ಪುತ್ತೂರು

ಯಶಶ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮುಂದುವರೆಸಿ | ಉಸ್ತುವಾರಿ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಆರೋಗ್ಯ ತುರ್ತು ಸಂದರ್ಭದಲ್ಲಿ ಬಡವರಿಗೆ ವರದಾನವಾಗಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಹಿಂದಿನ ಸರಕಾರ ನಿಷ್ಕ್ರೀಯಗೊಳಿಸಿದ್ದು ಅದನ್ನು ಮುಂದುವರೆಸುವಂತೆ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಮನವಿ ಮಾಡಿದ್ದಾರೆ.  ಗ್ರಾಮೀಣ ಪ್ರದೇಶಗಳ ಸಹಾಕಾರಿ ಸಂಘಗಳ ಸದಸ್ಯರು, ಸ್ತ್ರೀ ಶಕ್ತಿ ಗುಂಪು ಸ್ವ-ಸಹಾಯ ಸಂಘ ಸದಸ್ಯರು ಹಾಗೂ ಗ್ರಾಮೀಣ ಪ್ರದೇಶದಲ್ಲಿರುವ ಸಹಕಾರಿ ಸಂಘ ಸಹಕಾರಿ ಬ್ಯಾಂಕ್‌ಗಳಲ್ಲಿ ಹಣಕಾಸಿನ ವಹಿವಾಟು ಹೊಂದಿರುವ ಸ್ವ-ಸಹಾಯ ಗುಂಪಿನ […]

ಯಶಶ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮುಂದುವರೆಸಿ | ಉಸ್ತುವಾರಿ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ Read More »

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಕಡಬದಲ್ಲಿ ಚಾಲನೆ

ಕಡಬ: ರಾಜ್ಯ ಸರಕಾರದ ಮಹಾತ್ವಾಕಾಂಕ್ಷೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಕಡಬದಲ್ಲಿ ಕಾಂಗ್ರೇಸ್ ನಾಯಕರು ಹಾಗೂ ಕಾರ್ಯಕರ್ತರು ಸಂಭ್ರಮ ಸಡಗರದಿಂದ ಚಾಲನೆ ನೀಡಿದರು. ಕಡಬ-ಶಾಂತಿಮೊಗೇರು-ಪುತ್ತೂರು ಸರಕಾರಿ ಬಸ್ಸಿಗೆ ಕಡಬದಲ್ಲಿ ಶೃಂಗಾರ ಮಾಡಿ ಕಾಂಗ್ರೇಸ್ ಕಾರ್ಯಕರ್ತರು ಕಾಂಗ್ರೇಸ್ ಧ್ವಜ ಹಿಡಿದು ಮುಖ್ಯ ಮಂತ್ರಿ ಸಿದ್ದರಾಮಯ್ಯ , ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪರವಾಗಿ ಘೋಷಣೆ ಕೂಗಿದರು. ಬಳಿಕ ಕಡಬ ಬ್ಲಾಕ್ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಸತೀಶ್ ನಾಕ್ ಮೇಲಿನ ಮನೆ ತೆಂಗಿನ ಕಾಯಿ ಒಡೆಯುವ ಮೂಲಕ

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಕಡಬದಲ್ಲಿ ಚಾಲನೆ Read More »

ಉತ್ತಮ ಮಳೆಗಾಗಿ ರುದ್ರ ಪಠಣ, ಪರ್ಜನ್ಯ ಜಪ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ

ಪುತ್ತೂರು: ಉತ್ತಮ ಮಳೆಗಾಗಿ ವೇದ ಸಂವರ್ಧನಾ ಪ್ರತಿಷ್ಟಾನದಿಂದ ರುದ್ರ ಪಠಣ, ಪರ್ಜನ್ಯ ಜಪ ಮತ್ತು ಭಕ್ತರಿಂದ ಸಾಮೂಹಿಕ ಪ್ರಾರ್ಥನೆಯು ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಾನುವಾರ ನಡೆಯಿತು. ತಡವಾದ ಮಳೆಯು ಪ್ರಕೃತಿಯ ಸಮತೋಲನ ಮೇಲೆ ಪರಿಣಾಮ ಬೀರುವುದರಿಂದ ಎಲ್ಲಾ ವ್ಯವಸ್ಥೆಯಲ್ಲೂ ಸಮಸ್ಯೆ ಆಗದಂತೆ ಲೋಕಕ್ಷೇಮ ಮತ್ತು ಉತ್ತಮ ಮಳೆಗಾಗಿ ಪರ್ಜನ್ಯ ಜಪವನ್ನು ಮಾಡಲಾಯಿತು. ದೇವಳದ ಗೋಪುರದಲ್ಲಿ ರುದ್ರ ಪಠಣ, ಪರ್ಜನ್ಯ ಜಪ ಮಾಡಲಾಯಿತು

