ಪುತ್ತೂರು

ನಾಳೆ ಮಧ್ಯಾಹ್ನ ಮುಖ್ಯಮಂತ್ರಿ ಪ್ರಮಾಣ ವಚನ

ಪುತ್ತೂರು: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ. ನಾಳೆ ಮಧ್ಯಾಹ್ನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ನಡೆಯಲಿದೆ. ಈ ಬಗ್ಗೆ ಇದೀಗ ಅಧಿಕೃತ ಪ್ರಕಟಣೆ ಹೊರ ಬಿದ್ದಿದೆ. ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಪ್ರಮಾಣ ಬೋಧಿಸಲಿದ್ದಾರೆ.

ನಾಳೆ ಮಧ್ಯಾಹ್ನ ಮುಖ್ಯಮಂತ್ರಿ ಪ್ರಮಾಣ ವಚನ Read More »

ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದಾತನ ಸೆರೆ

ವಿಟ್ಲ: ವಿಟ್ಲದಲ್ಲಿ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಆರೋಪಿ ಕನ್ಯಾನದ ಅಬೂಬಕ್ಕರ್ (46) ಬಂಧಿತ. ದಾರಿ ಕೇಳುವ ನೆಪದಲ್ಲಿ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದ. ಘಟನೆ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿದ ಬಿಜೆಪಿ ಅಭ್ಯರ್ಥಿಯಾಗಿದ್ದ ಆಶಾ ತಿಮ್ಮಪ್ಪ ಅವರು ಮನೆಯವರಿಗೆ ಧೈರ್ಯ ತುಂಬಿ, ಸಾಂತ್ವಾನ ಹೇಳಿದ್ದರು. ಬಳಿಕ ಪೊಲೀಸ್ ಠಾಣೆಗೂ ಭೇಟಿ ನೀಡಿ, ಆರೋಪಿಯನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲ ಅವರೂ ಕೂಡ

ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದಾತನ ಸೆರೆ Read More »

ಭಾವಪೂರ್ಣ ಶ್ರದ್ಧಾಂಜಲಿ ಬ್ಯಾನರ್ : ಮತ್ತೆ 7 ಮಂದಿಯ ವಿಚಾರಣೆ

ಪುತ್ತೂರು: ಬಿಜೆಪಿ ನಾಯಕರ ಭಾವಚಿತ್ರದೊಂದಿಗೆ ಭಾವಪೂರ್ಣ ಶ್ರದ್ಧಾಂಜಲಿಯ ಬರಹ ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ 7 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಅಭಿ (ಅವಿನಾಶ್), ಶಿವರಾಮ್, ಚೈತ್ರೇಶ್, ಈಶ್ವರ್, ನಿಶಾಂತ್, ದೀಕ್ಷಿತ್, ಗುರುಪ್ರಸಾದ್ ಅವರನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು, ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನೂ ಇಬ್ಬರು ತಲೆಮರೆಸಿಕೊಂಡಿರುವುದಾಗಿ ತಿಳಿದು ಬಂದಿದೆ. ಕೆಎಸ್ಆರ್‌‌ಟಿಸಿ ಬಸ್ ನಿಲ್ದಾಣದ ಬಳಿ ಇರುವ ಅರಣ್ಯ ಇಲಾಖೆಯ ಆವರಣಗೋಡೆಯ ಎದುರು ಬ್ಯಾನರ್ ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಲಾಗಿತ್ತು. ಪ್ರಕರಣಕ್ಕೆ

ಭಾವಪೂರ್ಣ ಶ್ರದ್ಧಾಂಜಲಿ ಬ್ಯಾನರ್ : ಮತ್ತೆ 7 ಮಂದಿಯ ವಿಚಾರಣೆ Read More »

