ಪುತ್ತೂರು

ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷರಾಗಿ ಕುಸುಮ್ ರಾಜ್, ಕಾರ್ಯದರ್ಶಿಯಾಗಿ ಅಭೀಷ್ ಕೆ, ಕೋಶಾಧಿಕಾರಿಯಾಗಿ ಸಚಿನ್ ನಾಯಕ್, ವಲಯ ಸೇನಾನಿ ಭರತ್ ಪೈ ಆಯ್ಕೆ

ಪುತ್ತೂರು: ಅಂತರ್ರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಪುತ್ತೂರು ಯುವ ಇದರ 2025-26ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ಜರಗಿದ್ದು ನೂತನ ಅಧ್ಯಕ್ಷರಾಗಿ ಕುಸುಮ್ ರಾಜ್, ಕಾರ್ಯದರ್ಶಿಯಾಗಿ ಅಭೀಷ್ ಕೆ, ಕೋಶಾಧಿಕಾರಿಯಾಗಿ  ಸಚಿನ್ ನಾಯಕ್ ರವರು, ವಲಯ ಸೇನಾನಿಯಾಗಿ ಕ್ಲಬ್ ಸದಸ್ಯ ಭರತ್ ಪೈರವರು ಅಯ್ಕೆಯಾಗಿರುತ್ತಾರೆ. ಉಳಿದಂತೆ ನಿಕಟಪೂರ್ವ ಅಧ್ಯಕ್ಷರಾಗಿ ಅಶ್ವಿನಿಕೃಷ್ಣ ಮುಳಿಯ, ಉಪಾಧ್ಯಕ್ಷೆ ಹಾಗೂ  ಕ್ಲಬ್ ಸರ್ವಿಸ್ ನಿರ್ದೇಶಕರಾಗಿ ವಚನ ಜಯರಾಮ್, ಸಾರ್ಜಂಟ್ ಎಟ್ ಆಮ್ಸ್೯ ಹರಿಪ್ರಸಾದ್, ವೊಕೇಶನಲ್ ಸರ್ವಿಸ್ […]

ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷರಾಗಿ ಕುಸುಮ್ ರಾಜ್, ಕಾರ್ಯದರ್ಶಿಯಾಗಿ ಅಭೀಷ್ ಕೆ, ಕೋಶಾಧಿಕಾರಿಯಾಗಿ ಸಚಿನ್ ನಾಯಕ್, ವಲಯ ಸೇನಾನಿ ಭರತ್ ಪೈ ಆಯ್ಕೆ Read More »

ರಾಜ್ಯ ಸರಕಾರದ ಹಿಂದೂ ವಿರೋಧಿ ಧೋರಣೆ ವಿರುದ್ಧ ಹಿಂಜಾವೇ ಯಿಂದ ಬೃಹತ್‍ ಪ್ರತಿಭಟನೆ

ಪುತ್ತೂರು: ರಾಜ್ಯ ಸರಕಾರ ಹಿಂದೂ ವಿರೋಧಿ ಧೋರಣೆಯ ಮೂಲಕ ಹಿಂದೂ ಸಂಘಟನೆಗಳ ಸಾಮಾಜಿಕ ಕಾರ್ಯಕರ್ತರ ಮೇಲೆ ಕಾನೂನು ವಿರೋಧಿ ಕ್ರಮಗಳನ್ನು ನಡೆಸುತ್ತಿದೆ ಎಂದು ರಾಜ್ಯ ಸರಕಾರದ ನಿಲುವನ್ನು ಖಂಡಿಸಿ ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ ಪರಿವಾರ ಸಂಘಟನೆಗಳ ಸಹಭಾಗಿತ್ವದಲ್ಲಿ ಬೃಹತ್ ಪ್ರತಿಭಟನೆ ಸೋಮವಾರ ಸಂಜೆ ದರ್ಬೆ ವೃತ್ತದಲ್ಲಿ ನಡೆಯಿತು. ಹಿಂದು ಜಾಗರಣ ವೇದಿಕೆ ಕರ್ನಾಟಕ ಪ್ರಾಂತದ ಕಾರ್ಯಾಕಾರಿಣಿ ಸದಸ್ಯ ಅಜಿತ್ ಕೊಡಗು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ,  ರಾಜ್ಯದ ಕಾಂಗ್ರೆಸ್ ಸರಕಾರ ಇವತ್ತು ಹಿಂದು ಕಾರ್ಯಕರ್ತರನ್ನು ಯಾವುದೇ ಕಾರ್ಯಕ್ರಮಕ್ಕೆ ಹೋಗದಂತೆ

