ಪುತ್ತೂರು

ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರಗಳ ಸಭೆ

ವಿಟ್ಲ : ವಿಟ್ಲ ಬಿಜೆಪಿ ಮಹಾಶಕ್ತಿ ಕೇಂದ್ರದ  3 ಶಕ್ತಿ ಕೇಂದ್ರಗಳ ಸಭೆಯನ್ನು ಪುತ್ತೂರು ಗ್ರಾಮಂತರ ಮಂಡಲದ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ ಅಧ್ಯಕ್ಷತೆಯಲ್ಲಿ ನಡೆಯಿತು ಸಭೆಯಲ್ಲಿ ಮುಂದಿನ ಲೋಕಸಭೆ ಚುನಾವಣೆ, ಜಿಪಂ, ತಾಪಂ, ಗ್ರಾಪಂ ಚುನಾವಣೆ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು, ಜಿಲ್ಲಾ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗುಳಿ ಮನೆ ನಿತೀಶ್ ಶಾಂತಿವನ ಮಂಡಲದ ಉಪಾಧ್ಯಕ್ಷರಾದ ಅರುಣ್ ವಿಟ್ಲ ಹರಿಪ್ರಸಾದ್ ಯಾದವ್ ದಯಾನಂದ ಶೆಟ್ಟಿ […]

ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರಗಳ ಸಭೆ Read More »

ಕೆಸಿಸಿಐ ಕರೆಯಂತೆ ಜೂ.22 ರ ಕರ್ನಾಟಕ ಬಂದ್ ಗೆ ನಮ್ಮ ಬೆಂಬಲ ಇಲ್ಲ : ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಹೇಳಿಕೆ

ಪುತ್ತೂರು: ಕರ್ನಾಟಕ ಛೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಜೂ.22 ರಂದು ಕರೆ ನೀಡಿದ ಕರ್ನಾಟಕ ಬಂದ್ ಗೆ ನಮ್ಮ ಬೆಂಬಲವಿಲ್ಲ ಎಂದು ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ತಿಳಿಸಿದೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಧ್ಯಕ್ಷ ಜಾನ್ ಕುಟಿನ್ಹ ಮಾತನಾಡಿ, ವಿದ್ಯುತ್ ದರ ಏರಿಕೆಯಾಗಿರುವುದಕ್ಕೆ ನಮ್ಮ ವಿರೋಧವಿದೆ. ಒಂದೆಡೆ ಉಚಿತ ಇನ್ನೊಂದೆಡೆ ದರ ಏರಿಕೆ ಮಾಡಿರುವುದು ಸರಿಯಲ್ಲ. ಆದರೆ ಬಂದ್ ಮಾಡುವುದರಿಂದ ಕೈಗಾರಿಕೋದ್ಯಮಿಗಳಿಗೆ ಹಾಗೂ ವರ್ತಕರಿಗೇ ನಷ್ಟ. ಈ ನಿಟ್ಟಿನಲ್ಲಿ

ಕೆಸಿಸಿಐ ಕರೆಯಂತೆ ಜೂ.22 ರ ಕರ್ನಾಟಕ ಬಂದ್ ಗೆ ನಮ್ಮ ಬೆಂಬಲ ಇಲ್ಲ : ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಹೇಳಿಕೆ Read More »

ಮಹಾಲಿಂಗೇಶ್ವರ ಭಟ್ ನಿಧನ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾಸುಕಿ ನಾಗನ ಸನ್ನಿಧಿಯಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದ ಕೋಟೆ ಮಹಾಲಿಂಗೇಶ್ವರ ಭಟ್ (58) ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ನಿಧನರಾದರು. ಬೆಳ್ಳಾರೆ ಕೋಟೆ ಮನೆತನದವರಾದ ಮಹಾಲಿಂಗೇಶ್ವರ ಭಟ್ ಅವರು ಪುತ್ತೂರು ಕೊಡಿಪ್ಪಾಡಿ ಸಮೀಪದ ಬಿರಾವು ಎಂಬಲ್ಲಿ ವಾಸ್ತವ್ಯ ಹೂಡಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಮಹಾಲಿಂಗೇಶ್ವರ ಭಟ್ ನಿಧನ Read More »

