ಪುತ್ತೂರು

ಸೆ.3 ರಂದು ಬೆಳ್ತಂಗಡಿಯಲ್ಲಿ ನಡೆಯುವ ಸೌಜನ್ಯ ಕೊಲೆ ಪ್ರಕರಣ ಹೋರಾಟಕ್ಕೆ ಸಕಲ ಸಿದ್ಧತೆ | ಶ್ರೀ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಭಾಗಿ

ಬೆಳ್ತಂಗಡಿ : ಸೌಜನ್ಯ ಅತ್ಯಾಚಾರ ಹತ್ಯಾ ಪ್ರಕರಣದ ಹೋರಾಟಕ್ಕೆ ಸಂಬಂಧಿಸಿದಂತೆ ಸೆ.3 ರಂದು ಭಾನುವಾರ ಬೆಳ್ತಂಗಡಿಯಲ್ಲಿ ನಡೆಸಲು ಉದ್ದೇಶಿಸಲಾಗಿರುವ ಬೃಹತ್ ಜನಸಮ್ಮೇಳನಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿದ್ದು ಒಕ್ಕಲಿಗ ಸಮಾಜದ ಮಂಗಳೂರಿನ ಕಾವೂರು ಮಠದ ಸ್ವಾಮೀಜಿ ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದ ಜನಪರ ಸಂಘಟನೆಗಳ ಮಹಾ ಸಭೆಗೆ ಭಾಗವಹಿಸಲಿದ್ದಾರೆ. ಜಗದ್ಗುರು ಆದಿಚುಂಚನಗಿರಿಯ ಶ್ರೀ ಶ್ರೀ ಡಾ. ನಿರ್ಮಲಾನಂದ ಸ್ವಾಮೀಜಿಯವರ ಸ್ಪಷ್ಟ ನಿರ್ದೇಶನದ ಮೇರೆಗೆ ಮಂಗಳೂರಿನ […]

ಸೆ.3 ರಂದು ಬೆಳ್ತಂಗಡಿಯಲ್ಲಿ ನಡೆಯುವ ಸೌಜನ್ಯ ಕೊಲೆ ಪ್ರಕರಣ ಹೋರಾಟಕ್ಕೆ ಸಕಲ ಸಿದ್ಧತೆ | ಶ್ರೀ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ಭಾಗಿ Read More »

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಪ್ರಜ್ಞಾ ಆಶ್ರಮಕ್ಕೆ ಧನಸಹಾಯ ಹಸ್ತಾಂತರ

ಪುತ್ತೂರು: ದ.ಕ.ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಪುತ್ತೂರಿನ ಬೀರಮಲೆ ಬೆಟ್ಟದಲ್ಲಿರುವ ಪ್ರಜ್ಞಾ ಆಶ್ರಮದಲ್ಲಿ ನಡೆದ 7ನೇ ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ 2023 ಆಗಸ್ಟ್ ((84ನೇ) 2 ತಿಂಗಳ ಮಾಸಿಕ ಸೇವಾ ಯೋಜನೆಯಡಿ ಧನಸಹಾಯ ಹಸ್ತಾಂತರಿಸಲಾಯಿತು. ತಲಾ 20,000 ರೂಪಾಯಿಯಂತೆ ಜಿಲ್ಲೆಯ ಇಬ್ಬರು ಅಶಕ್ತರ ಚಿಕಿತ್ಸೆ ವೆಚ್ಚಕ್ಕಾಗಿ ಧನ ಸಹಾಯವನ್ನು ಅತಿಥಿಗಳ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು. ಈ ಸಂಧರ್ಭದಲ್ಲಿ ಅರ್ಜುನ್ ಭಂಡಾರ್ಕರ್ ಹಾಗೂ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ನ ಸರ್ವ ಸದಸ್ಯರು ಉಪಸ್ಥಿತರಿದ್ದರು

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಪ್ರಜ್ಞಾ ಆಶ್ರಮಕ್ಕೆ ಧನಸಹಾಯ ಹಸ್ತಾಂತರ Read More »

ಮಾರ್ನಡ್ಕ ಮಹಾಬಲ ರೈ ನಿಧನ

ಪುತ್ತೂರು : ಬನ್ನೂರು ಮಾರ್ನಡ್ಕ ನಿವಾಸಿ ಮಹಾಬಲ ರೈ (80) ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ. ಅಲ್ಪ ಕಾಲದ ಅಸೌಖ್ಯದಿಂದ ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದ ಅವರು ನಿಧನರಾಗಿದ್ದಾರೆ. ಮಹಾಬಲ ರೈಯವರ ಈ ಹಿಂದೆ ಲಾರಿ ಮಾಲಕರಾಗಿದ್ದರು. ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಮಾರ್ನಡ್ಕ ಮಹಾಬಲ ರೈ ನಿಧನ Read More »