ರಾಜ್ಯ ಸರಕಾರದ ಹಿಂದೂ ವಿರೋಧಿ ಧೋರಣೆ ವಿರುದ್ಧ ಹಿಂಜಾವೇ ಯಿಂದ ಬೃಹತ್‍ ಪ್ರತಿಭಟನೆ Read More »

ಹಾಲಿನ ವಾಹನ ಪಾದಚಾರಿ ಮೇಲ್ಸೇತುವೆಗೆ ಡಿಕ್ಕಿ

ಪುತ್ತೂರು: ನಗರದ ಮಂಜಲ್ಪಡ್ಪುವಿನಲ್ಲಿ ಹಾಲಿನ ವಾಹನವೊಂದು ಪಾದಚಾರಿ ಮೇಲ್ಸೆತುವೆಗೆ ಅಪ್ಪಳಿಸಿದೆ. ಸೋಮವಾರ ಸಂಜೆ ಘಟನೆ ನಡೆದಿದ್ದು, ಮಂಗಳೂರು ಕಡೆಯಿಂದ ಬರುತ್ತಿದ್ದ ಹಾಲಿನ ವಾಹನ ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಯಾರಿಗೂ ಅಪಾಯವಾಗಿಲ್ಲ. ವಾಹನ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಹಾಲಿನ ವಾಹನ ಪಾದಚಾರಿ ಮೇಲ್ಸೇತುವೆಗೆ ಡಿಕ್ಕಿ Read More »

ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಾಲಯದಲ್ಲಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ತಪ್ತ ಮುದ್ರಾಧಾರಣೆ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜು.6ರಂದು ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಭಕ್ತರಿಗೆ ತಪ್ತ ಮುದ್ರಾಧಾರಣೆ ನಡೆಯಿತು. ಈ ಸಂದರ್ಭದಲ್ಲಿ 250ಕ್ಕೂ ಹೆಚ್ಚು ಭಕ್ತರು ತಪ್ತ ಮುದ್ರಾಧಾರಣೆ ಹಾಕಿಸಿಕೊಂಡರು. ಮುದ್ರಾಧಾರಣೆಯ ಬಗ್ಗೆ ಮಾತನಾಡಿದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ,  ವೃತ್ತಾಸುರನು ದೇವತೆಗಳನ್ನು ಸೋಲಿಸಿದಾಗ ಒಂದಾದ ದೇವತೆಯರು ಶ್ರೀ ಮಹಾವಿಷ್ಣುವಿಗೆ ಶರಣಾಗಿ ಅಸುರನ ಸಂಹಾರಕ್ಕೆ ಹೋಗುತ್ತಾರೆ. ಆಗ ಶ್ರೀ ಮಹಾವಿಷ್ಣು ದೇವತೆಗಳಿಗೆ ವೈಷ್ಣವ ಚಿಹ್ನೆಯಾದ ಶಂಖ, ಚಕ್ರ

ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಾಲಯದಲ್ಲಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ತಪ್ತ ಮುದ್ರಾಧಾರಣೆ Read More »

ಸಿಎ ಇಂಟರ್ ಮೀಡಿಯೇಟ್‍ ಪರೀಕ್ಷೆಯಲ್ಲಿ ನಿಧಿರಾಜ್‍ ಎಂ.ಪಿ. ಉತ್ತೀರ್ಣ’

