ಪುತ್ತೂರು

ನ್ಯಾಯಾಂಗ ಹುದ್ದೆ ಅತ್ಯಂತ ಶ್ರೇಷ್ಠವಾದದ್ದು: ನ್ಯಾ. ವಿಶ್ವಜಿತ್ ಶೆಟ್ಟಿ | ವಿವೇಕಾನಂದ ಕಾನೂನು ಮಹಾವಿದ್ಯಾಲಯದ 35ನೇ ವಾರ್ಷಿಕೋತ್ಸವ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ 35ನೇ ವಾರ್ಷಿಕೋತ್ಸವ ನಡೆಯಿತು.  ಮುಖ್ಯ ಅತಿಥಿಯಾಗಿ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಸವಣೂರು ವಿಶ್ವಜಿತ್ ಶೆಟ್ಟಿ, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಾಧಕ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ ಮಾಡಿ ಮಾತನಾಡಿ, ಭಾರತೀಯ ಸಂವಿಧಾನದಲ್ಲಿನ್ಯಾಯಾಂಗಕ್ಕೆ ಅತ್ಯಮೂಲ್ಯ ಸ್ಥಾನವಿದೆ. ದೇಶದ ಅಭಿವೃದ್ಧಿಯಲ್ಲಿನ್ಯಾಯಾಂಗ ವ್ಯವಸ್ಥೆ ಪರಿಣಾಮಕಾರಿಯಾಗಿದ್ದು, ಇಡೀ ವಿಶ್ವದಲ್ಲಿಯೇ ಭಾರತೀಯ ನ್ಯಾಯಾಂಗ ವ್ಯವಸ್ಥೆ ಸರ್ವ ಶ್ರೇಷ್ಠ ಹಾಗೂ ಸದೃಢವಾಗಿದೆ. ಕಾನೂನು ವಿದ್ಯಾರ್ಥಿಗಳಿಗೆ ಇದನ್ನು ಅರ್ಥ ಮಾಡಿಕೊಂಡು ಆ ವ್ಯವಸ್ಥೆಯೊಳಗೆ ಜ್ಞಾನವಂತರಾಗಿ ಬರಬೇಕು ಎಂದರು. ವಿವಿಧ ಹಂತಗಳ ನ್ಯಾಯಾಲಯದ ಕಾರ್ಯಕಲಾಪಗಳನ್ನು […]

ನ್ಯಾಯಾಂಗ ಹುದ್ದೆ ಅತ್ಯಂತ ಶ್ರೇಷ್ಠವಾದದ್ದು: ನ್ಯಾ. ವಿಶ್ವಜಿತ್ ಶೆಟ್ಟಿ | ವಿವೇಕಾನಂದ ಕಾನೂನು ಮಹಾವಿದ್ಯಾಲಯದ 35ನೇ ವಾರ್ಷಿಕೋತ್ಸವ Read More »

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

ಪುತ್ತೂರು: ಮಕ್ಕಳ ಶಿಸ್ತು ಬದ್ಧ ನಡವಳಿಕೆಯಲ್ಲಿ ಪೋಷಕರ ಪಾತ್ರ ಹಿರಿದಾದುದು. ತಪ್ಪಾದಾಗ ತಿದ್ದುವ ,ಸೋತಾಗ ಸ್ಪೂರ್ತಿಯಾಗುವ ಆತ್ಮೀಯ ಗೆಳೆಯರು ನಾವಾಗಬೇಕು. ಆಡಳಿತ ಮಂಡಳಿ ,ಶಿಕ್ಷಕ ವರ್ಗದೊಂದಿಗೆ ನಿಕಟ ಸಂಪರ್ಕವನ್ನಿಟ್ಟುಕೊಂಡು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ವಿವೇಕಾನಂದ ಕಾಲೇಜ್ ಆಫ್ ಎಜುಕೇಶನ್ ಪ್ರಾಂಶುಪಾಲೆ  ಶೋಭಿತಾ ಸತೀಶ್ ಹೇಳಿದರು. ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ 2023-24ನೇ ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ಮಹಾಸಭೆಯಲ್ಲಿ ಅವರು ಮಾತನಾಡಿದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಸತ್ಯನಾರಾಯಣ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ Read More »

