ಪುತ್ತೂರು

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ

ಶಾಂತಿಮೊಗರು: ಕಾಣಿಯೂರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ ಆಚರಣೆ ಸೋಮವಾರ ನಡೆಯಿತು. ಬೆಳಿಗ್ಗೆ ಶ್ರೀ ಕ್ಷೇತ್ರದ ನಾಗಸನ್ನಿಧಿಯಲ್ಲಿ ನಾಗತಂಬಿಲ, ಹಾಲಿನ ಅಭಿಷೇಕ ನಡೆಯಿತು. ದೇವಸ್ಥಾನದ ಅರ್ಚಕ ರಮಾನಂದ್ ಭಟ್ ವಿವಿಧ ಪೂಜಾ ವಿಧಿ ವಿಧಾನ ನೆರವೇರಿಸಿದರು. ಈ ಸಂದರ್ಭದಲ್ಲಿ ಭಕ್ತಾದಿಗಳು ಹಾಲು, ಸೀಯಾಳಾ ಅರ್ಪಿಸಿದರು.

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ Read More »

ಬಡಗನ್ನೂರು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ | ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಪುತ್ತೂರು: ಬಡವರ ಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ತಾನು ಶಾಸಕನಾಗಿ ಮೊದಲ ಆದ್ಯತೆ ನೀಡುತ್ತೇನೆ. ಸರಕಾರದ ಯೋಜನೆಗಳು ಎಲ್ಲ ಅರ್ಹ ಫಲಾನುಭವಿಗಳಿಗೂ ಸಿಗುವಂತಾಗಬೇಕು ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬಡಗನ್ನೂರು ವಲಯ ಕಾಂಗ್ರೆಸ್ ವತಿಯಿಂದ ಬಡಗನ್ನೂರು ಗ್ರಾಪಂ ಸಭಾಂಗಣದಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದರು. ಐದು ಗ್ಯಾರಂಟಿ ಯೋಜನೆಗಳು ಇಂದು ಎಲ್ಲರ ಮನೆಯನ್ನು ಬೆಳಗಿಸಿದೆ. ಅಧಿಕಾರಕ್ಕೆ ಬಂಧ ಮೂರೇ ತಿಂಗಳೊಳಗೆ ಗ್ಯಾರಂಟಿಯನ್ನು ಈಡೇರಿಸಿದ್ದೇವೆ ಇದು ಕಾಂಗ್ರೆಸ್ ಪಕ್ಷದ ತಾಕತ್ತು ರಂದು ಶಾಸಕರು ಹೇಳಿದರು.

ಬಡಗನ್ನೂರು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ | ಸಾರ್ವಜನಿಕರಿಂದ ಅಹವಾಲು ಸ್ವೀಕಾರ Read More »

ನೆಟ್ಟಣಿಗೆ ಮುಡ್ನೂರು ಗ್ರಾಪಂ ಚುನಾವಣೆ | ಅಕ್ರಮ ನಡೆದಿದೆ ಎಂದು ಪುತ್ತಿಲ ಪರಿವಾರ  Vs ಬಿಜೆಪಿ ಪ್ರತಿಭಟನೆ

ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪುತ್ತಿಲ ಪರಿವಾರ ಹಾಗೂ ಬಿಜೆಪಿಯವರು ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ. ಈ ಪಂಚಾಯಿತಿಯಲ್ಲಿ 21 ಸದಸ್ಯ ಬಲ ಹೊಂದಿದೆ. ವಿಶೇಷವೆಂದರೆ 23 ಬ್ಯಾಲೆಟ್ ಪೇಪರ್ ಚಲಾವಣೆಯಾಗಿದ್ದು , ಇದು ಹೇಗೆ ಎಂದು ಪ್ರಶ್ನಿಸಿ ಪಂಚಾಯಿತಿ ಎದುರು ಪ್ರತಿಭಟನಾಕಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಪುತ್ತಿಲ ಪರಿವಾರ ಹಾಗೂ ಬಿಜೆಪಿ ಬೆಂಬಲಿಗರು ಚುನಾವಣಾಧಿಕಾರಿಗಳಿಗೆ ದಿಕ್ಕಾರ ಕೂಗಿ ಪ್ರತಿಭಟಿಸುತ್ತಿದ್ದಾರೆ.

ನೆಟ್ಟಣಿಗೆ ಮುಡ್ನೂರು ಗ್ರಾಪಂ ಚುನಾವಣೆ | ಅಕ್ರಮ ನಡೆದಿದೆ ಎಂದು ಪುತ್ತಿಲ ಪರಿವಾರ  Vs ಬಿಜೆಪಿ ಪ್ರತಿಭಟನೆ Read More »

ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಪ್ರಾರ್ಥನೆ | ಸುಳ್ಯ ಅಜ್ಜಾವರದ ಅಯ್ಯಪ್ಪ ಭಕ್ತರಿಂದ ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ಪ್ರಾರ್ಥನೆ

