ಪುತ್ತೂರು

ನೇತ್ರಾವತಿ ಒಡಲಲ್ಲಿ ಸೀತಾ ಮಾತೆಯ ಪಾದ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈ ಬಾರಿ ನೀರಿನ ಮಟ್ಟ ಗಣನೀಯ ಇಳಿದಿರುವ ಪರಿಣಾಮ ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನದಿಯ ಮಧ್ಯೆ ಕಲ್ಲುಗಳ ಮೇಲೆ ಇರುವ ಸೀತಾದೇವಿಯ ಪಾದ ಎಂದು ಧಾರ್ಮಿಕ ನಂಬಿಕೆಯುಳ್ಳ ರಚನೆಗಳು ಗೋಚರಿಸುತ್ತಿವೆ. ನದಿಯಲ್ಲಿ ಇಂತಹ ಅನೇಕ ಕೌತುಕಗಳಿವೆಯಾದರೂ ಇತ್ತೀಚಿನ ವರ್ಷಗಳಲ್ಲಿ ಆಣೆಕಟ್ಟುಗಳ ನಿರ್ಮಾಣದಿಂದಾಗಿ ಅವುಗಳು ನೀರಿನೊಳಗಿರುತ್ತಿದ್ದವು. ಈ ಬಾರಿ ನದಿ ನೀರು ಸಂಪೂರ್ಣ ಬತ್ತಿರುವ ಕಾರಣ ನದಿಯಲ್ಲಿರುವ ವಿಶೇಷಗಳು ಕಾಣಿಸಲಾರಂಭಿಸಿವೆ. ಶಿವಲಿಂಗ, ಹೂವು, ಜಡೆ, ಬಟ್ಟಲು, ನಂದಿ, ಪಾದಗಳು ಹೀಗೆ ಹತ್ತಾರು […]

ನೇತ್ರಾವತಿ ಒಡಲಲ್ಲಿ ಸೀತಾ ಮಾತೆಯ ಪಾದ Read More »

ಪೊಲೀಸ್ ದೌರ್ಜನ್ಯ: ಯುವಕರಿಗೆ ಧೈರ್ಯ ತುಂಬಿದ ಕುಂಟಾರು ರವೀಶ ತಂತ್ರಿ

ಪುತ್ತೂರು: ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಹಿಂದೂ ಕಾರ್ಯಕರ್ತರನ್ನು ಭಾನುವಾರ ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ಕುಂಟಾರು ರವೀಶ ತಂತ್ರಿ ಭೇಟಿಯಾಗಿ ಧೈರ್ಯ ತುಂಬಿದರು. ಬ್ಯಾನರ್ ಪ್ರಕರಣದಲ್ಲಿ ಪೊಲೀಸರ ಬಂಧಿಯಾಗಿ ಹಲ್ಲೆಗೊಳಗಾದ ಯುವಕರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಯಲ್ಲಿ ಭೇಟಿಯಾದರು. ಪ್ರಮುಖರು ಉಪಸ್ಥಿತರಿದ್ದರು.

ಪೊಲೀಸ್ ದೌರ್ಜನ್ಯ: ಯುವಕರಿಗೆ ಧೈರ್ಯ ತುಂಬಿದ ಕುಂಟಾರು ರವೀಶ ತಂತ್ರಿ Read More »

ಎರಡು ಕಾರುಗಳ ಮುಖಾಮುಖಿ ಡಿಕ್ಕಿ – ಆರು ಮಂದಿಗೆ ಗಾಯ

ಪುತ್ತೂರು: ಎರಡು ಕಾರುಗಳ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆರು ಮಂದಿ ಗಾಯಗೊಂಡ ಘಟನೆ ಕಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ಭಾನುವಾರ ನಡೆದಿದೆ. ಬೆಳ್ತಂಗಡಿಯಿಂದ ಪುತ್ತೂರಿಗೆ ಬರುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಎದುರಿನಿಂದ ಬರುತ್ತಿದ್ದ ಮಾರುತಿ 800 ವಾಹನ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಸ್ವಿಫ್ಟ್ ಕಾರಿನ ಚಾಲಕ ಮಹಾಬಲ ಶೆಟ್ಟಿ ಹಾಗೂ ಕಾರಿನಲ್ಲಿದ್ದ ಅನ್ವಿತಾ, ಮಾನ್ವಿತಾ, ಮಮತಾ, ಆಶಾ, ಮಾರುತಿ ಕಾರಿನಲ್ಲಿದ್ದ ಅಣ್ಣಿಗೌಡ ಎಂಬುವವರಿಗೆ ಗಾಯಗಳಾಗಿವೆ. ತಕ್ಷಣ ಗಾಯಗೊಂಡವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಪುತ್ತೂರು ಸಂಚಾರ

