ಪುತ್ತೂರು

ಭಾವಚಿತ್ರಕ್ಕೆ ಅವಮಾನ ಬಿಜೆಪಿಯ ಹತಾಶಾ ಮನೋಭಾವ : ಅಶೋಕ್ ರೈ

ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಬಳಿ ಬಿಜೆಪಿ ಮುಖಂಡರ‌‌ ಭಾವಚಿತ್ರ ಇರುವ ಬ್ಯಾನರನ್ನು ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿರುವ ಘಟನೆ ನಡೆದಿದ್ದು  ರಾಜ್ಯದಲ್ಲಿ ಕಾಂಗ್ರೆಸ್ ಗೆ ಮತದಾರ ನೀಡಿದ ಜನ ಬೆಂಬಲವನ್ನು ಕಂಡು ಬಿಜೆಪಿಗೆ ಆಘಾತವಾಗಿದೆ. ಹತಾಶರಾಗಿ ಏನೇನೋ ಹೇಳಿಕೆ ನೀಡುತ್ತಿದ್ದಾರೆ ಎಂದು ನೂತನ ಶಾಸಕ ಅಶೋಕ್ ರೈ ಪ್ರತಿಕ್ರಿಯೆ ನೀಡಿದ್ದಾರೆ.  ಪ್ರತಿಭಟನೆ ನಡೆಸುವುದು ಬಿಜೆಪಿಗರ ಕಾಯಕವಾಗಿದೆ. ಅವರದೇ ಸರಕಾರ ಇರುವಾಗಲೂ ಮಾಡಿದ್ದರೂ ಈಗಲೂ ಮಾಡುತ್ತಲೇ ಇದ್ದಾರೆ ಎಂದು ಹೇಳಿದ್ದಾರೆ. ಇದು ಯಾರ ಕೃತ್ಯ ಎಂಬುದನ್ನು […]

ಭಾವಚಿತ್ರಕ್ಕೆ ಅವಮಾನ ಬಿಜೆಪಿಯ ಹತಾಶಾ ಮನೋಭಾವ : ಅಶೋಕ್ ರೈ Read More »

ಡಿವಿ, ನಳಿನ್ ಭಾವಚಿತ್ರಕ್ಕೆ ಚಪ್ಪಲಿ‌ ಹಾರ: ಬಿಜೆಪಿ‌ ಪ್ರತಿಭಟನೆ | ಕಾಂಗ್ರೆಸ್ ಆಡಳಿತದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ನಿರಂತರ: ಮಠಂದೂರು

ಪುತ್ತೂರು: ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ ಹಿಂದುಗಳ ಮೇಲೆ ದೌರ್ಜನ್ಯ‌ ಹಾಗೂ ಅಶಾಂತಿಯ ವಾತಾವರಣಕ್ಕೆ ಎಡೆ ನೀಡುವ ಕಾರ್ಯ ನಿರಂತರವಾಗಿ ನಡೆಯಲಿದೆ. ಆದ್ದರಿಂದ ಬಿಜೆಪಿ ಕಾರ್ಯಕರ್ತರು ಹೋರಾಟಕ್ಕೆ ಸದಾ ಸಿದ್ಧರಾಗಿ ಎಂದು ನಿಕಟಪೂರ್ವ ಶಾಸಕ ಸಂಜೀವ ಮಠಂದೂರು ಕರೆ ನೀಡಿದರು. ಡಿ.ವಿ. ಹಾಗೂ ನಳಿನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿರುವ ಪ್ರಕರಣವನ್ನು ಖಂಡಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ತಾಲೂಕು ಆಡಳಿತ ಸೌಧದ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಮಾಜಿ ಸಿಎಂ ಸದಾನಂದ ಗೌಡ ಅವರು ಪುತ್ತೂರಿನ

ಡಿವಿ, ನಳಿನ್ ಭಾವಚಿತ್ರಕ್ಕೆ ಚಪ್ಪಲಿ‌ ಹಾರ: ಬಿಜೆಪಿ‌ ಪ್ರತಿಭಟನೆ | ಕಾಂಗ್ರೆಸ್ ಆಡಳಿತದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ನಿರಂತರ: ಮಠಂದೂರು Read More »

