ಪುತ್ತೂರು

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ಚಾಲಕ ಅಪಾಯದಿಂದ ಪಾರು

ಬಂಟ್ವಾಳ: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದುಕೊಂಡು ಕಾರು ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ನಡೆದಿದೆ. ವಿಟ್ಲದ ಕೊಡಂಗಾಯಿಯಲ್ಲಿ ಈ ಅಪಘಾತ ನಡೆದಿದೆ. ವಿದ್ಯುತ್ ಕಂಬಕ್ಕೆ ಕಾರು ಗುದ್ದಿದ ರಭಸಕ್ಕೆ ಹೊಂಡದಿಂದಲೇ ವಿದ್ಯುತ್ ಕಂಬ ಮೇಲಕ್ಕೆದ್ದಿದೆ. ಕಾರಿನ ಮೇಲೆಯೇ ಕಂಬ ಮುರಿದು ಬಿದ್ದಿದ್ದು, ಕಾರಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ಚಾಲಕ ಅಪಾಯದಿಂದ ಪಾರು Read More »

ಜು.5 : ವಿವೇಕಾನಂದ ಕಾಲೇಜಿನಲ್ಲಿ ’ತಿರಿ’ ಕೃತಿ ಬಿಡುಗಡೆ ಹಾಗೂ  ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ

ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘ, ವಿವೇಕಾನಂದ ಪದವಿ ಕಾಲೇಜಿನ ಕನ್ನಡ ಸಂಘ ಹಾಗೂ ಐಕ್ಯೂಎಸಿ ಇದರ ಸಹಯೋಗದಲ್ಲಿ ಸಿದ್ದಮೂಲೆ ಶಂಕರನಾರಾಯಣ ಭಟ್ ಸ್ಥಾಪಿತ ’ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ ಹಾಗೂ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕ ಡಾ. ಮನಮೋಹನ ಎಂ ಇವರ ’ತಿರಿ’ ಎಂಬ ಕೃತಿ ಲೋಕಾರ್ಪಣೆ ಕಾರ್‍ಯಕ್ರಮವು ಜು.5 ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ. ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್‍ಯದರ್ಶಿ ಡಾ. ಕೆ.ಎಂ ಕೃಷ್ಣ ಭಟ್ ವಹಿಸಲಿದ್ದು ಮುಖ್ಯ

ಜು.5 : ವಿವೇಕಾನಂದ ಕಾಲೇಜಿನಲ್ಲಿ ’ತಿರಿ’ ಕೃತಿ ಬಿಡುಗಡೆ ಹಾಗೂ  ಶಂಕರ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ Read More »

ಉಪಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಕೆಪಿಸಿಸಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿ | ವಿವಿಧ ಬೇಡಿಕೆ ಸಲ್ಲಿಕೆ

ಪುತ್ತೂರು: ರಾಜ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಬೆಂಗಳೂರಿನ ಗೃಹ ಕಚೇರಿಯಲ್ಲಿ ಕೆಪಿಸಿಸಿ ಸದಸ್ಯ, ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿವಿಧ ಬೇಡಿಕೆಗಳನ್ನು ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ತಾಪಂ ಮಾಜಿ ಉಪಾಧ್ಯಕ್ಷ ಶೀನಪ್ಪ ಗೌಡ ಬೈತಡ್ಕ, ಅವಿನಾಶ್ ಬೈತಡ್ಕ, ಜಯಪ್ರಕಾಶ್, ಸುಬ್ರಹ್ಮಣ್ಯ ಮತ್ತಿತರರು ಉಪಸ್ಥಿತರಿದ್ದರು.

ಉಪಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಕೆಪಿಸಿಸಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿ | ವಿವಿಧ ಬೇಡಿಕೆ ಸಲ್ಲಿಕೆ Read More »

ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಗುರುಪೂರ್ಣಿಮೆ ಆಚರಣೆ, ಗುರುವಂದನಾ ಕಾರ್ಯಕ್ರಮ

ಪುತ್ತೂರು : ಶಿಕ್ಷಕನಾದವನು ಗುರು ಸ್ಥಾನಕ್ಕೆ ಏರಬಹುದಾದ ಅವಕಾಶಗಳಿರುವುದು ಸತ್ಯ. ಬದುಕಿಗೆ ದಾರಿದೀಪವಾಗುವವರು ಗುರುಗಳೆನಿಸುತ್ತಾರೆ. ಹೆತ್ತವರ ನಂತರ ಮಕ್ಕಳ ಜವಾಬ್ದಾರಿಯನ್ನು ಹೊತ್ತು ಅವರ ಅಧ್ಯಯನದ ಕಾಲದಲ್ಲಿ ನಿರಂತರವಾಗಿ ಕಾಪಾಡುತ್ತಾ, ಬದುಕನ್ನು ರೂಪಿಸುತ್ತಾ ಸಾಗುವ ಮಹಾನ್ ವ್ಯಕ್ತಿತ್ವವೇ ಗುರು ಎಂದೆನಿಸಿಕೊಳ್ಳಲು ಸಾಧ್ಯ ಎಂದು ಅಂಬಿಕಾ ಮಹಾವಿದ್ಯಾಲಯದ ತತ್ತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ವಿದ್ವಾನ್ ತೇಜಶಂಕರ ಸೋಮಯಾಜಿ ಹೇಳಿದರು. ಅವರು ನಗರದ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸೋಮವಾರ

ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಗುರುಪೂರ್ಣಿಮೆ ಆಚರಣೆ, ಗುರುವಂದನಾ ಕಾರ್ಯಕ್ರಮ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪೂರ್ವಸಿದ್ಧತಾ ಸಭೆ | ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ಮತ್ತು ಪೂರ್ವ ಸಿದ್ಧತಾ ಸಭೆ ಭಾನುವಾರ  ಆದರ್ಶ ಆಸ್ಪತ್ರೆ ವಠಾರದಲ್ಲಿ ನಡೆಯಿತು. ಇತ್ತೀಚೆಗೆ ನಿಧನರಾದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸಕ್ರೀಯ ಕಾರ್ಯಕರ್ತರ ದಿ. ರಾಧಾಕೃಷ್ಣ ಭಕ್ತ ಅವರಿಗೆ ಸಭೆಯ ಆರಂಭದಲ್ಲಿ ಆತ್ಮಕ್ಕೆ ಚಿರಶಾಂತಿಕೋರಲಾಯಿತು. ಸಮಿತಿ ಗೌರವ ಅಧ್ಯಕ್ಷರಾಗಿ ಡಾ.ಎಂ ಕೆ ಪ್ರಸಾದ್, ಅಧ್ಯಕ್ಷರಾಗಿ ಸುಜೀಂದ್ರ ಪ್ರಭು, ಕಾರ್ಯಾಧ್ಯಕ್ಷರಾಗಿ ರಾಧಾಕೃಷ್ಣ ನಂದಿಲ ಅವರನ್ನು ಆಯ್ಕೆ ಮಾಡಲಾಯಿತು. ಉಳಿದಂತೆ ಪ್ರಧಾನ ಕಾರ್ಯದರ್ಶಿಯಾಗಿ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪೂರ್ವಸಿದ್ಧತಾ ಸಭೆ | ಪದಾಧಿಕಾರಿಗಳ ಆಯ್ಕೆ Read More »

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟುನಿಂತ ಟೊಮೆಟೋ ಲಾರಿ | ಫುಲ್ ಟ್ರಾಫಿಕ್ ಜಾಮ್

