ಪುತ್ತೂರು

ಕರ್ಕುಂಜ ನಿವಾಸಿ ಹರೀಶ್ ನಿಧನ

ಪುತ್ತೂರು: ಪುತ್ತೂರು ತಾಲೂಕು ಕಚೇರಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕರ್ಕುಂಜ ನಿವಾಸಿ ಹರೀಶ್ (45) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಕಳೆದ 25 ವರ್ಷಗಳಿಂದ ತಾಲೂಕು ಕಚೇರಿಯಲ್ಲಿ ಕೆಲಸ ನಿರ್ಯವಹಿಸುತ್ತಿದ್ದು, ಇತ್ತೀಚೆಗೆ ಅನಾರೋಗ್ಯಕ್ಕೀಡಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ, ಪುತ್ರ ಹಾಗೂ ಸಹೋದರರು, ಕುಟುಂಬಸ್ಥರನ್ನು ಅಗಲಿದ್ದಾರೆ.

ಕರ್ಕುಂಜ ನಿವಾಸಿ ಹರೀಶ್ ನಿಧನ Read More »

ಅಂತರಾಷ್ಟ್ರೀಯ ಮಟ್ಟದ ಕರಾಟೆ | ವಿಟ್ಲ All India Shito-ryo Karate-do union ತಂಡಕ್ಕೆ ಹಲವು ಪ್ರಶಸ್ತಿ

ವಿಟ್ಲ : ಮುಂಬೈನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಟ್ಲ All India Shito-ryo Karate-do union ತಂಡದ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಶೋಟೊಕನ್ ಕರಾಟೆ-ಡೊ ಫೆಡರೆಷನ್ ಇವರ ಆಶ್ರಯದಲ್ಲಿ ಮರಾಠ ಮಂಡಲ್ ಹಾಲ್ ಮುಲುಂದ್ ಮುಂಬೈ ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ Independence Cup Karate championship ನಲ್ಲಿ All India Shito-ryu Karate-do union ತಂಡದ ಕರಾಟೆ ವಿಧ್ಯಾರ್ಥಿಗಳು ಭಾಗವಹಿಸಿದ್ದು 12 ಪ್ರಥಮ ಸ್ಥಾನ, 7 ದ್ವಿತೀಯ, 8 ತೃತೀಯ

ಅಂತರಾಷ್ಟ್ರೀಯ ಮಟ್ಟದ ಕರಾಟೆ | ವಿಟ್ಲ All India Shito-ryo Karate-do union ತಂಡಕ್ಕೆ ಹಲವು ಪ್ರಶಸ್ತಿ Read More »

ಕಡಬ ವಲಯ ಮಟ್ಟದ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭ

ರಾಮಕುಂಜ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ  ಹಾಗೂ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ಸಹಯೋಗದಲ್ಲಿ ಕಡಬ ವಲಯ ಮಟ್ಟದ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಿತು. ಪುತ್ತೂರು ಎಸ್ ಆರ್ ಕೆ ಲ್ಯಾಡರ್ಸ್ ಮಾಲಕರಾದ ಕೇಶವ ಎ. ಕಲಾಯಿಗುತ್ತು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಶವ ಎ. ಕಲಾಯಿಗುತ್ತು ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ರಾಮಕುಂಜ

ಕಡಬ ವಲಯ ಮಟ್ಟದ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭ Read More »

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿ

ಪುತ್ತೂರು: ಆದಿ ಸುಬ್ರಹ್ಮಣ್ಯದಲ್ಲಿ ಹುತ್ತಕ್ಕೆ ಪೂಜೆ ಸಲ್ಲುವಂತೆ ಪುತ್ತೂರು ತಾಲೂಕಿನಲ್ಲೂ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರವಾಗಿರುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿಯ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ದೇವಸ್ಥಾನದ ನಾಗನಕಟ್ಟೆಯಲ್ಲಿ ಬೆಳಿಗ್ಗೆ ನಾಗದೇವರಿಗೆ ಹಾಲಿನ ಅಭಿಷೇಕ, ಸಿಯಾಳ ಅಭಿಷೇಕ ನಾಗತಂಬಿಲ ನಡೆಯಿತು. ಬಳಿಕ ವಲ್ಮಿಕ ರೂಪಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಪೂಜೆ ನಡೆದ ಬಳಿಕ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿ Read More »

