ಪುತ್ತೂರು

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವಿಶೇಷ ಸಾಧನೆಗೆ ಎಸ್‍ಸಿಡಿಸಿಸಿ ಬ್ಯಾಂಕ್‍ ನಿಂದ ಪ್ರಶಸ್ತಿ | ಪ್ರಶಸ್ತಿ ಸ್ವೀಕರಿಸಿದ ಅಧ್ಯಕ್ಷ ಚಿದಾನಂದ ಬೈಲಾಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್

ಪುತ್ತೂರು: ಕಡಬ, ಉಪ್ಪಿನಂಗಡಿ, ನೆಲ್ಯಾಡಿ, ಕುಂಬ್ರ, ಆಲಂಕಾರು, ಕಾಣಿಯೂರು, ಪುತ್ತೂರು ಸೇರಿದಂತೆ 9 ಶಾಖೆಗಳನ್ನು ಹೊಂದಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ 2022-23ನೇ ಸಾಲಿನ ಆರ್ಥಿಕ ವರ್ಷದಲ್ಲಿ ಮಾಡಿದ ವಿಶಿಷ್ಟ ಸಾಧನೆಗಾಗಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ ನಿಂದ ಆ.19 ರಂದು ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಪ್ರಶಸ್ತಿ ಸ್ವೀಕರಿಸಿದರು. ಎಸ್‍ಸಿಡಿಸಿಸಿ ಬ್ಯಾಂಕ್‍ ಅಧ್ಯಕ್ಷ ರಾಜೇಂದ್ರ ಕುಮಾರ್ ಹಾಗೂ ನಿರ್ದೇಶಕರು ಪ್ರಶಸ್ತಿ ಪ್ರದಾನ ಮಾಡಿದರು. ಸತತ ಎರಡನೇ […]

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವಿಶೇಷ ಸಾಧನೆಗೆ ಎಸ್‍ಸಿಡಿಸಿಸಿ ಬ್ಯಾಂಕ್‍ ನಿಂದ ಪ್ರಶಸ್ತಿ | ಪ್ರಶಸ್ತಿ ಸ್ವೀಕರಿಸಿದ ಅಧ್ಯಕ್ಷ ಚಿದಾನಂದ ಬೈಲಾಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ Read More »

ಬೆಟ್ಟಂಪಾಡಿಯ ಸ. ಪ. ಕಾಲೇಜಿನಲ್ಲಿ ‘ವಿಶೇಷ ಉಪನ್ಯಾಸ ಕಾರ್ಯಕ್ರಮ’

ಪುತ್ತೂರು: ಬೆಟ್ಟಂಪಾಡಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಕಾಲೇಜಿನ ಕಾನೂನು ಅರಿವು – ನೆರವು ಘಟಕದ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ಉಪನಿರೀಕ್ಷಕ ಧನಂಜಯ ಬಿ.ಸಿ. ‘ಡ್ರಗ್ಸ್ ಮುಕ್ತ ಸಮಾಜ’ ಎಂಬ ವಿಷಯದ ಬಗ್ಗೆ ಮಾತನಾಡಿ, ಮದ್ಯಪಾನ, ಧೂಮಪಾನ ಮತ್ತು ಡ್ರಗ್ಸ್‌ಗಳಂತಹ ಸಾಮಾಜಿಕ ಪಿಡುಗುಗಳಿಗೆ ಯುವ ಜನಾಂಗ ದಾಸರಾಗಿ ಅನೇಕ ಕಾಯಿಲೆಗಳಿಗೆ ತುತ್ತಾಗುವುದರ ಜತೆಗೆ ದೇಶ ದುರ್ಬಲಗೊಳಿಸುತ್ತಿದ್ದಾರೆ ಎಂದರು. ಇಂತಹ ಪರಿಸ್ಥಿತಿಯನ್ನು ತೊಡೆದು ಹಾಕಿ

ಬೆಟ್ಟಂಪಾಡಿಯ ಸ. ಪ. ಕಾಲೇಜಿನಲ್ಲಿ ‘ವಿಶೇಷ ಉಪನ್ಯಾಸ ಕಾರ್ಯಕ್ರಮ’ Read More »

ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

ಪುಣಚ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆ.19 ಶನಿವಾರ ನಡೆಯಿತು. ಬ್ರಹ್ಮಶ್ರೀ ವರ್ಕಾಡಿ ಗಣೇಶ ತಂತ್ರಿಗಳ ನೇತ್ರತ್ವದಲ್ಲಿ, ವೇದಮೂರ್ತಿ ಶ್ರೀವತ್ಸ ಕೆದಿಲಾಯರವರ ಪೌರೋಹಿತ್ಯದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಪೂಜೆಯ ಬಳಿಕ ಮಹಾಪೂಜೆ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಿತು. ಕಾರ್ಯಕ್ರಮದಲ್ಲಿ ನೂರಾರು ಭಕ್ತಾಧಿಗಳು  ಭಾಗವಹಿಸಿದ್ದರು.

ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ತೀರ್ಥಸ್ಥಾನ

ಕಾಣಿಯೂರು: ಇತಿಹಾಸ ಪ್ರಸಿದ್ಧ ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಮೊದಲ ಶನಿವಾರದ ವಿಶೇಷ ತೀರ್ಥಸ್ನಾನವು ಆ 19ರಂದು ನಡೆಯಿತು. ಭಕ್ತಾದಿಗಳು ಮುಂಜಾನೆಯಿಂದಲೇ ಶ್ರೀ ದೇವಸ್ಥಾನಕ್ಕೆ ಆಗಮಿಸಿ ತೀರ್ಥಸ್ಥಾನ ಮಾಡಿದರು. ಬಳಿಕ ದೇವರ ದರ್ಶನ ಮಾಡಿದರು. ಮುಂದಿನ ವಿಶೇಷ ತೀರ್ಥಸ್ಥಾನ ಆ.26, ಸೆ.2, ಸೆ.9 ಹಾಗೂ ಸೆ.16 ರಂದು ನಡೆಯಲಿವೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ತೀರ್ಥಸ್ಥಾನ Read More »

ನಾಳೆ (ಆ.20) : ಮೌನಕ್ರಾಂತಿ ಹರಿಕಾರ ಡಿ.ದೇವರಾಜ ಅರಸು 108ನೇ ಜನ್ಮ ದಿನಾಚರಣೆ

ಪುತ್ತೂರು: ತಾಲೂಕು ಆಡಳಿತ, ತಾಲೂಕು ಪಂಚಾಯತ್, ನಗರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ, ಮೌನಕ್ರಾಂತಿಯ ಹರಿಕಾರ ಡಿ.ದೇವರಾಜ ಅರಸುರವರ 108ನೇ ಜನ್ಮ ದಿನಾಚರಣೆ ಆ.20 ಭಾನುವಾರ ಬೆಳಿಗ್ಗೆ 10.30 ಕ್ಕೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ. ಶಾಸಕ ಅಶೋಕ್ ಕುಮಾರ್ ರೈ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಸಹಾಯಕ ಆಯುಕ್ತ ಗಿರೀಶ್ ನಂದನ್ ಸಂಸ್ಮರಣಾ ಜ್ಯೋತಿ ಪ್ರಜ್ವಲನೆ ಮಾಡುವರು. ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಜೆ.ಶಿವಶಂಕರ್, ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ,

ನಾಳೆ (ಆ.20) : ಮೌನಕ್ರಾಂತಿ ಹರಿಕಾರ ಡಿ.ದೇವರಾಜ ಅರಸು 108ನೇ ಜನ್ಮ ದಿನಾಚರಣೆ Read More »

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಪುತ್ತೂರು: ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ಬೆಳ್ಳಾರೆಯ ಸರಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ. ವಿ ಸೂರ್ಯನಾರಾಯಣ  ಹೇಳಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ನಡೆದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ದೃಢತೆಯ ಕಡೆಗೆ ಗುರಿಯನ್ನು ಇಟ್ಟುಕೊಂಡು ನಡೆದಾಗ ನಮ್ಮ ವಿದ್ಯಾಸಂಸ್ಥೆ ನೀಡಿದ ಶಿಕ್ಷಣ ಸಾರ್ಥಕವಾಗುತ್ತದೆ. ಜೊತೆಗೆ ಮಾನವೀಯತೆಯನ್ನು ರೂಢಿಸಿಕೊಂಡು ಬಾಳಿದರೆ ಮಾತ್ರ ಗೌರವ ಸಿಗುತ್ತದೆ.

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ Read More »

ಆ.25 : ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ | ದಶಮಾನೋತ್ಸವ ಕಾರ್ಯಕ್ರಮ

ಪುತ್ತೂರು: ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯ ದಶಮಾನೋತ್ಸವ ಕಾರ್ಯಕ್ರಮ ಆ.25ರಂದು 8.30ರಿಂದ ನಾಗರಾಜ ಭಟ್ ಸುಳ್ಯ ನೇತೃತ್ವದಲ್ಲಿ ನಡೆಯಲಿದೆ ಎಂದು ಪೂಜಾ ಸಮಿತಿಯ ಗೌರವಾಧ್ಯಕ್ಷೆ ಸರೋಜಿನಿ ವಿ. ನಾಗಪ್ಪಯ್ಯ ಹೇಳಿದರು. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬೆಳಗ್ಗೆ 8.30ರಿಂದ ಸಂಕಲ್ಪ ವ್ರತಧಾರಣೆ, 11ಗಂಟೆಗೆ ದಶಮಾನೋತ್ಸವ ಸಭಾ ಕಾರ್ಯಕ್ರಮ, ಅಭಿನಂದನೆ, ಲಕ್ಷ್ಮೀ ಕಟಾಕ್ಷ ಅದೃಷ್ಟ ಚೀಟಿಯ ಡ್ರಾ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, 3ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಯಕ್ಷಗಾನ ನಾಟ್ಯ ವೈಭವ,

ಆ.25 : ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ | ದಶಮಾನೋತ್ಸವ ಕಾರ್ಯಕ್ರಮ Read More »

