ಸೌಜನ್ಯ ಸಮಾಧಿ ಬಳಿಯಲ್ಲೇ ಆಕೆಯ ಪ್ರತಿಮೆ ಸ್ಥಾಪನೆ | ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ಹೇಳಿಕೆ
ಬೆಳ್ತಂಗಡಿ: ಸೌಜನ್ಯಾ ಅವರ ಸಮಾಧಿಯ ಬಳಿಯಲ್ಲೇ ಆಕೆಯ ಅತಿದೊಡ್ಡ ಪ್ರತಿಮೆಯನ್ನು ಸ್ಥಾಪಿಸುತ್ತೇವೆ ಎಂದು ಬೆಳ್ತಂಗಡಿಯ ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ಹೇಳಿದ್ದಾರೆ. ಅವರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆಕೆ ನಮಗೆ ಒಂದು ಶಕ್ತಿಯಾಗಲಿದ್ದಾಳೆ. ಆಕೆಯ ದೇವಸ್ಥಾನ ಮಾಡುತ್ತೇವೆ. ಆ ಮಾರ್ಗವಾಗಿ ಬರುವ ಭಕ್ತರು ಮಾತ್ರವಲ್ಲ,ಅತ್ಯಾಚಾರ ನಡೆಸಿ ಕೊಲೆ ಮಾಡಿದವರು ಕೂಡ ಅದನ್ನು ನಿತ್ಯವೂ ನೋಡಿಯೇ ಮುಂದೆ ಸಾಗುವಂತಾಗಬೇಕು ಎಂದು ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಸಿಬಿಐ ಕೋರ್ಟ್ ತೀರ್ಪಿನಲ್ಲಿ ಸಂತೋಷ್ ರಾವ್ ಆರೋಪಿ […]








