ಪುತ್ತೂರು

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಮಕ್ಕಳ ಮಾರ್ಟ್

ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ದಿನಾಂಕ ಮಕ್ಕಳ ಮಾರ್ಟ್(ಮೆಟ್ರಿಕ್ ಮೇಳ) ನಡೆಯಿತು. ವಿದ್ಯಾರಶ್ಮಿ ಮಾರ್ಟ್ ಅನ್ನು ಎಸ್. ಎನ್. ಆರ್. ರೂರಲ್ ಎಜ್ಯುಕೇಶನ್ ಟ್ರಸ್ಟ್‌ನ ಸದಸ್ಯ ಎನ್. ಸುಂದರ್ ರೈ ಅವರು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದ ಸಂಸ್ಥೆಯ ಆಡಳಿತಾಧಿಕಾರಿ ಅಡ್ವಕೇಟ್ ಅಶ್ವಿನ್ ಎಲ್. ಶೆಟ್ಟಿ ಮಾತನಾಡಿ, ಶಿಕ್ಷಣದ ಜೊತೆಗೆ ಮಕ್ಕಳಿಗೆ ಅವಶ್ಯವಿರುವ ಆರ್ಥಿಕ, ವ್ಯವಹಾರಿಕ, ಸಾಮಾನ್ಯ ಜ್ಞಾನ ಮತ್ತು ಕೌಶಲ್ಯವನ್ನು ಹೆಚ್ಚಿಸಲು ಇಂತಹ ಮಾರ್ಟ್ ಸಹಾಯಕವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಸದಸ್ಯೆ […]

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಮಕ್ಕಳ ಮಾರ್ಟ್ Read More »

ವಿಟ್ಲ: ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ಧ ದೂರು ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ವಿದ್ಯಾರ್ಥಿಗೆ ಬೆತ್ತದಿಂದ ಸಿಕ್ಕಾಪಟ್ಟೆ ಥಳಿಸಿದ ಘಟನೆ ವರದಿಯಾಗಿದೆ. ಗಂಭೀರವಾಗಿ ಹಲ್ಲೆ ನಡೆಸಿದ ಶಿಕ್ಷಕ ಇಸ್ತಿಕಾರ್ ವಿರುದ್ಧ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿ ಎಂದಿನಂತೆ ಶಾಲೆಗೆ ಹೋಗಿದ್ದು ಮಧ್ಯಾಹ್ನ 2 ಗಂಟೆಗೆ ನಿಮ್ಮ ಮಗು ಇತರ ಮಕ್ಕಳಿಗೆ ತೊಂದರೆ ಮಾಡಿದ್ದು ಹಾಗೂ ಈ ವಿಚಾರವಾಗಿ ಬೈದಾಗ ಅಲ್ಲಿಯೇ ಮೂತ್ರ ಮಾಡಿಕೊಂಡಿದ್ದು ನೀವು ಬಂದು ಮಗುವನ್ನು ಕರೆದುಕೊಂಡು ಹೋಗಿ ಎಂದು ಶಾಲೆಯ ಕಚೇರಿಯಿಂದ ಕರೆ ಹೆತ್ತವರಿಗೆ ಬಂದಿದೆ.

ವಿಟ್ಲ: ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ಧ ದೂರು ದಾಖಲು Read More »

ಪುತ್ತೂರಿನ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟನೆ

ಪುತ್ತೂರು: ನಗರದ ಹಿರಿಮೆ ಹೆಚ್ಚಿಸುವ ಪುತ್ತೂರು ನ್ಯಾಯಾಲಯ ಸಂಕೀರ್ಣವನ್ನು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ, ಆಂಧ್ರಪ್ರದೇಶದ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಪೊಲೀಸ್ ಗೌರವ ರಕ್ಷೆ ಸ್ವೀಕರಿಸಿ ಆಗಮಿಸಿದ ಅತಿಥಿಗಳು ಹೊಸ ನ್ಯಾಯಾಲಯ ಸಂಕೀರ್ಣದ ಫಲಕ ಅನಾವರಣ ಮಾಡಿ ರಿಬ್ಬನ್ ಕತ್ತರಿಸಿ, ದೀಪ ಬೆಳಗುವ ಮೂಲಕ ಕೋರ್ಟ್‌ನ ಕಾರ್ಯ ಕಲಾಪಗಳಿಗೆ ಚಾಲನೆ ನೀಡಿದರು. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ಕರ್ನಾಟಕ ಉಚ್ಛ ನ್ಯಾಯಾಲಯ ಮತ್ತು ಆಡಳಿತಾತ್ಮಕ ನ್ಯಾಯಮೂರ್ತಿ ಹೆಚ್.ಟಿ.