ಉತ್ತಮ ಮಳೆಗಾಗಿ ರುದ್ರ ಪಠಣ, ಪರ್ಜನ್ಯ ಜಪ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ Read More »

ರಾಜ್ಯ ಸರಕಾರದ ಮಹಿಳೆಯರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ “ಶಕ್ತಿ” ಯೋಜನೆಗೆ ಚಾಲನೆ

ಪುತ್ತೂರು: ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಸರಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ “ಶಕ್ತಿ” ಯೋಜನೆಗೆ ಭಾನುವಾರ ನಗರದ ಕೋಟಿ-ಚೆನ್ನಯ  ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ಕಿಕ್ಕಿರಿದು ತುಂಬಿದ ಮಹಿಳೆಯರು, ಸಾರ್ವಜನಿಕರು ಈ ಐತಿಹಾಸಿಕ ಯೋಜನೆಗೆ ಸಾಕ್ಷಿಯಾದರು. ಉದ್ಘಾಟನೆಗೆ ಮುನ್ನ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹಾಗೂ ಅತಿಥಿಗಳನ್ನು ಬ್ಯಾಂಡ್ ವಾದ್ಯದ ಮೂಲಕ ವೇದಿಕೆಗೆ ಕರೆ ತರಲಾಯಿತು. ಬಳಿಕ ದೀಪ ಬೆಳಗಿಸುವ ಮೂಲಕ ಶಾಸಕರು “ಶಕ್ತಿ” ಯೋಜನೆಗೆ ಚಾಲನೆ ನೀಡಿದರು. ಸಮಾರಂಭದ ಉದ್ಘಾಟನೆ

ರಾಜ್ಯ ಸರಕಾರದ ಮಹಿಳೆಯರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ “ಶಕ್ತಿ” ಯೋಜನೆಗೆ ಚಾಲನೆ Read More »

ಪುತ್ತೂರು ಸರಕಾರಿ ಆಸ್ಪತ್ರೆಗಳ ಸೌಲಭ್ಯ ಹೆಚ್ಚಿಸಿ | ಉಸ್ತುವಾರಿ ಸಚಿವರಿಗೆ ಮನವಿ ನೀಡಿದ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಕೆಲವೊಂದು ಸೌಲಭ್ಯಗಳ ಕೊರತೆ ಇದ್ದು ಆಕೊರತೆಯನ್ನು ನೀಗಿಸಿ ಜನರಿಗೆ ಸೇವೆ ನೀಡುವಲ್ಲಿ ವ್ಯವಸ್ಥೆಯನ್ನು ಕೈಗೊಳ್ಳುವಂತೆ ಆರೋಗ್ಯ ಹಾಗೂ ಕುಟುಂಬ ಕಲ್ಯಾನ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಶಾಸಕರಾದ ಅಶೋಕ್ ರೈ ಮನವಿ ಸಲ್ಲಿಸಿದರು. ಸಾಮಾನ್ಯ ಮಹಿಳಾ ರೋಗಿಗಳಿಗೆ ಕೊಠಡಿ ವ್ಯವಸ್ಥೆ, ೫೦ ಹಾಸಿಗೆಗಳನ್ನು ಹಾಕುವಲ್ಲಿ ನೂತನ ಕೊಠಡಿಯನ್ನು ನಿರ್ಮಾಣ ಮಾಡುವುದು, ಆಸ್ಪತ್ರೆಯ ಆವರಣದ ಬಾಕಿ ಇರುವಲ್ಲಿ ಇಂಟರ್‌ಲಾಕ್ ಅಳವಡಿಸುವುದು, ರಕ್ತ ಶೇಖರಣಾ ಘಟಕದ ನವೀಕರಣ ಮಾಡುವುದು, ಆಸ್ಪತ್ರೆಯಲ್ಲಿ

ಪುತ್ತೂರು ಸರಕಾರಿ ಆಸ್ಪತ್ರೆಗಳ ಸೌಲಭ್ಯ ಹೆಚ್ಚಿಸಿ | ಉಸ್ತುವಾರಿ ಸಚಿವರಿಗೆ ಮನವಿ ನೀಡಿದ ಶಾಸಕ ಅಶೋಕ್ ರೈ Read More »