ಎರಡು ಕಾರುಗಳ ಮುಖಾಮುಖಿ ಡಿಕ್ಕಿ – ಆರು ಮಂದಿಗೆ ಗಾಯ Read More »

ಇಂದು : ನಮ್ಮ ನಡಿಗೆ ಮಹಾಲಿಂಗೇಶ್ವರನ ಕಡೆಗೆ ಕಾಲ್ನಡಿಗೆ ಜಾಥಾ | ಬೃಹತ್ ಕಾರ್ಯಕರ್ತರ ಸಭೆ

ಪುತ್ತೂರು: ನಮ್ಮ ನಡಿಗೆ ಮಹಾಲಿಂಗೇಶ್ವರನ ಕಡೆಗೆ ಧ್ಯೇಯ ವಾಕ್ಯದೊಂದಿಗೆ ಕಾಲ್ನಡಿಗೆ ಜಾಥಾ –ಸೇವಾ ಸಮರ್ಪಣಾ ಕಾರ್ಯಕ್ರಮ ಇಂದು ನಡೆಯಲಿದೆ. ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರ ನೇತೃತ್ವದಲ್ಲಿ ಸಂಜೆ 4 ಗಂಟೆಯಿಂದ ದರ್ಬೆ ವೃತ್ತದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ತನಕ ಕಾಲ್ನಡಿಗೆ ಜಾಥಾ ನಡೆಯಲಿದೆ. ಬಳಿಕ 6 ಗಂಟೆಗೆ ದೇವಸ್ಥಾನದ ವಠಾರದಲ್ಲಿ ಬೃಹತ್ ಕಾರ್ಯಕರ್ತರ ಸಭೆ ನಡೆಯಲಿದೆ. ಸಮಸ್ತ ಹಿಂದೂ  ಬಾಂಧವರು ಸಹಸ್ರ ಸಂಖ್ಯೆಯಲ್ಲಿ ಬಂದು ಪಾಲ್ಗೊಳ್ಳಬೇಕೆಂದು ಪ್ರಕಟಣೆ ತಿಳಿಸಿದೆ.

ಇಂದು : ನಮ್ಮ ನಡಿಗೆ ಮಹಾಲಿಂಗೇಶ್ವರನ ಕಡೆಗೆ ಕಾಲ್ನಡಿಗೆ ಜಾಥಾ | ಬೃಹತ್ ಕಾರ್ಯಕರ್ತರ ಸಭೆ Read More »

ಬ್ಯಾನರಿಗೆ ಚಪ್ಪಲಿ ಹಾರ ಹಾಕಿದವರನ್ನು ರೌಡಿ ಅಂದ್ರು: ಮಾಜಿ ಶಾಸಕಿ ಹೇಳಿಕೆ | ಶಾಸಕರು ನೀಡಿರುವ ಸೂಚನೆಯಂತೆ ಸಮಾಜದ ಶಾಂತಿಯೇ ನಮ್ಮ ಉದ್ದೇಶ: ಶಕುಂತಳಾ ಶೆಟ್ಟಿ

ಪುತ್ತೂರು: ಹಲ್ಲೆ ನಡೆಸಲು ಕಾಂಗ್ರೆಸ್ ಒತ್ತಡ ಹಾಕಿಯೇ ಇಲ್ಲ. ಆ ಸಂದರ್ಭ ಶಾಸಕ ಅಶೋಕ್ ಕುಮಾರ್ ರೈ ಅವರು ಬೆಂಗಳೂರಿಗೆ ತೆರಳಿದ್ದರು. ನಾನಾಗಿ ಆ ವಿಷಯಕ್ಕೆ ಹೋಗಿಲ್ಲ. ಹೀಗಿರುವಾಗ ಒತ್ತಡ ಹಾಕುವುದಾದರೂ ಯಾರು? ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಯುವಕರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಬಳಿಕ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿದರು. (ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿರುವ ವೀಡಿಯೋ ಇಲ್ಲಿ ನೋಡಿ.) ಪೊಲೀಸ್ ದೌರ್ಜನ್ಯ ನಡೆದ ಬಳಿಕ ಪೊಲೀಸರ ಜೊತೆ ಮಾತನಾಡಿದ್ದೆ. ಆ ಸಂದರ್ಭ ಬ್ಯಾನರ್ ಹಾಕಿ

