ಪುತ್ತೂರಿನಲ್ಲಿ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತ್ಯೋತ್ಸವ ಸಂಸ್ಮರಣೆ | ಪತ್ರಿಕಾಗೋಷ್ಠಿಯಲ್ಲಿ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ಡಿ.ವಿ. ಸದಾನಂದ ಗೌಡ
ಪುತ್ತೂರು: ಧರ್ಮಜಾಗೃತಿಯ ಜೊತೆಗೆ ಅನ್ನ, ಅಕ್ಷರಕ್ಕಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ 78ನೇ ಜಯಂತ್ಯೋತ್ಸವವನ್ನು ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಜ. 22ರಂದು ಆಯೋಜಿಸಿದ್ದು, ರಾಜ್ಯದ ಎಲ್ಲಾ ಕಡೆಗಳಿಂದಲೂ ಜನ ಬಂದು ಸೇರಲಿದ್ದಾರೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಹೇಳಿದರು.ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಮಹಾಸಂಸ್ಥಾನ ಒಕ್ಕಲಿಗರ ಪೀಠವಾದರೂ, ಎಲ್ಲಾ ಸಮುದಾಯದವರನ್ನು ಅಪ್ಪಿಕೊಂಡು – ಒಪ್ಪಿಕೊಂಡು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ. […]