ಪಕ್ಷ ವಿರೋಧಿ ಚಟುವಟಿಕೆ : 17 ಮಂದಿ ಕಾಂಗ್ರೆಸ್ ನಿಂದ ಉಚ್ಛಾಟನೆ

ನೆಲ್ಯಾಡಿ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನಲೆಯಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯೆರಿಬ್ಬರ ಸಹಿತ 17 ಮಂದಿಯನ್ನು ಕಾಂಗ್ರೆಸ್‍ ನ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ. ತಾಲೂಕು ಪಂಚಾಯಿತಿ ಸದಸ್ಯೆ ಉಷಾ ಅಂಚನ್, ಆಶಾ ಲಕ್ಷ್ಮಣ್ ಗುಂಡ್ಯ, ಸುಳ್ಯ ವಿಧಾನಸಭಾ ಕ್ಷೇತ್ರದ ಅಕ್ರಮ ಸಕ್ರಮ ಮಾಜಿ ಸದಸ್ಯ ಪ್ರವೀಣ್ ಕುಮಾರ್ ಕೆಡೆಂಜಿ, ಕುಟ್ರುಪ್ಪಾಡಿ ಗ್ರಾಪಂ ಮಾಜಿ ಸದಸ್ಯ ಸೇವಿಯರ್ ಬೇಬಿ, ಕಡಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ದೇವಾಡಿಗ, ಎಪಿಎಂಸಿ

ಪಕ್ಷ ವಿರೋಧಿ ಚಟುವಟಿಕೆ : 17 ಮಂದಿ ಕಾಂಗ್ರೆಸ್ ನಿಂದ ಉಚ್ಛಾಟನೆ Read More »

ಕೆಲಸಕ್ಕೆಂದು ತೆರಳಿದ ಯುವತಿ ನಾಪತ್ತೆ

ವಿಟ್ಲ: ಕೆಲಸಕ್ಕೆಂದು ತೆರಳಿದ ವಿಟ್ಲದ ಯುವತಿಯೊಬ್ಬಳು ನಾಪತ್ತೆಯಾಗಿರುವ ಪ್ರಕರಣ ನಡೆದಿದೆ. ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ನಿವಾಸಿ ಬಾಲಕೃಷ್ಣ ಎಂಬವರ ಪುತ್ರಿ ಶ್ರೀದೇವಿ (23) ನಾಪತ್ತೆಯಾದವರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ವಲಯ ಸೇವಾ ಪ್ರತಿನಿಧಿಯಾಗಿರುವ ಶ್ರೀದೇವಿ ಜೂ.9 ರಂದು ಮನೆಯಿಂದ ಕೆಲಸಕ್ಕೆಂದು ತೆರಳಿದವರು ಸಂಜೆ ವರೆಗೂ ಬಾರದ ಹಿನ್ನಲೆಯಲ್ಲಿ ವಿಟ್ಲ ಪೇಟೆ, ಸಂಬಂಧಿಕರ ಮನೆ ಸಹಿತ ವಿವಿಧೆಡೆ ಹುಡುಕಾಟ ನಡೆಸಲಾಗಿತ್ತು. ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಎಲ್ಲೂ ಕಂಡುಬರದ ಹಿನ್ನಲೆಯಲ್ಲಿ ವಿಟ್ಲ ಠಾಣೆಗೆ

ಕೆಲಸಕ್ಕೆಂದು ತೆರಳಿದ ಯುವತಿ ನಾಪತ್ತೆ Read More »

ಎ ಪ್ಲಾಸ್ಟಿಕ್ ಅನೆಮಿಯ ಖಾಯಿಲೆಗೆ ತುತ್ತಾದ ಲಲಿತಾ ಪೂಜಾರಿ | ಚಿಕಿತ್ಸೆ ವೆಚ್ಚಕ್ಕೆ ಧನ ಸಹಾಯಕ್ಕಾಗಿ ವಿನಂತಿ

