ಪುತ್ತೂರು

ಕೊಂಬೆಟ್ಟು ಉದ್ಯಮಿ ಮನೆಯಿಂದ ಕಳವಿಗೆ ಯತ್ನ

ಪುತ್ತೂರು: ಸ್ವರ್ಣೋದ್ಯಮಿಯೊಬ್ಬರ ಮನೆಗೆ ಕಳ್ಳರು ನುಗ್ಗಿ ಕಳವಿಗೆ ಯತ್ನಿಸಿದ ಘಟನೆ ಜು.31 ಸೋಮವಾರ ರಂದು ಬೆಳಕಿಗೆ ಬಂದಿದೆ. ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನ ಜಿ.ಎಲ್ ಬಲರಾಮ ಆಚಾರ್ಯ ಅವರ ಪುತ್ರ ಲಕ್ಷ್ಮೀಕಾಂತ್ ಆಚಾರ್ಯ ಅವರ ಕೊಂಬೆಟ್ಟಿನಲ್ಲಿರುವ ಮನೆಗೆ ಕಳ್ಳರು ನುಗ್ಗಿ ಕಳವಿಗೆ ವಿಫಲ ಯತ್ನ ಮಾಡಿದ್ದಾರೆ. ಕಳವಿಗೆ ಸಂಬಂಧಿಸಿ ಬೆರಳಚ್ಚು ತಜ್ಞರು ಮನೆಗೆ ಆಗಮಿಸಿ ಕೆಲವೊಂದು ಸಾಕ್ಷಾದಾರ ಸಂಗ್ರಹ ಮಾಡುತ್ತಿದ್ದಾರೆ.

ಕೊಂಬೆಟ್ಟು ಉದ್ಯಮಿ ಮನೆಯಿಂದ ಕಳವಿಗೆ ಯತ್ನ Read More »

ಪುತ್ತೂರು ಸಿಟಿಗುಡ್ಡೆ ಶ್ರೀ ಕೃಷ್ಣ ಯುವಕ ಮಂಡಲದ ಸೇವಾ ಯೋಜನೆಯ ಸಹಾಯ ಧನ ಹಸ್ತಾಂತರ

ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿರುವ ಮಂಗಳೂರಿನ ಕುಂಪಲದ ದಿನೇಶ್  ಅವರಿಗೆ ಚಿಕಿತ್ಸಾ ವೆಚ್ಚಕ್ಕೆ ಸಿಟಿಗುಡ್ಡೆ ಶ್ರೀ ಕೃಷ್ಣ ಯುವಕ ಮಂಡಲದ ವತಿಯಿಂದ ಸಹಾಯಧನವನ್ನು ಸೋಮವಾರ ಹಸ್ತಾಂತರಿಸಲಾಯಿತು. ಜುಲೈ  ತಿಂಗಳ ತಂಡದ  ಜೊತೆ ನಿರಂತರವಾಗಿ ಸೇವೆಯಲ್ಲಿ ತೊಡಗಿಕೊಂಡು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ನಿಸ್ವಾರ್ಥ ಸೇವಾರ್ಥಿಗಳ ಸಹಾಯದಿಂದ  8200 ರೂ.ಪಾಯಿಗಳನ್ನು ಅವರ ಮನೆಗೆ ತೆರಳಿ  ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಯುವಕ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪುತ್ತೂರು ಸಿಟಿಗುಡ್ಡೆ ಶ್ರೀ ಕೃಷ್ಣ ಯುವಕ ಮಂಡಲದ ಸೇವಾ ಯೋಜನೆಯ ಸಹಾಯ ಧನ ಹಸ್ತಾಂತರ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ಮತ್ತು ಸಮರ್ಥನೀಯ ಬಳಕೆ ಬಗ್ಗೆ ಮಾಹಿತಿ ಕಾರ್‍ಯಕ್ರಮ

ಪುತ್ತೂರು: ಔಷಧೀಯ ಗಿಡಮೂಲಿಕೆಗಳು ನಶಿಸಿ ಹೋಗುತ್ತಿರುವ ಕಾಲ ಘಟ್ಟದಲ್ಲಿ ಅವುಗಳ ಸಂರಕ್ಷಣೆಯ ಮಹತ್ವದ ಕುರಿತು ಇಂದಿನ ಯುವ ಸಮೂಹದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಪೇರಲ್ತಡ್ಕ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲಾ ಶಿಕ್ಷಕಿ ಯಶೋಧ ಹೇಳಿದರು. ಅವರು ನರೇಂದ್ರ ಪ.ಪೂ. ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ಮತ್ತು ಸಮರ್ಥನೀಯ ಬಳಕೆ ಕುರಿತು ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತೀಯ ಸಂಸ್ಕೃತಿಯಲ್ಲಿ ಪರಂಪರಾನುಗತವಾಗಿ ಗಿಡಮೂಲಿಕೆಯ ಉಪಚಾರವನ್ನು ನಡೆಸಿಕೊಂಡು ಬರಲಾಗುತ್ತಿದೆ. ವಿವಿಧ ರೋಗಗಳ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಗಾಗಿ ಔಷಧೀಯ ಸಸ್ಯಗಳ ಬಳಕೆ ಹಳೆಯ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ಮತ್ತು ಸಮರ್ಥನೀಯ ಬಳಕೆ ಬಗ್ಗೆ ಮಾಹಿತಿ ಕಾರ್‍ಯಕ್ರಮ Read More »

