ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 20 ಕೆ.ಜಿ. ಶ್ರೀಗಂಧದ ಕೊರಡು ಸಮರ್ಪಣೆ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅತೀ ಮುಖ್ಯವಾದ ಶ್ರೀಗಂಧವನ್ನು ಶನಿವಾರ ಸಮರ್ಪಿಸಲಾಯಿತು. ಸರಕಾರದ ಸಬ್ಸಿಡಿ ದರದಲ್ಲಿ ಸುಮಾರು 20 ಕೆ.ಜಿ. ಶ್ರೀಗಂಧದ ಕೊರಡುಗಳು ಶ್ರೀ ದೇವಸ್ಥಾನಕ್ಕೆ ಸಮರ್ಪಣೆಯಾದವು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಸದಸ್ಯರಾದ ಬಿ.ಐತ್ತಪ್ಪ ನಾಯ್ಕ್, ರಾಮದಾಸ ಗೌಡ, ರಾಮಚಂದ್ರ ಕಾಮತ್, ರವೀಂದ್ರನಾಥ ರೈ ಬಳ್ಳಮಜಲು, ಡಾ.ಸುಧಾ ಎಸ್. ರಾವ್, ವೀಣಾ ಬಿ.ಕೆ. ಉಪಸ್ಥಿತರಿದ್ದರು.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 20 ಕೆ.ಜಿ. ಶ್ರೀಗಂಧದ ಕೊರಡು ಸಮರ್ಪಣೆ Read More »