ಬ್ಯಾನರಿಗೆ ಚಪ್ಪಲಿ ಹಾರ ಹಾಕಿದವರನ್ನು ರೌಡಿ ಅಂದ್ರು: ಮಾಜಿ ಶಾಸಕಿ ಹೇಳಿಕೆ | ಶಾಸಕರು ನೀಡಿರುವ ಸೂಚನೆಯಂತೆ ಸಮಾಜದ ಶಾಂತಿಯೇ ನಮ್ಮ ಉದ್ದೇಶ: ಶಕುಂತಳಾ ಶೆಟ್ಟಿ Read More »

ಲಕ್ಷಾಂತರ ಹಿಂದೂಗಳ ಶಾಪ ತಟ್ಟೀತು: ಮುತಾಲಿಕ್ ಆಕ್ರೋಶ

ಪುತ್ತೂರು: ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದಾರೆ ಎಂಬ ಒಂದೇ ಕಾರಣಕ್ಕೆ ಬ್ರಿಟಿಷ್ ಮಾದರಿಯ ಕ್ರೌರ್ಯ ನಡೆಸಿರುವುದು ಖಂಡನೀಯ ಎಂದು ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಯುವಕರನ್ನು ಭೇಟಿಯಾಗಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಮುತಾಲಿಕ್ ಮಾತಿನ ಪೂರ್ಣ ವಿವರ ಈ ವೀಡಿಯೋದಲ್ಲಿದೆ. ಹರೀಶ್ ಅಧಿಕಾರಿ, ಚಿತ್ತರಂಜನ್ ಶೆಟ್ಟಿ, ರೂಪಾ ಶೆಟ್ಟಿ, ಸಂತೋಷ್ ಪುರೋಹಿತ್, ಸುಬ್ರಹ್ಮಣ್ಯ ಎಸ್. ನಟ್ಟೋಜ ಉಪಸ್ಥಿತರಿದ್ದರು.

ಲಕ್ಷಾಂತರ ಹಿಂದೂಗಳ ಶಾಪ ತಟ್ಟೀತು: ಮುತಾಲಿಕ್ ಆಕ್ರೋಶ Read More »

ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಯುವಕರನ್ನು ಭೇಟಿಯಾದ ಮುತಾಲಿಕ್

ಪುತ್ತೂರು: ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಯುವಕರನ್ನು ಹಿಂದೂ ಮುಖಂಡ ಪ್ರಮೋದ್ ಮುತಾಲಿಕ್ ಅವರು ಶನಿವಾರ ಭೇಟಿಯಾಗಿ ಧೈರ್ಯ ತುಂಬಿದರು. ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಪೊಲೀಸ್ ದೌರ್ಜನ್ಯದ ಕುರಿತು ಆಕ್ರೋಶ ವ್ಯಕ್ತಪಡಿಸಿದರು. ಸುಬ್ರಹ್ಮಣ್ಯ ಎಸ್. ನಟ್ಟೋಜ, ಸುಬ್ರಹ್ಮಣ್ಯ ಎಸ್. ನಟ್ಟೋಜ, ಸಂತೋಷ ಆಚಾರ್ಯ, ಹರೀಶ್ ಅಧಿಕಾರಿ, ಚಿತ್ತರಂಜನ್, ರೂಪಾ ಶೆಟ್ಟಿ, ಸಂತೋಷ್ ಪುರೋಹಿತ್ ಉಪಸ್ಥಿತರಿದ್ದರು..

ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಯುವಕರನ್ನು ಭೇಟಿಯಾದ ಮುತಾಲಿಕ್ Read More »

ದ.ಕ.ಜಿಲ್ಲಾ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಸದಸ್ಯ ಭಾಸ್ಕರ ಎಂ. ಮಳವೂರು ನಿಧನ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕ ಸದಸ್ಯರಾದ ಭಾಸ್ಕರ ಎಂ. ಮಳವೂರು ಸಿದ್ಧಾರ್ಥನಗರ ಇಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕರೂ, ಮಳವೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರೂ, ಹಿರಿಯ ಸಮಾಜ ಸೇವಕರೂ  ಹಾಗೂ ಜಿಲ್ಲೆಯ ಖ್ಯಾತ ವಾದ್ಯ ಕಲಾವಿದರೂ ಆಗಿದ್ದರು.   ಅವರು ನಾಲ್ಕು ಮಕ್ಕಳು, ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರಿಗೆ  ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ

ದ.ಕ.ಜಿಲ್ಲಾ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಸದಸ್ಯ ಭಾಸ್ಕರ ಎಂ. ಮಳವೂರು ನಿಧನ Read More »

ಮೇ 24 ರಿಂದ 26 : ಕುರಿಯ ನೆಕ್ಕಿಲ್ ಬೈಲಾಡಿ ಶ್ರೀ ರಾಜಾ ಗುಳಿಗ ದೈವದ ಪ್ರತಿಷ್ಠಾ ಮಹೋತ್ಸವ

ಪುತ್ತೂರು: ಕುರಿಯ ಗ್ರಾಮದ ನೆಕ್ಕಿಲ್ ಬೈಲಾಡಿ ಶ್ರೀ ರಾಜಾ ಗುಳಿಗ ದೈವದ ಸಾನಿಧ್ಯದಲ್ಲಿ ಶ್ರೀ ರಾಜಾ ಗುಳಿಗ ದೈವದ ಪ್ರತಿಷ್ಠಾ ಕಲಶ ಮೇ 24 ರಿಂದ 26 ರ ತನಕ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಮೇ 24 ಬುಧವಾರ ಬೆಳಿಗ್ಗೆ 6 ಗಂಟೆಗೆ ಸ್ಥಳ ಶುದ್ಧಿ, ಗಣಪತಿ ಹೋಮ, ರಾತ್ರಿ 7 ರಿಂದ ಗುಳಿಗ ದೈವದ ಕೋಲ ಹಾಗೂ ದೈವದ ಪ್ರತಿಷ್ಠೆ, ರಾತ್ರಿ 9 ರಿಂದ ಅನ್ನಸಂತರ್ಪಣೆ ಜರಗಲಿದೆ. ಮೇ 25 ಗುರುವಾರ ಸಂಜೆ 6

ಮೇ 24 ರಿಂದ 26 : ಕುರಿಯ ನೆಕ್ಕಿಲ್ ಬೈಲಾಡಿ ಶ್ರೀ ರಾಜಾ ಗುಳಿಗ ದೈವದ ಪ್ರತಿಷ್ಠಾ ಮಹೋತ್ಸವ Read More »

ಪುತ್ತಿಲ ಅಭಿಮಾನಿಗಳಿಂದ ನಿಡ್ಪಳ್ಳಿ ದೇವಳಕ್ಕೆ ಕೊಡುಗೆ

ಪುತ್ತೂರು: ಚುನಾವಣೆ ಸಂದರ್ಭ ಸಂಗ್ರಹವಾದ ಮೊತ್ತದಲ್ಲಿ ಉಳಿದ ಹಣದಿಂದ ನಿಡ್ಪಳ್ಳಿ ಶ್ರೀ ಶಾಂತಾದುರ್ಗಾ ದೇವಸ್ಥಾನಕ್ಕೆ ಫ್ಯಾನ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ನಿಡ್ಪಳ್ಳಿ ಪುತ್ತಿಲ ಅಭಿಮಾನಿಗಳು ಈ ಕೊಡುಗೆಯನ್ನು ದೇವಸ್ಥಾನಕ್ಕೆ ಸಮರ್ಪಿಸಿದ್ದಾರೆ. ಚುನಾವಣೆಯಲ್ಲಿ ಹಣ ಸಂಗ್ರಹ, ಖರ್ಚು – ವೆಚ್ಚಗಳನ್ನು ಕಾರ್ಯಕರ್ತರೇ ನೋಡಿಕೊಂಡಿದ್ದು, ತಾನು ಆ ವಿಷಯದಲ್ಲಿ ತಲೆ ಕೆಡಿಸಿಕೊಂಡಿಲ್ಲ ಎಂದು ಅರುನ್ ಕುಮಾರ್ ಪುತ್ತಿಲ ಅವರು ಹೇಳಿಕೆ ನೀಡಿರುವುದನ್ನು ಸ್ಮರಿಸಿಕೊಳ್ಳಬಹುದು.

ಪುತ್ತಿಲ ಅಭಿಮಾನಿಗಳಿಂದ ನಿಡ್ಪಳ್ಳಿ ದೇವಳಕ್ಕೆ ಕೊಡುಗೆ Read More »

error: Content is protected !!
Scroll to Top