ಕೌಕ್ರಾಡಿ ನಿವಾಸಿ ನಾಪತ್ತೆ

ಪುತ್ತೂರು :ಕೌಕ್ರಾಡಿ ಗ್ರಾಮದ ಮಾಲೇಲೆ ಮನೆ ನಿವಾಸಿ ಶಶಿಕಾಂತ್ (38) ಕಾಣೆಯಾದ ಕುರಿತು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ಶಶಿಕಾಂತ್ ಅವರು ಶನಿವಾರ ಪಟ್ರಮೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವರು ಬಳಿಕ ಫೋನ್ ಕರೆಗೆ ಸಿಗದೆ ನಾಪತ್ತೆಯಾಗಿದ್ದಾರೆ ಎಂದು ಪತ್ನಿ ದಿವ್ಯಾ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೌಕ್ರಾಡಿ ನಿವಾಸಿ ನಾಪತ್ತೆ Read More »

ಬಿಜೆಪಿ ಹೀನಾಯ ಸೋಲು: ಪುತ್ತೂರಿನಲ್ಲಿ ನಳಿನ್, ಡಿವಿ ಶ್ರದ್ಧಾಂಜಲಿ ಬ್ಯಾನರಿಗೆ ಚಪ್ಪಲಿ ಹಾರ

ಪುತ್ತೂರು: ನಳಿನ್ ಕುಮಾರ್ ಕಟೀಲ್ ಹಾಗೂ ಡಿ.ವಿ. ಸದಾನಂದ ಗೌಡ ಅವರೇ ಬಿಜೆಪಿ ಸೋಲಿಗೆ ಕಾರಣ ಎಂಬ ಒಕ್ಕಣೆಯ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಲಾಗಿದೆ. ಪುತ್ತೂರು ಸರ್ಕಾರಿ ಬಸ್ ನಿಲ್ದಾಣ ಮುಂಭಾಗ ಈ ಬ್ಯಾನರನ್ನು ಅಳವಡಿಸಿದ್ದು, ತವರು ಕ್ಷೇತ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂಗೆ ಸೋಲಿನ ಬಿಸಿ ತಟ್ಟುವಂತೆ ಮಾಡಲಾಗಿದೆ. ಭಾವಪೂರ್ಣ ಶ್ರದ್ಧಾಂಜಲಿ ಎಂದು ಬ್ಯಾನರ್ ಹಾಕಿ, ಅದರಲ್ಲಿ ಬಿಜೆಪಿ ಸೋಲಿಗೆ ನೀವೇ ಕಾರಣ ಎಂಬ ಬರಹವನ್ನು ಬರೆಯಲಾಗಿದೆ. ಬ್ಯಾನರಿನ ಎರಡು ಬದಿಗಳಲ್ಲಿ

ಬಿಜೆಪಿ ಹೀನಾಯ ಸೋಲು: ಪುತ್ತೂರಿನಲ್ಲಿ ನಳಿನ್, ಡಿವಿ ಶ್ರದ್ಧಾಂಜಲಿ ಬ್ಯಾನರಿಗೆ ಚಪ್ಪಲಿ ಹಾರ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ | ವಿವಿಧ ವೈದಿಕ ಕಾರ್ಯಕ್ರಮಗಳು

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಭಾನುವಾರ ವಿವಿಧ ವೈದಿ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ. ಬೆಳಿಗ್ಗೆ 7 ರಿಂದ ದೇವಸ್ಥಾನದ ತಂತ್ರಿ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ 108 ಗಣಪತಿ ಹೋಮ, ಚಂಡಿಕಾ ಹೋಮ, ಶತರುದ್ರಾ ಕಾರ್ಯಕ್ರಮ ನಡೆಯುತ್ತಿದೆ. ‘ ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಸದಸ್ಯರಾದ ಬಿ.ಐತ್ತಪ್ಪ ನಾಯ್ಕ್, ರವೀಂದ್ರ ರೈ ಬಳ್ಳಮಜಲು, ಶೇಖರ್ ನಾರಾವಿ, ಭಕ್ತಾದಿಗಳು ಉಪಸ್ಥಿತರಿದ್ದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ | ವಿವಿಧ ವೈದಿಕ ಕಾರ್ಯಕ್ರಮಗಳು Read More »

