ಪುತ್ತೂರು

ತಾಲೂಕು ಮಟ್ಟದ ಜನಪದ ಗೀತೆ ಸ್ಪರ್ಧೆ | ಪ್ರೋತ್ಸಾಹಕ ಬಹುಮಾನ

ಪುತ್ತೂರು: ತಾಲೂಕು ಮಟ್ಟದ ಜನಪದ ಗೀತೆ ಸ್ಪರ್ಧೆ – ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನ ಲಭಿಸಿದೆ. ದಿ. ಬಾಲಕೃಷ್ಣ ಮಧುವನ ಅವರ ಸ್ಮರಣಾರ್ಥ ಸರ್ವೋದಯ ಪ್ರೌಢಶಾಲೆ, ಸುಳ್ಯಪದವು ಇಲ್ಲಿ ನಡೆದ ತಾಲೂಕು ಮಟ್ಟದ ಜನಪದ ಗೀತೆ ಸ್ಪರ್ಧೆಯಲ್ಲಿ ಪ್ರೋತ್ಸಾಹಕ ಬಹುಮಾನ ಲಭಿಸಿದೆ. ಶಾಲೆಯ ವಿದ್ಯಾರ್ಥಿನಿಯರಾದ ಹರಿಣಿ, ಸುಷ್ಮಾ ಮತ್ತು ಮಂಗಳಾದುರ್ಗಾ ಸ್ಪರ್ಧೆಯನ್ನು ಪ್ರತಿನಿಧಿಸಿದ್ದರು.

ತಾಲೂಕು ಮಟ್ಟದ ಜನಪದ ಗೀತೆ ಸ್ಪರ್ಧೆ | ಪ್ರೋತ್ಸಾಹಕ ಬಹುಮಾನ Read More »

ಗೋಳಿತ್ತಡಿಯಲ್ಲಿ ಬೃಹತ್ ಮರ ರಸ್ತೆಗೆ | ವಾಹನ ಸಂಚಾರದಲ್ಲಿ ತೊಡಕು

ರಾಮಕುಂಜ : ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿಯಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಬಿದ್ದ ಪರಿಣಾಮ ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಸೋಮವಾರ ಸಂಜೆ ನಡೆದಿದೆ. ಭಾರೀ ಮಳೆದ ಸುರಿದ ಪರಿಣಾಮ ಹೆದ್ದಾರಿ ಬದಿಯಲ್ಲಿದ್ದ ಬೃಹತ್ ಮರವೊಂದು ಮುರಿದು ಹೆದ್ದಾರಿಗೆ ಅಡ್ಡವಾಗಿ ಬಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಬಳಿಕ ಸ್ಥಳೀಯರು ಮರ ತೆರವುಗೊಳಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಗೋಳಿತ್ತಡಿಯಲ್ಲಿ ಬೃಹತ್ ಮರ ರಸ್ತೆಗೆ | ವಾಹನ ಸಂಚಾರದಲ್ಲಿ ತೊಡಕು Read More »

ನಾಳೆ (ಜು.5) : ಬನ್ನೂರು ಸರಕಾರಿ ಶಾಲಾ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮ

ಪುತ್ತೂರು: ವಿವಿಧ ರೋಟರಿ ಸಂಸ್ಥೆಗಳು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಪುತ್ತೂರು ವಿಭಾಗದ ಸಂಯುಕ್ತ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಗಿಡ ನೆಡುವ ಕಾರ್ಯಕ್ರಮ ಜು.5 ಬುಧವಾರ ಬೆಳಿಗ್ಗೆ 9 ಗಂಟೆಗೆ ಬನ್ನೂರು ಸರಕಾರಿ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಲಿದೆ. ರೋಟರಿ ಕ್ಲಬ್‍ ಸೆಂಟ್ರಲ್, ಯುವ, ಇನ್ನರ್ ವೀಲ್ ಕ್ಲಬ್, ಬನ್ನೂರು ಸರಕಾರಿ ಪ್ರಾಥಮಿಕ ಶಾಲೆ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ದ.ಕ.ಜಿಲ್ಲಾ ತೆಂಗು ರೈತ ಉತ್ಪಾದಕರ ಕಂಪೆನಿ ಹಾಗೂ ಬನ್ನೂರು ಸ್ಪೂರ್ತಿ ಯುವ

ನಾಳೆ (ಜು.5) : ಬನ್ನೂರು ಸರಕಾರಿ ಶಾಲಾ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮ Read More »