ಶಿಕ್ಷಣದ ಉದ್ದೇಶ ಜ್ಞಾನಾರ್ಜನೆಯೇ ಹೊರತು ಧನಾರ್ಜನೆಯಲ್ಲ: ಸುಬ್ರಹ್ಮಣ್ಯ ನಟ್ಟೋಜ | ಅಂಬಿಕಾದಲ್ಲಿ ಹೆತ್ತವರ ಸಭೆ

ಪುತ್ತೂರು: ಶಿಕ್ಷಣ ಎನ್ನುವುದು ಜ್ಞಾನಾರ್ಜನೆಗೆ ಇರುವುದೇ ಹೊರತು ಧನಾರ್ಜನೆಗಾಗಿ ಅಲ್ಲ. ಧನಾರ್ಜನೆಗಾಗಿ ಮಕ್ಕಳನ್ನು ತಯಾರು ಮಾಡಿದರೆ ಅವರು ನಾಳೆ ನಮ್ಮ ಅಂಕೆಯಲ್ಲಿ ಇರುವುದಿಲ್ಲ. ಡಾಕ್ಟರ್ ಇಂಜಿನಿಯರ್‌ಗಳನ್ನು ತಯಾರು ಮಾಡುವುದಕ್ಕಿಂತ ದೇಶಪ್ರೇಮ ಹೊಂದಿರುವ ನಾಯಕರನ್ನು ತಯಾರು ಮಾಡುವುದೇ ಆದ್ಯತೆಯಾಗಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶನಿವಾರ ನಡೆದ ರಕ್ಷಕ-ಶಿಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ದಿನೇಶ್ ಕುಮಾರ್

ಶಿಕ್ಷಣದ ಉದ್ದೇಶ ಜ್ಞಾನಾರ್ಜನೆಯೇ ಹೊರತು ಧನಾರ್ಜನೆಯಲ್ಲ: ಸುಬ್ರಹ್ಮಣ್ಯ ನಟ್ಟೋಜ | ಅಂಬಿಕಾದಲ್ಲಿ ಹೆತ್ತವರ ಸಭೆ Read More »

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧಾಕೂಟ ಉದ್ಘಾಟನೆ

ಸವಣೂರು : ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ವಿಭಾಗಗಳ ಕರಾಟೆ ಸ್ವರ್ಧಾಕೂಟದ ಉದ್ಘಾಟನೆ ಜು.31 ಸೋಮವಾರ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದಲ್ಲಿ ಜರಗಿತು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ಸಹಕಾರ ರತ್ನ ಸವಣೂರು ಕೆ.ಸೀತಾರಾಮ ರೈ ಕಾರ್ಯಕ್ರಮ ಉದ್ಘಾಟಿಸಿದರು. ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ ಕೆಡೆಂಜಿ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ದೈಹಿಕ ಶಿಕ್ಷಣ ನಿರ್ದೇಶಕ ಸುಂದರ ಗೌಡ, ಸವಣೂರು ಸ.ಪ.ಪೂ.ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಮಾಮಚ್ಚನ್, ವಿದ್ಯಾರಶ್ಮಿ ವಿದ್ಯಾಲಯದ ಆಡಳಿತಾಧಿಕಾರಿ ಅಶ್ವಿನ್

