ರಯದಲ್ಲಿ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ ಸೆ. 17ರಂದು ಮಾಣಿಲ ಮುರವ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಮಾಣಿಲ ಹಾಗೂ ಪೆರುವಾಯಿ ಗ್ರಾಮದ ವ್ಯಾಪ್ತಿಗೆ ಒಳಪಡುವ ಮುರವ, ತಾರೀಧಳ, ಪಕಳಕುಂಜ, ಪೆರುವಾಯಿ, ಶಿರಾಂಕಲ್ಲು ಭಾಗದ ಆಟಗಾರರಿಗೆ ಈ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ ನಡೆಯಲಿದೆ. ತಂಡವನ್ನು ಸ್ಥಳದಲ್ಲೇ ರಚಿಸಲಾಗುವುದು ಎಂದು ಗೆಳೆಯರ ಬಳಗ ಪ್ರಕಟಣೆಯಲ್ಲಿ ತಿಳಿಸಿದೆ.

ಸೆ. 17: ಮಾಣಿಲ ಮುರವ ಶಾಲೆಯಲ್ಲಿ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ Read More »

ಸೆ. 17ರಂದು ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ) ಪುತ್ತೂರು ಘಟಕದ ಉದ್ಘಾಟನೆ | ಮಾಸ್ಟರ್ ಪ್ಲಾನರಿಯ ಸ್ಟಾಪಕ ಎಸ್.ಕೆ. ಆನಂದ್ ಅವರಿಗೆ ಸನ್ಮಾನ

ಪುತ್ತೂರು: ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ) ಇದರ ಪುತ್ತೂರು ಘಟಕದ ಉದ್ಘಾಟನಾ ಸಮಾರಂಭ ಸೆ. 17ರಂದು ಪುತ್ತೂರಿನ ಪಡೀಲ್ ಟ್ರಿನಿಟಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಎಸಿಸಿಇ) ಪುತ್ತೂರು ಘಟಕದ ಚೆಯರ್ ಮ್ಯಾನ್ ಪ್ರಮೋದ್ ಕುಮಾರ್ ಕೆ.ಕೆ. ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸಿಸಿಇ ರಾಷ್ಟ್ರಮಟ್ಟದ ಸಂಸ್ಥೆಯಾಗಿದ್ದು, ಬೆಂಗಳೂರಿನಲ್ಲಿ 1985ರಲ್ಲಿ ಆರಂಭಗೊಂಡಿತು. ರಾಷ್ಟ್ರವ್ಯಾಪಿ ಸುಮಾರು 44 ಸೆಂಟರ್ ಕಾರ್ಯಾಚರಿಸುತ್ತಿದ್ದು, ಪುತ್ತೂರಿನಲ್ಲಿಯೂ ಸಂಸ್ಥೆಯನ್ನು ಸ್ಥಾಪಿಸಲಾಗುತ್ತಿದೆ. ಇದು ಪುತ್ತೂರು, ಬೆಳ್ತಂಗಡಿ,

ಸೆ. 17ರಂದು ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ) ಪುತ್ತೂರು ಘಟಕದ ಉದ್ಘಾಟನೆ | ಮಾಸ್ಟರ್ ಪ್ಲಾನರಿಯ ಸ್ಟಾಪಕ ಎಸ್.ಕೆ. ಆನಂದ್ ಅವರಿಗೆ ಸನ್ಮಾನ Read More »

ಪುತ್ತೂರು: ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂಸದ ನಳಿನ್

ಪುತ್ತೂರು: ಸಂಸದ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಬಿಜೆಪಿ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಬಿಜೆಪಿ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಪಿ.ಜಿ. ಜಗನ್ನೀವಾಸ್ ರಾವ್, ಪ್ರಮುಖರಾದ ಜೀವಂಧರ್ ಜೈನ್, ಚನಿಲ ತಿಮ್ಮಪ್ಪ ಶೆಟ್ಟಿ, ಎಸ್. ಅಪ್ಪಯ್ಯ ಮಣಿಯಾಣಿ, ಆರ್.ಸಿ. ನಾರಾಯಣ್, ಚಂದ್ರಶೇಖರ್ ರಾವ್, ಪುರುಷೋತ್ತಮ ಮುಂಗ್ಲಿಮನೆ, ನಿತೇಶ್ ಶಾಂತಿವನ ಮೊದಲಾದವರು ಉಪಸ್ಥಿತರಿದ್ದರು.

ಪುತ್ತೂರು: ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂಸದ ನಳಿನ್ Read More »

ಪುತ್ತೂರಿನ ಪ್ರಜ್ಞಾ ಆಶ್ರಮದ ವಿಶೇಷ ಚೇತನರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ರಮಾನಾಥ ರೈ

