ಪುತ್ತೂರು

“ಪ್ರೇರಣಾ” ದಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ‍ಕ್ಲಾಸ್ ಆರಂಭ | ಮಕ್ಕಳ ಉಜ್ವಲ ಭವಿಷ್ಯಕ್ಕೆ ಪ್ರಜ್ವಲವಾಗುವ ಪ್ರೇರಣಾ

ಪುತ್ತೂರು: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳೇ ಗಮನಿಸಿ. ನಿಮಗೆ ಕಲಿಕೆ ಕಷ್ಟವಾಗುತ್ತಿದೆಯೇ ? ಹಾಗಾದರೆ ತಡಮಾಡಬೇಡಿ. ಪ್ರತಿಷ್ಠಿತ ಪ್ರೇರಣಾ ಸಂಸ್ಥೆಗೆ ಭೇಟಿ ನೀಡಿ. ನುರಿತ ಬೋಧಕರಿಂದ ನೀಡುವ ಟ್ಯೂಷನ್ ತರಗತಿಯಲ್ಲಿ ಪಾಲ್ಗೊಳ್ಳಿ. ನಗರದ ಅರುಣಾ ಥಿಯೇಟರ್ ಎದುರುಗಡೆ ಇರುವ ಪ್ರಭು ಬಿಲ್ಡಿಂಗ್‍ನಲ್ಲಿ ಕಾರ್ಯಾಚರಿಸುತ್ತಿರುವ ಪ್ರೇರಣಾ ಸಂಸ್ಥೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಈಗಾಗಲೇ ಆರಂಭಗೊಂಡಿದೆ. ನುರಿತ ಶಿಕ್ಷಕರುಗಳಿಂದ ಗಣಿತ, ವಿಜ್ಞಾನ ಹಾಗೂ ಇಂಗ್ಲೀಷ್ ವಿಷಯದಲ್ಲಿ ಟ್ಯೂಷನ್ ನೀಡಲಾಗುವುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಟ್ಯೂಷನ್ ಜತೆಗೆ ಉಚಿತವಾಗಿ ಮೆಡಿಟೇಷನ್ ತರಗತಿಗಳನ್ನು ನೀಡಲಾಗುವುದು. ಶಿಕ್ಷಣಕ್ಕೆ […]

“ಪ್ರೇರಣಾ” ದಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ‍ಕ್ಲಾಸ್ ಆರಂಭ | ಮಕ್ಕಳ ಉಜ್ವಲ ಭವಿಷ್ಯಕ್ಕೆ ಪ್ರಜ್ವಲವಾಗುವ ಪ್ರೇರಣಾ Read More »

ನರಿಮೊಗರು ಗ್ರಾಪಂಗೆ ಮಕ್ಕಳ ಕಲಿಕೆ ಪೂರಕ ಆಟಿಕೆ ಕೊಡುಗೆ

ಪುತ್ತೂರು: ಪುತ್ತೂರು ತಾಲೂಕು ಪಂಚಾಯತ್ ಯೋಜನಾಧಿಕಾರಿ ಸುಕನ್ಯ ಅವರು ನರಿಮೊಗ್ರು ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಮಕ್ಕಳ ಕಲಿಕೆಗೆ ಪೂರಕ ಆಟಿಕೆಗಳನ್ನು ಕೊಡುಗೆಯಾಗಿ ನೀಡಿದರು. ಆಟಿಕೆಗಳಾದ PUZZLE STORY, SPELL  A WORD, LUDO, RUBIC CUBES ಮತ್ತು MBA entrance Exam, ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು. ಈ ಸಂಧರ್ಭದಲ್ಲಿ ಪಂಚಾಯಿತಿ ಅಧ್ಯಕ್ಷೆ ವಿದ್ಯಾ, ಉಪಾಧ್ಯಕ್ಷ ಸುಧಾಕರ ಕುಲಾಲ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿಚಂದ್ರ ಯು, ಸದಸ್ಯೆ ಸದಸ್ಯೆ ಹರಿಣಿ, ಕಾರ್ಯದರ್ಶಿ ಶೇಖ್

ನರಿಮೊಗರು ಗ್ರಾಪಂಗೆ ಮಕ್ಕಳ ಕಲಿಕೆ ಪೂರಕ ಆಟಿಕೆ ಕೊಡುಗೆ Read More »