ಆ.30 : ಸಂಪ್ಯದಲ್ಲಿ ಇಲೆಕ್ಟ್ರಾನಿಕ್ಸ್ & ಫರ್ನಿಚರ್ ಮಳಿಗೆ “ಆದರ್ಶ ಇಲೆಕ್ಟ್ರಾನಿಕ್ಸ್ & ಫರ್ನಿಚರ್” ಶುಭಾರಂಭ

ಪುತ್ತೂರು: ನೂತನ ಇಲೆಕ್ಟ್ರಾನಿಕ್ಸ್ ಮತ್ತು ಪೀಠೋಪಕರಣಗಳ ಮಳಿಗೆ “ಆದರ್ಶ ಇಲೆಕ್ಟ್ರಾನಿಕ್ಸ್ & ಫರ್ನಿಚರ್” ಆ.30 ಬುಧವಾರ ಸಂಜೆ 5 ಗಂಟೆಗೆ ಸಂಪ್ಯ ಫಡಿಲ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಳ್ಳಲಿದೆ. ಕರ್ನಾಟಕ ವಿಧಾನಸಭೆ ಸಭಾಪತಿ ಯು.ಟಿ.ಖಾದರ್ ನೂತನ ಸಂಸ್ಥೆಯನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ ಪಾಲ್ಗೊಳ್ಳುವರು. ಅತಿಥಿಗಳಾಗಿ ಮಾಜಿ ಶಾಸಕ ಸಂಜೀವ ಮಠಂದೂರು, ಗ್ರಾಮಾಂತರ ಠಾಣಾ ಉಪನಿರೀಕ್ಷಕ ಧನಂಜಯ ಬಿ.ಸಿ., ಸಂಪ್ಯ ಅಕ್ಷಯ ಕಾಲೇಜಿನ ನಿರ್ದೇಶಕ ಜಯಂತ ನಡುಬೈಲು, ಪದ್ಮಶ್ರೀ ಸೋಲಾರ್ ನ ಮಾಲಕ ಸೀತಾರಾಮ್

ಆ.30 : ಸಂಪ್ಯದಲ್ಲಿ ಇಲೆಕ್ಟ್ರಾನಿಕ್ಸ್ & ಫರ್ನಿಚರ್ ಮಳಿಗೆ “ಆದರ್ಶ ಇಲೆಕ್ಟ್ರಾನಿಕ್ಸ್ & ಫರ್ನಿಚರ್” ಶುಭಾರಂಭ Read More »

ವಿದ್ಯಾಭಾರತಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟ : ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ದ್ವಿತೀಯ

ಪುತ್ತೂರು: ನೆಹರೂನಗರದ ವಿವೇಕಾನಂದ ಸಿ ಬಿ ಎಸ್ ಸಿ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದಿದೆ. ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಯಶಸ್ ಎಸ್, ವಿನೋಭ ಭಾವೆ,  ಅನುಷ್ ಕೆ. ಎನ್, ಅರ್ಜುನ್ ಕೆ.ಎಚ್, ವಾಣಿಜ್ಯ ವಿಭಾಗದ ಶಶಿಕಾಂತ್, ರಂಜಿತ್ ಬಿ ಎಂ, ಜೀತೆಶ್  ಜೆ ಎಸ್ , ಪ್ರಥಮ ಪಿಯುಸಿ ವಿಜ್ಞಾನ  ವಿಭಾಗದ ಸತೀರ್ಥ್,ಅತೀಥ್, ವಿಶ್ರುತ್ ಎನ್, ಪ್ರವೀಣ್

