ಪುತ್ತೂರು

ಬಿಜೆಪಿ ಬೆಂಬಲಿತ ಗ್ರಾ.ಪಂ. ಮಾಜಿ ಸದಸ್ಯ ಕಾಂಗ್ರೆಸ್ ಸೇರ್ಪಡೆ

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲೂಕು ಘಟಕದ ಮಾಜಿ ಅಧ್ಯಕ್ಷ ರಮೇಶ್ ರೈ ಡಿಂಬ್ರಿ ಅವರು ಜೂ. ೩ರಂದು ಪುರಭವನದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲೂಕು ಘಟಕದ ಸಂಚಾಲಕರಾಗಿ, ಅಧ್ಯಕ್ಷರಾಗಿ ೧೨ ವರ್ಷ ಕಾರ್ಯ ನಿರ್ವಹಿಸಿದ್ದ ರಮೇಶ್ ರೈ ಅವರು ಬಳಿಕ ಆರ್ಯಾಪು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯರಾಗಿ ಚುನಾಯಿತರಾಗಿದ್ದರು. ಕುರಿಯ ಉಳ್ಳಾಲ ಶ್ರೀ […]

ಬಿಜೆಪಿ ಬೆಂಬಲಿತ ಗ್ರಾ.ಪಂ. ಮಾಜಿ ಸದಸ್ಯ ಕಾಂಗ್ರೆಸ್ ಸೇರ್ಪಡೆ Read More »

ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

ಪುತ್ತೂರು: ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ವಿವೇಕಾನಂದ ಪದವಿ ಕಾಲೇಜಿನ ಭೌತಶಾಸ್ತç ಉಪನ್ಯಾಸಕ ಡಾ. ಶ್ರೀಶ ಭಟ್ ಹೇಳಿದರು. ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ  ವಾಣಿಜ್ಯ ಮತ್ತು ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ನಡೆದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ  ಅವರು ಮಾತನಾಡಿದರು. ಹೂವಿಗೆ ಪರಿಮಳವಿದ್ದಂತೆ ಮಾನವರಿಗೆ ವ್ಯಕ್ತಿತ್ವ ಅಷ್ಟೇ ಮುಖ್ಯ. ಪ್ರತಿಯೊಬ್ಬರ ಜೀವನದ ಒಳಿತು ಕೆಡಕುಗಳಿಗೆ ಅವರೇ ಶಿಲ್ಪಿಗಳಾಗಿರುತ್ತಾರೆ. ಮನುಷ್ಯ ತನ್ನ ಜೀವನವನ್ನು ತನ್ನಿಷ್ಟದಂತೆ ರೂಪಿಸಿಕೊಳ್ಳುತ್ತಾನೆ

ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ Read More »

ಇತಿಹಾಸ ಪುಟ ಸೇರಿದ ಜಿಡೆಕಲ್ಲಿನ ಹಾಲು ಶೀಥಲೀಕರಣ ಘಟಕ | ಕಾರ್ಯ ಸ್ಥಗಿತ

ಪುತ್ತೂರು:ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ಎಂಬಲ್ಲಿ ಕಳೆದ 30 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಹಾಲು ಶೀಥಲೀಕರಣ ಕೇಂದ್ರ ಸ್ಥಗಿತಗೊಂಡಿದ್ದು, ಪುತ್ತೂರಿನ ಬೃಹತ್ ಸಂಸ್ಥೆಯೊಂದು ಇತಿಹಾಸ ಪುಟ ಸೇರಲಿದೆ ಎಪಿಎಂಸಿ ಪ್ರಾಂಗಣದಲ್ಲಿ ಕಾರ್ಯಾಚರಿಸುತ್ತಿದ್ದ ಹಾಲು ಶೀಥಲೀಕರಣ ಕೇಂದ್ರವನ್ನು 1992 ರಲ್ಲಿ ಜಿಡೆಕಲ್ಲಿನಲ್ಲಿ ಆರು ಎಕರೆ ಜಾಗದಲ್ಲಿ ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸಲಾಗಿತ್ತು. ಬಳಿಕ ಸುಸಜ್ಜಿತ ಕಟ್ಟಡದಲ್ಲಿ ಕಳೆದ 30 ವರ್ಷಗಳಿಂದ ಯಾವುದೇ ಅಡೆತಡೆಯಿಲ್ಲದೆ ಕಾರ್ಯಾಚರಿಸುತ್ತಾ ಬಂದಿತ್ತು. ಈ ಘಟಕದಲ್ಲಿ ದಿನವಹಿ 50 ಸಾವಿರ ಲೀಟರ್ ಹಾಲು ಶೀಥಲೀಕರಣಗೊಳಿಸುವ ಮೂರು ಬೃಹತ್ ಟ್ಯಾಂಕ್