ಅಂಬಿಕಾ ಮಹಾವಿದ್ಯಾಲಯದಲ್ಲಿ ಸಾಹಿತ್ಯ ಸಮ್ಮೇಳನ ಸ್ಮರಣ ಸಂಚಿಕೆ ಬಿಡುಗಡೆ

ಪುತ್ತೂರು: ಆಧುನಿಕ ತಂತ್ರಜ್ಞಾನ ಹೊಸ ಪೀಳಿಗೆಯನ್ನು ಸಂಪೂರ್ಣ ಆವರಿಸಿಕೊಂಡಿದೆ. ಇದು ಸಾಹಿತ್ಯ ಕ್ಷೇತ್ರಕ್ಕೂ ತಟ್ಟಿದೆ. ಶೈಕ್ಷಣಿಕ ವಿಚಾರಗಳಿಗೂ ವಿದ್ಯಾರ್ಥಿಗಳು ತಂತ್ರಾಂಶಗಳನ್ನು ಅವಲಂಬಿಸಿಕೊಳ್ಳುವಂತಾಗಿದೆ. ಇದು ಮುಂದಿನ ದಿನಗಳಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ದೊಡ್ಡ ಹೊಡೆತವಾಗಿದ್ದು, ಯುವ ಸಮೂಹ ಸಾಹಿತ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗುವಂತೆ ಮಾಡಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ. ಹೊಸ ತಲೆಮಾರು ಸಾಹಿತ್ಯ ಚಟುವಟಿಕೆಗಳಿಗೆ ಹೇಗೆ ಸ್ಪಂದಿಸುತ್ತದೆ ಹಾಗೂ ಸ್ವೀಕರಿಸುತ್ತದೆ ಎನ್ನುವ ಬಗ್ಗೆಯೂ ಅರಿತುಕೊಳ್ಳುವುದು ಅತ್ಯಗತ್ಯ ಎಂದು ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ ಹೇಳಿದರು. ಬಪ್ಪಳಿಗೆಯ

ಅಂಬಿಕಾ ಮಹಾವಿದ್ಯಾಲಯದಲ್ಲಿ ಸಾಹಿತ್ಯ ಸಮ್ಮೇಳನ ಸ್ಮರಣ ಸಂಚಿಕೆ ಬಿಡುಗಡೆ Read More »

ಕಡಬ ಕಾಂಗ್ರೇಸ್‌ನಲ್ಲಿ ಗರಿಗೆದರಿದ ಅಧಿಕಾರದ ಕನಸುಗಳು | ಕಾರ್ಯಕರ್ತರಲ್ಲಿ ಹೊಸ ಹುರುಪು

ಕಡಬ: ರಾಜ್ಯದಲ್ಲಿ ಬಿಜೆಪಿ ಸೋತು  ಕಾಂಗ್ರೇಸ್ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಂತೆ ಕಡಬ ಕಾಂಗ್ರೇಸ್ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿದ್ದು, ಹೊಸ ಹೊಸ ಕನಸುಗಳು ಚಿಗುರೊಡೆಯಲು ಪ್ರಾರಂಭವಾಗಿದೆ. ತಾಲೂಕು ಕೇಂದ್ರವಾಗಿರುವ ಕಡಬಕ್ಕೆ ನಿಗಮ ಮಂಡಳಿ ಅಥವಾ ಎಂ.ಎಲ್‌ಸಿ ಸ್ಥಾನಗಳನ್ನು ನೀಡಿ ಪಕ್ಷ ಬಲವರ್ಧನೆಗೆ ಅವಕಾಶ ನೀಡಬೇಕು ಎನ್ನುವ ಹಕ್ಕೊತ್ತಾಯಗಳು ಕೇಳಿ ಬರುತ್ತಿವೆ. ಒಂದು ಕಾಲದಲ್ಲಿ ಕಡಬ ಕಾಂಗ್ರೇಸ್‌ನ ಭದ್ರಕೋಟೆಯಾಗಿತ್ತು. ಆದರೆ ಕಳೆದ 30 ವರ್ಷಗಳಿಂದ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ  ಕಾಂಗ್ರೇಸ್‌ನ ಶಾಸಕರನ್ನು ಕಾಣಲು ಸಾಧ್ಯವಾಗದೆ

ಕಡಬ ಕಾಂಗ್ರೇಸ್‌ನಲ್ಲಿ ಗರಿಗೆದರಿದ ಅಧಿಕಾರದ ಕನಸುಗಳು | ಕಾರ್ಯಕರ್ತರಲ್ಲಿ ಹೊಸ ಹುರುಪು Read More »

