ಕಾರ್ಯಕರ್ತರಿಗೆ ಪಕ್ಷದಲ್ಲಿ ವಿಶೇಷ ಸ್ಥಾನ ಮಾನ ಎಂದಿಗೂ ಇದೆ: ಶಾಸಕ ಅಶೋಕ್ ರೈ | ಕಾಂಗ್ರೆಸ್ ಕಾರ್ಯಕರ್ತರ ಸಭೆ
ಪುತ್ತೂರು: ಪಕ್ಷದ ಅಭಿವೃದ್ದಿಯಾಗಬೆಕಾದರೆ ಕಾರ್ಯಕರ್ತರು ಮುಖ್ಯ, ಪಕ್ಷದಲ್ಲಿ ಕಾರ್ಯಕರ್ತರ ನೋವು, ನಲಿವುಗಳಿಗೆ ಸ್ಪಂದನೆ ಮಾಡುವ ಮೂಲಕ ಅವರನ್ನು ಗೌರವಿಸುವ ಕೆಲಸ ಮಾಡಬೇಕು. ಕಾರ್ಯಕರ್ತರಿಗೆ ಪಕ್ಷದಲ್ಲಿ ಎಂದಿಗೂ ಸ್ಥಾನಮಾನ ಇರುತ್ತದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕರ್ತರು ಕಳೆದ ಚುನಾವಣೆಯಲ್ಲಿ ಯಾವುದೇ ಪ್ರತಿಫಲಾಕ್ಷೆಯಿಲ್ಲದೆ ಹಗಲಿರುಳು ದುಡಿದ ಪರಿಣಾಮ ಪುತ್ತೂರಿನಲ್ಲಿ ಕಾಂಗ್ರೆಸ್ ಗೆದ್ದಿದೆ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಕೇವಲ ನಾಯಕರಿಂದ ಮಾತ್ರ ಏನೂ ಮಾಡಲು […]