ಇತಿಹಾಸ ಪುಟ ಸೇರಿದ ಜಿಡೆಕಲ್ಲಿನ ಹಾಲು ಶೀಥಲೀಕರಣ ಘಟಕ | ಕಾರ್ಯ ಸ್ಥಗಿತ Read More »

ಕೆಮ್ಮಿಂಜೆ ಬಿಲ್ಲವ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ 

ಸವಣೂರು : ಕೆಮ್ಮಿಂಜೆ ಬಿಲ್ಲವ ಸಂಘದ ನೂತನ ಸಮಿತಿ ರಚನೆಯು ಕೆಮ್ಮಿಂಜೆ ಕೋಲಾಡಿ ಶಾಂತಿ ನಿವಾಸದಲ್ಲಿ ನಡೆದ ಸಂಘದ ಮಹಾಸಭೆಯಲ್ಲಿ ಮಾಡಲಾಯಿತು. ಅಧ್ಯಕ್ಷರಾಗಿ ಪ್ರಕಾಶ್ ಪೂಜಾರಿ ಶಿಬರ, ಉಪಾಧ್ಯಕ್ಷರಾಗಿ ರಾಜೀವ ಸುವರ್ಣ ದಂಡ್ಯನಕುಕ್ಕು, ಕಾರ್ಯದರ್ಶಿಯಾಗಿ ಶ್ರೀಧರ ಪೂಜಾರಿ ನೈತ್ತಾಡಿ, ಜೊತೆ ಕಾರ್ಯದರ್ಶಿಯಾಗಿ ಚಂದ್ರಶೇಖರ್ ಪಂಜಳ, ಕೋಶಾಧಿಕಾರಿಯಗಿ ಕೃಷ್ಣಪ್ಪ ಪೂಜಾರಿ ಕೋಲಾಡಿ ಆಯ್ಕೆಯಾಗಿದ್ದಾರೆ. ಮಹಿಳಾ ವೇದಿಕೆ ಅಧ್ಯಕ್ಷರಾಗಿ ದೀಪಿಕಾ ಸಿ.ಕೆ, ಕಲ್ಲಗುಡ್ಡೆ, ಉಪಾಧ್ಯಕ್ಷರಾಗಿ ಸುಪ್ರಿಯಾ ಕೆ ಕೋಲಾಡಿ, ಕಾರ್ಯದರ್ಶಿಯಾಗಿ ಕವಿತಾ ಪಿ. ದಂಡ್ಯನಕುಕ್ಕು, ಜೊತೆ ಕಾರ್ಯದಶಿಯಾಗಿ ರವಿಕಲಾ ಕೊರುಂಗು,

ಕೆಮ್ಮಿಂಜೆ ಬಿಲ್ಲವ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ  Read More »