ಕರಾಟೆ ಪಂದ್ಯಾಟ : ವಿವೇಕಾನಂದ ಪದವಿಪೂರ್ವ ಕಾಲೇಜಿನ ಅರುಣ್ ಕುಮಾರ್ ಗೆ ಪ್ರಶಸ್ತಿ

ಪುತ್ತೂರು : ಚೆನ್ನೈಯಲ್ಲಿ ನಡೆದ ಪ್ರಥಮ ಸೌತ್ ಇಂಡಿಯಾ ಕರಾಟೆ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ  ಪಿಯುಸಿ ಕಲಾ ವಿಭಾಗದ ಅರುಣ್ ಕುಮಾರ್ ಎಂ. ಆರ್ ಕುಮಿಟೆ ವಿಭಾಗದಲ್ಲಿ ಪ್ರಥಮ ಹಾಗೂ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಈತ ಪುತ್ತೂರಿನ ಅಮ್ಚಿನಡ್ಕದ ಮಾಡ್ನೂರು ಗ್ರಾಮದ ರಮೇಶ್ ಎ ಎಂ ಮತ್ತು ಲಲಿತಾ ದಂಪತಿ ಪುತ್ರ. ಈತನ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ಕರಾಟೆ ಪಂದ್ಯಾಟ : ವಿವೇಕಾನಂದ ಪದವಿಪೂರ್ವ ಕಾಲೇಜಿನ ಅರುಣ್ ಕುಮಾರ್ ಗೆ ಪ್ರಶಸ್ತಿ Read More »

ಶ್ರೀ ಕ್ಷೇತ್ರ ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ

ಕಡಬ: ಕಡಬ ತಾಲೂಕಿನ ಎಣ್ಮೂರು ಗ್ರಾಮದ ಶ್ರೀ ಕ್ಷೇತ್ರ ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ ಹಬ್ಬ ಸೋಮವಾರ ನಡೆಯಿತು. ಮುಂಜಾನೆಯಿಂದಲೇ ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಹಾಲು, ಸೀಯಾಳ ಅರ್ಪಿಸಿದರು. ಆಡಳಿತ ಮಂಡಳಿ ಸದಸ್ಯರು, ಊರ, ಪರವೂರ ಭಕ್ತಾದಿಗಳು ಸಂಭ್ರಮದ ನಾಗರಪಂಚಮಿ ಹಬ್ಬದಲ್ಲಿ ಪಾಲ್ಗೊಂಡರು. ಬಳಿಕ ಅನ್ನಸಂತರ್ಪಣೆ ಜರಗಿತು.

ಶ್ರೀ ಕ್ಷೇತ್ರ ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ Read More »

ದ.ಕ.ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯಿಂದ ಗೆರಟೆ ಉತ್ಪನ್ನಗಳ ತರಬೇತಿ | ಪ್ರಗತಿ ಪರಿಶೀಲನಾ ಸಭೆ

ಪುತ್ತೂರು: ದ.ಕ.ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆ ತೆಂಗಿನಕಾಯಿ ಗೆರಟೆಯ ಉತ್ಪನ್ನಗಳ ತಯಾರಿಕೆಗಾಗಿ ಅನೇಕ ತರಬೇತಿಗಳನ್ನು ನೀಡಿದ್ದು, ಅದರ ಪ್ರಗತಿ ಪರಿಶೀಲನಾ ಸಭೆ ಮಂಗಳೂರು ಕಾರ್ಪೋರೇಟ್ ಕಚೇರಿಯಲ್ಲಿ ನಡೆಯಿತು. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯು ತೆಂಗಿನ ಮೌಲ್ಯವರ್ಧನೆಗಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಅವುಗಳಲ್ಲಿ ಒಂದಾದ ತೆಂಗಿನಕಾಯಿಯ ಗೆರಟೆಯ ಉತ್ಪನ್ನಗಳ ತಯಾರಿಕೆಗಾಗಿ ಅನೇಕ ತರಬೇತಿಗಳನ್ನು ನೀಡಲಾಗಿದೆ. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ್ ಮತ್ತು ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿ

ದ.ಕ.ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯಿಂದ ಗೆರಟೆ ಉತ್ಪನ್ನಗಳ ತರಬೇತಿ | ಪ್ರಗತಿ ಪರಿಶೀಲನಾ ಸಭೆ Read More »

ಆ.23 : ಜಾನಪದ ತಜ್ಞ ಡಾ.ಚಿನ್ನಪ್ಪ ಗೌಡ ಕೆ. ಸಂದರ್ಶನ ವರದಿ ಚಂದನವಾಹಿನಿಯಲ್ಲಿ ಬಿತ್ತರ

ಪುತ್ತೂರು: ಜಾನಪದ ತಜ್ಙ ನಿವೃತ್ತ  ಉಪಕುಲಪತಿ ಡಾ.ಚಿನ್ನಪ್ಪ ಗೌಡ ಕೆ. ಅವರ ಸಂದರ್ಶನ ವರದಿ ದೂರದರ್ಶನ ಚಂದನ್ ವಾಹಿನಿಯಲ್ಲಿ ಆ.23 ರಂದು ಸಂಜೆ ಬಿತ್ತರಗೊಳ್ಲಲಿದೆ. ಕೃಷಿ ತಜ್ಞ,ಲೇಖಕ ಡಾ.ನರೇಂದ್ರ ರೈ ದೇರ್ಲ ಅವರು ಸಂದರ್ಶನ ಮಾಡಲಿದ್ದಾರೆ. ಆ.26 ರಂದು ಬೆಳಿಗ್ಗೆ 9.30 ಕ್ಕೆ ಎರಡನೇ ಕಂತು ಬಿತ್ತರಗೊಳ್ಳಲಿದೆ.