ಇಂಗು ಗುಂಡಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಪುತ್ತೂರು: ಪಡುವನ್ನೂರು ಗ್ರಾಮದಲ್ಲಿ ಇಂಗು ಗುಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಬುಧವಾರ ಪತ್ತೆಯಾಗಿದೆ. ಪಡುವನ್ನೂರು ಗ್ರಾಮದ ಗುರಿಯಡ್ಕ ನಿವಾಸಿ ಐತ್ತಪ್ಪ ಮೂಲ್ಯ ಎಂಬವರೇ ಮೃತಪಟ್ಟವರು. ಐತ್ತಪ್ಪ ಮೂಲ್ಯ ಸುಮಾರು ಒಂದು ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಚಿಕಿತ್ಸೆ ಫಲಕಾರಿಯಾಗಿರಲಿಲ್ಲ. ರಾತ್ರಿ ಸಮಯದಲ್ಲಿ ಅವರು ಯಾರಿಗೂ ಹೇಳದೆ ಹೊರಗೆ ಹೋಗುತ್ತಿದ್ದರು ಎನ್ನಲಾಗಿದೆ. ಭಾನುವಾರ ರಾತ್ರಿ ಊಟ ಮಾಡಿ ಮಲಗಿದವರು ಸೋಮವಾರ ಬೆಳಗ್ಗೆ ನಾಪತ್ತೆಯಾಗಿದ್ದರು. ಬುಧವಾರ ಮೃತದೇಹ ನೆರೆಮನೆಯ ಶೀನ ಗೌಡ ಮಾಪಳ ಎಂಬವರ ಮನೆ ಬಳಿಯ ಇಂಗು ಗುಂಡಿಯಲ್ಲಿ ಪತ್ತೆಯಾಗಿದೆ.

ಇಂಗು ಗುಂಡಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ Read More »

ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮದಡಿ ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಯಿತು. ದೀಪ ಪ್ರಜ್ವಲನೆ ಮಾಡಿ ಭಾರತಾಂಬೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ. ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ., ಐಕ್ಯೂಎಸಿ ಸಂಯೋಜಕರು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ Read More »

ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಮಾರಾಟ | ನಗರಸಭೆಯಿಂದ ದಾಳಿ

ಪುತ್ತೂರು: ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ಮಾರಾಟ ಮತ್ತು ಬಳಕೆ ಮಾಡುತ್ತಿದ್ದ ಅಂಗಡಿಗಳಿಗೆ ನಗರಸಭೆ ಅಧಿಕಾರಿಗಳು ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಂಡು ದಂಡ ವಿಧಿಸಿದ್ದಾರೆ. ಪುತ್ತೂರು ನಗರದ ಮುಖ್ಯರಸ್ತೆಯ ಅಂಗಡಿಗಳು, ವಾಣಿಜ್ಯ ಮಳಿಗೆಗಳು ಸೇರಿದಂತೆ ಹಲವು ಕಡೆ ದಾಳಿ ನಡೆಸಿದ ಅಧಿಕಾರಿಗಳು 12 ಕೆಜಿ ಪ್ಲಾಸ್ಟಿಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿಯರಾದ ಶ್ವೇತಾ ಕಿರಣ್, ವರಲಕ್ಷ್ಮೀ, ಸೂಪರ್ ವೈಸರ್ ಗಳಾದ ನಾಗೇಶ್ ಮತ್ತು ಅಮಿತ್, ರಾಧಾಕೃಷ್ಣ ಸಹಿತ ಪೌರ ಕಾರ್ಮಿಕರು ಉಪಸ್ಥಿತರಿದ್ದರು.

ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಮಾರಾಟ | ನಗರಸಭೆಯಿಂದ ದಾಳಿ Read More »

ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಪುತ್ತೂರು: ಪುತ್ತೂರು ನಗರದ ಪಾಂಗ್ಲಾಯಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹವೊಂದು ಗುರುವಾರ ಪತ್ತೆಯಾಗಿದೆ. ಪಾಂಗ್ಲಾಯಿ ಬಳಿ ಪೊದೆಯೊಂದರಲ್ಲಿ ಈ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಆಂಬುಲೆನ್ಸ್ ಮೂಲಕ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತದೇಹ ಯಾರದ್ದೆಂದು, ಮೃತ್ಯುಗೆ ಕಾರಣ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ

ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ Read More »

ಅನುಮತಿ ಇಲ್ಲದೆ ವಿಜಯೋತ್ಸವ | ಪುತ್ತಿಲ ಪರಿವಾರ ಸಂಘಟನೆ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಪುತ್ತೂರು, ಜುಲೈ 27: ಅನುಮತಿ ಇಲ್ಲದೆ ವಿಜಯೋತ್ಸವ ಮಾಡಿದ್ದಕ್ಕಾಗಿ ಪುತ್ತಿಲ ಪರಿವಾರ ಸಂಘಟನೆ ವಿರುದ್ಧ ಪ್ರಕರಣ ದಾಖಲಾಗಿದೆ. ಆರ್ಯಾಪು ಗ್ರಾ.ಪಂ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರದ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯರು ಜಯಗಳಿಸಿದ ಹಿನ್ನಲೆಯಲ್ಲಿ ವಿಜಯೋತ್ಸವ ನಡೆಸಲಾಗಿತ್ತು. ಮಿನಿ ವಿಧಾನಸೌಧದಿಂದ ಮುಕ್ರಂಪಾಡಿವರೆಗೆ ಡಿಜೆ ಮೆರವಣಿಗೆ ನಡೆಸಿದ್ದ ಪುತ್ತಿಲ ಪರಿವಾರ ವಿರುದ್ಧ ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಶಾಂತಿಭಂಗದ ಪ್ರಕರಣ ದಾಖಲಿಸಲಾಗಿದೆ.