ಕಲ್ಲರ್ಪೆಯಲ್ಲಿ ಕಾರು-ದ್ವಿಚಕ್ರ ವಾಹನ ಡಿಕ್ಕಿ | ದ್ವಿಚಕ್ರ ಸವಾರ ಮೃತ್ಯು

ಪುತ್ತೂರು: ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಕಾರು ಹಾಗೂ ದ್ವಿಚಕ್ರ ವಾಹನ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ನೈತಾಡಿ ನಿವಾಸಿ ಇಸ್ಮಾಯಿಲ್ ಮೃತಪಟ್ಟವರು. ತಮ್ಮ ಜಮೀನಿಗೆ ಹೋಗುವ ಸಂದರ್ಭ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ಇಸ್ಮಾಯಿಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಲೆ ಮೃತಪಟ್ಟಿದ್ದಾರೆ. ಅಪಘಾತ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದೆ. ಮಡಿಕೇರಿ ನೋಂದಾಯಿತ ಕಾರಿನ ಕುರಿತು ಮಾಹಿತಿ ಲಭ್ಯವಾಗಿಲ್ಲ. ಮೃತ ಇಸ್ಮಾಯಿಲ್ ಪತ್ನಿ, ಮೂರು ಹೆಣ್ಣು ಹಾಗೂ ಒಂದು ಗಂಡು

ಕಲ್ಲರ್ಪೆಯಲ್ಲಿ ಕಾರು-ದ್ವಿಚಕ್ರ ವಾಹನ ಡಿಕ್ಕಿ | ದ್ವಿಚಕ್ರ ಸವಾರ ಮೃತ್ಯು Read More »

ಕೌಡಿಚ್ಚಾರು ನಿವಾಸಿ ಕವಿತಾ ನಿಧನ

ಪುತ್ತೂರು: ಕೌಡಿಚ್ಚಾರು ನಿವಾಸಿ ಕವಿತಾ (30) ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ಕೆಲವು ಸಮಯದಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಮೂಲತಃ ಕೆದಂಬಾಡಿಯವರಾದ ಅವರು ವಿವಾಹದ ಬಳಿಕ ಅರಿಯಡ್ಕ ಗ್ರಾಮದ ಕೌಡಿಚ್ಚಾರಿನಲ್ಲಿ ವಾಸವಿದ್ದರು.

ಕೌಡಿಚ್ಚಾರು ನಿವಾಸಿ ಕವಿತಾ ನಿಧನ Read More »

ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದಿಂದ ಮತಾಂತರ ಕಾಯಿದೆ ವಾಪಾಸು | ವಿಎಚ್‌ಪಿ, ಬಜರಂಗದಳದಿಂದ ಪ್ರತಿಭಟನೆ

ಪುತ್ತೂರು :  ನಮ್ಮ ಸಂಘಟನೆಯ ನೇತೃತ್ವದಲ್ಲಿ ರಾಜ್ಯಪಾಲರ ಮನೆ ಮುಂದೆ ಅಮರಣಾಂತ ಉಪವಾಸ ಕೂತಾದರೂ ಮತಾಂತರ  ಕಾಯಿದೆಯನ್ನು ಹಿಂಪಡೆಯುವುದನ್ನು ತಡೆಯುವುದಾಗಿ ಬಜರಂಗದಳದ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದ್ದಾರೆ. ಅವರು ಸೋಮವಾರ ಸಂಜೆ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ  ರಾಜ್ಯ ಕಾಂಗ್ರೆಸ್ ಸರಕಾರ ಮತಾಂತರ ನಿಷೇಧ ಕಾಯಿದೆಯನ್ನು ಹಿಂಪಡೆಯುವುದರ ವಿರುದ್ಧ ವಿಶ್ವಹಿಂದು ಪರಿಷತ್ ಬಜರಂಗದಳದ ವತಿಯಿಂದ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು ಹಿಂದಿನ ಬಿಜೆಪಿ ಸರಕಾರ ಜಾರಿತಂದ ಕಾಯಿದೆಯನ್ನು ಸಚಿವ ಸಂಪುಟದಲ್ಲಿ

ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದಿಂದ ಮತಾಂತರ ಕಾಯಿದೆ ವಾಪಾಸು | ವಿಎಚ್‌ಪಿ, ಬಜರಂಗದಳದಿಂದ ಪ್ರತಿಭಟನೆ Read More »