ವಿದ್ಯಾಭಾರತಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟ : ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ದ್ವಿತೀಯ Read More »

ಅಕ್ಷಯ ಕಾಲೇಜಿನಲ್ಲಿ ನೂತನವಾಗಿ ದಾಖಲಾದ ವಿದ್ಯಾರ್ಥಿಗಳಿಗೆ, ಹೆತ್ತವರಿಗೆ ಮಾಹಿತಿ ಕಾರ್ಯಾಗಾರ

ಪುತ್ತೂರು: ಇಲ್ಲಿನ ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಕಾಲೇಜಿನ ಶಿಕ್ಷಕ ಹಾಗೂ ಹೆತ್ತವರ ಸಂಘದ ವತಿಯಿಂದ ನೂತನವಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಕಾಲೇಜಿನ ಆಡಳಿತ ನಿರ್ದೇಶಕಿ ಕಲಾವತಿ ನಡುಬೈಲು ದೀಪ ಪ್ರಜ್ವಲಿಸಿ, ನಮ್ಮ ಕಾಲೇಜನ್ನು ಆಯ್ಕೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿ, ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು. ಕಾಲೇಜಿನ ಪ್ರಾಂಶುಪಾಲ ಸಂಪತ್ ಪಕ್ಕಳ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕಾಲೇಜಿನ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ

ಅಕ್ಷಯ ಕಾಲೇಜಿನಲ್ಲಿ ನೂತನವಾಗಿ ದಾಖಲಾದ ವಿದ್ಯಾರ್ಥಿಗಳಿಗೆ, ಹೆತ್ತವರಿಗೆ ಮಾಹಿತಿ ಕಾರ್ಯಾಗಾರ Read More »

ಸೌಜನ್ಯ ಕೊಲೆ ನೈಜ ಆರೋಪಿಗಳನ್ನು ಪತ್ತೆಹಚ್ಚುವಂತೆ ಆಗ್ರಹಿಸಿ ಜಿಲ್ಲಾ ಮಟ್ಟದ ಧರಣಿ ಸತ್ಯಾಗ್ರಹ | ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘ ಪತ್ರಿಕಾಗೋಷ್ಠಿ

ಪುತ್ತೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆ ನಡೆಸಿ ನೈಜ ಆರೋಪಿಗಳನ್ನು ಪತ್ತೆಹಚ್ಚುವಂತೆ ಆಗ್ರಹಿಸಿ ಜಿಲ್ಲಾ ಮಟ್ಟದ ಧರಣಿ ಸತ್ಯಾಗ್ರಹವನ್ನು ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆಸಲಾಗುವುದು ಎಂದು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ತಿಳಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕುರಿತು ಸಭೆಯೊಂದನ್ನು ಏರ್ಪಡಿಸಿ ದಿನ ನಿಗದಿ ಮಾಡಲಾಗುವುದು. ಅಲ್ಲದೆ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳ ಗೌಡ ಸಮಿತಿಗಳ ಜಿಲ್ಲಾ ಒಕ್ಕೂಟವನ್ನು ರಚನೆ ಮಾಡಲಾಗಿದೆ. ಈ

ಸೌಜನ್ಯ ಕೊಲೆ ನೈಜ ಆರೋಪಿಗಳನ್ನು ಪತ್ತೆಹಚ್ಚುವಂತೆ ಆಗ್ರಹಿಸಿ ಜಿಲ್ಲಾ ಮಟ್ಟದ ಧರಣಿ ಸತ್ಯಾಗ್ರಹ | ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘ ಪತ್ರಿಕಾಗೋಷ್ಠಿ Read More »