ಎಂಪಿ ಚುನಾವಣೆಗೆ ಸ್ಪರ್ಧೆ | ಕಾರ್ಯಕರ್ತರ ಜೊತೆ ಸಮಾಲೋಚಿಸಿ ನಿರ್ಧಾರವೆಂದ ಪುತ್ತಿಲ

ಪುತ್ತೂರು: ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬೇಕು ಎಂಬ ಭಾವನೆ ಕಾರ್ಯಕರ್ತರದ್ದು. ಅವರ ಭಾವನೆ ಯಾವ ರೀತಿ ಇದೆ ಎನ್ನುವುದನ್ನು ಅವರ ಜೊತೆ ಚರ್ಚಿಸಿಯೇ ಮುಂದೆ ಹೋಗಲಾಗುವುದು ಎಂದು ಪಕ್ಷೇತರವಾಗಿ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲ ಹೇಳಿದರು. ಚುನಾವಣೆಯ ಬಗ್ಗೆ ಹಾಗೂ ನಂತರದ ಬೆಳವಣಿಗೆಯಲ್ಲಿ ಎಂಪಿ ಫಾರ್ ಪುತ್ತಿಲ ಅಭಿಯಾನದ ಬಗೆಗಿನ ಪ್ರಶ್ನೆಗೆ ಉತ್ತರಿಸಿದರು. ಹಿಂದೂ ಸಮಾಜಕ್ಕೆ ಅನ್ಯಾಯವಾದಾಗ ಜೊತೆಗೆ ನಿಂತಿದ್ದೇವೆ, ಹೋರಾಟ ಮಾಡಿದ್ದೇವೆ. ಹಿಂದುತ್ವವನ್ನು ಪ್ರತಿಪಾದನೆ ಮಾಡಬೇಕು. ಸ್ವಜನಪಕ್ಷಪಾತ, ಸರ್ವಾಧಿಕಾರಿ ಧೋರಣೆಯ ನಾಯಕರ ವಿಚಾರಧಾರೆಯ ವಿರುದ್ಧ ಹೋರಾಟ

ಎಂಪಿ ಚುನಾವಣೆಗೆ ಸ್ಪರ್ಧೆ | ಕಾರ್ಯಕರ್ತರ ಜೊತೆ ಸಮಾಲೋಚಿಸಿ ನಿರ್ಧಾರವೆಂದ ಪುತ್ತಿಲ Read More »

ಸೋಲನ್ನು ಒಪ್ಪಿಕೊಂಡಿದ್ದೇನೆ, ಕಾರ್ಯಕರ್ತರ ಮೇಲೆ ಹಾಕುವುದಿಲ್ಲ : ಆಶಾ ತಿಮ್ಮಪ್ಪ

ಪುತ್ತೂರು: ಸೋಲನ್ನು ನಾನು ಒಪ್ಪಿಕೊಂಡಿದ್ದೇನೆ. ಈ ಸೋಲನ್ನು ನಾನು ಕಾರ್ಯಕರ್ತರ ಮೇಲೆ ಹಾಕುವುದಿಲ್ಲ ಎಂದು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಹೇಳಿದರು. ಚುನಾವಣೆಯಲ್ಲಿ ಬಿಜೆಪಿ ಸೋಲನ್ನು ಅನುಭವಿಸಿದ ಬಳಿಕ ಅವರು ನ್ಯೂಸ್ ಪುತ್ತೂರು ಜೊತೆ ಮಾತನಾಡಿದರು. ಸಂಜೀವ ಮಠಂದೂರು ಅವರು ಶಾಸಕರಾಗಿ ಒಂದೂವರೆ ಸಾವಿರ ಕೋಟಿ ರೂ. ಅನುದಾನ ತಂದು, ಅಭಿವೃದ್ಧಿ ಕಾರ್ಯ ಮಾಡಿದರು. ಆದರೆ ಇದನ್ನು ಮತದಾರರು ಗುರುತಿಸದೇ ಇರುವುದು ವಿಪರ್ಯಾಸ. ಬಿಜೆಪಿ ಸರಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಜನರು ಗುರುತಿಸಿಲ್ಲ ಎನ್ನುವುದನ್ನು ಚುನಾವಣೆ ತೋರಿಸಿಕೊಟ್ಟಿದೆ.