ಪುತ್ತೂರಿನ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟನೆ Read More »

ಪುತ್ತೂರು : ಮೋರಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು

ಕಾರಿನಲ್ಲಿದ್ದ ಯುವಕ-ಯುವತಿ ಅದೃಷ್ಟವಶಾತ್‌ ಪಾರು ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಬದಿಯ ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಬೆಂಕಿ ಹತ್ತಿಕೊಂಡು ಉರಿದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಸಮೀಪದ ಕಾಂಚನ ಕ್ರಾಸ್ ಬಳಿ ಶುಕ್ರವಾರ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಹಳೆಯ ಹೆದ್ದಾರಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಹಾಸನದಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ

ಪುತ್ತೂರು : ಮೋರಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು Read More »

ಗ್ಯಾರೇಜಿನಲ್ಲಿ ಜಗಳ, ಹಲ್ಲೆ: ದೂರು ದಾಖಲು

ಪುತ್ತೂರು: ನಗರದ ಪರ್ಲಡ್ಕ ಎಂಬಲ್ಲಿರುವ ಶ್ರೀ ಮಹಾಲಿಂಗೇಶ್ವರ ಆರ್. ಆರ್. ವರ್ಕ್ಸ್‌ನಲ್ಲಿ ಅದರ ಮಾಲೀಕ ಮತ್ತು ವ್ಯಕ್ತಿಯೊಬ್ಬರ ‌ನಡುವೆ ಮಾತಿನ ಚಕಮಕಿ ನಡೆದು, ಹಲ್ಲೆ ನಡೆದ ಬಗ್ಗೆ ಪ್ರಕರಣ ದಾಖಲಾಗಿದೆ. ಗ್ಯಾರೇಜಿನ ಮಾಲೀಕ ಬಲ್ನಾಡು ನಿವಾಸಿ ರಮೇಶ್ ಆಚಾರ್ಯ ಅವರು ಈ ಕುರಿತು ದೂರು ನೀಡಿದ್ದಾರೆ. ಜ. 27 ರಂದು ತಾನು ಗ್ಯಾರೇಜ್ ಓಪನ್ ಮಾಡುತ್ತಿದ್ದ ವೇಳೆ ರಮೇಶ್ ನಾಯ್ಕ್ ಎಂಬವರು ಇನ್ನೋವಾ ಕಾರಿನಲ್ಲಿ ಬಂದು, ಕಾರಿನ ಕ್ಯಾರಿಯರ್ ಮಾರಾಟಕ್ಕೆ ಸಂಬಂಧಿಸಿದ ಹಾಗೆ ಜಗಳವಾಡಿದ್ದಾರೆ. ಹಲ್ಲೆ ನಡೆಸಿದ್ದಾಗಿ

ಗ್ಯಾರೇಜಿನಲ್ಲಿ ಜಗಳ, ಹಲ್ಲೆ: ದೂರು ದಾಖಲು Read More »

ಬಾವಿಗೆ ಆಕಸ್ಮಿಕವಾಗಿ ಬಿದ್ದು ವ್ಯಕ್ತಿ ಸಾವು

ವಿಟ್ಲ: ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ತೋಟದ ನಡುವಿನ ಆವರಣವಿಲ್ಲದ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕೊಳ್ನಾಡಿನ ಸಾಲೆತ್ತೂರು ಎಂಬಲ್ಲಿ ನಡೆದಿದೆ. ಸಾಲೆತ್ತೂರಿನ ಕೋಡಿ ನಿವಾಸಿ, ಕೃಷಿಕ ಕೃಷ್ಣಪ್ಪ ಪೂಜಾರಿ (70) ಎಂಬವರೇ ಮೃತ ದುರ್ದೈವಿ. ಸಂಜೆ ವೇಳೆ ಸಾಲೆತ್ತೂರಿಗೆ ಹೋಗಿ ರಾತ್ರಿ ವಾಪಸ್ಸಾಗುತ್ತಿದ್ದಾಗ‌ ಈ ಘಟನೆ ನಡೆದಿದೆ.

ಬಾವಿಗೆ ಆಕಸ್ಮಿಕವಾಗಿ ಬಿದ್ದು ವ್ಯಕ್ತಿ ಸಾವು Read More »

ಕಾವು:ನೋವಿಗೆ ಸ್ಪಂದಿಸಿದ ಮಾನವೀಯ ಕೈಗಳು

ಅರುಣ್ ಕುಮಾರ್ ಪುತ್ತಿಲರಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯಧನ ಪುತ್ತೂರು: ಅನಾರೋಗ್ಯ ಮತ್ತು ಆರ್ಥಿಕ ಸಂಕಷ್ಟದಿಂದ ಜೀವನದ ದಾರಿಯೇ ಕತ್ತಲಾಗಿ ಕಾಣುತ್ತಿದ್ದ ಕಾವು–ಮಾಡ್ನೂರು ಗ್ರಾಮದ ಹಲವು ಕುಟುಂಬಗಳಿಗೆ ಮಾನವೀಯತೆಯ ಬೆಳಕಾಗಿ ಸಮಾಜಸೇವಕ ಹಾಗೂ ಹಿಂದೂ ಮುಖಂಡ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರು ಜೊತೆ ನಿಂತರು. ಗ್ರಾಮಸ್ಥರು ಸಂಗ್ರಹಿಸಿದ ಸಹಾಯಧನವನ್ನು ಪುತ್ತಿಲ ಪರಿವಾರದ ಕಾವು ಘಟಕದ ಮೂಲಕ ಮನೆಮನೆಗೆ ತೆರಳಿ ಹಸ್ತಾಂತರಿಸಿದ ಅವರು, ಕೇವಲ ಹಣವಷ್ಟೇ ಅಲ್ಲ — ನೋವಿನಲ್ಲಿ ಮುಳುಗಿದ್ದ