ವಿವೇಕಾನಂದ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ದ್ವಿತೀಯ ಸೆಮಿಸ್ಟರ್ ಫಲಿತಾಂಶ

ಪುತ್ತೂರು : ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಸ್ನಾತಕೋತ್ತರ ಪದವಿಯ ದ್ವಿತೀಯ ಸೆಮಿಸ್ಟರ್ ಫಲಿತಾಂಶವು ಆ.31 ರಂದು ಪ್ರಕಟವಾಗಿದೆ. ಕಾಲೇಜಿನ ವೆಬ್‌ಸೈಟ್‌  vcputtur.ac.in ನಲ್ಲಿ  ಪ್ರಕಟವಾಗಿದೆ. ಒಟ್ಟು ಶೇ.96 ಉತ್ತೀರ್ಣತೆ ದಾಖಲಾಗಿದ್ದು, ಎಂ.ಎ. (ಪತ್ರಿಕೋದ್ಯಮ) ಶೇ.100, ಎಂ.ಕಾಂ. ಶೇ.100, ಎಂ.ಎಸ್ಸಿ. (ರಸಾಯನಶಾಸ್ತ್ರ) ಶೇ.100, ಎಂ.ಎಸ್ಸಿ. (ಗಣಿತಶಾಸ್ತ್ರ) ಶೇ.40 ರಂತೆ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ವಿ.ಜಿ.ಭಟ್ ಹಾಗೂ ಪರೀಕ್ಷಾಂಗ ವಿಭಾಗದ ಕುಲಸಚಿವ ಡಾ.ಶ್ರೀಧರ ಎಚ್.ಜಿ. ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿವೇಕಾನಂದ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ದ್ವಿತೀಯ ಸೆಮಿಸ್ಟರ್ ಫಲಿತಾಂಶ Read More »

ಸೆ.3 : ವಿಟ್ಲ ಚಂದಳಿಕೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳ್ಳಿಹಬ್ಬ  ಪ್ರಯುಕ್ತ  ಸಾರ್ವಜನಿಕರಿಗೆ ಬೆಳ್ಳಿಹಬ್ಬ ಕ್ರೀಡೋತ್ಸವ

ವಿಟ್ಲ: ಚಂದಳಿಕೆ ಕಾರ್ತಿಕ್ ಫ್ರೆಂಡ್ಸ್ ಕ್ಲಬ್‍  ಹಾಗೂ ಚಂದಳಿಕೆ ಸಾರ್ವಜನಿಕ ಶ್ರೀ ಗಣೇಶೋತ್ಸವದ ಬೆಳ್ಳಿಹಬ್ಬ ಸಮಿತಿ ಜಂಟಿ ಆಶ್ರಯದಲ್ಲಿ 25ನೇ ವರ್ಷದ ಶ್ರೀ ಗಣೇಶೋತ್ಸವದ ಪ್ರಯುಕ್ತ ಬೆಳ್ಳಿಹಬ್ಬ ಕ್ರೀಡೋತ್ಸವ ಸೆ.3 ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ವಿಟ್ಲ ಚಂದಳಿಕೆ ಶಾಲಾ ವಠಾರದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4 ರ ತನಕ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನ ಹಾಗೂ ಅಂಚೆ ಇಲಾಖೆಯ ಜನೋಪಯೋಗಿ

ಸೆ.3 : ವಿಟ್ಲ ಚಂದಳಿಕೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳ್ಳಿಹಬ್ಬ  ಪ್ರಯುಕ್ತ  ಸಾರ್ವಜನಿಕರಿಗೆ ಬೆಳ್ಳಿಹಬ್ಬ ಕ್ರೀಡೋತ್ಸವ Read More »

ಮೋದಿ ಸ್ಕೀಮ್ನಲ್ಲಿ ಹಣ ಬಂದಿದೆ ಎಂದು ನಂಬಿಸಿ ವಂಚನೆ | ಬೆಳ್ಳಾರೆ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲು | ಪ್ರಕರಣಕ್ಕೆ ಸಂಬಂಧಿಸಿ ಓರ್ವನ ಬಂಧನ