ಸುಳ್ಯ: ಸೌಜನ್ಯ ಕೊಲೆ ನೈಜ ಆರೋಪಿಗಳು ಆದಷ್ಟು ಬೇಗ ಪತ್ತೆಯಾಗಿ ಸೂಕ್ತ ಶಿಕ್ಷೆಯಾಗುವಂತೆ ಅಜ್ಜಾವರ ಗ್ರಾಮದ ಶಿವಪ್ರಕಾಶ್ ಗುರುಸ್ವಾಮಿ ಅವರ ನೇತೃತ್ವದಲ್ಲಿ ತೆರಳಿದ ಅಯ್ಯಪ್ಪ ಭಕ್ತರು ಶಬರಿಮಲೆಯಲ್ಲಿ ಇಂದು ಮುಂಜಾನೆ ಪ್ರಾರ್ಥನೆ ಮಾಡಿದರು. ಈ ಪ್ರಕರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಕೆಟ್ಟ ಹೆಸರುಗಳು ಕೇಳಿ ಬರುತ್ತಿದ್ದು, ಅಯ್ಯಪ್ಪನ ಕೃಪಾಕಟಾಕ್ಷದಿಂದ ಮುಂದಿನ ಸಂಕ್ರಮಣದೊಳಗೆ ದುಷ್ಕೃತ್ಯ ಎಸಗಿದವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಅಯ್ಯಪ್ಪ ಸನ್ನಿಧಾನದಲ್ಲಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಸಮಾಜ ಸೇವಕ ಡಾ.ರವಿ ಕಕ್ಕೆಪದವು ಮತ್ತಿತರರು ಉಪಸ್ಥಿತರಿದ್ದರು.

ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಪ್ರಾರ್ಥನೆ | ಸುಳ್ಯ ಅಜ್ಜಾವರದ ಅಯ್ಯಪ್ಪ ಭಕ್ತರಿಂದ ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ಪ್ರಾರ್ಥನೆ Read More »

ಕುದ್ಮಾರು ಅನ್ಯಾಡಿ ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದಲ್ಲಿ ನಾಗರಪಂಚಮಿ

ಕುದ್ಮಾರು: ಕುದ್ಮಾರು ಗ್ರಾಮದ ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ನಾಗಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ಶ್ರೀ ನಾಗದೇವರಿಗೆ ಹಾಲಿನ ಅಭಿಷೇಕ ನಡೆಯಿತು. ಭಕ್ತಾದಿಗಳು ಶ್ರೀ ನಾಗದೇವರಿಗೆ ಹಾಲು, ಸೀಯಾಳ ಅರ್ಪಿಸಿದರು. ಬೆಳಗ್ಗಿನಿಂದಲೇ ಭಕ್ತಾದಿಗಳು ಆಗಮಿಸಿ ಸಂಭ್ರಮದ ನಾಗರಪಂಚಮಿ ಹಬ್ಬದಲ್ಲಿ ಪಾಲ್ಗೊಂಡರು.

ಕುದ್ಮಾರು ಅನ್ಯಾಡಿ ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದಲ್ಲಿ ನಾಗರಪಂಚಮಿ Read More »

ಬೆಳಂದೂರು ಗ್ರಾಪಂ ಅಧ್ಯಕ್ಷರಾಗಿ ಪಾರ್ವತಿ ಮರಕ್ಕಡ, ಉಪಾಧ್ಯಕ್ಷರಾಗಿ ಜಯಂತ ಅಬೀರ ಆಯ್ಕೆ

ಬೆಳಂದೂರು ಗ್ರಾಪಂ ಎರಡನೇ ಅವಧಿಗೆ ಅಧ್ಯಕ್ಷರಾಗಿ ಪಾರ್ವತಿ ಮರಕ್ಕಡ, ಉಪಧ್ಯಕ್ಷರಾಗಿ ಜಯಂತ ಅಬೀರ ಆಯ್ಕೆಯಾಗಿದ್ದಾರೆ. ಒಟ್ಟು 15 ಸದಸ್ಯ ಬಲವಿರುವ ಪಂಚಾಯತ್‍ನಲ್ಲಿ 10 ಬಿಜೆಪಿ, 5 ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದಾರೆ. ಈ ಸಂದರ್ಭದಲ್ಲಿ ಪಂಚಾಯಿತಿ ಸದಸ್ಯರು, ನಿಕಟಪೂರ್ವ ಅಧ್ಯಕ್ಷ-ಉಪಾಧ್ಯಕ್ಷರು, ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

ಬೆಳಂದೂರು ಗ್ರಾಪಂ ಅಧ್ಯಕ್ಷರಾಗಿ ಪಾರ್ವತಿ ಮರಕ್ಕಡ, ಉಪಾಧ್ಯಕ್ಷರಾಗಿ ಜಯಂತ ಅಬೀರ ಆಯ್ಕೆ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ನಾಗನಿಗೆ ಹಾಲಿನ ಅಭಿಷೇಕ

ಕಾಣಿಯೂರು : ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ಅಂಗವಾಗಿ ನಾಗದೇವರಿಗೆ ಹಾಲಿನ ಅಭಿಷೇಕ ನಡೆಯಿತು. ದೇವಸ್ಥಾನದ ಅರ್ಚಕ ಜಿನೇಶ್ ಭಟ್ ಬರೆಪ್ಪಾಡಿ ಪೂಜಾ ವಿಧಿ ವಿಧಾನ ನಡೆಸಿದರು. ಈ ಸಂದರ್ಭದಲ್ಲಿ ಭಕ್ತಾದಿಗಳು ಹಾಲು, ಸೀಯಾಳ ಅರ್ಪಿಸಿದರು.