ಪುತ್ತೂರು: ಮಾಜಿ ಸಚಿವ ಬಿ. ರಮಾನಾಥ ರೈ ಅವರು ತಮ್ಮ 72ನೇ ಹುಟ್ಟು ಹಬ್ಬವನ್ನು ಪುತ್ತೂರಿನ ಬಿರುಮಲೆ ಬೆಟ್ಟದಲ್ಲಿರುವ ಪ್ರಜ್ಞಾ ಆಶ್ರಮದಲ್ಲಿ ಆಚರಿಸಿಕೊಂಡರು. ಆಶ್ರಮದಲ್ಲಿನ ವಿಶೇಷ ಚೇತನರೊಂದಿಗೆ ಸಹಭೋಜನ ನಡೆಸಿ ತನ್ನ ಹುಟ್ಟುಹಬ್ಬ ಆಚರಿಸಿದ ರಮಾನಾಥ ರೈ ಅವರು, ನನ್ನ ರಾಜಕೀಯ ಬದುಕಿನಲ್ಲಿ ಹಲವಾರು ಏಳು ಬೀಳುಗಳನ್ನು ಕಂಡಿದ್ದೇನೆ. ಅವೆಲ್ಲವನ್ನು ಸಮಾನವಾಗಿ ಸ್ವೀಕರಿಸುತ್ತಾ ಬಂದಿದ್ದೇನೆ. ಇಲ್ಲಿನ ಜನರು ನನಗೆ ನೀಡಿರುವ ಪ್ರೀತಿಗೆ ಬೆಲೆ ಕಟ್ಟಲಾಗದು ಎಂದರು. ಸಾರ್ವಜನಿಕ ಬದುಕಿನಲ್ಲಿ ಪ್ರೀತಿ ವಿಶ್ವಾಸ ಹಂಚಿಕೊಳ್ಳುವುದು ಸಹಜ. ಪ್ರೀತಿಯ ಸಂಬಂಧಗಳು

ಪುತ್ತೂರಿನ ಪ್ರಜ್ಞಾ ಆಶ್ರಮದ ವಿಶೇಷ ಚೇತನರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ರಮಾನಾಥ ರೈ Read More »

ವಿವೇಕಾನಂದ ಪದವಿಪೂರ್ವ ಕಾಲೇಜು ಉಪಪ್ರಾಂಶುಪಾಲರಾಗಿ ದೇವಿಚರಣ್ ರೈ ಅಧಿಕಾರ ಸ್ವೀಕಾರ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತಕ್ಕೊಳಪಟ್ಟ ವಿವೇಕಾನಂದ ಪದವಿಪೂರ್ವ ಕಾಲೇಜಿನ ನೂತನ ಉಪಪ್ರಾಂಶುಪಾಲರಾಗಿ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ದೇವಿಚರಣ್ ರೈ ಅಧಿಕಾರ ಸ್ವೀಕರಿಸಿದರು. ಉಪಪ್ರಾಂಶುಪಾಲ ಹುದ್ದೆಯ ಅಧಿಕಾರ ನೀಡಿ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್, ವಿವೇಕಾನಂದ ಪದವಿಪೂರ್ವ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನದ ದೇಗುಲವಾಗಿದೆ. ಶೈಕ್ಷಣಿಕ, ಕ್ರೀಡಾ ಕ್ಷೇತ್ರದಲ್ಲಿ ಮಹತ್ತರ ಸಾಧನೆಗಳನ್ನು ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿಗಳು ತೋರಿಸಿದ ಪರಿಣಾಮವಾಗಿ ಈ ವಿದ್ಯಾಸಂಸ್ಥೆಯು ರಾಜ್ಯಮಟ್ಟದಲ್ಲಿ ಹೆಸರುವಾಸಿಯಾಗಿದೆ. ಪ್ರಾಂಶುಪಾಲರು ಮತ್ತು ನೂತನ ಉಪಪ್ರಾಂಶುಪಾಲರ

ವಿವೇಕಾನಂದ ಪದವಿಪೂರ್ವ ಕಾಲೇಜು ಉಪಪ್ರಾಂಶುಪಾಲರಾಗಿ ದೇವಿಚರಣ್ ರೈ ಅಧಿಕಾರ ಸ್ವೀಕಾರ Read More »

ಕೆದಂಬಾಡಿಯಲ್ಲಿ ಬೈಕ್’ಗಳೆರಡು ಮುಖಾಮುಖಿ ಢಿಕ್ಕಿ | ಬೈಕ್ ಸಹಸವಾರನಿಗೆ ಗಾಯ

ಪುತ್ತೂರು: ಬೈಕ್’ಗಳೆರಡು ಮುಖಾಮುಖಿ ಢಿಕ್ಕಿಯಾಗಿ ಸಹಸವಾರ ಗಾಯಗೊಂಡ ಘಟನೆ ಕೆದಂಬಾಡಿಯಲ್ಲಿ ನಡೆದಿದೆ. ಬೈಕ್ ಸಹಸವಾರ ರಮೇಶ್ ಗಾಯಾಳು. ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ್ದೆ ಘಟನೆಗೆ ಕಾರಣವಾಗಿದೆ. ಕೆದಂಬಾಡಿ ಗ್ರಾಮದ ಸಾರೆಪುಣಿ ಎಂಬಲ್ಲಿ ಬಾಬು ಎಂಬವರು ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಬೈಕ್’ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಸಹಸವಾರ ರಮೇಶ್ ಅವರು ರಸ್ತೆಗೆ ಎಸೆಯಲ್ಪಟ್ಟು, ಗಾಯಗೊಂಡಿದ್ದಾರೆ. ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆದಂಬಾಡಿಯಲ್ಲಿ ಬೈಕ್’ಗಳೆರಡು ಮುಖಾಮುಖಿ ಢಿಕ್ಕಿ | ಬೈಕ್ ಸಹಸವಾರನಿಗೆ ಗಾಯ Read More »

error: Content is protected !!
Scroll to Top