ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ | ಸಂತ್ರಸ್ತೆ ಮನೆಗೆ ಜನವಾದಿ ಮಹಿಳಾ ಸಂಘಟನೆ, ಸಾಮರಸ್ಯ ಮಂಗಳೂರು ಸಹಿತ ವಿವಿಧ ಮಹಿಳಾ ಸಂಘಟನೆಗಳ ಪ್ರಮುಖರು ಭೇಟಿ
ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯನ್ನಾಗಿಸಿ ನಂತರ ಮದುವೆಗೆ ನಿರಾಕರಿಸಿದ ಪ್ರಕರಣದ ಸಂತ್ರಸ್ಥೆ ನಿವಾಸಕ್ಕೆ ಜನವಾದಿ ಮಹಿಳಾ ಸಂಘಟನೆ, ಸಾಮರಸ್ಯ ಮಂಗಳೂರು ಸಹಿತ ವಿವಿಧ ಮಹಿಳಾ ಸಂಘಟನೆಗಳ ಪ್ರಮುಖರು ಭೇಟಿ ನೀಡಿ ಧೈರ್ಯ ತುಂಬಿದರು. ಮದುವೆಯಾಗುವ ಭರವಸೆ ನೀಡಿ, ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ನಂತರ ರಾಜಕೀಯ ಬೆಂಬಲದಿಂದ ತಲೆ ಮರೆಸಿಕೊಂಡಿರುವ ಕೃಷ್ಣ ರಾವ್ ನನ್ನು ಬಂಧಿಸಬೇಕು. ಗರ್ಭಪಾತಕ್ಕೆ ಒತ್ತಾಯಿಸಿ ಹಣದ ಆಮಿಷ ಒಡ್ಡಿದ ಸಂಘಟನೆಗಳ ಪ್ರಮುಖರನ್ನು ತನಿಖೆಗೆ ಒಳಪಡಿಸಬೇಕು ಎಂದು ಮಹಿಳಾ ನಾಯಕರು ಈ ಸಂದರ್ಭ […]