ಚಾರ್ಮಾಡಿ: ಚಾರ್ಮಾಡಿ ಘಾಟ್ ನಲ್ಲಿ ಟೊಮೊಟೊ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಟ್ರಾಫಿಕ್ ಜಾಮ್ ನಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. ಭಾನುವಾರ ರಾತ್ರಿ ಹತ್ತು ಗಂಟೆ ಸಮಯದಲ್ಲಿ ಪ್ರಾರಂಭವಾದ ಟ್ರಾಫಿಕ್ ಜಾಮ್ ಸುಮಾರು 10 ಕಿ.ಮೀ. ನಷ್ಟು ಉದ್ದಕ್ಕೆ ಉಂಟಾಗಿದ್ದು, ಸಾಲು ಸಾಲಾಗಿ ವಾಹನಗಳು ನಿಂತಿವೆ. ಚಿಕ್ಕಮಗಳೂರು ಹಾಗೂ ದ.ಕ.ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಟೊಮೆಟೋ ಲಾರಿ ಕೆಟ್ಟು ನಿಂತಿದ್ದು ವಾಹನ ಸವಾರರು ಮುಂದಕ್ಕೆ ಚಲಿಸಲು ಇನ್ನೂ ಪರದಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟುನಿಂತ ಟೊಮೆಟೋ ಲಾರಿ | ಫುಲ್ ಟ್ರಾಫಿಕ್ ಜಾಮ್ Read More »

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜ್ಯಕ್ಕೆ | ಸಂಜೆ ಸತ್ಯಸಾಯಿ ವಿವಿ ಘಟಿಕೋತ್ಸವದಲ್ಲಿ ಪಾಲ್ಗೊಳ್ಳುವಿಕೆ

ಬೆಂಗಳೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ವಿವಿಯ 2ನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸೋಮವಾರ ದೆಹಲಿಯಿಂದ ಐಎಎಫ್​​ಎಂಐ-17 ವಿಶೇಷ ವಿಮಾನದ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ರಾಷ್ಟ್ರಪತಿಗಳು, ಮಧ್ಯಾಹ್ನ 3.40ಕ್ಕೆ ಹೆಲಿಕಾಪ್ಟರ್‌ ಮೂಲಕ ಮುದ್ದೇನಹಳ್ಳಿ ಗ್ರಾಮದ ಸತ್ಯಸಾಯಿ ಗ್ರಾಮಕ್ಕೆ ಆಗಮಿಸಲಿದ್ದಾರೆ. ರಾಷ್ಟ್ರಪತಿ ಭೇಟಿ ಹಿನ್ನೆಲೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಅಲ್ಲದೆ , ಸಂಜೆ 6 ಗಂಟೆವರೆಗೆ ನಂದಿಗಿರಿಧಾಮ, ಸ್ಕಂದಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜ್ಯಕ್ಕೆ | ಸಂಜೆ ಸತ್ಯಸಾಯಿ ವಿವಿ ಘಟಿಕೋತ್ಸವದಲ್ಲಿ ಪಾಲ್ಗೊಳ್ಳುವಿಕೆ Read More »

ನಾಳೆ (ಜು.3) : ಶ್ರೀ ಶಾಂತಿಮೊಗರು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

ಕಡಬ: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶ್ರೀ ಶಾಂತಿಮೊಗರು ಸುಬ್ರಮಣ್ಯ ದೇವಸ್ಥಾನದಲ್ಲಿ ಹುಣ್ಣಿಮೆ ಪ್ರಯುಕ್ತ ಪ್ರತಿ ತಿಂಗಳು ನಡೆಯುವಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜು.3 ಸೋಮವಾರ ನಡೆಯಲಿದೆ. ಬೆಳಿಗ್ಗೆ ಸಾರ್ವಜನಿಕ ಗಣಪತಿ ಹೋಮ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಂಜೆ ಶ್ರೀ ದುರ್ಗಾ ಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಲಿದೆ.  ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಗ್ರಾಮದ ಎಲ್ಲಾ ಮನೆಯವರು ಭಾಗವಹಿಸಿ ಪ್ರಸಾದವನ್ನು ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಸಮಿತಿ ವಿನಂತಿಸಿದೆ.