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧಾಕೂಟ ಉದ್ಘಾಟನೆ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸೆ.19 ರಿಂದ 22ರ ತನಕ ನಡೆಯಲಿರುವ ಶ್ರೀ ಮಹಾಲಿಂಗೇಶ್ವರ ದೇವಳ ವಠಾರದ 57ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ. ಎಂ.ಕೆ.ಪ್ರಸಾದ್  ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಸುಜೀಂದ್ರ ಪ್ರಭು, ಕಾರ್ಯಾಧ್ಯಕ್ಷ ರಾಧಾಕೃಷ್ಣ ನಂದಿಲ, ಪ್ರಧಾನ ಕಾರ್ಯದರ್ಶಿ ಅಶೋಕ್ ಕುಂಬ್ಳೆ, ಜೊತೆ ಕಾರ್ಯದರ್ಶಿ ನೀಲಂತ್ ಕುಮಾರ್, ಕೋಶಾಧಿಕಾರಿ ಶ್ರೀನಿವಾಸ ಮೂಲ್ಯ, ಉಪಾಧ್ಯಕ್ಷರಾದ ರವೀಂದ್ರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದಲ್ಲಿ ಭಾರತೀಯ ಜೀವ ವಿಮಾ ನಿಗಮದ ಸಹಾಭಾಗಿತ್ವದಲ್ಲಿ ವನಮಹೋತ್ಸವ

ಪುತ್ತೂರು: ಭಾರತೀಯ ಜೀವ ವಿಮಾ ನಿಗಮ ಮತ್ತು ಸರಸ್ವತಿ ವಿದ್ಯಾ ಮಂದಿರ ಪ್ರಾಥಮಿಕ ಹಾಗೂ ಪ್ರೌಢಶಾಲೆ ಸಹಭಾಗಿತ್ವದಲ್ಲಿ ನಡುಗುಡ್ಡೆಯ ಸರಸ್ವತಿ ವಿದ್ಯಾ ಮಂದಿರದ ನೂತನ ನಿವೇಶನದಲ್ಲಿ ವೃಕ್ಷಾರೋಪಣ ಕಾರ್ಯಕ್ರಮವನ್ನು ಆಚರಿಸಲಾಯಿತು. ಭಾರತೀಯ ಜೀವ ವಿಮಾ ನಿಗಮದ ಚೀಫ್ ಮ್ಯಾನೇಜರ್ ಡಿ. ಬಾಲಕೃಷ್ಣ ಹಣ್ಣಿನ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಸಿಸ್ಟೆಂಟ್ ಡಿವಿಷನಲ್ ಮ್ಯಾನೇಜರ್ ಜಯರಾಮ ನೆಲ್ಲಿತ್ತಾಯ ಮಾತನಾಡಿ,  ಹಣ್ಣಿನ ಗಿಡಗಳ ಮಹತ್ವ ಮತ್ತು ಗಿಡ ನೆಡುವುದರ ಮಹತ್ವವನ್ನು ತಿಳಿಸಿದರು. ಶಾಲಾ ಆಡಳಿತಾಧಿಕಾರಿ ಶುಭಾ ಅವಿನಾಶ್

ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದಲ್ಲಿ ಭಾರತೀಯ ಜೀವ ವಿಮಾ ನಿಗಮದ ಸಹಾಭಾಗಿತ್ವದಲ್ಲಿ ವನಮಹೋತ್ಸವ Read More »

ವಿಟ್ಲ ಚಂದಳಿಕೆ ಕಾರ್ತಿಕ್ ಫ್ರೆಂಡ್ಸ್ ಕ್ಲಬ್, ಚಂದಳಿಕೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ಳಿಹಬ್ಬ | ಆಮಂತ್ರಣ ಪತ್ರಿಕೆ ವಿತರಣೆಗೆ ಚಾಲನೆ

ವಿಟ್ಲ: ಚಂದಳಿಕೆ ಕಾರ್ತಿಕ್ ಫ್ರೆಂಡ್ಸ್ ಕ್ಲಬ್  ಮತ್ತು ಸಾರ್ವಜನಿಕ ಗಣೇಶೋತ್ಸವ ಚಂದಳಿಕೆ ವಿಟ್ಲ ಇದರ  ಬೆಳ್ಳಿಹಬ್ಬ ಕಾರ್ಯಕ್ರಮ ಸೆ.19 ಮಂಗಳವಾರದಿಂದ ಸೆ.22 ಶುಕ್ರವಾರ ತನಕ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದ್ದು, ಇದರ ಆಮಂತ್ರಣ ಪತ್ರಿಕೆ ವಿತರಣೆಗೆ ಮಂಗಳಾ ಮಂಟಪದಲ್ಲಿ ಭಾನುವಾರ ಚಾಲನೆ ನೀಡಲಾಯಿತು. ಸಾರ್ವಜನಿಕ ಗಣೇಶೋತ್ಸವ ಗೌರವ ಸಮಿತಿ ಅಧ್ಯಕ್ಷ ಹಾಗೂ ಬೆಳ್ಳಿ ಹಬ್ಬ ಸಮಿತಿಯ  ಗೌರವಾಧ್ಯಕ್ಷ ಶಂಕರ ಭಟ್ ಬದನಾಜೆ ಚಾಲನೆ  ನೀಡಿದರು ಈ ಸಂದರ್ಭದಲ್ಲಿ ಬೆಳ್ಳಿ ಹಬ್ಬ ಸಮಿತಿ ಗೌರವಾಧ್ಯಕ್ಷ ಕೃಷ್ಣಯ್ಯ 

