ಮಕ್ಕಳಿಗೆ ಸಂಸ್ಕಾರ ಕಲಿಸಿದಾಗ ಧರ್ಮ ಜಾಗೃತಿ | ಅಜಲಾಡಿ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದಲ್ಲಿ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿ
ಪುತ್ತೂರು: ಋಷಿ ಮುನಿಗಳ ಸಾವಿರಾರು ವರ್ಷಗಳ ತಪಸ್ಸಿನ ಫಲವೇ ಹಿಂದೂ ಧರ್ಮ. ಇಂತಹ ಧರ್ಮವನ್ನು ಮುಂದಿನ ಜನಾಂಗಕ್ಕೆ ಕೊಂಡೊಯ್ಯಬೇಕಾದರೆ, ಮಕ್ಕಳಲ್ಲಿ ಸಂಸ್ಕಾರವನ್ನು ಕಲಿಸಬೇಕು ಎಂದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿ ಹೇಳಿದರು.ಮುಂಡೂರು ಉದಯಗಿರಿ ಅಜಲಾಡಿ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಪುನಃ ಪ್ರತಿಷ್ಠೆ ಬ್ರಹ್ಮಕಲಶೋತ್ಸವದ ಅಂಗವಾಗಿ ರವಿವಾರ ರಾತ್ರಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು. ನಮ್ಮ ಹಿರಿಯರಿಗೆ ಗೌರವ ನೀಡುವಂತಹ ಸಂಸ್ಕಾರವನ್ನು ಮಕ್ಕಳಿಗೆ ತಿಳಿಸಿಕೊಡುವ ಕೆಲಸ ಆಗಬೇಕಿದೆ. ದೈವಸ್ಥಾನ, ದೇವಸ್ಥಾನ, ಮಂದಿರಗಳಲ್ಲಿ ಇಂತಹ ಸಂಸ್ಕಾರವನ್ನು […]