ಜೂ.17-18 : ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ – 2023

ಪುತ್ತೂರು: ನವತೇಜ ಪುತ್ತೂರು ಹಾಗೂ ಜೆಸಿಐ ಪ್ರಸ್ತುತಪಡಿಸುವ “ಹಲಸು ಹಣ್ಣು ಮೇಳ-2023 ಜೂ.17 ಹಾಗೂ 18 ರಂದು ಇಲ್ಲಿಯ ಜೈನ ಭವನದಲ್ಲಿ ನಡೆಯಲಿದೆ. ಮೇಳದ ಅಂಗವಾಗಿ ರೈತರಿಂದ ತಾಜಾ ಹಣ್ಣುಗಳ ಪ್ರದರ್ಶನ, ಮಾರಾಟ ನಡೆಯಲಿದ್ದು, ಮೇಳದಲ್ಲಿ ಆಹಾರ ಮಳಿಗೆಗಳು, ಹಣ್ಣಿನ ಗಿಡಗಳು ಮತ್ತು ಬೀಜಗಳು, ಸಂಸ್ಕರಣೆ, ಮೌಲ್ಯವರ್ಧನೆ ಉತ್ಪನ್ನಗಳು, ಕೃಷಿ ಉದ್ಯಮ ಮಳಿಗೆಗಳು ಸಹಿತ ರೈತರ ಸಂಪರ್ಕ, ಸಮಾಲೋಚನೆ, ವಿವಿಧ ಮನೋರಂಜನಾ ಕಾರ್ಯಕ್ರಮ, ಹವಿಶೇಷ ಸ್ಪರ್ಧೆಗಳು ನಡೆಯಲಿವೆ. ಹಲಸಿನ ಹಣ್ಣಿನ ಹೋಳಿಗೆ, ಹಪ್ಪಳ, ದೋಸೆ, ಸಂಡಿಗೆ, ಪಾನಿಪೂರಿ,

ಜೂ.17-18 : ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ – 2023 Read More »

ಜೂ.5 : ಔಷಧೀಯ ಸಸ್ಯಗಳ ಸಂರಕ್ಷಣೆ, ಸಂವರ್ಧನೆ, ಬಳಕೆ ಹಾಗೂ ಜನಜಾಗೃತಿಗಾಗಿ ಅಭಿಯಾನ ಆಂದೋಲನ “ವಿವೇಕ ಸಂಜೀವಿನಿ” ತರಬೇತುದಾರರ ತರಬೇತಿ ಶಿಬಿರ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ಔಷಧೀಯ ಸಸ್ಯಗಳ ಸಂರಕ್ಷಣೆ, ಸಂವರ್ಧನೆ, ಬಳಕೆ ಹಾಗೂ ಜನಜಾಗೃತಿಗಾಗಿ ಅಭಿಯಾನ ಆಂದೋಲನ “ವಿವೇಕ ಸಂಜೀವಿನಿ” ತರಬೇತುದಾರರ ತರಬೇತಿ ಶಿಬಿರ ಜೂ.5 ರಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ  ಶ್ರೀರಾಮ ಸಭಾಭವನದಲ್ಲಿ ನಡೆಯಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಬರುವ 29 ಕ್ಯಾಂಪಸ್‍ನ ಎಲ್ಲಾ ಶಾಲೆಗಳ ಮಕ್ಕಳನ್ನು ಸೇರಿಸಿಕೊಂಡು ಈ ಆಂದೋಲನವನ್ನು ಮಾಡಲಾಗುವುದು. ಈ ಆಂದೋಲನ ಅಂಗವಾಗಿ

ಜೂ.5 : ಔಷಧೀಯ ಸಸ್ಯಗಳ ಸಂರಕ್ಷಣೆ, ಸಂವರ್ಧನೆ, ಬಳಕೆ ಹಾಗೂ ಜನಜಾಗೃತಿಗಾಗಿ ಅಭಿಯಾನ ಆಂದೋಲನ “ವಿವೇಕ ಸಂಜೀವಿನಿ” ತರಬೇತುದಾರರ ತರಬೇತಿ ಶಿಬಿರ Read More »

ವಿದ್ಯಾರ್ಥಿಗಳು ಐ.ಎ.ಎಸ್- ಐ.ಪಿ.ಎಸ್ ಅಧಿಕಾರಿಗಳಾಗಬೇಕು : ಶಾಸಕ ಅಶೋಕ್ ಕುಮಾರ್ ರೈ | 19ನೇ ತಾಲೂಕು ಸಾಹಿತ್ಯ ಸಮ್ಮೇಳನ ದತ್ತಿ ನಿಧಿ ಉಪನ್ಯಾಸ