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಜಿಲ್ಲೆಯ ಐದು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್​ ಆದೇಶ ಹೊರಡಿಸಿದ್ದಾರೆ. ಮಂಗಳೂರು, ಉಳ್ಳಾಲ, ಮುಲ್ಕಿ, ಬಂಟ್ವಾಳ ಹಾಗೂ ಮೂಡಬಿದಿರೆ ತಾಲೂಕಿನ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ. ಇನ್ನುಳಿದ ಕಡೆಗಳಲ್ಲಿ ಅಲ್ಲಿ ಪ್ರಸ್ತುತ ಪರಿಸ್ಥಿತಿಗಳನ್ನು ನೋಡಿಕೊಂಡು ರಜೆ ಘೋಷಿಸುವ ಅಧಿಕಾರವನ್ನು ಆಯಾ ತಹಶೀಲ್ದಾರ್​​ಗಳಿಗೆ ನೀಡಲಾಗಿದೆ. ಶಾಲೆಯ ಮುಖ್ಯೋಪಾಧ್ಯರು, ಕಾಲೇಜಿನ ಪ್ರಾಂಶುಪಾಲರು ಹಾಗೂ ಕ್ಷೇತ್ರ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಜಿಲ್ಲೆಯ ಐದು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ದಾಸ್ತಾನು ಕೊಠಡಿಗೆ ಬೆಂಕಿ | ಅಪಾರ ನಷ್ಟ

ವಿಟ್ಲ: ಕನ್ಯಾನ ಗ್ರಾಮದಲ್ಲಿ ದಾಸ್ತಾನು ಕೊಠಡಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಕನ್ಯಾನ ಗ್ರಾಮದ ಪೇಪರ್ ವಿತರಕ ಗಂಗಾಧರ ಎಂಬವರ ಮನೆಯ ದಾಸ್ತಾನು ಕೊಠಡಿಗೆ ತಡ ರಾತ್ರಿ ಬೆಂಕಿ ಬಿದ್ದಿದ್ದು, ಕೊಠಡಿಯಲ್ಲಿದ್ದ ಕಟ್ಟಿಗೆ, ತೆಂಗಿನಕಾಯಿ, ಹಲಗೆಗಳು ಸೇರಿದಂತೆ ಮತ್ತಿತರ ವಸ್ತುಗಳು ಸುಟ್ಟು ಕರಕಲಾಗಿದೆ. ಬೆಂಕಿನ ಕೆನ್ನಾಲಗೆಗೆ ಕೊಟ್ಟಿಗೆಯ ಛಾವಣಿ ಕುಸಿದುಬಿದ್ದಿದ್ದು, ಸಮೀಪದ ಮನೆಗಳಿದ್ದರೂ ಯಾವುದೇ ಹೆಚ್ಚಿನ ಅಪಾಯ ಸಂಭವಿಸಿಲ್ಲ. ಬಂಟ್ವಾಳ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ ಎಂದು ತಿಳಿದು ಬಂದಿದೆ.

ದಾಸ್ತಾನು ಕೊಠಡಿಗೆ ಬೆಂಕಿ | ಅಪಾರ ನಷ್ಟ Read More »

ಸರ್ವೆ ಕಲ್ಪನೆ ಶಾಲಾ ಮಂತ್ರಿಮಂಡಲ ರಚನೆ

ಪುತ್ತೂರು : ಮುಂಡೂರು ಗ್ರಾಮದ ಸರ್ವೆ ಕಲ್ಪನೆ  ಶಾಲಾ ಮಂತ್ರಿಮಂಡಲ ರಚನೆ ಸೋಮವಾರ ನಡೆಯಿತು. ಶಾಲಾ ಮುಖ್ಯಮಂತ್ರಿಯಾಗಿ ಮೋಕ್ಷಿತ್ ನೆಕ್ಕಿಲು, ಉಪಮುಖ್ಯಮಂತ್ರಿಯಾಗಿ ಆತ್ಮೀ ಆಯ್ಕೆಗೊಂಡರು. ಶಾಲಾ ಮುಖ್ಯ ಶಿಕ್ಷಕ ಜಯರಾಮ ಶೆಟ್ಟಿ ಪ್ರಮಾಣವಚನ ಬೋಧಿಸಿ ಮಾರ್ಗದರ್ಶನ ಮಾಡಿದರು. ಶಾಲಾ ಸಂಸತ್ತನ್ನು ಸಮಾಜ ವಿಜ್ಞಾನ ಶಿಕ್ಷಕ ಉಮಾಶಂಕರ್ ನಿರ್ವಹಿಸಿದರು. ಸಂಸ್ಥೆಯ ಶಿಕ್ಷಕ ವೃಂದದವರು ಸಹಕರಿಸಿದರು.

ಸರ್ವೆ ಕಲ್ಪನೆ ಶಾಲಾ ಮಂತ್ರಿಮಂಡಲ ರಚನೆ Read More »

ಉಜಿರೆ ಸುವರ್ಣಾ ಹೆಗ್ಡೆ ನಿಧನ

ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ. ಕಾಲೇಜು ಪತ್ರಿಕೋಧ್ಯಮ ವಿ‌ಭಾಗದ ಮುಖ್ಯಸ್ಥ ಡಾ.ಭಾಸ್ಕರ್ ಹೆಗ್ಡೆ ಅವರ ಪತ್ನಿ ಸುವರ್ಣಾ ಹೆಗ್ಡೆ (49) ಸೋಮವಾರ ಹೃದಯಾಘಾತದಿಂದ ಉಜಿರೆ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ.  ಮೂಲತಃ ಹೊನ್ನಾವರದವರಾದ ಪ್ರಸ್ತುತ ಉಜಿರೆ ಉಂಡ್ಯಾಪು ನಗರದಲ್ಲಿ ನೆಲೆಸಿದ್ದರು. ಮೃತರು ಪತಿ, ಪುತ್ರ, ತಂದೆ, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