ವಿಟ್ಲ ಚಂದಳಿಕೆ ಕಾರ್ತಿಕ್ ಫ್ರೆಂಡ್ಸ್ ಕ್ಲಬ್, ಚಂದಳಿಕೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ಳಿಹಬ್ಬ | ಆಮಂತ್ರಣ ಪತ್ರಿಕೆ ವಿತರಣೆಗೆ ಚಾಲನೆ Read More »

ಸೌಜನ್ಯ ಕೊಲೆ ಪ್ರಕರಣ | ನೈಜ ಆರೋಪಿಗಳ ಪತ್ತೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರಾರ್ಥನೆ

ಧರ್ಮಸ್ಥಳ : ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಾನುವಾರ ಪ್ರಾರ್ಥನೆ ಸಲ್ಲಿಸಲಾಯಿತು. ಸೌಜನ್ಯ ಕೊಲೆಯ ನೈಜ ಆರೋಪಿಗಳ ಪತ್ತೆಯಾಗಬೇಕು ಜತೆಗೆ ಕ್ಷೇತ್ರ ಆರೋಪಗಳಿಂದ ಮುಕ್ತಿ ಹೋಂದಬೇಕು ಎಂಬ ನಿಟ್ಟಿನಲ್ಲಿ ಭಕ್ತರು ಹಾಗೂ ಅರ್ಚಕರರು ಮಂಜುನಾಥ ಸ್ವಾಮೀ ಹಾಗೂ ಅಣ್ಣಪ್ಪ ಸ್ವಾಮಿ ಗುಡಿಯ ಮುಂದೆ ಭಾನುವಾರ ಪ್ರಾರ್ಥನೆ ಸಲ್ಲಿಸಿದರು. ಈಗಾಗಲೇ ಅರ್ಚಕರು ಪ್ರಾರ್ಥನೆ ಮಾಡಿ, ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿಗಳನ್ನು ಪತ್ತೆ ಹಚ್ಚಿಕೊಡಬೇಕು. ಜಗತ್ತಿಗೆ ನ್ಯಾಯ ನೀಡುವ ಧರ್ಮಸ್ಥಳ ಕ್ಷೇತ್ರದ ಮೇಲೆ ಇಂದು

ಸೌಜನ್ಯ ಕೊಲೆ ಪ್ರಕರಣ | ನೈಜ ಆರೋಪಿಗಳ ಪತ್ತೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರಾರ್ಥನೆ Read More »

ಉಪ್ಪಳಿಗೆಯ ಶ್ವೇತಾ ಕುಮಾರಿಗೆ ಪಿಎಚ್‌ಡಿಯಲ್ಲಿ ಚಿನ್ನದ ಪದಕ

ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಉಪ್ಪಳಿಗೆ ಬಾರ್ತಕುಮೇರಿನ ಶ್ವೇತಾ ಕುಮಾರಿ ಅವರು ‘ಮಣ್ಣು ವಿಜ್ಞಾನ ಮತ್ತು ರಸಾಯನ ಶಾಸ್ತ್ರ ವಿಭಾಗ’ದಲ್ಲಿ ಮಂಡಿಸಿದ ಪ್ರಬಂಧಕ್ಕೆ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯವು ಚಿನ್ನದ ಪದಕದೊಂದಿಗೆ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ರಾಯಚೂರು ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ೧೨ನೇ  ಘಟಿಕೋತ್ಸವದಲ್ಲಿ ರಾಜ್ಯಪಾಲ ಡಾ.ಥಾವರ್‌ಚಂದ ಗೆಹ್ಲೋಟ್ ಚಿನ್ನದ ಪದಕದೊಂದಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಿದರು. ಬೆಟ್ಟಂಪಾಡಿ ಗ್ರಾಮದ ಉಪ್ಪಳಿಗೆ ಬಾರ್ತಕುಮೇರು ನಿವಾಸಿ, ಬಿ.ಎಸ್.ಎನ್.ಎಲ್.ನ ನಿವೃತ್ತ ಸಬ್ ಡಿವಿಜನಲ್ ಇಂಜಿನಿಯರ್ 

ಉಪ್ಪಳಿಗೆಯ ಶ್ವೇತಾ ಕುಮಾರಿಗೆ ಪಿಎಚ್‌ಡಿಯಲ್ಲಿ ಚಿನ್ನದ ಪದಕ Read More »

error: Content is protected !!
Scroll to Top