ಪುತ್ತೂರು: ಪುತ್ತೂರು ತಾಲೂಕು 19 ನೇ ಕನ್ನಡ ಸಾಹಿತ್ಯ ಸಮ್ಮೇಳನದ  ಸವಿನೆನಪಿಗಾಗಿ ಸ್ಥಾಪಿಸಿದ ದತ್ತಿನಿಧಿ ಉಪನ್ಯಾಸ  ಕಾರ್ಯಕ್ರಮ ಹಾಗೂ ಶಾಲಾ ಪ್ರಾರಂಭೋತ್ಸವ ಕೆಯ್ಯೂರರು ಕೆ ಪಿ ಎಸ್ ಶಾಲಾ ಸಭಾಂಗಣದಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಐ.ಎ.ಎಸ್ ಐ.ಪಿ.ಎಸ್ ಪರೀಕ್ಷೆಗಳನ್ನು ಎದುರಿಸಿ ಉನ್ನತ ಅಧಿಕಾರಿಗಳಾಗಬೇಕು, ಸರ್ಕಾರದ ಕಡೆಯಿಂದ ಸಿಗಬೇಕಾದ ಎಲ್ಲ ಸವಲತ್ತುಗಳನ್ನು ಶಾಲೆಗೆ ಒದಗಿಸುವುದಾಗಿ ಭರವಸೆ ನೀಡಿ ದರು. ಶಿಕ್ಷಣದಲ್ಲಿ ಸಂಗೀತ ಮತ್ತು ಸಾಹಿತ್ಯದ ಪಾತ್ರ ಎಂಬ ವಿಷಯದ ಬಗ್ಗೆ

ವಿದ್ಯಾರ್ಥಿಗಳು ಐ.ಎ.ಎಸ್- ಐ.ಪಿ.ಎಸ್ ಅಧಿಕಾರಿಗಳಾಗಬೇಕು : ಶಾಸಕ ಅಶೋಕ್ ಕುಮಾರ್ ರೈ | 19ನೇ ತಾಲೂಕು ಸಾಹಿತ್ಯ ಸಮ್ಮೇಳನ ದತ್ತಿ ನಿಧಿ ಉಪನ್ಯಾಸ Read More »

ಮನೆಯ ಮೇಲ್ಛಾವಣಿಯಿಂದ ಬಿದ್ದು ಆಲಂಕಾರಿನ ವ್ಯಕ್ತಿ ಮೃತ್ಯು

ಸುಬ್ರಹ್ಮಣ್ಯ  : ಮನೆಯ ಮೇಲ್ಛಾವಣಿಯಿಂದ ಬಿದ್ದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ನೆಟ್ಟಣದಲ್ಲಿ  ಶುಕ್ರವಾರ ನಡೆದಿದೆ. ಮೃತರನ್ನು ಅಲಂಕಾರು ಗ್ರಾಮದ ಶರವೂರು ನಿವಾಸಿ ಪದ್ಮನಾಭ ಎಂಬವರ ಪುತ್ರ ಹರಿಪ್ರಸಾದ್ ಎಂದು ಗುರುತಿಸಲಾಗಿದೆ. ನೆಟ್ಟಣದ ಮೇರೊಂಜಿ ಎಂಬಲ್ಲಿ ನಿರ್ಮಾಣ ಹಂತದ ಮನೆಯ ಮೇಲ್ಛಾವಣಿಯ  ಒಂದು ಪಾರ್ಶ್ವ ಕುಸಿದ ಪರಿಣಾಮ ಹರಿಪ್ರಸಾದ್ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಹರಿಪ್ರಸಾದ್ ಅವರನ್ನು ಸ್ಥಳೀಯ ಯುವಕರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಅವರು  ಮೃತಪಟ್ಟಿದ್ದರು ಎನ್ನಲಾಗಿದೆ.