ಜೂನ್ 21 : ಕಡಬದಲ್ಲಿ ಜನಜಾಗೃತಿ ವೇದಿಕೆಯ ಪದಗ್ರಹಣ, ನವಜೀವನೋತ್ಸವ ಕಾರ್ಯಾಕ್ರಮ

ಕಡಬ:  ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಜನಜಾಗೃತಿ ವೇದಿಕೆಯ ಪದಗ್ರಹಣ ಸಮಾರಂಭ, ಯೋಜನೆಯ ವತಿಯಿಂದ ನಡೆಯುವ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಮದ್ಯಮುಕ್ತರ ನವಜೀವನೋತ್ಸವ ಕಾರ್ಯಕ್ರಮ  ಜೂನ್ 21 ಬುಧವಾರ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಡಬ ತಾಲೂಕು ಜಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ ಸವಣೂರು ಹೇಳಿದರು. ಅವರು ಸೋಮವಾರ ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮತನಾಡಿ,  ಕಡಬ ನೂತನ ತಾಲೂಕು ಆಗಿರುವ ಹಿನ್ನಲೆಯಲ್ಲಿ

ಜೂನ್ 21 : ಕಡಬದಲ್ಲಿ ಜನಜಾಗೃತಿ ವೇದಿಕೆಯ ಪದಗ್ರಹಣ, ನವಜೀವನೋತ್ಸವ ಕಾರ್ಯಾಕ್ರಮ Read More »

ಕೋಡಿಂಬಾಡಿ ಶಾಸಕ ಅಶೋಕ್ ರೈಗೆ ಹುಟ್ಟೂರ ಸನ್ಮಾನ | ಕೋಡಿಂಬಾಡಿ ಗ್ರಾಮಸ್ಥರು ತಲೆತಗ್ಗಿಸುವ ಕೆಲಸವನ್ನು ಎಂದಿಗೂ ಮಾಡಲಾರೆ | ಶಾಸಕ ಅಶೋಕ್ ರೈ

ಪುತ್ತೂರು: ನಾನು 20 ವರ್ಷ ಬಿಜೆಪಿಯಲ್ಲಿ ಸಕ್ರೀಯನಾಗಿದ್ದೆ, ಈ ಬಾರಿ ಬಿಜೆಪಿಯಲ್ಲಿ ಟಿಕೆಟ್ ಕೇಳಿದ್ದೆ ಬಿಜೆಪಿಯಲ್ಲಿ ಅವಕಾಶ ಸಿಗುವುದಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷವನ್ನು ಸೇರಿದೆ, ಅವಕಾಶ ಸಿಕ್ಕಿತ್ತು, ಸ್ಪರ್ದೆ ಮಾಡಿದೆ, ಗೆದ್ದೆ , ಶಾಸಕನಾದೆ. ನಾನು ಹಣ ಮಾಡಬೇಕೆಂಬ ಉದ್ದೇಶದಿಂದ ರಾಜಕೀಯಕ್ಕೆ ಬಂದಿಲ್ಲ, ಬಡವರ ಸೇವೆ ಮಾಡಬೇಕು ಎಂಬ ಏಕೈಕ ಉದ್ದೇಶದಿಂದ ರಾಜಕೀಯ ಸೇರಿದೆ. ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಕೋಡಿಂಬಾಡಿ ಶ್ರೀ ಮಹಿಷಮರ್ಧಿನಿ ದೆವಸ್ಥಾನದ ಸಭಾಂಗಣದಲ್ಲಿ ಶಾಸಕರಿಗೆ ಗ್ರಾಮಸ್ಥರು ಆಯೋಜಿಸಿದ

ಕೋಡಿಂಬಾಡಿ ಶಾಸಕ ಅಶೋಕ್ ರೈಗೆ ಹುಟ್ಟೂರ ಸನ್ಮಾನ | ಕೋಡಿಂಬಾಡಿ ಗ್ರಾಮಸ್ಥರು ತಲೆತಗ್ಗಿಸುವ ಕೆಲಸವನ್ನು ಎಂದಿಗೂ ಮಾಡಲಾರೆ | ಶಾಸಕ ಅಶೋಕ್ ರೈ Read More »

ಪ್ರಸ್ತುತ ವರ್ಷದಲ್ಲಿ ತಾಲೂಕಿನಲ್ಲಿ 6 ಮಂದಿಯಲ್ಲಿ ಕುಷ್ಠರೋಗ ಲಕ್ಷಣ ಪತ್ತೆ | ಕುಷ್ಠರೋಗ ನಿವಾರಣಾ ಜಾಗೃತ ಸಮಿತಿ ಸಭೆಯಲ್ಲಿ ಮಾಹಿತಿ