ಪುತ್ತೂರು: ಇನ್ಸ್ಟಿಟ್ಯೂಟ್‌ ಆಫ್‌ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ನಡೆಸುವ ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಯ ಎರಡೂ ಗ್ರೂಪ್‌ಗಳಲ್ಲಿ ಉತ್ತಮ ಅಂಕಗಳನ್ನು ಗಳಿಸುವ ಮೂಲಕ ನಿಧಿರಾಜ್ ಎಂ.ಪಿ. ಉತ್ತೀರ್ಣರಾಗಿದ್ದಾರೆ. ನಿಧಿರಾಜ್‍ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು, 2023-24ನೇ ಶೈಕ್ಷಣಿಕ ವರ್ಷದಲ್ಲಿ ಪಿಯುಸಿ ವ್ಯಾಸಂಗ ಪೂರ್ಣಗೊಳಿಸಿದ್ದರು. ಅವರು ಹಾಸನದ  ಗುಲಾಬಿ.ಕೆ ಅವರ ಪುತ್ರನಾಗಿದ್ದಾರೆ.  

ಸಿಎ ಇಂಟರ್ ಮೀಡಿಯೇಟ್‍ ಪರೀಕ್ಷೆಯಲ್ಲಿ ನಿಧಿರಾಜ್‍ ಎಂ.ಪಿ. ಉತ್ತೀರ್ಣ’ Read More »

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ಕಟ್ಟಡ ಕಾರ್ಮಿಕ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಪುತ್ತೂರು: ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಕನಾರ್ಟಕ ಕಟ್ಟಡ ಕಾರ್ಮಿಕರ ಸಂಘ ಪುತ್ತೂರು ಘಟಕದ ವತಿಯಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಕಟ್ಟಡ ಕಾರ್ಮಿಕರು ದಿನ ನಿತ್ಯದ ದುಡಿಮೆಯಿಂದಲೇ ಕಾರ್ಮಿಕರು ಮತ್ತು ಅವಲಂಬಿತರು ಜೀವನ ನಡೆಸುತ್ತಿದ್ದು ಪ್ರಸ್ತುತ ಕೆಂಪು ಕಲ್ಲು ಮತ್ತು ಮರುಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಗದಿರುವುದರಿಂದ ಬಡ ಕಾರ್ಮಿಕರಿಗೆ ತುಂಬಾ ತೊಂದರೆಯಾಗಿದೆ. ನಿತ್ಯ ಕೆಲಸವನ್ನೇ ನಂಬಿ ಜೀವನ ನಡೆಸುವ ಕಾರ್ಮಿಕರಿಗೆ ಪ್ರಸ್ತುತ  ಕಲ್ಲು ಮತ್ತು ಮರುಳು ಸಿಗದಿರುವುದರಿಂದ ಕೆಲಸವಿಲ್ಲದಂತಾಗಿದೆ.ಅದರ ಬಗ್ಗೆ ತಾವುಗಳು ಪರಿಶೀಲನೆ ನಡೆಸಿ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ಕಟ್ಟಡ ಕಾರ್ಮಿಕ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ Read More »

15ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ, ಶೋಭಯಾತ್ರೆ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ವಿಶ್ವ ಹಿಂದೂ ಪರಿಷದ್ ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಹಾಗೂ ವಿಶ್ವ ಹಿಂದೂ ಪರಿಷದ್‌ ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಶೋಭಯಾತ್ರೆಯ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೋಮವಾರ ಬಿಡುಗಡೆ ಮಾಡಲಾಯಿತು. ಉತ್ಸವ ಸಮಿತಿಯ ಸಂಚಾಲಕ ಅರುಣ್ ಕುಮಾರ್ ರೈ ಆನಾಜೆ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ

15ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ, ಶೋಭಯಾತ್ರೆ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಗೋಮಾಳದ ಜಾಗವನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಪುತ್ತೂರು: ಮುಂಡೂರು ಗ್ರಾಮದಲ್ಲಿರುವ ಗೋಮಾಳಕ್ಕೆ ಮೀಸಲಿರಿಸಿದ ಜಾಗವನ್ನು ಗೋ ಶಾಲೆ ಆರಂಭಿಸಲು ಟ್ರಸ್ಟ್ ಗೆ ನೀಡಬೇಕೆಂದು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಬಗ್ಗೆ ಕಂದಾಯ ಇಲಾಖೆಯವರ ಜೊತೆ ಚರ್ಚಿಸಿ ಮುಂದಿನ ನಿರ್ಧಾರವನ್ನು ತಿಳಿಸುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದರು. ಪುತ್ತೂರಿನಲ್ಲಿ ಗೋವುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಗೋ ಶಾಲೆ ಬೇಕೆಂದು ಸಾರ್ವಜನಿಕರ ಅಭಿಪ್ರಾಯದಂತೆ ಪೂಜ್ಯ ಪೇಜಾವರ ಸ್ವಾಮೀಜಿಗಳು ಕಳೆದ ವರ್ಷದ ಶ್ರೀನಿವಾಸ ಕಲ್ಯಾಣ ಸಂದರ್ಭದಲ್ಲಿ ಗೋ ಶಾಲೆ ಆರಂಬಿಸಬೇಕೆಂಬ ಆಶಯ