ಅನುಮತಿ ಇಲ್ಲದೆ ವಿಜಯೋತ್ಸವ | ಪುತ್ತಿಲ ಪರಿವಾರ ಸಂಘಟನೆ ವಿರುದ್ಧ ಪ್ರಕರಣ ದಾಖಲು Read More »

ರೋಟರಿ ಸೆಂಟ್ರಲ್ ವತಿಯಿಂದ  “ಮನೆಗೊಂದು ಗಿಡ “

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ಪ್ರಶಾಂತಿ ಸದ್ಭಾವನ ಟ್ರಸ್ಟ್ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ವತಿಯಿಂದ ಕೇಪುಳು ಸಿಗಂದೂರು ಮನೆಯಲ್ಲಿ ಮನೆಗೊಂದು ಗಿಡ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮೈಸೂರಿನ ಅವಧೂತರಾದ ಅರ್ಜುನ್ ಮಹಾರಾಜ್ ಗುರೂಜಿಯವರು ಗಿಡ ವಿತರಣೆಗೆ ಚಾಲನೆ ನೀಡಿದರು. ಸಿಗಂದೂರು ಮನೆಯ ಡಾ ಸಂತೋಷ್ ಪ್ರಭು, ಪ್ರಶಾಂತಿ ಸದ್ಭಾವನಾ ಟ್ರಸ್ಟ್ ನ ಮದುಸೂದನ್ ನಾಯಕ್, ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ನ ಅಧ್ಯಕ್ಷ ಡಾ ರಾಜೇಶ್ ಬೆಜ್ಜಂಗಳ, ಮೆಂಬರ್ಶಿಪ್ ಡೆವಲಪ್ ಮೆಂಟ್ ಚಯರ್ ಮೇನ್

ರೋಟರಿ ಸೆಂಟ್ರಲ್ ವತಿಯಿಂದ  “ಮನೆಗೊಂದು ಗಿಡ “ Read More »

ಜು.30: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಮಹಾಸಭೆ

ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಜು.30 ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ ಗಂಟೆ 9.30ಕ್ಕೆ ವಾರ್ಷಿಕ ಮಹಾಸಭೆ ನಡೆಯಲಿದೆ. ಸದಸ್ಯರು ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಕೆ ತಿಳಿಸಿದ್ದಾರೆ.

ಜು.30: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಮಹಾಸಭೆ Read More »

ಗ್ರಾಮೀಣ ಬಡವರ ಮಕ್ಕಳೂ ಉನ್ನತ ವ್ಯಾಸಂಗ ಮಾಡುವಂತಾಗಬೇಕು: ಶಾಸಕ ಅಶೋಕ್ ರೈ | ಕೊಂಬೆಟ್ಟು ಸರಕಾರಿ ಪ ಪೂ ಕಾಲೇಜಿನಲ್ಲಿ ಸಿಇಟಿ, ನೀಟ್ ಕೋಚಿಂಗ್ ತರಗತಿ ಉದ್ಘಾಟನೆ

ಪುತ್ತೂರು: ಸರಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಭಗದ ಬಡವರ ಮಕ್ಕಳೂ ಸಿಇಟಿ, ನೀಟ್ ಪರೀಕ್ಷೆ ಬರೆದು ಉನ್ನತ ವ್ಯಾಸಂಗ ಮಾಡುವಂತಗಬೇಕು, ಪ್ರತೀಯೊಬ್ಬ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತಗಬೇಕೆಂಬುದೇ ನನ್ನ ಉದ್ದೇಶವಾಗಿದೆ ಇದಕ್ಕಾಗಿ ಜಿಲ್ಲೆಯಲ್ಲೇ ಪ್ರಥಮ ಬಾರಿ ಎಂಬಂತೆ ಪುತ್ತೂರಿನ ಕೊಂಬೆಟ್ಟು ಪ ಪೂ ಕಾಲೇಜಿನಲ್ಲಿ ಸಿಇಟಿ ಮತ್ತು ನೀಟ್ ಕೋಚಿಂಗ್ ತರಗತಿಯನ್ನು ಪ್ರಾರಂಭಿಸಲಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಕೊಂಬೆಟ್ಟು ಪ ಪೂ ಕಾಲೇಜಿನಲ್ಲಿ ಶಿಕ್ಷಕರ ನೂತನ ಕೊಠಡಿ,

ಗ್ರಾಮೀಣ ಬಡವರ ಮಕ್ಕಳೂ ಉನ್ನತ ವ್ಯಾಸಂಗ ಮಾಡುವಂತಾಗಬೇಕು: ಶಾಸಕ ಅಶೋಕ್ ರೈ | ಕೊಂಬೆಟ್ಟು ಸರಕಾರಿ ಪ ಪೂ ಕಾಲೇಜಿನಲ್ಲಿ ಸಿಇಟಿ, ನೀಟ್ ಕೋಚಿಂಗ್ ತರಗತಿ ಉದ್ಘಾಟನೆ Read More »

error: Content is protected !!
Scroll to Top