ಬೆಳ್ಳಾರೆ : ಮೋದಿ ಸ್ಕೀಮ್‍ನಲ್ಲಿ ಹಣ ಬಂದಿದೆ ಎಂದು ಅಮಾಯಕರಿಂದ ಚಿನ್ನ, ಹಣ ಪಡೆದು ವಂಚಿಸುತ್ತಿದ್ದ ಇಬ್ಬರು ವ್ಯಕ್ತಿಗಳಿಂದ ಪ್ರತ್ಯೇಕವಾಗಿ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಕೊಡಿಯಾಲ ಗ್ರಾಮ, ಸುಳ್ಯ ನಿವಾಸಿಯಾದ ರಾಧಾಕೃಷ್ಣ ಗೌಡ (67) ಎಂಬವರು ಬೆಳ್ಳಾರೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಮೇ 20,  2023 ಬೆಳ್ಳಾರೆ ಕೆಳಗಿನ ಪೇಟೆಯಲ್ಲಿರುವ ಪ್ರಯಾಣಿಕರ ತಂಗುದಾಣದಲ್ಲಿದ್ದಾಗ ಅಪರಿಚಿತ ವ್ಯಕ್ತಿಯೋರ್ವ ಬಂದು ತನ್ನನ್ನು ಬ್ಯಾಂಕ್ ಉದ್ಯೋಗಿ ಎಂಬುದಾಗಿ ಹೇಳಿ ಪರಿಚಯಿಸಿಕೊಂಡು, ಕೋವಿಡ್

ಮೋದಿ ಸ್ಕೀಮ್ನಲ್ಲಿ ಹಣ ಬಂದಿದೆ ಎಂದು ನಂಬಿಸಿ ವಂಚನೆ | ಬೆಳ್ಳಾರೆ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲು | ಪ್ರಕರಣಕ್ಕೆ ಸಂಬಂಧಿಸಿ ಓರ್ವನ ಬಂಧನ Read More »

ಜಗತ್ತಿಗೆ ಅಸಂಖ್ಯಾತ  ಸಂಶೋಧಕರನ್ನು ಕೊಟ್ಟ ದೇಶ ಭಾರತ  : ಡಾ. ಪ್ರಭಾಕರ್ ಭಟ್ ಕಲ್ಲಡ್ಕ | ವಿವೇಕಾನಂದ ಕಾಲೇಜಿನಲ್ಲಿ ಪ್ಲಾಸ್ಮಾ ರಾಷ್ಟ್ರೀಯ ವಿಚಾರ ಸಂಕಿರಣ

ಪುತ್ತೂರು : ನಮ್ಮ ಹಿರಿಯರಲ್ಲಿ ವೈಜ್ಞಾನಿಕ ಮನೋಭಾವ ಆಗಲೇ ಇತ್ತು. ಅದು ಇಂದು ಸಂಶೋಧನಾ ರೂಪದಲ್ಲಿ ಜಗತ್ತಿನ ವೈಜ್ಞಾನಿಕ ಅಭಿವೃದ್ಧಿಗೆ ಸಹಕಾರಿಯಾಗುತ್ತಿದೆ. ಭಾರತೀಯ ವಿಜ್ಞಾನಿಗಳ ವೈಜ್ಞಾನಿಕ ಸಂಶೋಧನೆ ಅದು ಜಗತ್ತಿನ ಹಿತಕ್ಕಾಗಿ ಆಗಿರುತ್ತದೆ. ಅದರಿಂದ ವಿಜ್ಞಾನಿಗಳ ಮನಸ್ಸಿಗೆ ಸಂತೃಪ್ತತೆ ಸಿಗುತ್ತದೆ. ಚಂದ್ರಯಾನ-3 ರ ಯಶಸ್ಸು ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಿದೆ. ಇಂದಿನ ಪ್ಲಾಸ್ಮಾ ತಂತ್ರಜ್ಞಾನ ಕುರಿತಾದ ಈ ಕಾರ್ಯಕ್ರಮ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಸಹಕಾರಿ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.

ಜಗತ್ತಿಗೆ ಅಸಂಖ್ಯಾತ  ಸಂಶೋಧಕರನ್ನು ಕೊಟ್ಟ ದೇಶ ಭಾರತ  : ಡಾ. ಪ್ರಭಾಕರ್ ಭಟ್ ಕಲ್ಲಡ್ಕ | ವಿವೇಕಾನಂದ ಕಾಲೇಜಿನಲ್ಲಿ ಪ್ಲಾಸ್ಮಾ ರಾಷ್ಟ್ರೀಯ ವಿಚಾರ ಸಂಕಿರಣ Read More »

ರಕ್ಷಾಬಂಧನ ವಿಶ್ವಬಂಧುತ್ವಕ್ಕೆ ಸಾಕ್ಷಿಯಾಗಿದೆ : ಶ್ರೀರಾಮ್ ಅಂಗಿರಸ | ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಕ್ಷಾಬಂಧನ