ಮಹಿಳೆ ನಾಪತ್ತೆ : ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

ಕಡಬ: ಕಡಬ ಠಾಣಾ ವ್ಯಾಪ್ತಿಯ ಐತ್ತೂರು ಗ್ರಾಮದ ಮಹಿಳೆಯೊಬ್ಬರು ನಾಪತ್ತೆಯಾದ ಕುರಿತು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐತ್ತೂರು ಗ್ರಾಮದ ಓಟೆಕಜೆ ಸಿ.ಆರ್.ಸಿ. ಕಾಲೋನಿ ನಿವಾಸಿ ಮಂಜುಳಾ ನಾಪತ್ತೆಯಾದ ಮಹಿಳೆ. ಬಿಳಿನೆಲೆಯಲ್ಲಿರುವ ಅಂಗಡಿಯೊಂದರಲ್ಲಿ ವಾಹನ ಇನ್ಸೂರೆನ್ಸ್‍  ಏಜೆನ್ಸಿಯಾಗಿ ಕೆಲ ಮಾಡಿಕೊಂಡಿದ್ದರು. ಕೆಲಸಕ್ಕೆಂದು ಮನೆಯಿಂದ ಹೊರ ಹೋದೆ ಮಹಿಳೆ ಬಳಿಕ ನಾಪತ್ತೆಯಾಗಿದ್ದರು. ಆಕೆಯ ಮೊಬೈಲ್ ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿತ್ತು. ಈ ಕುರಿತು ಪತಿ ಶಿವಕುಮಾರ್ ಕಡಬ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಮಹಿಳೆ ನಾಪತ್ತೆ : ಕಡಬ ಠಾಣೆಯಲ್ಲಿ ಪ್ರಕರಣ ದಾಖಲು Read More »

ಆ.28 : ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ಶೇರು ಪ್ರಮಾಣ ಪತ್ರ ವಿತರಣಾ ಸಮಾರಂಭ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪೆನಿ ಹಾಗೂ ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಜಂಟಿ ಆಶ್ರಯದಲ್ಲಿ ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ಶೇರು ಪ್ರಮಾಣ ಪತ್ರ ವಿತರಣಾ ಸಮಾರಂಭ ಆ.28 ಸೋಮವಾರ ಬೆಳಿಗ್ಗೆ 10 ಗಂಟೆಗೆ ಪುತ್ತೂರು ಜೈನ ಭವನದಲ್ಲಿ ನಡೆಯಲಿದೆ. ಮುಖ್ಯ ಅತಿಥಿಯಾಗಿ ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಎಂ. ಪಾಲ್ಗೊಳ್ಳಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಡಾ.ರಶ್ಮಿ ಆರ್. ಮಾಹಿತಿ ನೀಡಲಿದ್ದಾರೆ.

ಆ.28 : ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ಶೇರು ಪ್ರಮಾಣ ಪತ್ರ ವಿತರಣಾ ಸಮಾರಂಭ Read More »

ಆ.28 : ಇಲೆಕ್ಟ್ರಾನಿಕ್ಸ್ ವಸ್ತುಗಳ ಮಾರಾಟ ಹಾಗೂ ಸೇವಾ ಮಳಿಗೆ “ಮಂಜುಶ್ರೀ ಇಲೆಕ್ಟ್ರಾನಿಕ್ಸ್” ಶುಭಾರಂಭ

