ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ IRCMD ಶಿಕ್ಷಣ ಸಂಸ್ಥೆ ವತಿಯಿಂದ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ.
ಕಡಬ : ಕಡಬದ ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಅಬಾಕಸ್ ಗಣಿತ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ಪ್ರಾಂಶುಪಾಲರಾದ ವಂದನೀಯ ಫಾದರ್ ಅಮಿತ್ ಪ್ರಕಾಶ್ ರೋಡ್ರಿಗಸ್ ರವರು ವಹಿಸಿ ಮಾತನಾಡಿ, ಅಬಾಕಸ್ ತರಗತಿಯನ್ನು ನಮ್ಮ ವಿದ್ಯಾರ್ಥಿಗಳಿಗೆ ನೀಡುವುದರಿಂದ ವಿದ್ಯಾರ್ಥಿಗಳ ಬುದ್ದಿ ಶಕ್ತಿ ಉತ್ತಮಗೊಳ್ಳುತ್ತದೆ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಇನ್ನಿತರ ಚಟುವಟಿಕೆಗಳಲ್ಲಿಯೂ ಪ್ರಗತಿ ಸಾಧಿಸುತ್ತಾರೆ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಪುತ್ತೂರು […]