ಗೋಮಾಳದ ಜಾಗವನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ Read More »

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಪುತ್ತೂರು ಘಟಕದಿಂದ ಧಾರ್ಮಿಕ ಪುಸ್ತಕಗಳ ಕೊಡುಗೆ

ಪುತ್ತೂರು: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ.ರಿ ಮೆಲ್ಕಾರ್ ಬಂಟ್ವಾಳ ಇದರ ಪುತ್ತೂರು ಘಟಕದ ವತಿಯಿಂದ ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಾಲಯದ ಧಾರ್ಮಿಕ ಗ್ರಂಥಾಲಯಕ್ಕೆ ಸದಸ್ಯರಿಂದ  ಸಂಗ್ರಹಿಸಿದ ಪುಸ್ತಕಗಳನ್ನು ಅರ್ಪಿಸುವ ಕಾರ್ಯಕ್ರಮವು ದೇವಳದ ಆಡಳಿತ ಕಚೇರಿಯಲ್ಲಿ ಜರಗಿತು. ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ ಪುಸ್ತಕಗಳನ್ನು ಸ್ವೀಕರಿಸಿ ಹಿರಿಯರ ಸೇವಾ ಪ್ರತಿಷ್ಠಾನವು ಜ್ಞಾನಪ್ರಸಾರದ ಕಾರ್ಯದಲ್ಲಿ ಕೈಜೋಡಿಸಿರುವುದಕ್ಕೆ ಕೃತಜ್ಞತೆ ವ್ಯಕ್ತಪಡಿಸಿದರು. ಪುತ್ತೂರು ಘಟಕದ ಕೇಂದ್ರ ಸಮಿತಿ ಪ್ರತಿನಿಧಿ ಮತ್ತು ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಮಹಾಬಲ ರೈ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಪುತ್ತೂರು ಘಟಕದಿಂದ ಧಾರ್ಮಿಕ ಪುಸ್ತಕಗಳ ಕೊಡುಗೆ Read More »

ಯುವಕ-ಯುವತಿಯ ಫೋಟೊ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಅಪ್‍ ಲೋಡ್‍ | ಇಬ್ಬರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಇಲ್ಲಿನ ಬಿರುಮಲೆ ಬೆಟ್ಟದಲ್ಲಿ ಯುವಕ ಮತ್ತು ಯುವತಿಯ ಫೋಟೋ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ ಹಿನ್ನಲೆ ಪುತ್ತೂರು ನಗರ ಠಾಣೆಯಲ್ಲಿ ಯುವಕನ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುದ್ಮಾರು, ಕಡಬ ನಿವಾಸಿ ಪುರುಷೋತ್ತಮ (43) ಹಾಗೂ ಆರ್ಯಾಪು, ಪುತ್ತೂರು ನಿವಾಸಿ ರಾಮಚಂದ್ರ (38) ಬಂಧಿತ ವ್ಯಕ್ತಿಗಳು. ಯುವಕರು ಬಿರುಮಲೆ ಗುಡ್ಡೆಯಲ್ಲಿ  ಯುವಕ ಹಾಗೂ ಯುವತಿ ಇರುವಾಗ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿ ತಿಳಿದು ಬಂದಿದೆ. ಈ

ಯುವಕ-ಯುವತಿಯ ಫೋಟೊ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಅಪ್‍ ಲೋಡ್‍ | ಇಬ್ಬರ ವಿರುದ್ಧ ಪ್ರಕರಣ ದಾಖಲು Read More »

error: Content is protected !!
Scroll to Top