ಬೆಳ್ತಂಗಡಿ: ಲಲಿತಾ ಪೂಜಾರಿ ತೋಟತ್ತಾಡಿ ಕಾಯಿಲೆಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗೆ ಧನಸಹಾಯ ಕೋರಿದ್ದಾರೆ. ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ನಿವಾಸಿಯಾಗಿರುವ ಲಲಿತಾ ಪೂಜಾರಿ  ಎ ಪ್ಲಾಸ್ಟಿಕ್ ಅನೆಮಿಯ ಖಾಯಿಲೆಗೆ ತುತ್ತಾಗಿದ್ದು, ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗಾಗಲೇ ಅವರ ಚಿಕಿತ್ಸೆಗೆ ಲಕ್ಷಗಟ್ಟಲೆ ವೆಚ್ಚವಾಗಿದ್ದು, ಇನ್ನೂ 10 ಲಕ್ಷಕ್ಕಿಂತಲೂ ಅಧಿಕ ಖರ್ಚು ತಗಲಬಹುದು ಎಂದು ಅಂದಾಜಿಸಲಾಗಿದೆ. ಬಡ ಕುಟುಂಬದವರಾಗಿದ್ದ ಅವರು ಈಗಾಗಲೇ ಸಾಲದಿಂದ ನೊಂದಿದ್ದು, ಚಿಕಿತ್ಸೆ ಖರ್ಚು ಭರಿಸಲು ದಾನಿಗಳಿಂದ ಸಹಾಯ ನಿರೀಕ್ಷಿಸುತ್ತಿದ್ದಾರೆ. ತಮ್ಮಿಂದಾದ ಸಹಾಯ ನೀಡುವಂತೆ ದುರ್ಗಾವಾಹಿನಿ

ಎ ಪ್ಲಾಸ್ಟಿಕ್ ಅನೆಮಿಯ ಖಾಯಿಲೆಗೆ ತುತ್ತಾದ ಲಲಿತಾ ಪೂಜಾರಿ | ಚಿಕಿತ್ಸೆ ವೆಚ್ಚಕ್ಕೆ ಧನ ಸಹಾಯಕ್ಕಾಗಿ ವಿನಂತಿ Read More »

ಪುತ್ತೂರು: ಕೆಪಿಸಿಸಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿ ಅವರಿಂದ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ- ವಿವಿಧ ಬೇಡಿಕೆ ಸಲ್ಲಿಕೆ

ಕಾಣಿಯೂರು: ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮೀ ಬಿಲ್ಲವ ಸಂಘದ ಅಧ್ಯಕ್ಷರು, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರು, ಕೆಪಿಸಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿರವರು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಗೂಡೂರಾವ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ದ. ಕ ಜಿಲ್ಲಾ ಉಸ್ತುವಾರಿ ಸಚಿವ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಆಗಿರುವ ದಿನೇಶ್ ಗುಂಡೂರಾವ್ ಅವರು ಮೊದಲ ಬಾರಿಗೆ ಭಾನುವಾರ ಮಂಗಳೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಭೇಟಿ ಮಾಡಿದ ಸತೀಶ್ ಕುಮಾರ್

ಪುತ್ತೂರು: ಕೆಪಿಸಿಸಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿ ಅವರಿಂದ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ- ವಿವಿಧ ಬೇಡಿಕೆ ಸಲ್ಲಿಕೆ Read More »

ಹೊಳೆಗೆ ಬಿದ್ದ ಕಾರು ಓರ್ವ ಮೃತ್ಯು. ಇನ್ನೋರ್ವನಿಗೆ ಗಂಭೀರ ಗಾಯ.

ನೆಲ್ಯಾಡಿ : ರಾಷ್ಟ್ರೀಯ ಹೆಚ್ಚಾರಿ 75ರ ಶಿರಾಡಿ ಅಡ್ಡ ಹೊಳೆ ಸೇತುವೆಯಿಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಪರಿಣಾಮ ಓರ್ವ ಮೃತಪಟ್ಟರೆ ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ಮುಂಜಾನೆ ನಡೆದಿದೆ. ಮೃತಪಟ್ಟವರನ್ನು ತಮಿಳುನಾಡಿನ ಹೊಸೂರು ಮೂಲದ ಹರಿಪ್ರಸಾದ್ (50) ಎಂದು ಗುರುತಿಸಲಾಗಿದ್ದು, ಗೋಪಿ (48) ಎಂಬವರು ಗಾಯಗೊಂಡವರು.  ಕಾರು ಹೊಸೂರಿನಿಂದ ಮಂಗಳೂರು ಕಡೆಗೆ ಬರುತ್ತಿತ್ತು ಎನ್ನಲಾಗುತ್ತಿದೆ. ಗಾಯಾಳುವಿಗೆ ನೆಲ್ಯಾಡಿಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ

ಹೊಳೆಗೆ ಬಿದ್ದ ಕಾರು ಓರ್ವ ಮೃತ್ಯು. ಇನ್ನೋರ್ವನಿಗೆ ಗಂಭೀರ ಗಾಯ. Read More »

error: Content is protected !!
Scroll to Top