ಸೋಲನ್ನು ಒಪ್ಪಿಕೊಂಡಿದ್ದೇನೆ, ಕಾರ್ಯಕರ್ತರ ಮೇಲೆ ಹಾಕುವುದಿಲ್ಲ : ಆಶಾ ತಿಮ್ಮಪ್ಪ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ನೂತನ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಪುತ್ತೂರು ಶಾಸಕರಾಗಿ ಆಯ್ಕೆಯಾದ ಅಶೋಕ್ ಕುಮಾರ್ ರೈ ಅವರು ಶನಿವಾರ ಸಂಜೆ ಭೇಟಿ ನೀಡಿ,ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶಾಸಕರಾಗಿ ಆಯ್ಕೆಯಾದ ಬಳಿಕ ಪುತ್ತೂರಿಗೆ ಆಗಮಿಸಿದ ಅಶೋಕ್ ಕುಮಾರ್ ರೈ ಅವರಿಗೆ ಕಬಕದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಅಲ್ಲಿಂದ ನೇರವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದರು. ಅಲ್ಲಿಯೂ ಅಶೋಕ್ ಕುಮಾರ್ ರೈ ಅವರ ದೊಡ್ಡ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದು, ಶುಭಕೋರಿದರು. ಬಳಿಕ ಚರ್ಚ್ ಹಾಗೂ ಮಸೀದಿಗೆ ಭೇಟಿ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ನೂತನ ಶಾಸಕ ಅಶೋಕ್ ಕುಮಾರ್ ರೈ Read More »

ಯುವತಿ ಜತೆ ಅಸಭ್ಯ ವರ್ತನೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಆಶಾ ತಿಮ್ಮಪ್ಪ | ಆರೋಪಿಗಳ ಬಂಧನಕ್ಕೆ ಆಗ್ರಹ

ಪುತ್ತೂರು: ವಿಟ್ಲದಲ್ಲಿ ಹಿಂದೂ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಶಾ ತಿಮ್ಮಪ್ಪ ಅವರು ಪೊಲೀಸ್ ಠಾಣೆಗೆ ತೆರಳಿ ಆಗ್ರಹಿಸಿದ್ದಾರೆ. ಇದಕ್ಕೆ ಮೊದಲು ಯುವತಿ ಮನೆಗೆ ತೆರಳಿ ಯುವತಿ ಹಾಗೂ ಪೋಷಕರಿಗೆ ಧೈರ್ಯ ತುಂಬಿದ್ದಾರೆ. ಬಡತನದಲ್ಲಿರುವ ಕುಟುಂಬಕ್ಕೆ ತನ್ನ ಕೈಲಾದ ಸಹಾಯ ನೀಡುವುದಾಗಿ ಭರವಸೆ ನೀಡಿರುವ ಅವರು, ಆ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬುವಂತೆ ಸ್ಥಳೀಯರಲ್ಲಿ ಮನವಿ ಮಾಡಿಕೊಂಡರು. ಬಳಿಕ ಪೊಲೀಸ್ ಠಾಣೆಗೆ ತೆರಳಿ ಪೊಲೀಸರ ಜೊತೆ ಮಾತುಕತೆ ನಡೆಸಿದರು. ಆರೋಪಿಗಳನ್ನು ತಕ್ಷಣ ಬಂಧಿಸಿ,

ಯುವತಿ ಜತೆ ಅಸಭ್ಯ ವರ್ತನೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಆಶಾ ತಿಮ್ಮಪ್ಪ | ಆರೋಪಿಗಳ ಬಂಧನಕ್ಕೆ ಆಗ್ರಹ Read More »