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ನಾಗನಿಗೆ ಹಾಲಿನ ಅಭಿಷೇಕ Read More »

ಶರವೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ನಾಗರಪಂಚಮಿ

ಕಡಬ : ಕಡಬ ತಾಲೂಕಿನ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗತಂಬಿಲ, ಕ್ಷೀರಾಭಿಷೇಕ ಸೇವೆ, ಪಂಚಾಮೃತಾಭಿಷೇಕ ಸೇವೆ ಸೋಮವಾರ ಬೆಳಿಗ್ಗೆ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಭಕ್ತಾದಿಗಳು ಸೇವೆ ಮಾಡಿಸಿ ಪ್ರಸಾದ ಸ್ವೀಕರಿಸಿದರು. ಮಧ್ಯಾಹ್ನದ ಮಹಾಪೂಜೆ ಬಳಿಕ ಆಗಮಿಸಿದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಜರಗಿತು.

ಶರವೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ನಾಗರಪಂಚಮಿ Read More »

ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾವು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾವು ನೇತೃತ್ವದಲ್ಲಿ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ಸಭಾ ಭವನದಲ್ಲಿ ನಡೆಯುವ 40ನೇ ವರ್ಷದ  ಗಣೇಶೋತ್ಸವ ಕಾರ್ಯಕ್ರಮ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿಯಂದು ನಡೆಸುವ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಿತು. ಕಾವು  ಶ್ರೀ ಗಣೇಶೋತ್ಸವ ಸಮಿತಿಯ  ಗೌರವಾಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ, ಅಧ್ಯಕ್ಷ ನವೀನ್ ನನ್ಯ ಪಟ್ಟಾಜೆ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್  ಮಂಜಲ್ತಡ್ಕ, ಜೊತೆ

ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಇಂದು ಶ್ರಾವಣ ಮಾಸದ ಪ್ರಥಮ ಹಬ್ಬ ನಾಗರಪಂಚಮಿ | ನಾಗ ಪೂಜೆಯ ಮಹತ್ವವೇನು |  ನಾಗದೇವರನ್ನು ಯಾಕೆ ಪೂಜಿಸಬೇಕು ?|ಇಲ್ಲಿದೆ ಡಿಟೈಲ್ಸ್

ಪುತ್ತೂರು: ನಾಗರಪಂಚಮಿ ಹಬ್ಬಗಳ ತಿಂಗಳಾಗಿರುವ ಶ್ರಾವಣಮಾಸದಲ್ಲಿ ಬರುವ ಪ್ರಥಮ ಹಬ್ಬ. ಶ್ರಾವಣ ಶುಕ್ಲ ಪಂಚಮಿಯಂದು (ಈ ಬಾರಿ ಆ.21 ಸೋಮವಾರ) ಆಚರಿಸಲಾಗುತ್ತದೆ. ಈ ದಿನದಂದು ಸ್ತ್ರೀಯರು ಸಹೋದರನ ಹೆಸರಿನಲ್ಲಿ ಉಪವಾಸ ಮಾಡುತ್ತಾರೆ. ಹೊಸ ಬಟ್ಟೆ ಧರಿಸಿ, ನಾಗದೇವರನ್ನು ಪೂಜಿಸಿ, ಹಾಲಿನ ನೈವೇದ್ಯವನ್ನು ಅರ್ಪಿಸುತ್ತಾರೆ. ನಾಗಗಳ ಪೂಜೆಯನ್ನು ಮಾಡುವುದರಿಂದ ಸರ್ಪಭಯ ಉಳಿಯುವುದಿಲ್ಲ. ಜತೆಗೆ ವಿಷಭಯದ ಸಂಕಟ ತಪ್ಪುತ್ತದೆ ಎಂದು ಭಕ್ತರಲ್ಲಿ ಬಲವಾದ ನಂಬಿಕೆಯಿದೆ. ಉಪವಾಸದಿಂದ ಶಕ್ತಿ ಹೆಚ್ಚಾಗಿ ಅದರ ಫಲ ಲಭಿಸುತ್ತದೆ. ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ

ಇಂದು ಶ್ರಾವಣ ಮಾಸದ ಪ್ರಥಮ ಹಬ್ಬ ನಾಗರಪಂಚಮಿ | ನಾಗ ಪೂಜೆಯ ಮಹತ್ವವೇನು |  ನಾಗದೇವರನ್ನು ಯಾಕೆ ಪೂಜಿಸಬೇಕು ?|ಇಲ್ಲಿದೆ ಡಿಟೈಲ್ಸ್ Read More »

error: Content is protected !!
Scroll to Top