ಆರ್ಥಿಕ ಸಬಲೀಕರಣಕ್ಕೆ ಒಕ್ಕಲಿಗ ಸ್ವಸಹಾಯ ಸಂಘದ ಕೊಡುಗೆ ಅಪಾರ | ಸ್ವಸಹಾಯ ಟ್ರಸ್ಟಿನ ಸ್ವಂತ ಕಚೇರಿ, ವಿವಾಹ ವೇದಿಕೆ ಉದ್ಘಾಟಿಸಿ ಶಾಸಕ ಸಂಜೀವ ಮಠಂದೂರು
ಪುತ್ತೂರು: ಒಕ್ಕಲಿಗ ಸ್ವಸಹಾಯ ಸಂಘಗಳು ಗ್ರಾಮೀಣ ಜನರ ಬದುಕಿನಲ್ಲಿ ಆರ್ಥಿಕ ಸಬಲೀಕರಣಕ್ಕೆ ಬಹು ದೊಡ್ಡ ಕೊಡುಗೆಯನ್ನು ನೀಡಿದೆ. 10 ವರ್ಷಗಳ ಹಿಂದೆ ಆರಂಭವಾಗಿ ಸ್ವಸಹಾಯ ಸಂಘಗಳನ್ನು ಹುಟ್ಟುಹಾಕಿ, ಜನರ ಬದುಕಿಗೆ ಬೆಳಕಾದ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಇದೀಗ ಸ್ವಂತ ಕಚೇರಿಗೆ ಪಾದಾರ್ಪಣೆ ಮಾಡಿರುವುದು ಅಭಿನಂದನೀಯ ಎಂದ ಶಾಸಕ ಸಂಜೀವ ಮಠಂದೂರು ಹೇಳಿದರು. ಪುತ್ತೂರು ಒಕ್ಕಲಿಗ ಸ್ವಸಹಾಯ ಟ್ರಸ್ಟ್ನ ನೂತನ ಕಚೇರಿ ಮತ್ತು ವಿವಾಹ ವೇದಿಕೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿವಾಹ ವೇದಿಕೆ, ಸಾಮಾಜಿಕ ಚಟುವಟಿಕೆ ಮುಂತಾದ ಕಾರ್ಯಕ್ರಮಗಳೊಂದಿಗೆ […]