ಪುತ್ತೂರು: ರಕ್ಷಾಬಂಧನ ಸಹೋದರ -ಸಹೋದರಿಯರ ಸಂಬಂಧಕ್ಕೆ ಮಾತ್ರ ಸೀಮಿತವಾಗದೆ ವಿಶ್ವಬಂಧುತ್ವಕ್ಕೆ ಸಾಕ್ಷಿಯಾಗಿದೆ. ಭಾರತೀಯ ಸಂಪ್ರದಾಯಗಳು ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ. ಪ್ರತೀ ಹಬ್ಬದಲ್ಲೂ ಬದುಕಿಗೆ ಬೇಕಾದ ಸಂದೇಶಗಳು ಇರುತ್ತದೆ. ಅವುಗಳನ್ನು ನಾವು ಅರಿತುಕೊಳ್ಳಬೇಕು. ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟಗೊಳಿಸುವ ಹಬ್ಬ ಈ ರಕ್ಷಾಬಂಧನ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ಮತ್ತು ಮಂಗಳೂರು ಜಿಲ್ಲೆಯ ಜಿಲ್ಲಾ ಸಂಘಟನಾ ಕಾರ್‍ಯದರ್ಶಿಯಾದ ಶ್ರೀರಾಮ್ ಅಂಗಿರಸ ಹೇಳಿದರು. ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಕ್ಷಾಬಂಧನ ಕಾರ್‍ಯಕ್ರಮದಲ್ಲಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಪ್ರಸಾದ್

ರಕ್ಷಾಬಂಧನ ವಿಶ್ವಬಂಧುತ್ವಕ್ಕೆ ಸಾಕ್ಷಿಯಾಗಿದೆ : ಶ್ರೀರಾಮ್ ಅಂಗಿರಸ | ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಕ್ಷಾಬಂಧನ Read More »

ಕಲ್ಲಾರೆ ಮಠದಲ್ಲಿ ಶ್ರೀ ಗುರು ಸಾರ್ವಭೌಮರ 352ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ

ಪುತ್ತೂರು: ಕಲ್ಲಾರೆ ಶ್ರೀ ಗುರುರಾಘವೇಂದ್ರ ಸೇವಾ ಸಮಿತಿ ವತಿಯಿಂದ ಮೂರು ದಿನಗಳ ಕಾಲ ನಡೆಯುವ  ಶ್ರೀ ಗುರು ಸಾರ್ವಭೌಮರ 352ನೇ ಆರಾಧನಾ ಮಹೋತ್ಸವಕ್ಕೆ ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಗುರುವಾರ ಮುಂಜಾನೆ ಚಾಲನೆ ನೀಡಲಾಗಿದೆ. ಮಠದ ಪ್ರಧಾನ ಅರ್ಚಕ ಎ.ರಾಘವೇಂದ್ರ ಉಡುಪ ಅವರ ನೇತೃತ್ವದಲ್ಲಿ ಮುಂಜಾನೆ 6 ಗಂಟೆಗೆ ನಿರ್ಮಾಲ್ಯ ವಿಸರ್ಜನಾ ಪೂಜೆ, 10 ಗಂಟೆಗೆ ಪಂಚಾಮೃತಾಭಿಷೇಕ, ಮಧ್ಯಾಹ್ನ 12 ಕ್ಕೆ ಅಲಂಕಾರ ಪೂಜೆ, ಬಳಿಕ ಮಹಾಪೂಜೆ ನಡೆದು ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀ

ಕಲ್ಲಾರೆ ಮಠದಲ್ಲಿ ಶ್ರೀ ಗುರು ಸಾರ್ವಭೌಮರ 352ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ Read More »

ಬಿಜೆಪಿ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜಯಂತಿ ಆಚರಣೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುಗಳ 169 ನೇ  ಜಯಂತಿಯನ್ನು ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು. ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ಬ್ರಹ್ಮಶ್ರೀ ನಾರಾಯಣ ಗುರುಗಳ ಜನನ ಮತ್ತು ಅವರ ಜೀವನ ಸಂದೇಶವನ್ನು ತಿಳಿಸಿದರು. ಈ ಸಂದರ್ಭದಲ್ಲಿ ರಕ್ಷಾಬಂಧನ ಕಾರ್ಯಕ್ರಮ ಕೂಡಾ ನಡೆಯಿತು. ಪುತ್ತೂರು ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ್ ರಾವ್ ರಕ್ಷಾ

ಬಿಜೆಪಿ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜಯಂತಿ ಆಚರಣೆ Read More »

error: Content is protected !!
Scroll to Top