ಕಾರ್ಯಕರ್ತರು ಮತ್ತು ಪಕ್ಷದ ನಾಯಕರ ಅವಿರತ ಶ್ರಮದ ಫಲವಾಗಿ ಪುತ್ತೂರಿನಲ್ಲಿ ಕಾಂಗ್ರೆಸ್ ಗೆದ್ದಿದೆ | ಕಾರ್ಯಕರ್ತರ ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಕಾರ್ಯಕರ್ತರು ಮತ್ತು ಪಕ್ಷದ ನಾಯಕರ ಅವಿರತ ಶ್ರಮದ ಫಲವಾಗಿ ಪುತ್ತೂರಿನಲ್ಲಿ ಕಾಂಗ್ರೆಸ್ ಗೆದ್ದಿದೆ, ಈ ಗೆಲುವು ನನ್ನದಲ್ಲ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಗೆಲುವಾಗಿದೆ. ಪಕ್ಷಕ್ಕಾಗಿ ನಾವೆಲ್ಲರೂ ಒಗ್ಗಟ್ಟಾಗಿ ದುಡಿಯಬೇಕಾಗಿದ್ದು, ನಾಳೆಯಿಂದಲೇ ತಳಮಟ್ಟದಲ್ಲಿ ಪಕ್ಷವನ್ನು ಕಟ್ಟುವ ಕೆಲಸ ಮತ್ತೆ ಆರಂಭವಾಗಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಅವರು ಹೇಳಿದರು. ಪುತ್ತೂರಿನ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಮಂಗಳವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ,ಜನರ ಸಮಸ್ಯೆಗಳನ್ನು ಬೂತ್‌ಮಟ್ಟದಲ್ಲೇ ಅರಿಯುವ

ಕಾರ್ಯಕರ್ತರು ಮತ್ತು ಪಕ್ಷದ ನಾಯಕರ ಅವಿರತ ಶ್ರಮದ ಫಲವಾಗಿ ಪುತ್ತೂರಿನಲ್ಲಿ ಕಾಂಗ್ರೆಸ್ ಗೆದ್ದಿದೆ | ಕಾರ್ಯಕರ್ತರ ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ Read More »

ರಾಮಕುಂಜ ಮತಗಟ್ಟೆಯಲ್ಲಿ ಮತದಾನವಾದರೂ ಮತ ಎಣಿಕೆ ಯಿಲ್ಲ.

ರಾಮಕುಂಜ: ವಿಧಾನ ಸಭಾ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದು ಬಿಜೆಪಿ ಅಭ್ಯರ್ಥಿ ವಿಜಯಶಾಲಿಯಾದ ಮೇಲೆ ಸುಳ್ಯ ವಿಧಾನ ಸಭಾ ಕ್ಷೇತ್ರದ ರಾಮಕುಂಜ ಬೂತ್ ನಂ.6 ರಲ್ಲಿನ ಮತ ಎಣಿಕೆಯೇ ನಡೆಸಿಲ್ಲ ಎನ್ನುವ ಅಂಶ ಬೆಳಕಿಗೆ ಬಂದಿದೆ. ಮಾದರಿ ಮತ ಡಿಲೀಟ್ ಮಾಡದೇ ಅಧಿಕಾರಿಗಳು ಮಾಡಿರುವ ಎಡವಟ್ಟಿನ ಪರಿಣಾಮ ಬೂತ್‌ನಲ್ಲಿ 713 ಮತ ಚಲಾವಣೆಯಾದರೂ  ಇವಿಎಂನ ಮತ ಎಣಿಕೆಯಾಗದೆ ಬಾಕಿ ಉಳಿದಿರುವುದು  ಮತದಾರರ ಅಸಮಾಧಾನಕ್ಕೆ ಎಡೆಯಾಗಿದೆ.  ಅಧಿಕಾರಿಗಳ ಅಸಡ್ಡೆಯ ಪರಮಾವಧಿ ಇದಾಗಿದೆ ಎಂದು ಅಕ್ರೋಶ ವ್ಯಕ್ತವಾಗಿದೆ. ಬೂತ್‌ನಲ್ಲಿ ಮತದಾನ

ರಾಮಕುಂಜ ಮತಗಟ್ಟೆಯಲ್ಲಿ ಮತದಾನವಾದರೂ ಮತ ಎಣಿಕೆ ಯಿಲ್ಲ. Read More »