ಉಜಿರೆ ಸುವರ್ಣಾ ಹೆಗ್ಡೆ ನಿಧನ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಗುರು ಪೂರ್ಣಿಮೆ ಆಚರಣೆ

ಪುತ್ತೂರು : ಯಾವುದೇ ಓರ್ವ ವ್ಯಕ್ತಿ ಯಶಸ್ಸನ್ನು ಸಾಧಿಸಬೇಕೆಂದರೆ ಅವನ ಮುಂದೆ ಗುರಿ ಇರಬೇಕು, ಹಿಂದೆ ಗುರುವಿರಬೇಕು ಎನ್ನುವ ನಂಬಿಕೆಯಿದೆ. ಗುರುವಿಲ್ಲದೆ ಜೀವನಕ್ಕೆ ಅಥವಾ ಜ್ಞಾನಕ್ಕೆ ಯಾವುದೇ ರೀತಿಯ ಅರ್ಥವಿರುವುದಿಲ್ಲ. ನಮ್ಮ ಮೊದಲ ಗುರು ತಾಯಿ ನಮಗೆ ಜೀವನದ ಅರ್ಥವನ್ನು ನೀಡುತ್ತಾಳೆ. ಅದೇ ರೀತಿ ಜೀವನಕ್ಕೆ ಅಗತ್ಯವಾದ ಜ್ಞಾನವನ್ನು ಗುರು ನೀಡುತ್ತಾನೆ. ಅಂದರೆ, ಗುರುವಿಲ್ಲದೆ ಏನೂ ಸಾಧ್ಯವಿಲ್ಲ.ಎಂದು ವಿದ್ಯಾಭಾರತಿ ಜಿಲ್ಲಾ ಯೋಗ ಶಿಕ್ಷಣ ಸಂಯೋಜಕ ಚಂದ್ರಶೇಖರ ದೇಲಂಪಾಡಿ ಹೇಳಿದರು. ಅವರು ಸೋಮವಾರ ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಗುರು

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಗುರು ಪೂರ್ಣಿಮೆ ಆಚರಣೆ Read More »

ನಾಳೆ (ಜು.4 ) : ವಿದ್ಯುತ್ ನಿಲುಗಡೆ

ಪುತ್ತೂರು: ತುರ್ತು ಕಾಮಗಾರಿ ಹಿನ್ನಲೆಯಲ್ಲಿ 33/11 ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮುಕ್ರಂಪಾಡಿ, ಮುಕ್ವೆ, ಮುಂಡೂರು ಫೀಡರ್‍ ನಲ್ಲಿ ಜು.4 (ನಾಳೆ) ಬೆಳಿಗ್ಗೆ 10 ರಿಂದ ಸಂಜೆ 4 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11 ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ೀ ಮೇಲೆ ತಿಳಿಸಿದ ಫೀಡರ್ ನಿಂದ ಸರಬರಾಜಾಗುವ ಕೂರ್ನಡ್ಕ, ಕೆಮ್ಮಿಂಜೆ, ಮರೀಲ್, ಮುಕ್ರಂಪಾಡಿ, ಮೊಟ್ಟೆತ್ತಡ್ಕ ಮುಂಡೂರು ಹಾಗೂ ಸಂಪ್ಯ ಪರಿಸರದ ವಿದ್ಯುತ್ ನಿಲುಗಡೆ ಮಾಡಲಾಗುವುದು ಬಳಕೆದಾರರು ಗಮನಿಸಬೇಕಾಗಿ ಮೆಸ್ಕಾಂ

ನಾಳೆ (ಜು.4 ) : ವಿದ್ಯುತ್ ನಿಲುಗಡೆ Read More »

ಯುವಕ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗೂಡಿನಬಳಿ ಯಲ್ಲಿ ನಡೆದಿದೆ. ಮೃತನನ್ನು ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಚೆರಿಯೆಮೋನು ಎಂಬವರ ಪುತ್ರ ಜಾಫರ್ (24) ಎಂದು ತಿಳಿದುಬಂದಿದೆ. ಕೂಲಿ ಕೆಲಸ ಮಾಡುತ್ತಿದ್ದ ಈತ ತನ್ನ ಮನೆಯ ಕೊಠಡಿಯಲ್ಲಿ ಫ್ಯಾನ್ ಗೆ ನೇಣು ಬಿಗಿದು ಮಾಡಿಕೊಂಡಿದ್ದಾರೆ. ಮೃತರು ತಂದೆ, ತಾಯಿ, 6 ಮಂದಿ ಸಹೋದರರು, ನಾಲ್ವರು ಸಹೋದರಿಯರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು

ಯುವಕ ನೇಣು ಬಿಗಿದು ಆತ್ಮಹತ್ಯೆ Read More »

error: Content is protected !!
Scroll to Top