ಆ.23 : ಜಾನಪದ ತಜ್ಞ ಡಾ.ಚಿನ್ನಪ್ಪ ಗೌಡ ಕೆ. ಸಂದರ್ಶನ ವರದಿ ಚಂದನವಾಹಿನಿಯಲ್ಲಿ ಬಿತ್ತರ Read More »

ಕೊಡಂಕೀರಿ ಗದ್ದೆಯಲ್ಲಿ  ಫಿಲೋಮಿನಾ ಪಿ.ಯು ವಿದ್ಯಾರ್ಥಿಗಳು |  ಗರಿಗೆದರಿದ ” ಫಿಲೋ ಸಂಭ್ರಮ”-ಕೆಸರ್ಡ್ ಒಂಜಿ ದಿನ

ಪುತ್ತೂರು : ಗದ್ದೆ ತುಂಬಾ ಕೆಸರು, ಕೆಸರಿನ ನಡುವೆ ವಿವಿಧ ಸ್ಪರ್ಧೆಗಳು, ಕೆಸರಲ್ಲಿ ಎದ್ದು ಬಿದ್ದು ಹೊರಳಾಡಿ ಸ್ಪರ್ಧೆಗಳಲ್ಲಿ ಪಾಲ್ಗೊಂಡ ಫಿಲೋಮಿನಾ ಪ. ಪೂ ಕಾಲೇಜಿನ  ವಿದ್ಯಾರ್ಥಿ ವಿದ್ಯಾರ್ಥಿನಿಯರು  ಹಾಗೂ  ಊರಿನ  ಯುವಕರು, ಮಹನಿಯರು, ಮಹಿಳೆಯರು  ಇವೆಲ್ಲ ಸನ್ನಿವೇಶಗಳು ನರಿಮೊಗರಿನ ಕೊಡಂಕೀರಿಯ  ಶ್ರೀಧರ ಪೂಜಾರಿಯವರ ಗದ್ದೆಯಲ್ಲಿ  ಭಾನುವಾರ ಕಂಡುಬಂದವು. ಸಂತ  ಫಿಲೋಮಿನಾ ಪ.ಪೂ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಹಾಗೂ ರೆಡ್ ಕ್ರಾಸ್ ಘಟಕದ ಸಂಯೋಜನೆಯಲ್ಲಿ ಒಂದು ದಿನದ “ಫಿಲೋ ಸಂಭ್ರಮ”-ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ನಡೆಯಿತು

ಕೊಡಂಕೀರಿ ಗದ್ದೆಯಲ್ಲಿ  ಫಿಲೋಮಿನಾ ಪಿ.ಯು ವಿದ್ಯಾರ್ಥಿಗಳು |  ಗರಿಗೆದರಿದ ” ಫಿಲೋ ಸಂಭ್ರಮ”-ಕೆಸರ್ಡ್ ಒಂಜಿ ದಿನ Read More »

ಶ್ರೀ ಲಕ್ಷ್ಮೀ ದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಸಂಭ್ರಮದ ನಾಗರಪಂಚಮಿ

ಪುತ್ತೂರು: ನಗರದ ರೈಲ್ವೇ ನಿಲ್ದಾಣದ ಬಳಿ ಇರುವ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಸಂಭ್ರಮದ ನಾಗರಪಂಚಮಿಯನ್ನು ಸೋಮವಾರ ಆಚರಿಸಲಾಯಿತು. ಕ್ಷೇತ್ರದ ನಾಗಸನ್ನಿಧಿಯಲ್ಲಿ ಕ್ಷೀರಾಭಿಷೇಕ, ಸೀಯಾಳಾಭಿಷೇಕ, ನಾಗತಂಬಿಲ ಸೇರಿದಂತೆ ವಿವಿಧ ಸೇವಾ ಕಾರ್ಯಗಳನ್ನು ನೆರವೇರಿಸಲಾಯಿತು. ಕ್ಷೇತ್ರದ ಧರ್ಮದರ್ಶಿ ಐತ್ತಪ್ಪ ಸಪಲ್ಯ ಸೇರಿದಂತೆ ನೂರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.

ಶ್ರೀ ಲಕ್ಷ್ಮೀ ದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಸಂಭ್ರಮದ ನಾಗರಪಂಚಮಿ Read More »

error: Content is protected !!
Scroll to Top