ಸವಣೂರು ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಹಾಗೂ ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರ ಜಂಟಿ ಆಶ್ರಯದಲ್ಲಿ ಸವಣೂರು ವಲಯ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾಟವು ಶುಕ್ರವಾರ ಸರಸ್ವತಿ ಶಾಲಾ ಕ್ರೀಡಾಂಗಣದಲ್ಲಿ ಜರುಗಿತು. ನರಿಮೊಗರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹರಿಣಿ ನಿತ್ಯಾನಂದ ಪಂಜಳ ಪಂದ್ಯಾಟ ಉದ್ಘಾಟಿಸಿ ಶುಭ ಹಾರೈಸಿದರು. ಶಾಲಾ ಸಂಚಾಲಕ ಅವಿನಾಶ್ ಕೊಡಂಕಿರಿ ಅಧ್ಯಕ್ಷತೆ ವಹಿಸಿದ್ದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶಿವನಾಥ ರೈ ಮೇಗಿನಗುತ್ತು, ಆಡಳಿತಾಧಿಕಾರಿ ಶುಭಾ ಅವಿನಾಶ್, ನೋಡಲ್ ಅಧಿಕಾರಿ ಬಾಲಕೃಷ್ಣ ಸವಣೂರು ಮತ್ತು

ಸವಣೂರು ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ Read More »

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಅಂಚೆ ಸೇವೆಗಳ ಬಗ್ಗೆ ವಿಶೇಷ ಉಪನ್ಯಾಸ

ಪುತ್ತೂರು:  ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಅಂಚೆ ಸೇವೆಗಳ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕಿಯಾಗಿ ಪುತ್ತೂರು ಅಂಚೆ ವಿಭಾಗದ ಮಾರ್ಕೆಟಿಂಗ್ ಕಾರ್ಯನಿರ್ವಾಹಕ ಗುರುಪ್ರಸಾದ್ ಕೆ ಎಸ್ ಮಾತನಾಡಿ, ಅಂಚೆ ಕಚೇರಿಯಲ್ಲಿ ಸಿಗುವ ಬ್ಯಾಂಕ್ ಸೇವೆಗಳು, ಅಂಚೆ ವಿಮೆ, ಆಕ್ಸಿಡೆಂಟ್ ಪರಿಹಾರ ವಿಮೆ, ವಿವಿಧ ಪೆನ್ಷನ್ ಫಂಡ್  ಹಾಗೂ ಅಂಚೆ ವಿಭಾಗದಲ್ಲಿ ಇರುವ ವಿವಿಧ ಉದ್ಯೋಗದ ಅವಕಾಶಗಳ ಬಗ್ಗೆ ಬೆಳಕು ಚೆಲ್ಲಿದರು. ಪೋಸ್ಟಲ್ ಆರ್ಡರ್, ವಿವಿಧ

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಅಂಚೆ ಸೇವೆಗಳ ಬಗ್ಗೆ ವಿಶೇಷ ಉಪನ್ಯಾಸ Read More »

ಪುತ್ತಿಲ ಪರಿವಾರದಿಂದ ದೈವನರ್ತಕ ರಮೇಶ್ ಅಜಲರ ಮನೆಗೆ ಭೇಟಿ | ಸಹಾಯ ಧನ  ಹಸ್ತಾಂತರ

ಪುತ್ತೂರು: ದೈವ ನರ್ತನ ಸೇವೆಗೈಯುವ ಖ್ಯಾತ ಕುಟುಂಬವಾದ ಪೆರ್ಲಂಪಾಡಿಯ  ರಮೇಶ್ ಅಜಲರು ಕೆಲ ಸಮಯಗಳಿಂದ ಅನಾರೋಗ್ಯ ಪೀಡಿತರಾಗಿದ್ದು, ಅವರ ಮನೆಗೆ ಪುತ್ತಿಲ ಪರಿವಾರದವರು ಭೇಟಿ ನೀಡಿದರು. ಪುತ್ತಿಲ ಪರಿವಾರದ ವತಿಯಿಂದ  ರಮೇಶ್ ರ ಮನೆಗೆ ಭೇಟಿ ನೀಡಿ ಧನಸಹಾಯ ಮತ್ತು ಮನೆಗೆ ಬೇಕಾದ ಅಗತ್ಯ ವಸ್ತುಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ, ನಗರಾಧ್ಯಕ್ಷ ಅನಿಲ್ ತೆಂಕಿಲ, ಉಪಾಧ್ಯಕ್ಷ ರಾಜ್ ಶೆಟ್ಟಿ , ಶನ್ಮಿತ್ ರೈ, ಕೊಳ್ತಿಗೆ ಗ್ರಾಮದ ಸತ್ಯಪ್ರಕಾಶ್ ಕುಂಟಿಕಾನ,  ಕಾರ್ಯದರ್ಶಿ

ಪುತ್ತಿಲ ಪರಿವಾರದಿಂದ ದೈವನರ್ತಕ ರಮೇಶ್ ಅಜಲರ ಮನೆಗೆ ಭೇಟಿ | ಸಹಾಯ ಧನ  ಹಸ್ತಾಂತರ Read More »

error: Content is protected !!
Scroll to Top