ಮನೆಯ ಮೇಲ್ಛಾವಣಿಯಿಂದ ಬಿದ್ದು ಆಲಂಕಾರಿನ ವ್ಯಕ್ತಿ ಮೃತ್ಯು Read More »

ಸಿದ್ದಗಂಗಾ ಮಠಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ  | ಮಹಾಸ್ವಾಮಿಗಳ ಗದ್ದುಗೆಯಲ್ಲಿ ಪ್ರಾರ್ಥನೆ

ಪುತ್ತೂರು: ತ್ರಿವಿಧ ದಾಸೋಹಿ ಮಠ ಎಂದೇ ಖ್ಯಾತವಾದ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ಅರುಣ್ ಕುಮಾರ್ ಪುತ್ತಿಲ ಅವರು ನೀಡಿ ಲಿಂಗೈಕ್ಯರಾದ ಪರಮಪೂಜ್ಯ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಗದ್ದುಗೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಸಿದ್ದಗಂಗಾ ಮಠದ ಅಧ್ಯಕ್ಷ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳವರ ಹಾಗೂ ಕಿರಿಯ ಶ್ರೀ ಶಿವಸಿದ್ಧೇಶ್ವರ ಸ್ವಾಮಿಗಳವರ ಆಶೀರ್ವಾದ ಪಡೆದರು.  ಈ ಸಂದರ್ಭ ಶ್ರೀಗಳು ಅರುಣ್ ಕುಮಾರ್ ಪುತ್ತಿಲರವರ ಜೊತೆ ರಾಜಕೀಯ ಹಾಗೂ ಹಿಂದೂತ್ವದ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು. ಹಿಂದುತ್ವದ ವಿಚಾರಧಾರೆಯ ಬಗ್ಗೆ ವಿದ್ಯಾರ್ಥಿಗಳನ್ನು

ಸಿದ್ದಗಂಗಾ ಮಠಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ  | ಮಹಾಸ್ವಾಮಿಗಳ ಗದ್ದುಗೆಯಲ್ಲಿ ಪ್ರಾರ್ಥನೆ Read More »

ರೋಗಿಗಳಿಗೆ ಸ್ಪಂದನೆ ನೀಡುವ ನಿಟ್ಟಿನಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆ ಅಭಿವೃದ್ಧಿ : ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಕಿಡ್ನಿ ರೋಗಿಗಳಿಗೆ ಸ್ಪಂದನೆ ನೀಡುವ ನಿಟ್ಟಿನಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಪ್ರಸ್ತುತ 6 ಡಯಾಲಿಸಿಸ್ ಮೆಷಿನ್ ಕಾರ್ಯಾಚರಿಸುತ್ತಿದ್ದು, ಮುಂದಿನ ವಾರದಲ್ಲಿ ಆರು ಡಯಾಲಿಸಿಸ್ ಮೆಷಿನ್ ರೋಟರಿ ಮೂಲಕ ಸರಕಾರಿ ಆಸ್ಪತ್ರೆಗೆ ಬರಲಿದೆ ಎಂದು ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಅವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಈಗಾಗಲೇ ಕಡಬದಲ್ಲಿ ಮೂರು ಮೆಷಿನ್ ಇದ್ದು ಸರಿಯಾಗಿ ಕಾರ್ಯಾಚರಿಸಿದಲ್ಲಿ ಪುತ್ತೂರು ಆಸ್ಪತ್ರೆಯಲ್ಲಿ ಒತ್ತಡ ಕಡಿಮೆಯಾಗಲಿದೆ ಎಂದ ಅವರು, ಈಗಾಗಲೇ ಪುತ್ತೂರು ಡಯಾಲಿಸಿಸ್

ರೋಗಿಗಳಿಗೆ ಸ್ಪಂದನೆ ನೀಡುವ ನಿಟ್ಟಿನಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆ ಅಭಿವೃದ್ಧಿ : ಶಾಸಕ ಅಶೋಕ್ ಕುಮಾರ್ ರೈ Read More »

error: Content is protected !!
Scroll to Top