ನಾಳೆ (ಜು.3) : ಶ್ರೀ ಶಾಂತಿಮೊಗರು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ Read More »

ಝೀ ಕನ್ನಡ ವಾಹಿನಿ ಛೋಟಾ ಚಾಂಪಿಯನ್ ಗೇಮ್ ಶೋನಲ್ಲಿ ಪ್ರಥಮ ಸ್ಥಾನ ಪಡೆದ ಪುಟಾಣಿ ಆತ್ಮಿ ಗೌಡರಿಗೆ ಸನ್ಮಾನ | ಸನ್ಮಾನಿಸಿದ ಅಲಂಕಾರು ಒಕ್ಕಲಿಗ ಗೌಡ ಸೇವಾ ಸಂಘ

ಪುತ್ತೂರು: ಝೀ ಕನ್ನಡ ವಾಹಿನಿಯ ಛೋಟಾ ಚಾಂಪಿಯನ್ ಗೇಮ್ ಶೋ ದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ರಾಮಕುಂಜ ಗ್ರಾಮದ ಸಂಪ್ಯಾಡಿ ನಿವಾಸಿ ಸುಜಿತ್ ಹಾಗೂ ಉಮಾಶ್ರೀ ದಂಪತಿ ಪುತ್ರಿ ಮೂರುವರೆ ವರ್ಷದ ಪುಟಾಣಿ ಆತ್ಮಿ ಗೌಡರನ್ನು ಅಲಂಕಾರು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಸಂಪ್ಯಾಡಿಯ ಅವರ ಮನೆಯಲ್ಲಿ ಸನ್ಮಾನಿಸಲಾಯಿತು. ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದ ಮಾಜಿ ನಿರ್ದೇಶಕ ಲಿಂಗಪ್ಪ ಗೌಡ ಕಡೆಂಬ್ಯಾಲ್, ಒಕ್ಕಲಿಗ ಗೌಡ ಸಂಘದ ಆಲಂಕಾರು ವಲಯ ಅಧ್ಯಕ್ಷ ರಾಮಣ್ಣ

ಝೀ ಕನ್ನಡ ವಾಹಿನಿ ಛೋಟಾ ಚಾಂಪಿಯನ್ ಗೇಮ್ ಶೋನಲ್ಲಿ ಪ್ರಥಮ ಸ್ಥಾನ ಪಡೆದ ಪುಟಾಣಿ ಆತ್ಮಿ ಗೌಡರಿಗೆ ಸನ್ಮಾನ | ಸನ್ಮಾನಿಸಿದ ಅಲಂಕಾರು ಒಕ್ಕಲಿಗ ಗೌಡ ಸೇವಾ ಸಂಘ Read More »

ಕುಂಬ್ರದ ವ್ಯಕ್ತಿ ದಿಢೀರ್ ನಾಪತ್ತೆ | ಕುಟುಂಬ ಆತಂಕದಲ್ಲಿ

ಪುತ್ತೂರು : ಒಳಮೊಗ್ರು ಗ್ರಾಮದ ಕುಂಬ್ರ ನಿವಾಸಿ ಉಮ್ಮರ್ ಎಂಬವರು ದಿಢೀರ್ ನಾಪತ್ತೆಯಾದ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶನಿವಾರ ಮಧ್ಯಾಹ್ನ 3 ಗಂಟೆ ವರೆಗೆ ಪುತ್ತೂರಿನಲ್ಲಿದ್ದ ಅವರು ಬಳಿಕ ನಾಪತ್ತೆಯಾಗಿದ್ದಾರೆ. ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಜು.3 ರಂದು ಅವರ ಪುತ್ರನಿಗೆ ಮದುವೆ ನಡೆಯಲಿದ್ದು, ಜು.2 ರಂದು ನಡೆಯಬೇಕಿದ್ದ ಮೆಹೆಂದಿ ರದ್ದು ಮಾಡಿದ್ದಾರೆ. ಇದೀಗ ನಾಪತ್ತೆಯಾಗಿರುವ ಕುರಿತು ಕುಟುಂಬದವರಿಗೆ ಅಘಾತ ಉಂಟು ಮಾಡಿದ್ದು, ಪೊಲೀಸರು ಹುಡುಕಾಟದಲ್ಲಿ ತೊಡಗಿದ್ದಾರೆ.

ಕುಂಬ್ರದ ವ್ಯಕ್ತಿ ದಿಢೀರ್ ನಾಪತ್ತೆ | ಕುಟುಂಬ ಆತಂಕದಲ್ಲಿ Read More »

error: Content is protected !!
Scroll to Top