ಪುತ್ತೂರು ಕೈ ಪಾಲು : ತ್ರಿಕೋನ ಸ್ಪರ್ಧೆಯಲ್ಲಿ ಅಶೋಕ್ ರೈ ಮೇಲು | ಸ್ಪರ್ಧೆ ಇದ್ದದ್ದೇ ಅಶೋಕ್ – ಅರುಣ್ ನಡುವೆ ಎನ್ನುವುದನ್ನು ಸಾಬೀತುಪಡಿಸಿದ ಫಲಿತಾಂಶ | ಸೋತರೂ ಮತದಾರರ ಮನಗೆದ್ದ ಪುತ್ತಿಲ | “ಛೆ! ಗೆಲ್ಲುತ್ತಾರೆಂದಿದ್ದರೆ ಪುತ್ತಿಲರಿಗೆ ಮತ ಹಾಕುತ್ತಿದ್ದೆವು”

ಪುತ್ತೂರು: ಬಿಜೆಪಿ ಭದ್ರಕೋಟೆಯನ್ನು ಮತ್ತೊಮ್ಮೆ ಕಾಂಗ್ರೆಸ್ ಭೇದಿಸಿದೆ. ಒಗ್ಗಟ್ಟಿನ ಮಂತ್ರಕ್ಕೆ ಕಾಂಗ್ರೆಸ್ ಗೆಲುವು ದಾಖಲಿಸಿದ್ದು, ಮತ್ತೊಮ್ಮೆ ಗದ್ದುಗೆಗೆ ಏರಲು ಸಿದ್ಧತೆ ನಡೆಸಿದೆ. ಭಾರೀ ಪೈಪೋಟಿ ನಡುವೆಯೂ ಅಶೋಕ್ ಕುಮಾರ್ ರೈ ಗೆಲುವು ದಾಖಲಿಸಿದ್ದಾರೆ. ಬಿಜೆಪಿಯ ಭದ್ರಕೋಟೆಯಾದರೂ, ಕಾಂಗ್ರೆಸ್ ಅಭ್ಯರ್ಥಿಗೆ ಭಾರೀ ಪೈಪೋಟಿ ನೀಡಿದ್ದು ಪಕ್ಷೇತರ ಅಭ್ಯರ್ಥಿ ಎನ್ನುವುದು ಈ ಬಾರಿಯ ವಿಶೇಷ. ಬಿಜೆಪಿ ಅಭ್ಯರ್ಥಿ ಹಾಗೂ ಪಕ್ಷೇತರ ಅಭ್ಯರ್ಥಿಗಳ ನಡುವಿನ ಪೈಪೋಟಿಯಿಂದಾಗಿ ಮತ ವಿಭಜನೆಯಾಗಿದ್ದು, ಕಾಂಗ್ರೆಸ್ ಇದರ ಲಾಭವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಚುನಾವಣಾ ಪೂರ್ವದಲ್ಲಿ ತ್ರಿಕೋನ ಸ್ಪರ್ಧೆ

ಪುತ್ತೂರು ಕೈ ಪಾಲು : ತ್ರಿಕೋನ ಸ್ಪರ್ಧೆಯಲ್ಲಿ ಅಶೋಕ್ ರೈ ಮೇಲು | ಸ್ಪರ್ಧೆ ಇದ್ದದ್ದೇ ಅಶೋಕ್ – ಅರುಣ್ ನಡುವೆ ಎನ್ನುವುದನ್ನು ಸಾಬೀತುಪಡಿಸಿದ ಫಲಿತಾಂಶ | ಸೋತರೂ ಮತದಾರರ ಮನಗೆದ್ದ ಪುತ್ತಿಲ | “ಛೆ! ಗೆಲ್ಲುತ್ತಾರೆಂದಿದ್ದರೆ ಪುತ್ತಿಲರಿಗೆ ಮತ ಹಾಕುತ್ತಿದ್ದೆವು” Read More »

error: Content is protected !!
Scroll to Top