ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ | ಕೆ.ಎಸ್. ಭಗವಾನ್ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಹಿಂದೂ ಜನಜಾಗೃತಿ ವೇದಿಕೆ ಆಗ್ರಹ
ಪುತ್ತೂರು: ಪಾಕಿಸ್ತಾನದಲ್ಲಿ ಹಿಂದೂಗಳ ಮೇಲಾಗುತ್ತಿರುವ ದೌರ್ಜನ್ಯ ಹಾಗೂ ಹಿಂದೂಗಳ ಭಾವನೆಗಳ ಮೇಲೆ ಧಕ್ಕೆ ಉಂಟು ಮಾಡುತ್ತಿರುವ ಕೆ.ಎಸ್. ಭಗವಾನ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಜೈನ ಸಮುದಾಯದ ಪವಿತ್ರ ಕ್ಷೇತ್ರ ಶ್ರೀ ಸಮ್ಮೇದ ಶಿಖರ್ಜಿಯನ್ನು ತೀರ್ಥ ಕ್ಷೇತ್ರವಾಗಿ ಘೊಷಿಸಬೇಕು ಎಂದು ಒತ್ತಾಯಿಸಿ ಹಿಂದೂ ಜನಜಾಗೃತಿ ವೇದಿಕೆಯಿಂದ ಪ್ರತಿಭಟನೆ ಸೋಮವಾರ ಅಮರ್ ಜವಾನ್ ಸ್ಮಾರಕದ ಬಳಿ ನಡೆಯಿತು. ಸಮಿತಿಯ ದಯಾನಂದ ಶಂಖ ನಾದದೊಂದಿಗೆ ಪ್ರತಿಭಟನೆಗೆ ಚಾಲನೆ ನೀಡಿದರು. ಬಳಿಕ ಶ್ರೀ ಕೃಷ್ಣನ ಶ್ಲೋಕ ಪಠಿಸಲಾಯಿತು. ಸಮಿತಿಯ […]