7ನೇ ರಾಜ್ಯ ವೇತನ ಆಯೋಗದ ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿ ಪರಿಷ್ಕರಿಸಲು ಮತ್ತು ನೂತನ ವೇತನ ಶ್ರೇಣಿ ರಚಿಸುವ ಉದ್ದೇಶದಿಂದ ನಿವೃತ್ತ ಸಿ.ಎಸ್.ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ 7ನೇ ರಾಜ್ಯ ವೇತನ ಆಯೋಗದ ಅವಧಿ ವಿಸ್ತರಣೆ ಮಾಡಲಾಗಿದೆ. ರಾಜ್ಯಪಾಲರ ಆದೇಶದಂತೆ ಮೇ 19ರಿಂದ 6 ತಿಂಗಳ ಕಾಲ ಆಯೋಗದ ಅವಧಿ ವಿಸ್ತರಣೆ ಮಾಡಿ, ಸರ್ಕಾರ ಆದೇಶ ಹೊರಡಿಸಿದೆ. 2022ರ ನ. 19ರಂದು ವೇತನ ಆಯೋಗ ರಚನೆಯಾಗಿತ್ತು. ಆಯೋಗದ ಶಿಫಾರಸ್ಸು ಆಧರಿಸಲು ಮುಂದಿನ ಕ್ರಮ ಕೈಗೊಳ್ಳಲು 2023-24ನೇ ಸಾಲಿನಲ್ಲಿ ಹಣವನ್ನೂ

7ನೇ ರಾಜ್ಯ ವೇತನ ಆಯೋಗದ ಅವಧಿ ವಿಸ್ತರಣೆ Read More »

ಮಾಜಿ ಸಚಿವ ರಮಾನಾಥ ರೈ ಚುನಾವಣಾ ರಾಜಕೀಯ ನಿವೃತ್ತಿ

ಸೋತ ನೋವಿನಲ್ಲಿ ಸ್ಪರ್ಧೆಗೆ ಗುಡ್‌ ಬೈ ಹೇಳಿದ ಹಳೇ ಹುಲಿ ಮಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸತತ ಎರಡನೇ ಬಾರಿ ಸೋತಿರುವ ಮಾಜಿ ಸಚಿವ ರಮಾನಾಥ ರೈ ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿದ್ದಾರೆ. ನಾನು ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ.‌ ಆದರೆ ಪಕ್ಷದ ಕೆಲಸದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ರಮಾನಾಥ ರೈ ಘೋಷಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಯಸ್ಸಿನ ಕಾರಣದಿಂದಾಗಿ ನನ್ನ ಸ್ಪರ್ಧೆಯ ಬಗ್ಗೆ ಪಕ್ಷದವರೇ ಅಪಸ್ವರ ಎತ್ತಿದ್ದರಿಂದಾಗಿ ಮುಂದೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಆದರೆ ಕಾಂಗ್ರೆಸ್‌ಗೆ ಶಕ್ತಿ ತುಂಬುವ ಕೆಲಸದಲ್ಲಿ ಸಕ್ರಿಯನಾಗಿರುತ್ತೇನೆ.

ಮಾಜಿ ಸಚಿವ ರಮಾನಾಥ ರೈ ಚುನಾವಣಾ ರಾಜಕೀಯ ನಿವೃತ್ತಿ Read More »

ರೆಂಜಿಲಾಡಿ ಎರಡು ಕಾಡಾನೆ ಪ್ರತ್ಯಕ್ಷ

ಕಡಬ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೆಂಜಿಲಾಡಿಯಲ್ಲಿ ಜನವಸತಿ ಪ್ರದೇಶದ ಅರಣ್ಯ ಭಾಗದಲ್ಲಿ ಎರಡು ಆನೆಗಳು ಪ್ರತ್ಯಕ್ಷಗೊಂಡು ಈ ಭಾಗದಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ರೆಂಜಿಲಾಡಿ ಗ್ರಾಮದ ಕಾನದಬಾಗಿಲು ಎಂಬಲ್ಲಿ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ಭಾನುವಾರ ಇಳಿ ಸಂಜೆ ಮರಿ ಆನೆಯೊಂದಿಗೆ ದೊಡ್ಡ ಆನೆ ಸಂಚರಿಸುತ್ತಿರುವುದನ್ನು ಸ್ಥಳೀಯರು ಕಂಡಿದ್ದಾರೆ. ಕಾಡಾನೆಗಳು ಅರಣ್ಯ ಪ್ರದೇಶದಲ್ಲಿ ಮುಂದೆ ಸಾಗಿದೆ ಎಂದು ತಿಳಿಸಿದ್ದಾರೆ. ಕಾಡಾನೆ ಸಂಚರಿಸುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ. ಕಳೆದ ಎರಡು ತಿಂಗಳ

ರೆಂಜಿಲಾಡಿ ಎರಡು ಕಾಡಾನೆ ಪ್ರತ್ಯಕ್ಷ Read More »

error: Content is protected !!
Scroll to Top