ಕಾವು:ನೋವಿಗೆ ಸ್ಪಂದಿಸಿದ ಮಾನವೀಯ ಕೈಗಳು Read More »

ಡ್ರಗ್ಸ್‌ ಜಾಲ ಭೇದಿಸಿದ ಪುತ್ತೂರು ಪೊಲೀಸರು : 6.50 ಲ.ರೂ. ಮೌಲ್ಯದ ಮಾದಕ ವಸ್ತು ವಶ

ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಎಂಡಿಎಂಎ ಮಾರುತ್ತಿದ್ದ ನಾಲ್ವರು ಸೆರೆ ಪುತ್ತೂರು : ಬೆಟ್ಟಂಪಾಡಿ, ಇರ್ದೆ, ರೆಂಜ ಹಾಗೂ ಅರ್ಲಪದವು ಪರಿಸರದಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ದೊಡ್ಡ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆಯ ವೇಳೆ ಪುತ್ತೂರಿನ ಮೊಹಮ್ಮದ್ ಹರ್ಷದ್, ಮಹಮ್ಮದ್ ಆರೀಶ್, ಇಬ್ರಾಹಿಂ ಅಶ್ರಫ್ ಹಾಗೂ ಅವರಿಗೆ ಮಾದಕ ವಸ್ತು ಪೂರೈಸುತ್ತಿದ್ದ ಬಂಟ್ವಾಳದ ಮುಸ್ತಾಫ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 50,000 ರೂ. ಮೌಲ್ಯದ 6.39 ಗ್ರಾಂ ಎಂಡಿಎಂಎ ಹಾಗೂ ಗಾಂಜಾ

ಡ್ರಗ್ಸ್‌ ಜಾಲ ಭೇದಿಸಿದ ಪುತ್ತೂರು ಪೊಲೀಸರು : 6.50 ಲ.ರೂ. ಮೌಲ್ಯದ ಮಾದಕ ವಸ್ತು ವಶ Read More »

ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್: ರಿಪಬ್ಲಿಕ್ ಸೇಲ್‌ಗೆ ಬಹುಪರಾಕ್ ಎಂದ ಗ್ರಾಹಕರು

ಪುತ್ತೂರು: ನಗರದ ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯ‌ದಲ್ಲಿ ಜ. 22 ರಿಂದ ಜ. 26 ರ ವರೆಗೆ ರಿಪಬ್ಲಿಕ್ ಸೇಲ್ ನಡೆದಿದ್ದು, ಗ್ರಾಹಕರು ಇದಕ್ಕೆ ಉತ್ತಮ ಸ್ಪಂದನೆ ನೀಡಿದ್ದಾರೆ ಎಂದು ಸಂಸ್ಥೆ ತಿಳಿಸಿದೆ. ಪ್ರಸ್ತುತ ದಿನಗಳಲ್ಲಿ ಹಳದಿ ಲೋಹದ ಬೆಲೆ ಗಗನಮುಖಿಯಾಗಿದ್ದು, ರಿಪಬ್ಲಿಕ್ ಸೇಲ್‌ನಲ್ಲಿ ಮೇಕಿಂಗ್ ಚಾರ್ಜಸ್ ಮೇಲೆ ಸಂಸ್ಥೆ ಭಾರೀ ರಿಯಾಯಿತಿ ನೀಡುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಗಣರಾಜ್ಯೋತ್ಸವದ ಪ್ರಯುಕ್ತ ಸಂಸ್ಥೆ ಈ ಆಫರ್ ನೀಡಿತ್ತು. ಪುತ್ತೂರು, ಸುಳ್ಯ, ಹಾಸನ,

ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್: ರಿಪಬ್ಲಿಕ್ ಸೇಲ್‌ಗೆ ಬಹುಪರಾಕ್ ಎಂದ ಗ್ರಾಹಕರು Read More »

ಡಿವೈಡರ್‌ ಹತ್ತಿದ ಸರ್ಕಾರಿ ಬಸ್‌

ಪುತ್ತೂರು: ಮಾಣಿ ಸಮೀಪ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಹೆದ್ದಾರಿಯ ಡಿವೈಡರ್‌ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ. ಬಸ್‌ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದೆ ಎನ್ನಲಾಗಿದೆ. ಅಪಘಾತದಲ್ಲಿ ಬಸ್‌ಗೆ ಭಾಗಶಃ ಹಾನಿ ಉಂಟಾಗಿದ್ದು, ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಡಿವೈಡರ್‌ ಹತ್ತಿದ ಸರ್ಕಾರಿ ಬಸ್‌ Read More »

error: Content is protected !!
Scroll to Top