ಪುತ್ತೂರು: ಪುತ್ತೂರಿನಲ್ಲಿ2021 ರಲ್ಲಿ 2 ಕುಷ್ಠರೋಗ ಪ್ರಕರಣ ಕಂಡು ಬಂದಿದ್ದು, ಈ ವರ್ಷ ಆರು ಪ್ರಕರಣಗಳು ಪತ್ತೆಯಾಗಿವೆ. ಈ ನಿಟ್ಟಿನಲ್ಲಿ ಜೂ.19 ರಿಂದ ಜು.6 ರ  ತನಕ ರಾಷ್ಟ್ರೀಯ ಕುಷ್ಠರೋಗ ನಿವಾರಣಾ ಅಭಿಯಾನ ಯೋಜನೆಯಡಿ ಮನೆ ಮನೆ ಭೇಟಿ ನಡೆಯಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ತಿಳಿಸಿದ್ದಾರೆ. ಅವರು ಸೋಮವಾರ ತಾಲೂಕು ಆಡಳಿತ ಸೌಧದ ಸಹಾಯಕ ಕಮೀಷನರ್ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಕುಷ್ಠರೋಗ ನಿವಾರಣಾ ಜಾಗೃತ ಸಮಿತಿ ಸಭೆಯಲ್ಲಿ ಮತನಾಡಿದರು. ಪ್ರಸ್ತುತ ವರ್ಷದಲ್ಲಿ ಕುಷ್ಠರೋಗಿಗಳಲ್ಲಿ ಏರಿಕೆ

ಪ್ರಸ್ತುತ ವರ್ಷದಲ್ಲಿ ತಾಲೂಕಿನಲ್ಲಿ 6 ಮಂದಿಯಲ್ಲಿ ಕುಷ್ಠರೋಗ ಲಕ್ಷಣ ಪತ್ತೆ | ಕುಷ್ಠರೋಗ ನಿವಾರಣಾ ಜಾಗೃತ ಸಮಿತಿ ಸಭೆಯಲ್ಲಿ ಮಾಹಿತಿ Read More »

ಸರಕಾರಿ ಆಸ್ಪತ್ರೆ ಲಂಚ ಪ್ರಕರಣದಲ್ಲಿ ಸೇವಾ ಸಂಸ್ಥೆಗಳ ಬಗ್ಗೆ ಸುಳ್ಳು ಆರೋಪ ಮಾಡಬೇಡಿ :ಕಲಿಯುಗ ಸೇವಾ ಸಮಿತಿಯಿಂದ ಮನವಿ

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಶವ ಪರೀಕ್ಷೆ ನಡೆಸುವ ನೌಕರರಿಗೆ ಕಡಿಮೆ ಸಂಬಳ ಇರುವುದು ಬೇಸರ ತಂದಿದೆ. ಇದನ್ನೆ ಮುಂದಿಟ್ಟು ಬರವರಿಂದ ಶವ ಪರೀಕ್ಷೆಗೆ ಹಣ ಪಡೆದುಕೊಳ್ಳುವುದು ಸರಿಯೇ ? ಎಂದು ಕಲಿಯುಗ ಸೇವಾ ಸಮಿತಿ ಪ್ರಶ್ನಿಸಿದೆ. ಸಮಿತಿಯ ಕಾರ್ಯದರ್ಶಿ ಸಂಪತ್ ಕುಮಾರ್ ಜೈನ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಣ ಪಡೆದವರ ಪರ ಆರೋಗ್ಯಾಧಿಕಾರಿಯವರು ಮಾತನಾಡುವ ಮೂಲಕ ಲಂಚ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುವವರ ನೈತಿಕ ಬಲ ಕಳೆದುಕೊಳ್ಳುವಂತಾಗಿದೆ ಎಂದು ತಿಳಿಸಿದ ಅವರು, ಈ ನಿಟ್ಟಿನಲ್ಲಿ

ಸರಕಾರಿ ಆಸ್ಪತ್ರೆ ಲಂಚ ಪ್ರಕರಣದಲ್ಲಿ ಸೇವಾ ಸಂಸ್ಥೆಗಳ ಬಗ್ಗೆ ಸುಳ್ಳು ಆರೋಪ ಮಾಡಬೇಡಿ :ಕಲಿಯುಗ ಸೇವಾ ಸಮಿತಿಯಿಂದ ಮನವಿ Read More »

error: Content is protected !!
Scroll to Top