ಆಲಂಕಾರು: ಇಲೆಕ್ಟ್ರಾನಿಕ್ಸ್ ಮಾರಾಟ ಹಾಗೂ ಸೇವಾ ಮಳಿಗೆ “ಮಂಜುಶ್ರೀ ಇಲೆಕ್ಟ್ರಾನಿಕ್ಸ್” ಆ.28 ಸೋಮವಾರ ಬೆಳಿಗ್ಗೆ 9 ಗಂಟೆಗೆ ಆಲಂಕಾರು ಕೆನರಾ ಬ್ಯಾಂಕ್‍ ಎದುರು ಇರುವ ದುರ್ಗಾ ಟವರ್ಸ್‍ ನಲ್ಲಿ ಶುಭಾರಂಭಗೊಳ್ಳಲಿದೆ. ಸಂಸ್ಥೆಯಲ್ಲಿ ವಿವಿಧ ಪ್ರಖ್ಯಾತ ಕಂಪೆನಿಯ ಟಿವಿ, ಮಿಕ್ಸಿ ಗ್ರೈಂಡರ್, ಫ್ಯಾನ್, ಸಿಸಿ ಕ್ಯಾಮರಾ, ಇಸ್ತ್ರೀ ಪೆಟ್ಟಿಗೆ ಮತ್ತಿತರ ಇಲೆಕ್ಟ್ರಾನಿಕ್ಸ್ ಐಟಂಗಳ ಮಾರಾಟ ಹಾಗೂ ರಿಪೇರಿ ವ್ಯವಸ್ಥೆ ಇದೆ. ವಿಶೇಷವಾಗಿ ಆಕರ್ಷಕ ದರದಲ್ಲಿ ಟಿವಿಗಳು ಲಭ್ಯವಿದೆ ಎಂದು ಸಂಸ್ಥೆಯ ಮಾಲಕ ಸಂದೀಪ್ ಬಿ.ಬೆಳ್ತಿಗೇರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆ.28 : ಇಲೆಕ್ಟ್ರಾನಿಕ್ಸ್ ವಸ್ತುಗಳ ಮಾರಾಟ ಹಾಗೂ ಸೇವಾ ಮಳಿಗೆ “ಮಂಜುಶ್ರೀ ಇಲೆಕ್ಟ್ರಾನಿಕ್ಸ್” ಶುಭಾರಂಭ Read More »

ಚೂರಿ ಇರಿತದಿಂದ ಹತ್ಯೆಯಾದ ಗೌರಿ ಮನೆಗೆ ಪುತ್ತಿಲ ಪರಿವಾರ ಭೇಟಿ

ಪುತ್ತೂರು : ಪುತ್ತೂರು ಠಾಣೆಯ ಬಳಿ ಯುವಕನಿಂದ ಚೂರಿ ಇರಿತಕ್ಕೊಳಕ್ಕಾಗಿ ಹತ್ಯೆಯಾದ ವಿಟ್ಲದ ಕುದ್ದುಪದವಿನ ಗೌರಿ  ಮನೆಗೆ ಪುತ್ತಿಲ ಪರಿವಾರ ಭೇಟಿ ನೀಡಿ ದುಃಖತಪ್ತ ಹೆಚ್ಚವರಿಗೆ ಹಾಗೂ ಕುಟುಂಬ ವರ್ಗಕ್ಕೆ ಸಾಂತ್ವನ ತಿಳಿಸಿದೆ. ಆಗಸ್ಟ್ 24 ರಂದು ಪುತ್ತೂರಿನಲ್ಲಿ ಠಾಣೆಯ ಬಳಿಯೇ ಯುವಕನಿಂದ ಹತ್ಯೆ ನಡೆದಿತ್ತು. ಹತ್ಯೆಯಾದ ಯುವತಿ ಗೌರಿ ಮನೆಗೆ ಅರುಣ್ ಪುತ್ತಿಲ ಭೇಟಿ ನೀಡಿ ತಂದೆ ತಾಯಿ ಸಹೋದರಿಗೆ  ಸಾಂತ್ವನ ಹೇಳಿದರು.  2 ವರ್ಷದ ಹಿಂದೆಯೇ ಈ ಯುವಕ ಗೌರಿಗೆ ತೊಂದರೆ ಕೊಟ್ಟ ಬಗ್ಗೆ

ಚೂರಿ ಇರಿತದಿಂದ ಹತ್ಯೆಯಾದ ಗೌರಿ ಮನೆಗೆ ಪುತ್ತಿಲ ಪರಿವಾರ ಭೇಟಿ Read More »

error: Content is protected !!
Scroll to Top